ಪಾಕಿಸ್ತಾನ: ಬಲೂಚಿಸ್ತಾನದಲ್ಲಿ ಭದ್ರತಾ ಪಡೆಗಳಿದ್ದ ಬಸ್ ಬಳಿ ಬಾಂಬ್ ಸ್ಫೋಟ, ಐವರು ಸಾವು
ಭದ್ರತಾ ಪಡೆಗಳಿದ್ದ ಬಸ್ ಬಳಿ ಬಾಂಬ್ ಸ್ಫೋಟಗೊಂಡಿರುವ ಪರಿಣಾಮ ಐವರು ಅಧಿಕಾರಿಗಳು ಸಾವನ್ನಪ್ಪಿದ್ದು, 10 ಮಂದಿ ಗಾಯಗೊಂಡಿರುವ ಘಟನೆ ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ನಡೆದಿದೆ. ಬಲೂಚಿಸ್ತಾನದ ನೌಷ್ಕಿ ಜಿಲ್ಲೆಯಲ್ಲಿ ಈ ದಾಳಿ ನಡೆದಿದೆ ಎಂದು ಸ್ಥಳೀಯ ಪೊಲೀಸ್ ಮುಖ್ಯಸ್ಥ ಜಾಫರ್ ಜಮಾನಾನಿ ತಿಳಿಸಿದ್ದಾರೆ. ಮೃತರು ಮತ್ತು ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿದೆ. ಬಲೂಚಿಸ್ತಾನದ ಮುಖ್ಯಮಂತ್ರಿ ಸರ್ಫ್ರಾಜ್ ಬುಗ್ತಿ ಈ ದಾಳಿಯನ್ನು ಖಂಡಿಸಿದ್ದಾರೆ.

ಬಲೂಚಿಸ್ತಾನ, ಮಾರ್ಚ್ 16: ಭದ್ರತಾ ಪಡೆಗಳಿದ್ದ ಬಸ್ ಬಳಿ ಬಾಂಬ್ ಸ್ಫೋಟಗೊಂಡಿರುವ ಪರಿಣಾಮ ಐವರು ಅಧಿಕಾರಿಗಳು ಸಾವನ್ನಪ್ಪಿದ್ದು, 10 ಮಂದಿ ಗಾಯಗೊಂಡಿರುವ ಘಟನೆ ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ನಡೆದಿದೆ. ಬಲೂಚಿಸ್ತಾನದ ನೌಷ್ಕಿ ಜಿಲ್ಲೆಯಲ್ಲಿ ಈ ದಾಳಿ ನಡೆದಿದೆ ಎಂದು ಪೊಲೀಸ್ ಮುಖ್ಯಸ್ಥ ಜಾಫರ್ ಜಮಾನಾನಿ ತಿಳಿಸಿದ್ದಾರೆ. ಮೃತರು ಮತ್ತು ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿದೆ. ಬಲೂಚಿಸ್ತಾನದ ಮುಖ್ಯಮಂತ್ರಿ ಸರ್ಫ್ರಾಜ್ ಬುಗ್ತಿ ಈ ದಾಳಿಯನ್ನು ಖಂಡಿಸಿದ್ದಾರೆ.
ಇಲ್ಲಿಯವರೆಗೆ ಬಾಂಬ್ ಸ್ಫೋಟದ ಹೊಣೆಯನ್ನು ಯಾವ ಉಗ್ರ ಸಂಘಟನೆಗಳು ಹೊತ್ತುಕೊಂಡಿಲ್ಲ. ಕೆಲವು ದಿನಗಳ ಹಿಂದೆ ರೈಲಿನ ಮೇಲೆ ಹೊಂಚು ಹಾಕಿ, ಅದರಲ್ಲಿದ್ದ ಸುಮಾರು 400 ಜನರನ್ನು ಒತ್ತೆಯಾಳಾಗಿಟ್ಟುಕೊಂಡು 26 ಒತ್ತೆಯಾಳುಗಳನ್ನು ಕೊಂದ ಬಲೂಚ್ ಲಿಬರೇಶನ್ ಆರ್ಮಿಯ ಮೇಲೆ ಅನುಮಾನ ಮೂಡಿದೆ. ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿ ಎಲ್ಲಾ 33 ದಾಳಿಕೋರರನ್ನು ಕೊಂದಿದ್ದರು.
ತೈಲ ಮತ್ತು ಖನಿಜ ಸಮೃದ್ಧ ಬಲೂಚಿಸ್ತಾನ್ ಪಾಕಿಸ್ತಾನದ ಅತಿದೊಡ್ಡ ಮತ್ತು ಕಡಿಮೆ ಜನಸಂಖ್ಯೆ ಹೊಂದಿರುವ ಪ್ರಾಂತ್ಯವಾಗಿದೆ. ಬಲೂಚ್ ನಿವಾಸಿಗಳು ಕೇಂದ್ರ ಸರ್ಕಾರವು ತಾರತಮ್ಯವನ್ನು ತೋರಿಸುತ್ತಿದೆ ಎಂದು ಬಹಳ ಹಿಂದಿನಿಂದಲೂ ಆರೋಪಿಸುತ್ತಲೇ ಬಂದಿದ್ದಾರೆ ಇಸ್ಲಾಮಾಬಾದ್ ಈ ಆರೋಪವನ್ನು ನಿರಾಕರಿಸುತ್ತಲೇ ಬಂದಿದೆ.
ಮತ್ತಷ್ಟು ಓದಿ:ಪಾಕಿಸ್ತಾನದ ಮಸೀದಿಯಲ್ಲಿ ಭಾರೀ ಸ್ಫೋಟ; ಇಸ್ಲಾಮಿಕ್ ನಾಯಕ ಸೇರಿದಂತೆ ಮೂವರಿಗೆ ಗಾಯ
ಶನಿವಾರ ಮುಂಜಾನೆ, ಪಾಕಿಸ್ತಾನದ ಕ್ವೆಟ್ಟಾದಲ್ಲಿ ನಡೆದ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟದಲ್ಲಿ ಒಬ್ಬ ಭಯೋತ್ಪಾದನಾ ನಿಗ್ರಹ ಪಡೆ (ಎಟಿಎಫ್) ಸಿಬ್ಬಂದಿ ಸಾವನ್ನಪ್ಪಿದ್ದರು ಮತ್ತು ಆರು ಮಂದಿ ಗಾಯಗೊಂಡಿದ್ದರು. ಕರಣಿ ಪ್ರದೇಶದ ಬರೋರಿ ರಸ್ತೆಯಲ್ಲಿ ಎಟಿಎಫ್ ಗಸ್ತು ವಾಹನವನ್ನು ಗುರಿಯಾಗಿಸಿಕೊಂಡು ಸ್ಫೋಟಿಸಲಾಯಿತು. ಈ ಸ್ಫೋಟದಲ್ಲಿ ಏಳು ಅಧಿಕಾರಿಗಳು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆರು ಮಂದಿ ಗಾಯಗೊಂಡಿದ್ದರೆ, ಒಬ್ಬರು ಸಾವನ್ನಪ್ಪಿದ್ದಾರೆ.
ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ