ಪಿಒಕೆಯಲ್ಲಿ ಪಾಕಿಸ್ತಾನದ ಸೇನಾ ಹೆಲಿಕಾಪ್ಟರ್ ಪತನ; ಅಧಿಕಾರಿಗಳು ಸೇರಿದಂತೆ ಎಲ್ಲ ಸೈನಿಕರೂ ಸಜೀವದಹನ
ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಮುಜಾಫರಾಬಾದ್ ಸಮೀಪ ಇಂದು ಪಾಕಿಸ್ತಾನ ಸೇನಾ ವಿಮಾನಯಾನ ವಿಭಾಗಕ್ಕೆ ಸೇರಿದ ಎಂಐ-17 ಹೆಲಿಕಾಪ್ಟರ್ ಭೀಕರವಾಗಿ ಪತನಗೊಂಡಿದೆ. ಅದರಲ್ಲಿದ್ದ ಎಲ್ಲಾ ಸೇನಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಹೆಲಿಕಾಪ್ಟರ್ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಈ ಅಪಘಾತ ಸಂಭವಿಸಿದೆ ಎಂದು ಪಾಕಿಸ್ತಾನ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ತಿಳಿಸಿದೆ. ಈ ದುರಂತದಲ್ಲಿ ಯಾರೊಬ್ಬರೂ ಬದುಕುಳಿದಿಲ್ಲ ಎಂದು ಸೇನೆ ಖಚಿತಪಡಿಸಿದೆ. ತಾಂತ್ರಿಕ ದೋಷದಿಂದಾಗಿ ಹೆಲಿಕಾಪ್ಟರ್ ಪತನಗೊಂಡಿದೆ ಎಂದು ವರದಿಯಾಗಿದ್ದರೂ, ಅಪಘಾತಕ್ಕೆ ನಿಖರವಾದ ಕಾರಣವನ್ನು ಪತ್ತೆಹಚ್ಚಲು ಅಧಿಕಾರಿಗಳು ಅಧಿಕೃತ ತನಿಖೆಗೆ ಆದೇಶಿಸಿದ್ದಾರೆ.

ಇಸ್ಲಮಾಬಾದ್, ಜೂನ್ 10: ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ (PoK) ಪಾಕಿಸ್ತಾನ ಸೇನೆಗೆ ಸೇರಿದ ಯುದ್ಧ ಹೆಲಿಕಾಪ್ಟರ್ ತಾಂತ್ರಿಕ ದೋಷದಿಂದಾಗಿ ಪತನಗೊಂಡಿದೆ. ಈ ದುರಂತದಲ್ಲಿ ಅದರಲ್ಲಿದ್ದ ಎಲ್ಲಾ ಸೈನಿಕರು ದುರ್ಮರಣಕ್ಕೀಡಾಗಿದ್ದಾರೆ. ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಆಯಕಟ್ಟಿನ ಪ್ರದೇಶವೊಂದರಲ್ಲಿ ಪಾಕಿಸ್ತಾನ ಸೇನೆಗೆ ಸೇರಿದ ಹೆಲಿಕಾಪ್ಟರ್ ಭೀಕರವಾಗಿ ಪತನಗೊಂಡಿದೆ. ಹೆಲಿಕಾಪ್ಟರ್ ಹಾರಾಟ ಆರಂಭಿಸಿದ ಕೆಲವೇ ಕ್ಷಣಗಳಲ್ಲಿ ನಿಯಂತ್ರಣ ಕಳೆದುಕೊಂಡು ನೆಲಕ್ಕೆ ಅಪ್ಪಳಿಸಿದ್ದು, ಬೆಂಕಿ ಹೊತ್ತಿಕೊಂಡ ಪರಿಣಾಮ ಅದರಲ್ಲಿದ್ದ ಉನ್ನತ ಮಿಲಿಟರಿ ಅಧಿಕಾರಿಗಳು ಸೇರಿದಂತೆ ಎಲ್ಲಾ ಸಿಬ್ಬಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಪಾಕಿಸ್ತಾನ ಸೇನೆಯ ಮಾಧ್ಯಮ ವಿಭಾಗವಾದ ಐಎಸ್‌ಪಿಆರ್ (ISPR) ನೀಡಿರುವ ಪ್ರಾಥಮಿಕ ಮಾಹಿತಿಯ ಪ್ರಕಾರ, ಈ ಹೆಲಿಕಾಪ್ಟರ್ ಪಿಒಕೆಯ ಮುಜಾಫರಾಬಾದ್ ಸಮೀಪದ ಸೇನಾ ನೆಲೆಯಿಂದ ತುರ್ತು ಕಾರ್ಯಾಚರಣೆಗಾಗಿ ಟೇಕ್-ಆಫ್ ಆಗುತ್ತಿತ್ತು. ನೆಲದಿಂದ ಕೆಲವೇ ಅಡಿಗಳಷ್ಟು ಎತ್ತರಕ್ಕೆ ಹಾರುತ್ತಿದ್ದಂತೆ ಹೆಲಿಕಾಪ್ಟರ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ.
21 Pakistani Army soldiers killed
The Afghan Army shot down a Pakistan Army Aviation Mi-17 helicopter, resulting in heavy losses for the Pakistan Army. pic.twitter.com/hgBdRtwUPI
— Afghanistan Army (@AfganArmyStan) June 10, 2026
ನಿಯಂತ್ರಣ ತಪ್ಪಿದ ಹೆಲಿಕಾಪ್ಟರ್ ರನ್‌ವೇ ಪಕ್ಕದ ಮೈದಾನಕ್ಕೆ ಅಪ್ಪಳಿಸಿತು. ಈ ವೇಳೆ ಇಂಧನ ಟ್ಯಾಂಕ್ ಸ್ಫೋಟಗೊಂಡಿದ್ದರಿಂದ ಇಡೀ ಹೆಲಿಕಾಪ್ಟರ್ ಕ್ಷಣಾರ್ಧದಲ್ಲಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಭಸ್ಮವಾಗಿದೆ. ಅಪಘಾತದ ತೀವ್ರತೆಗೆ ಹೆಲಿಕಾಪ್ಟರ್‌ನಲ್ಲಿದ್ದ ಇಬ್ಬರು ಪೈಲಟ್‌ಗಳು (ಮೇಜರ್ ಶ್ರೇಣಿಯ ಅಧಿಕಾರಿಗಳು) ಮತ್ತು ಇಬ್ಬರು ತಾಂತ್ರಿಕ ಸಿಬ್ಬಂದಿ ಸೇರಿದಂತೆ ಒಟ್ಟು 4ರಿಂದ 5 ಸೈನಿಕರು ಸಜೀವ ದಹನವಾಗಿದ್ದಾರೆ ಎಂದು ವರದಿಗಳು ತಿಳಿಸಿವೆ. ಮೃತದೇಹಗಳನ್ನು ಗುರುತಿಸಲಾಗದಷ್ಟು ಸುಟ್ಟುಹೋಗಿದ್ದು, ಅವುಗಳನ್ನು ಮುಜಾಫರಾಬಾದ್‌ನ ಮಿಲಿಟರಿ ಆಸ್ಪತ್ರೆಗೆ ರವಾನಿಸಲಾಗಿದೆ.
ಇದನ್ನೂ ಓದಿ: ಪಿಒಕೆಯಲ್ಲಿ ಪ್ರತಿಭಟನಾಕಾರರ ಮೇಲೆ ಪಾಕಿಸ್ತಾನದಿಂದ ಗುಂಡಿನ ದಾಳಿ; 30 ಜನ ಸಾವು, 200ಕ್ಕೂ ಹೆಚ್ಚು ಮಂದಿಗೆ ಗಾಯ
ಕೆಲವು ದಿನಗಳಿಂದ ಪಿಒಕೆಯ ರಾವಲಕೋಟ್ ಮತ್ತು ಮೀರ್‌ಪುರ ಭಾಗಗಳಲ್ಲಿ ಜಾಯಿಂಟ್ ಅವಮಿ ಆಕ್ಷನ್ ಕಮಿಟಿ (JAAC) ನೇತೃತ್ವದಲ್ಲಿ ಪಾಕಿಸ್ತಾನ ಸರ್ಕಾರದ ವಿರುದ್ಧ ಭಾರಿ ನಾಗರಿಕ ಪ್ರತಿಭಟನೆಗಳು ಮತ್ತು ಹಿಂಸಾಚಾರಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಪಾಕಿಸ್ತಾನ ಸೇನೆಯು ಪ್ರತಿಭಟನಾಕಾರರನ್ನು ಹತ್ತಿಕ್ಕಲು ಮತ್ತು ಕಣ್ಗಾವಲು ಇಡಲು ಹೆಲಿಕಾಪ್ಟರ್‌ಗಳನ್ನು ಬಳಸುತ್ತಿತ್ತು. ಇಂತಹ ಉದ್ವಿಗ್ನ ಪರಿಸ್ಥಿತಿಯ ನಡುವೆಯೇ ಸೇನಾ ಹೆಲಿಕಾಪ್ಟರ್ ಪತನಗೊಂಡಿರುವುದು ಪಾಕಿಸ್ತಾನ ರಕ್ಷಣಾ ಪಡೆಗಳಿಗೆ ದೊಡ್ಡ ಹಿನ್ನಡೆಯಾಗಿದೆ.
PoK. 21 Pakistan Security Forces Killed In Helicopter Crash In PoK. Soldiers Of Pakistan Security Forces Were Onboard In The Neelum Valley Sector Of #POK. The Helicopter was Transporting Additional Troops To The Valley. According To Initial Reports Helicopter Try To Make… pic.twitter.com/wLHZVz6b5o
— Maj Rakesh, Shaurya Chakra,(Kargil War Veteran) (@gorockgo_100) June 10, 2026
ದಾಳಿ ಅಥವಾ ವಿಧ್ವಂಸಕ ಕೃತ್ಯದ ಸಾಧ್ಯತೆಯನ್ನು ಸದ್ಯಕ್ಕೆ ಪಾಕಿಸ್ತಾನ ಸೇನೆ ತಳ್ಳಿಹಾಕಿದ್ದು, ಕೇವಲ ಯಾಂತ್ರಿಕ ವೈಫಲ್ಯದಿಂದಲೇ ಈ ದುರಂತ ಸಂಭವಿಸಿದೆ ಎಂದು ಹೇಳಿದೆ. ಈ ಘಟನೆಯ ಕುರಿತು ಉನ್ನತ ಮಟ್ಟದ ಮಿಲಿಟರಿ ತನಿಖೆಗೆ ಆದೇಶಿಸಲಾಗಿದೆ.
ಇದನ್ನೂ ಓದಿ: ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ, 11 ಮಕ್ಕಳು ಸೇರಿ 13 ಮಂದಿ ಸಾವು
ಪಾಕಿಸ್ತಾನದ ಚೀಫ್ ಆಫ್ ಆರ್ಮಿ ಸ್ಟಾಫ್ ಹಾಗೂ ಚೀಫ್ ಆಫ್ ಡಿಫೆನ್ಸ್ ಫೋರ್ಸಸ್ ಫೀಲ್ಡ್ ಮಾರ್ಷಲ್ ಅಸೀಮ್ ಮುನೀರ್ ಅವರು, ಪಾಕಿಸ್ತಾನ ಸೇನೆಯ ಇತರ ಅಧಿಕಾರಿಗಳು ಮತ್ತು ಸಿಬ್ಬಂದಿಯೊಂದಿಗೆ ಹೆಲಿಕಾಪ್ಟರ್ ದುರಂತದಲ್ಲಿ ಜೀವಹಾನಿಯಾಗಿರುವುದಕ್ಕೆ ತೀವ್ರ ಕಳವಳ ಮತ್ತು ದುಃಖ ವ್ಯಕ್ತಪಡಿಸಿದ್ದಾರೆ. ಮಿಲಿಟರಿ ನಾಯಕತ್ವವು ಮೃತರ ಕುಟುಂಬಗಳಿಗೆ ತಮಗಿರುವ ತೀವ್ರ ಸಂತಾಪವನ್ನು ಸೂಚಿಸಿದ್ದು, ಕರ್ತವ್ಯದ ಅವಧಿಯಲ್ಲಿ ಪ್ರಾಣ ಕಳೆದುಕೊಂಡ ಸೈನಿಕರಿಗೆ ಗೌರವ ನಮನ ಸಲ್ಲಿಸಿದೆ.
ಪಾಕಿಸ್ತಾನದ ಪ್ರಧಾನಿ ಶಹಬಾಜ್ ಷರೀಫ್ ಅವರೂ ಸಹ ಮುಜಾಫರಾಬಾದ್ ಸಮೀಪ ನಡೆದ ಹೆಲಿಕಾಪ್ಟರ್ ದುರಂತದ ಬಗ್ಗೆ ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. ಮೃತಪಟ್ಟ ಸೇನಾ ಸಿಬ್ಬಂದಿಗೆ ಶ್ರದ್ಧಾಂಜಲಿ ಸಲ್ಲಿಸಿದ ಅವರು, “ಪಾಕಿಸ್ತಾನದ ಮಣ್ಣಿನ ವೀರ ಪುತ್ರರ ತ್ಯಾಗಕ್ಕೆ ಇಡೀ ದೇಶವೇ ತಲೆಬಾಗುತ್ತದೆ” ಎಂದು ಹೇಳಿದ್ದಾರೆ.
ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 5:57 pm, Wed, 10 June 26




