Pakistan: ಪಾಕಿಸ್ತಾನ ಸೇನೆಯ ಕಮಾಂಡರ್, ಹಿರಿಯ ಅಧಿಕಾರಿಗಳಿದ್ದ ಸೇನಾ ಹೆಲಿಕಾಪ್ಟರ್​ ನಾಪತ್ತೆ

Pakistan News: ಪಾಕಿಸ್ತಾನದ ಪ್ರವಾಹ ಪೀಡಿತ ಪ್ರದೇಶವಾದ ನೈಋತ್ಯ ಭಾಗದಲ್ಲಿ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಯಲ್ಲಿ ಸೇನಾ ಹೆಲಿಕಾಪ್ಟರ್ ಹಾರಾಟ ನಡೆಸುತ್ತಿತ್ತು. ಈ ವೇಳೆ ಪ್ರಾದೇಶಿಕ ಕಂಟ್ರೋಲ್ ಟವರ್ ಸಂಪರ್ಕ ಕಳೆದುಕೊಂಡಿದ್ದು, ನಾಪತ್ತೆಯಾಗಿದೆ.

Pakistan: ಪಾಕಿಸ್ತಾನ ಸೇನೆಯ ಕಮಾಂಡರ್, ಹಿರಿಯ ಅಧಿಕಾರಿಗಳಿದ್ದ ಸೇನಾ ಹೆಲಿಕಾಪ್ಟರ್​ ನಾಪತ್ತೆ
ಹೆಲಿಕಾಪ್ಟರ್Image Credit source: India.com
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Aug 02, 2022 | 9:57 AM

ಕರಾಚಿ: ಉನ್ನತ ಕಮಾಂಡರ್ ಸೇರಿದಂತೆ 6 ಸಿಬ್ಬಂದಿ ಪ್ರಯಾಣಿಸುತ್ತಿದ್ದ ಪಾಕಿಸ್ತಾನ ಸೇನೆಯ (Pakistan Army)  ಹೆಲಿಕಾಪ್ಟರ್ ನಾಪತ್ತೆಯಾಗಿದೆ ಎಂದು ಪಾಕಿಸ್ತಾನದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಷನ್ಸ್ ಖಚಿತಪಡಿಸಿದೆ. ದೇಶದ ಪ್ರವಾಹ ಪೀಡಿತ ಪ್ರದೇಶವಾದ ನೈಋತ್ಯ ಭಾಗದಲ್ಲಿ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಯಲ್ಲಿ ಸೇನಾ ಹೆಲಿಕಾಪ್ಟರ್ (Army Helicopter) ಹಾರಾಟ ನಡೆಸುತ್ತಿತ್ತು. ಈ ವೇಳೆ ಪ್ರಾದೇಶಿಕ ಕಂಟ್ರೋಲ್ ಟವರ್ ಸಂಪರ್ಕ ಕಳೆದುಕೊಂಡಿದ್ದು, ನಾಪತ್ತೆಯಾಗಿದೆ ಎಂದು ಸೇನೆ ತಿಳಿಸಿದೆ.

ಹೆಲಿಕಾಪ್ಟರ್‌ನಲ್ಲಿ XII ಕಾರ್ಪ್ಸ್‌ನ ಕಮಾಂಡರ್ ಜನರಲ್ ಸರ್ಫರಾಜ್ ಅಲಿ ಮತ್ತು ಇತರ ಐವರು ಹಿರಿಯ ಸೇನಾ ಅಧಿಕಾರಿಗಳು ಬಲೂಚಿಸ್ತಾನದಲ್ಲಿ ನಡೆಸಲಾಗುತ್ತಿರುವ ಪ್ರವಾಹ ಪರಿಹಾರ ಕಾರ್ಯಾಚರಣೆಗಳ ಮೇಲ್ವಿಚಾರಣೆ ನಡೆಸುತ್ತಿದ್ದರು ಎಂದು ಟ್ವಿಟ್ಟರ್‌ನಲ್ಲಿ ಪಾಕಿಸ್ತಾನದ ಸಶಸ್ತ್ರ ಪಡೆಗಳ ISPRನ ಮಾಧ್ಯಮ ವಿಭಾಗ ಹೇಳಿದೆ.

ಇದನ್ನೂ ಓದಿ: Pakistan Floods: ಇದ್ದಕ್ಕಿದ್ದಂತೆ ಸುರಿದ ಭಾರಿ ಮಳೆ, ನೀರಿನಲ್ಲಿ ಮುಳಗಿತು ಪಾಕಿಸ್ತಾನದ 50 ಹಳ್ಳಿಗಳು

ಬಲೂಚಿಸ್ತಾನದ ಲಾಸ್ಬೆಲಾದಲ್ಲಿ ಪ್ರವಾಹ ಪರಿಹಾರ ಕಾರ್ಯಾಚರಣೆಯಲ್ಲಿದ್ದ ಪಾಕಿಸ್ತಾನ ಸೇನೆಯ ವಾಯುಯಾನದ ಹೆಲಿಕಾಪ್ಟರ್ ಎಟಿಸಿ ಸಂಪರ್ಕ ಕಳೆದುಕೊಂಡಿದೆ. ಬಲೂಚಿಸ್ತಾನದಲ್ಲಿ ಪ್ರವಾಹ ಪರಿಹಾರ ಕಾರ್ಯಾಚರಣೆಯನ್ನು ಮೇಲ್ವಿಚಾರಣೆ ಮಾಡುತ್ತಿದ್ದ ಕಮಾಂಡರ್ 12 ಕಾರ್ಪ್ಸ್ ಸೇರಿದಂತೆ ಆರು ವ್ಯಕ್ತಿಗಳು ವಿಮಾನದಲ್ಲಿದ್ದರು. ನಾಪತ್ತೆಯಾದವರಿಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಟ್ವೀಟ್ ಮಾಡಲಾಗಿದೆ.

ಹೆಲಿಕಾಪ್ಟರ್ ಏರ್ ಟ್ರಾಫಿಕ್ ಕಂಟೋಲ್ (ಎಟಿಸಿ) ನೊಂದಿಗೆ ಸಂಪರ್ಕ ಕಳೆದುಕೊಂಡು ಕಳೆದ 5 ಗಂಟೆಗಳಿಂದ ನಾಪತ್ತೆಯಾಗಿದೆ ಎಂದು ಪಾಕಿಸ್ತಾನ ಮಾಧ್ಯಮ ವರದಿಗಳು ತಿಳಿಸಿವೆ.

Published On - 9:56 am, Tue, 2 August 22

ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?