AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನ ಸೇನೆಯಿಂದ ಬಲೂಚಿಸ್ತಾನದ ಬಾಲಕಿಯ ಹತ್ಯೆ; ಹಮಾಸ್ ರೀತಿ ವಾಹನಕ್ಕೆ ಕಟ್ಟಿ ರಸ್ತೆಯಲ್ಲಿ ಮೆರವಣಿಗೆ

ಪಾಕಿಸ್ತಾನ ಸೇನಾ ಸಿಬ್ಬಂದಿ ಬಲೂಚಿಸ್ತಾನದಲ್ಲಿ ನಿರಪರಾಧಿ ಬಾಲಕಿಯೊಬ್ಬಳಿಗೆ ಗುಂಡಿಕ್ಕಿ ಕೊಂದಿದ್ದಾರೆ. ಬಳಿಕ ಆಕೆಯ ಮೃತದೇಹವನ್ನು ಸೇನಾ ವಾಹನದ ಮುಂಭಾಗದಲ್ಲಿ ಕಟ್ಟಿ ಬೀದಿಗಳಲ್ಲಿ ಮೆರವಣಿಗೆ ಮಾಡಿದ್ದಾರೆ. ಹಮಾಸ್ ಮಾದರಿಯ ಈ ಕೃತ್ಯದ ವಿಡಿಯೋ ತುಣುಕುಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶಕ್ಕೆ ಕಾರಣವಾಗಿವೆ. ಬಲೂಚಿಸ್ತಾನವು ಪಾಕಿಸ್ತಾನದಿಂದ ಸ್ವಾತಂತ್ರ್ಯ ಘೋಷಿಸಿಕೊಂಡ ನಂತರ ಪ್ರದೇಶದಲ್ಲಿ ಉದ್ವಿಗ್ನತೆ ಹೆಚ್ಚಾಗಿದೆ.

ಪಾಕಿಸ್ತಾನ ಸೇನೆಯಿಂದ ಬಲೂಚಿಸ್ತಾನದ ಬಾಲಕಿಯ ಹತ್ಯೆ; ಹಮಾಸ್ ರೀತಿ ವಾಹನಕ್ಕೆ ಕಟ್ಟಿ ರಸ್ತೆಯಲ್ಲಿ ಮೆರವಣಿಗೆ
Pakistan ArmyImage Credit source: AP
ಸುಷ್ಮಾ ಚಕ್ರೆ
|

Updated on: Jul 29, 2026 | 10:38 PM

Share

ಬಲೂಚಿಸ್ತಾನ, ಜುಲೈ 29: ಬಲೂಚಿಸ್ತಾನದಲ್ಲಿ ಪಾಕಿಸ್ತಾನ (Pakistan) ಸೇನೆಯ ದೌರ್ಜನ್ಯಗಳ ಕುರಿತು ಹೊಸ ವರದಿಗಳು ಹೊರಬಿದ್ದಿದ್ದು, ಆ ಪ್ರಾಂತ್ಯದಲ್ಲಿ ಸೇನೆಯು ನಡೆಸುತ್ತಿರುವ ಸೇನಾ ಕಾರ್ಯಾಚರಣೆಗಳ ಕುರಿತು ಕಳವಳಗಳು ತೀವ್ರಗೊಂಡಿವೆ. ಪಾಕಿಸ್ತಾನ ಸೇನೆಯ ಸಿಬ್ಬಂದಿ ಬಲೂಚಿಸ್ತಾನದಲ್ಲಿ ನಿರಪರಾಧಿ ಬಾಲಕಿಯೊಬ್ಬಳಿಗೆ ಗುಂಡಿಕ್ಕಿ ಕೊಂದ ನಂತರ, ಹಮಾಸ್ ಮಾದರಿಯಲ್ಲಿ ಆಕೆಯ ಮೃತದೇಹವನ್ನು ಸೇನಾ ವಾಹನದ ಮುಂಭಾಗದಲ್ಲಿ ಕಟ್ಟಿ ಬೀದಿಗಳಲ್ಲಿ ಮೆರವಣಿಗೆ ಮಾಡಿದ್ದಾರೆ. ಪಾಕಿಸ್ತಾನ ಸೇನೆಯು ಕಳೆದ ಹಲವಾರು ವರ್ಷಗಳಿಂದ ಬಲೂಚಿಸ್ತಾನ ಮತ್ತು ಖೈಬರ್ ಪಖ್ತುಂಖ್ವಾಗಳಲ್ಲಿ ಇಂತಹ ದೌರ್ಜನ್ಯಗಳನ್ನು ನಡೆಸುತ್ತಾ ಬಂದಿದೆ.

ಪಾಕಿಸ್ತಾನ ಸೇನೆಯು ಬಲೂಚಿಸ್ತಾನ ಹಾಗೂ ಖೈಬರ್ ಪಖ್ತುಂಖ್ವಾ ಪ್ರಾಂತ್ಯಗಳಲ್ಲಿ ಸ್ಥಳೀಯ ನಾಗರಿಕರ ವಿರುದ್ಧ ಸುದೀರ್ಘ ಕಾಲದಿಂದ ಇಂತಹ ಕಠಿಣ ಮತ್ತು ಮಾನವ ಹಕ್ಕುಗಳ ಉಲ್ಲಂಘನೆಯ ಕ್ರಮಗಳನ್ನು ಕೈಗೊಳ್ಳುತ್ತಾ ಬಂದಿದೆ ಎಂಬ ಆರೋಪಗಳಿವೆ.

ಇದನ್ನೂ ಓದಿ: ಪಾಕಿಸ್ತಾನದ ಖೈಬರ್ ಪಖ್ತುಂಖ್ವಾದಲ್ಲಿ ಸ್ಫೋಟ: ಇಬ್ಬರು ಸಾವು, ಉಗ್ರರ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಪಾರಾದ ಸ್ಥಳೀಯ ನಾಯಕ

ಪಾಕ್ ಆಕ್ರಮಿತ ಕಾಶ್ಮೀರದಲ್ಲೂ ಹಿಂಸಾಚಾರ:

ಈ ಘಟನೆಯ ಜೊತೆಗೆ ಪಾಕ್ ಆಕ್ರಮಿತ ಕಾಶ್ಮೀರದ (PoK) ರಾವಲಾಕೋಟ್ ಪ್ರದೇಶದಲ್ಲೂ ಭಾರಿ ಪ್ರತಿಭಟನೆಗಳು ಹಾಗೂ ಹಿಂಸಾಚಾರ ವರದಿಯಾಗಿದೆ. ರಾವಲಾಕೋಟ್‌ನಲ್ಲಿ ನಡೆದ ಪ್ರತಿಭಟನೆಗಳ ವೇಳೆ ಪಾಕಿಸ್ತಾನಿ ಪಡೆಗಳು ಕಳೆದ ಎರಡು ದಿನಗಳಲ್ಲಿ 32 ಕಾಶ್ಮೀರಿ ಪ್ರತಿಭಟನಾಕಾರರನ್ನು ಹತ್ಯೆ ಮಾಡಿವೆ ಎನ್ನಲಾಗಿದೆ.

ಪಿಒಕೆಯಲ್ಲಿನ ಸಾರ್ವಜನಿಕ ಪ್ರತಿಭಟನೆಗಳ ಮೇಲಿನ ಕಠಿಣ ಕ್ರಮವನ್ನು ಸಮರ್ಥಿಸಿಕೊಂಡಿರುವ ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್, “ನಾನು ಆಜಾದ್ ಕಾಶ್ಮೀರದ ಪ್ರತಿಭಟನಾಕಾರರನ್ನು ಭಾರತದಂತೆಯೇ ನಮ್ಮ ಶತ್ರುಗಳು ಎಂದು ಪರಿಗಣಿಸುತ್ತೇನೆ” ಎಂದು ಹೇಳಿಕೆ ನೀಡಿದ್ದು ತೀವ್ರ ವಿವಾದಕ್ಕೆ ಕಾರಣವಾಗಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ