Imran Khan: ಇಸ್ಲಾಮಾಬಾದ್‌ ನ್ಯಾಯಾಂಗ ಸಂಕೀರ್ಣದಲ್ಲಿನ ಹಿಂಸಾಚಾರಕ್ಕೆ ಸಂಬಂಧಿಸಿದ 8 ಪ್ರಕರಣಗಳಲ್ಲಿ ಇಮ್ರಾನ್ ಖಾನ್‌ಗೆ ಜಾಮೀನು

ಮಾರ್ಚ್ 18 ರಂದು ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಪಕ್ಷದ ಮುಖ್ಯಸ್ಥರು ನ್ಯಾಯಾಂಗ ಸಂಕೀರ್ಣದಲ್ಲಿ ನ್ಯಾಯಾಲಯಕ್ಕೆ ಹಾಜರಾದಾಗ ಪೊಲೀಸರು ಮತ್ತು ಅವರ ಬೆಂಬಲಿಗರ ನಡುವೆ ಘರ್ಷಣೆ ಸಂಭವಿಸಿದ ನಂತರ 70 ವರ್ಷದ ಖಾನ್ ವಿರುದ್ಧ ಇಸ್ಲಾಮಾಬಾದ್‌ನ ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ.

Imran Khan: ಇಸ್ಲಾಮಾಬಾದ್‌ ನ್ಯಾಯಾಂಗ ಸಂಕೀರ್ಣದಲ್ಲಿನ ಹಿಂಸಾಚಾರಕ್ಕೆ ಸಂಬಂಧಿಸಿದ 8 ಪ್ರಕರಣಗಳಲ್ಲಿ ಇಮ್ರಾನ್ ಖಾನ್‌ಗೆ ಜಾಮೀನು
ಇಮ್ರಾನ್ ಖಾನ್
Follow us
ರಶ್ಮಿ ಕಲ್ಲಕಟ್ಟ
|

Updated on:May 23, 2023 | 2:07 PM

ಮಾರ್ಚ್‌ನಲ್ಲಿ ಇಸ್ಲಾಮಾಬಾದ್ ನ್ಯಾಯಾಂಗ ಸಂಕೀರ್ಣದಲ್ಲಿ (Judicial Complex )ಭುಗಿಲೆದ್ದ ಹಿಂಸಾಚಾರಕ್ಕೆ ಸಂಬಂಧಿಸಿದ ಎಂಟು ಪ್ರಕರಣಗಳಲ್ಲಿ ಪಾಕಿಸ್ತಾನದ (Pakistan) ಭಯೋತ್ಪಾದನಾ ವಿರೋಧಿ ನ್ಯಾಯಾಲಯವು ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್​​ಗೆ (Imran Khan) ಜೂನ್ 8ರವರೆಗೆ ಜಾಮೀನು ನೀಡಿದೆ.ಮಾರ್ಚ್ 18 ರಂದು ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಪಕ್ಷದ ಮುಖ್ಯಸ್ಥರು ನ್ಯಾಯಾಂಗ ಸಂಕೀರ್ಣದಲ್ಲಿ ನ್ಯಾಯಾಲಯಕ್ಕೆ ಹಾಜರಾದಾಗ ಪೊಲೀಸರು ಮತ್ತು ಅವರ ಬೆಂಬಲಿಗರ ನಡುವೆ ಘರ್ಷಣೆ ಸಂಭವಿಸಿದ ನಂತರ 70 ವರ್ಷದ ಖಾನ್ ವಿರುದ್ಧ ಇಸ್ಲಾಮಾಬಾದ್‌ನ ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ.

ಇಮ್ರಾನ್ ಖಾನ್ ಅವರ ಮಧ್ಯಂತರ ಜಾಮೀನನ್ನು ಜೂನ್ 8 ರವರೆಗೆ ವಿಸ್ತರಿಸಲಾಯಿತು ಮತ್ತು ಬುಶ್ರಾ ಬೀಬಿಗೆ ಮೇ 31 ರವರೆಗೆ ಜಾಮೀನು ನೀಡಲಾಯಿತು. ಹಿಂದಿನ ದಿನ, ಅವರು ರಾಷ್ಟ್ರೀಯ ಉತ್ತರದಾಯಿತ್ವ ಬ್ಯೂರೋ (NAB) ನಿಂದ ತನ್ನ ಬಂಧನವನ್ನು ತಡೆಯಲು ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದರು.

ಅಲ್-ಖಾದಿರ್ ಟ್ರಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಟಿಐ ಮುಖ್ಯಸ್ಥರು ಇಸ್ಲಾಮಾಬಾದ್‌ನಲ್ಲಿ ಎನ್‌ಎಬಿ ಮುಂದೆ ಹಾಜರಾಗುವ ನಿರೀಕ್ಷೆಯಿದೆ.

ಮೇ 23 ರಂದು ಹಗರಣ ಪ್ರಕರಣದಲ್ಲಿ ಜಾಮೀನು ಅವಧಿ ಮುಗಿದ ಬುಶ್ರಾ ಬೀಬಿಗೆ ರಕ್ಷಣಾತ್ಮಕ ಜಾಮೀನು ಕೋರಿ ಇಮ್ರಾನ್ ಖಾನ್ ಮತ್ತು ಅವರ ಪತ್ನಿ ಮೊದಲು ಉತ್ತರದಾಯಿತ್ವ ನ್ಯಾಯಾಲಯದ ಮುಂದೆ ಹಾಜರಾದರು.

ಇದನ್ನೂ ಓದಿ: Modi Airways: ಮೋದಿಯವರ ಕಾರ್ಯಕ್ರಮಕ್ಕಾಗಿ ಸಿಡ್ನಿಗೆ ವಿಶೇಷ ವಿಮಾನದಲ್ಲಿ ತೆರಳಿದ ಆಸ್ಟ್ರೇಲಿಯಾದಲ್ಲಿರುವ ಭಾರತೀಯರು

ಪಿಕೆಆರ್ 500,000 ಮೌಲ್ಯದ ಜಾಮೀನು ಬಾಂಡ್‌ಗಳನ್ನು ಷರತ್ತು ಮೇರೆ ಮೇ 31 ರವರೆಗೆ ಆಕೆಯ ಜಾಮೀನನ್ನು ನ್ಯಾಯಾಲಯ ಅನುಮೋದಿಸಿತು.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:40 pm, Tue, 23 May 23

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್