Haji Salim: ಪಾಕಿಸ್ತಾನದಲ್ಲಿ ನೆಲೆಸಿರುವ ದಾವೂದ್ ಸಹಚರ ಹಾಜಿ ಸಲೀಂನಿಂದ ಎಲ್​ಟಿಟಿಇಗೆ ಮತ್ತೆ ಜೀವ ತುಂಬುವ ಪ್ರಯತ್ನ

ಪಾಕಿಸ್ತಾನದ ಕರಾಚಿ ಮೂಲದ ಗ್ಯಾಂಗ್​ಸ್ಟರ್ ಹಾಜಿ ಸಲೀಂ ಭೂಗತ ಪಾತಕಿ ದಾವೂದ್ ಇಬ್ರಾಹಿಂನೊಂದಿಗೆ ಸಂಪರ್ಕ ಹೊಂದಿದ್ದು, ಶ್ರೀಲಂಕಾ ಮತ್ತು ಭಾರತದಲ್ಲಿ ಲಿಬರೇಶನ್ ಟೈಗರ್ಸ್ ಆಫ್ ತಮಿಳು ಈಳಂ (ಎಲ್‌ಟಿಟಿಇ) ಚಟುವಟಿಕೆಗಳಿಗೆ ಜೀವ ನೀಡುವ ಪ್ರಯತ್ನ ಮಾಡುತ್ತಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ.

Haji Salim: ಪಾಕಿಸ್ತಾನದಲ್ಲಿ ನೆಲೆಸಿರುವ ದಾವೂದ್ ಸಹಚರ ಹಾಜಿ ಸಲೀಂನಿಂದ ಎಲ್​ಟಿಟಿಇಗೆ ಮತ್ತೆ ಜೀವ ತುಂಬುವ ಪ್ರಯತ್ನ
ದಾವೂದ್ ಇಬ್ರಾಹಿಂ
Follow us
ನಯನಾ ರಾಜೀವ್
|

Updated on:Jun 25, 2023 | 12:42 PM

ಪಾಕಿಸ್ತಾನದ ಕರಾಚಿ ಮೂಲದ ಗ್ಯಾಂಗ್​ಸ್ಟರ್ ಹಾಜಿ ಸಲೀಂ ಭೂಗತ ಪಾತಕಿ ದಾವೂದ್ ಇಬ್ರಾಹಿಂನೊಂದಿಗೆ ಸಂಪರ್ಕ ಹೊಂದಿದ್ದು, ಶ್ರೀಲಂಕಾ ಮತ್ತು ಭಾರತದಲ್ಲಿ ಲಿಬರೇಶನ್ ಟೈಗರ್ಸ್ ಆಫ್ ತಮಿಳು ಈಳಂ (ಎಲ್‌ಟಿಟಿಇ) ಚಟುವಟಿಕೆಗಳಿಗೆ ಜೀವ ನೀಡುವ ಪ್ರಯತ್ನ ಮಾಡುತ್ತಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹಿಂದೂಸ್ತಾನ್ ಟೈಮ್ಸ್ ವರದಿಯ ಪ್ರಕಾರ, ಹಾಜಿ ಸಲೀಂ ಡ್ರಗ್ಸ್ ಮತ್ತು ಶಸ್ತ್ರಾಸ್ತ್ರಗಳ ಕಳ್ಳಸಾಗಣೆ ಮೂಲಕ ಎಲ್‌ಟಿಟಿಇಯನ್ನು ಪುನರುಜ್ಜೀವನಗೊಳಿಸಲು ಪ್ರಯತ್ನಿಸುತ್ತಿದ್ದಾನೆ. ಸಲೀಂ ಪಾಕಿಸ್ತಾನದ ISI ಮತ್ತು ಭಯೋತ್ಪಾದಕ ಸಂಘಟನೆಯಾದ ಲಷ್ಕರ್-ಎ-ತೊಯ್ಬಾದೊಂದಿಗೆ ಕೆಲಸ ಮಾಡುತ್ತಿದ್ದಾನೆ. ಭಾರತ, ಮಾಲ್ಡೀವ್ಸ್, ಶ್ರೀಲಂಕಾ ಮತ್ತು ಕೆಲವು ಮಧ್ಯಪ್ರಾಚ್ಯ ದೇಶಗಳಿಗೆ ಶಸ್ತ್ರಾಸ್ತ್ರಗಳ ಕಳ್ಳಸಾಗಣೆ ಮಾಡುತ್ತಿದ್ದಾನೆ.

ಹಾಜಿ ಸಲೀಂ ಮತ್ತು ದಾವೂದ್ ನಡುವಿನ ಸಂಬಂಧ ಪಾಕಿಸ್ತಾನ ಮತ್ತು ಹಿಂದೂ ಮಹಾಸಾಗರದಲ್ಲಿ ಬಹು ಮಿಲಿಯನ್ ಡಾಲರ್ ಡ್ರಗ್ಸ್ ಜಾಲದ ಹಿಂದಿನ ಮಾಸ್ಟರ್​ಮೈಂಡ್ ಎಂದು ನಂಬಲಾದ ಸಲೀಂ ದಾವೂದ್‌ನ ಕ್ಲಿಫ್ಟನ್ ರೋಡ್​ನಲ್ಲಿರುವ ಮನೆಯಲ್ಲಿ ಆಗಾಗ ಕಾಣಿಸಿಕೊಳ್ಳುತ್ತಾನೆ ಎಂದು ಪಾಕಿಸ್ತಾನದ ಬೇಹುಗಾರಿಕಾ ಸಂಸ್ಥೆ ಹೇಳಿದೆ.

ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ( ಎನ್‌ಸಿಬಿ ), ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮತ್ತು ಕಂದಾಯ ಮತ್ತು ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಸೇರಿದಂತೆ ಏಜೆನ್ಸಿಗಳು ಇಡೀ ಅಪರಾಧ ಜಾಲವನ್ನು ಭೇದಿಸಲು ಸಲೀಂ ಮತ್ತು ಇಬ್ರಾಹಿಂನ ಡಿ-ಕಂಪನಿಯ ಭಾರತೀಯ ಸಂಪರ್ಕಗಳನ್ನು ಗುರುತಿಸುವ ಕೆಲಸ ಮಾಡುತ್ತಿವೆ.

ಮತ್ತಷ್ಟು ಓದಿ: Dawood Ibrahim: ಭೂಗತ ಪಾತಕಿ ದಾವೂದ್ ಇಬ್ರಾಹಿಂ ಎರಡನೇ ಮದುವೆಯಾಗಿದ್ದಾನೆ, ದಾವೂದ್ ಸೋದರಳಿಯ ಬಿಚ್ಚಿಟ್ಟ ಒಂದಷ್ಟು ಸಂಗತಿಗಳು ಇಲ್ಲಿವೆ

ಕಳೆದ ತಿಂಗಳು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ, ಎನ್‌ಸಿಬಿ ಮತ್ತು ನೌಕಾಪಡೆಯು ಹಿಂದೂ ಮಹಾಸಾಗರದಲ್ಲಿ ತಾಯಿ ಹಡಗನ್ನು ತಡೆದು 12,000 ಕೋಟಿ ಮೌಲ್ಯದ 2,500 ಕೆಜಿ ಹೈ-ಪ್ಯೂರಿಟಿ ಮೆಥಾಂಫೆಟಮೈನ್ ಅನ್ನು ವಶಪಡಿಸಿಕೊಂಡಿದೆ. ಸಮುದ್ರ ಮಾರ್ಗಗಳ ಮೂಲಕ ಹೋಗುವ ಶೇ.70ರಷ್ಟು ಮಾದಕವಸ್ತು ಕಳ್ಳಸಾಗಣೆ ಹಿಂದೆ ಸಲೀಂ ಕೈವಾಡವಿದೆ ಎನ್ನಲಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:42 pm, Sun, 25 June 23

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ