Pakistan Bomb Blast: ಪಾಕಿಸ್ತಾನದ ಕರಾಚಿಯಲ್ಲಿ ಕಾರ್ ಬಾಂಬ್ ಸ್ಫೋಟ; 10 ಜನ ಸಾವು, 13ಕ್ಕೂ ಹೆಚ್ಚು ಮಂದಿಗೆ ಗಾಯ

ಬಾಂಬ್ ಸ್ಫೋಟದ ಪರಿಣಾಮವಾಗಿ ಸಾವನ್ನಪ್ಪಿದವರ ಸಂಖ್ಯೆ 10ಕ್ಕೆ ಏರಿದೆ. 13 ಜನರು ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ.

Pakistan Bomb Blast: ಪಾಕಿಸ್ತಾನದ ಕರಾಚಿಯಲ್ಲಿ ಕಾರ್ ಬಾಂಬ್ ಸ್ಫೋಟ; 10 ಜನ ಸಾವು, 13ಕ್ಕೂ ಹೆಚ್ಚು ಮಂದಿಗೆ ಗಾಯ
ಬಾಂಬ್ ಸ್ಫೋಟ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Dec 18, 2021 | 3:58 PM

ಕರಾಚಿ: ಪಾಕಿಸ್ತಾನದ ಕರಾಚಿಯ ಜನನಿಬಿಡ ಮಾರುಕಟ್ಟೆಯಲ್ಲಿ ಇಂದು ಕಾರ್ ಬಾಂಬ್ ಸ್ಫೋಟಗೊಂಡಿದ್ದು, 10 ಮಂದಿ ಸಾವನ್ನಪ್ಪಿದ್ದಾರೆ ಮತ್ತು 13 ಜನರು ಗಾಯಗೊಂಡಿದ್ದಾರೆ. ಈ ಭೀಕರ ಸ್ಫೋಟದಿಂದ ದಟ್ಟವಾದ ಕಪ್ಪು ಹೊಗೆ ಗಾಳಿಯನ್ನು ಆವರಿಸಿತ್ತು. ಬಾಂಬ್ ಸ್ಫೋಟಗೊಳ್ಳುತ್ತಿದ್ದಂತೆ ಮಾರುಕಟ್ಟೆಯಲ್ಲಿದ್ದ ಮಕ್ಕಳು ಸೇರಿದಂತೆ ಸಾಕಷ್ಟು ಜನರ ಮೈಗೆ ಬೆಂಕಿ ಹೊತ್ತಿಕೊಂಡು ಕಣ್ಮುಂದೆಯೇ ಸುಟ್ಟು ಕರಕಲಾದರು, ಇನ್ನು ಕೆಲವರ ಅಂಗಾಂಗಗಳು ತುಂಡಾಗಿ ಬಿದ್ದವು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ಪಾಕಿಸ್ತಾನದ ಡಾನ್ ಪತ್ರಿಕೆಯ ವರದಿಯ ಪ್ರಕಾರ, ಪೊಲೀಸ್ ಠಾಣೆಯನ್ನು ಗುರಿಯಾಗಿಸಿಕೊಂಡು ಈ ಬಾಂಬ್ ಸ್ಫೋಟ ಸಂಭವಿಸಿರಬಹುದು. ಕಳೆದ ವಾರ ಸರ್ಕಾರಿ ನೌಕರರನ್ನು ಹೊತ್ತೊಯ್ಯುತ್ತಿದ್ದ ಬಸ್‌ನ ಬಾಂಬ್ ಸ್ಫೋಟದಿಂದ ನಗರವು ಇನ್ನೂ ತತ್ತರಿಸುತ್ತಿರುವಾಗಲೇ ಈ ಬಾಂಬ್ ಸ್ಫೋಟ ಸಂಭವಿಸಿದೆ. ಕಳೆದ ವಾರ ಚರ್ಚ್ ಸ್ಫೋಟದಲ್ಲಿ 80 ಮಂದಿ ಸಾವನ್ನಪ್ಪಿದರು. ಭಾನುವಾರದ ಚರ್ಚ್ ಬಾಂಬ್ ದಾಳಿಯ ಹೊಣೆಯನ್ನು ತಾಲಿಬಾನ್ ವಹಿಸಿಕೊಂಡಿತ್ತು. ಇದು ಪ್ರಧಾನಿ ನವಾಜ್ ಷರೀಫ್ ಅವರ ಶಾಂತಿ ಮಾತುಕತೆಗೆ ಮತ್ತಷ್ಟು ಅಡ್ಡಿಯಾಗಿದೆ.

ಶಹೀದ್ ಮೊಹ್ತರ್ಮಾ ಬೆನಜೀರ್ ಭುಟ್ಟೋ ಆಸ್ಪತ್ರೆಯ ಟ್ರಾಮಾ ಸೆಂಟರ್ ಮುಖ್ಯಸ್ಥ ಡಾ. ಸಬೀರ್ ಮೆಮನ್ ಈ ಬಗ್ಗೆ ದೃಢಪಡಿಸಿದ್ದು, ಸ್ಫೋಟದ ಪರಿಣಾಮವಾಗಿ ಸಾವನ್ನಪ್ಪಿದವರ ಸಂಖ್ಯೆ 10ಕ್ಕೆ ಏರಿದೆ. ಗಾಯಗೊಂಡವರಲ್ಲಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಖಚಿತಪಡಿಸಿದ್ದಾರೆ. ರಕ್ಷಣಾ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಗಾಯಾಳುಗಳನ್ನು ಚಿಕಿತ್ಸೆಗಾಗಿ ಸಿವಿಲ್ ಆಸ್ಪತ್ರೆಗೆ ರವಾನಿಸಿದ್ದಾರೆ.

ಕಟ್ಟಡದ ಅವಶೇಷಗಳ ಅಡಿಯಲ್ಲಿ ಅನೇಕ ಜನರು ಹೂತಿದ್ದಾರೆ ಎಂದು ಸ್ಥಳದಲ್ಲಿದ್ದ ಪ್ರತ್ಯಕ್ಷದರ್ಶಿಗಳು ಹೇಳುತ್ತಾರೆ. ಅವಶೇಷಗಳನ್ನು ತೆಗೆದುಹಾಕಲು ಮತ್ತು ಅಲ್ಲಿ ಸಿಲುಕಿರುವ ಯಾವುದೇ ವ್ಯಕ್ತಿಗಳನ್ನು ರಕ್ಷಿಸಲು ಎರಡು ಭಾರೀ ಯಂತ್ರಗಳನ್ನು ಸ್ಥಳಕ್ಕೆ ಕರೆಸಲಾಗಿದೆ. ಸ್ಫೋಟದ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ಘಟಕ (ಬಿಡಿಯು) ಆಗಮಿಸಿದೆ. ಪೊಲೀಸರು ಮತ್ತು ರೇಂಜರ್ಸ್ ಅಧಿಕಾರಿಗಳು ಪ್ರದೇಶವನ್ನು ಸುತ್ತುವರೆದಿದ್ದಾರೆ. ಪೊಲೀಸರು ತಮ್ಮ ಶೋಧ ಕಾರ್ಯಾಚರಣೆಯನ್ನು ಮುಕ್ತಾಯಗೊಳಿಸಿದ ನಂತರ BDU ಸ್ಫೋಟದ ಕಾರಣವನ್ನು ತನಿಖೆ ಮಾಡಲು ಸಾಧ್ಯವಾಗುತ್ತದೆ.

ಪ್ರತ್ಯಕ್ಷದರ್ಶಿಯೊಬ್ಬರು ಜಿಯೋ ನ್ಯೂಸ್‌ನೊಂದಿಗೆ ಮಾತನಾಡುತ್ತಾ, ಇಂದು ಶನಿವಾರವಾಗಿರುವುದರಿಂದ ಬ್ಯಾಂಕ್‌ನ ಒಂಬತ್ತು ಉದ್ಯೋಗಿಗಳು ಮಾತ್ರ ಕರ್ತವ್ಯಕ್ಕೆ ವರದಿ ಮಾಡುತ್ತಿದ್ದಾರೆ.

ಇದನ್ನೂ ಓದಿ: Rohini Court Blast: ರೋಹಿಣಿ ಕೋರ್ಟ್​ನಲ್ಲಿ ಬಾಂಬ್​ ಸ್ಫೋಟ ಪ್ರಕರಣ; ವಿಜ್ಞಾನಿಯ ಬಂಧನ

ಬೋಧಗಯಾ ಸರಣಿ ಸ್ಫೋಟ: 3 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ, 5 ಮಂದಿಗೆ 10 ವರ್ಷ ಜೈಲು

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್