ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಭಯೋತ್ಪಾದಕರ ದಾಳಿ: ಸೇನಾ ಕ್ಯಾಪ್ಟನ್ ಸೇರಿ 11 ಯೋಧರ ಸಾವು

ಓರ್ವ ಕ್ಯಾಪ್ಟನ್ ಸೇರಿ 11 ಯೋಧರನ್ನು ಕೊಂದಿರುವ ಭಯೋತ್ಪಾದಕರು ದಾಳಿ ನಡೆದ ಪ್ರದೇಶದಲ್ಲಿ ಕೆಲಸ ಮಾಡುತ್ತಿದ್ದ ಕೆಲ ನಾಗರಿಕರನ್ನು ಒತ್ತೆಯಾಳುಗಳಾಗಿ ಇರಿಸಿಕೊಂಡಿದ್ದಾರೆ.

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಭಯೋತ್ಪಾದಕರ ದಾಳಿ: ಸೇನಾ ಕ್ಯಾಪ್ಟನ್ ಸೇರಿ 11 ಯೋಧರ ಸಾವು
ಪಾಕಿಸ್ತಾನ ಸೇನೆಯ ಯೋಧರು
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Jul 13, 2021 | 10:10 PM

ಇಸ್ಲಾಮಾಬಾದ್: ಪಾಕಿಸ್ತಾನ ಸೇನೆಯ ಮೇಲೆ ಮಂಗಳವಾರ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಭಯೋತ್ಪಾದಕರು ದಾಳಿ ನಡೆಸಿ, ಓರ್ವ ಕ್ಯಾಪ್ಟನ್ ಸೇರಿ 11 ಯೋಧರನ್ನು ಕೊಂದಿದ್ದಾರೆ. ದಾಳಿ ನಡೆದ ಪ್ರದೇಶದಲ್ಲಿ ಕೆಲಸ ಮಾಡುತ್ತಿದ್ದ ಕೆಲ ನಾಗರಿಕರನ್ನು ಒತ್ತೆಯಾಳುಗಳಾಗಿ ಇರಿಸಿಕೊಂಡಿದ್ದಾರೆ. ಮೃತ ಸೇನಾಧಿಕಾರಿಯನ್ನು ಕ್ಯಾಪ್ಟನ್ ಅಬ್ದುಲ್ ಬಾಸಿತ್ ಎಂದು ಗುರುತಿಸಲಾಗಿದೆ. ದಾಳಿಯಲ್ಲಿ ಕನಿಷ್ಠ 15 ಯೋಧರು ಗಾಯಗೊಂಡಿದ್ದಾರೆ ಎಂದು ವರದಿಗಳು ಹೇಳಿವೆ.

ಖುರಮ್ ಪ್ರಾಂತ್ಯದಲ್ಲಿ ಪಾಕಿಸ್ತಾನ ಸೇನೆಯು ಪ್ರತೀಕಾರ ಕಾರ್ಯಾಚರಣೆ ಆರಂಭಿಸಿದೆ. ಮೃತ ಕ್ಯಾಪ್ಟನ್ ಬಾಸಿತ್ ಅವರು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದ ತಂಡದ ನೇತೃತ್ವ ವಹಿಸಿದ್ದರು ಎಂದು ಸ್ಥಳೀಯ ಮಾಧ್ಯಮಗಳ ವರದಿಗಳು ಹೇಳಿವೆ.

ಆರು ಟೆಲಿಕಾಂ ಕಾರ್ಮಿಕರನ್ನೂ ಹಫೀಜ್ ದೌಲತ್ ಖಾನ್ ನೇತೃತ್ವದ ಭಯೋತ್ಪಾದಕರ ಗುಂಪು ಒತ್ತೆಯಾಳಾಗಿ ಇರಿಸಿಕೊಂಡಿದೆ. ಪಾಕಿಸ್ತಾನದ ಗುಪ್ತಚರ ಪಡೆಯ ಮಾಧ್ಯಮ ಸಂಪರ್ಕ ಅಧಿಕಾರಿಯ ಹೇಳಿಕೆ ಉಲ್ಲೇಖಿಸಿ ಸುದ್ದಿ ಪ್ರಸಾರ ಮಾಡಿರುವ ಪಾಕ್​ನ ಪ್ರಮುಖ ಸುದ್ದಿ ವಾಹಿನಿ ಜಿಯೊ ಟಿವಿ ಮೂವರು ಭಯೋತ್ಪಾದಕರೂ ಗುಂಡಿನ ಚಕಮಕಿಯಲ್ಲಿ ಹತರಾಗಿದ್ದಾರೆ ಎಂದು ಹೇಳಿದೆ. ಈ ಪ್ರದೇಶದಲ್ಲಿ ಈಗಲೂ ಗುಂಡಿನ ಚಕಮಕಿ ನಡೆಯುತ್ತಿದೆ. ಇಡೀ ಪ್ರದೇಶದಲ್ಲಿ ಶೋಧ ಕಾರ್ಯಚರಣೆ ನಡೆಸಲು ಸೇನೆ ಮುಂದಾಗಿದೆ ಎಂದು ಹೇಳಿದೆ.

ಈ ಪ್ರದೇಶದಲ್ಲಿ ಭಯೋತ್ಪಾದಕರ ತಂಡವೊಂದು ಸಂಚರಿಸುತ್ತಿರುವ ಮಾಹಿತಿ ಲಭ್ಯವಾದ ನಂತರ ಸೇನೆಯು ಕಾರ್ಯಾಚರಣೆ ಆರಂಭಿಸಿತ್ತು ಎಂದು ಪಾಕ್ ಗುಪ್ತಚರ ಇಲಾಖೆ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.

(Pakistan Army captain 11 soldiers killed in terror attack in Khyber Pakhtunkhwa)

ಇದನ್ನೂ ಓದಿ: ಶಾಲಾ ಪಠ್ಯಗಳಲ್ಲಿ ಮಲಾಲಾ ಯೂಸುಫ್​ಝೈ ಹೆಸರು; ವಿರೋಧ ವ್ಯಕ್ತಪಡಿಸಿದ ಪಾಕಿಸ್ತಾನಿ ಪ್ರಜೆಗಳು

Published On - 10:08 pm, Tue, 13 July 21

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ