ವಿಶ್ವಕಪ್ಗೆ ಭಾರತದಲ್ಲಿ ಪಾಕಿಸ್ತಾನ ಆಟಗಾರರ ಅಭ್ಯಾಸ ಹೇಗಿದೆ ನೋಡಿ
Pakistan Cricket Team Practice: 7 ವರ್ಷಗಳ ಬಳಿಕ ಭಾರತಕ್ಕೆ ಬಂದಿರುವ ಪಾಕಿಸ್ತಾನ ತಂಡ ಅ. 6 ರಂದು ನೆದರ್ಲೆಂಡ್ಸ್ ವಿರುದ್ಧ ಆಡುವ ಮೂಲಕ ಅಭಿಯಾನ ಆರಂಭಿಸಲಿದೆ. ಇದಕ್ಕಾಗಿ ಭರ್ಜರಿ ಅಭ್ಯಾಸದಲ್ಲಿ ನಿರತವಾಗಿದೆ. ಬಾಬರ್ ಆಝಂ ನಾಯಕತ್ವದ ಪಾಕಿಸ್ತಾನ ತಂಡ ತನ್ನ ಮೊದಲ ಅಭ್ಯಾಸ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ 5 ವಿಕೆಟ್‌ಗಳ ಹೀನಾಯ ಸೋಲು ಅನುಭವಿಸಿತ್ತು.
ಏಕದಿನ ವಿಶ್ವಕಪ್ ರಂಗೇರಲು ಇನ್ನು ಉಳಿದಿರುವುದು ಕೇವಲ ಎರಡು ದಿನಗಳು ಮಾತ್ರ. ಅಕ್ಟೋಬರ್ 5 ರಿಂದ ಶುರುವಾಗಲಿರುವ ಕ್ರಿಕೆಟ್ ಮಹಾಸಮರದ ಉದ್ಘಾಟನಾ ಪಂದ್ಯದಲ್ಲಿ ಕಳೆದ ಬಾರಿಯ ಫೈನಲಿಸ್ಟ್ ತಂಡಗಳಾದ ಇಂಗ್ಲೆಂಡ್ ಹಾಗೂ ನ್ಯೂಝಿಲೆಂಡ್ ಕಣಕ್ಕಿಳಿಯಲಿದೆ. 7 ವರ್ಷಗಳ ಬಳಿಕ ಭಾರತಕ್ಕೆ ಬಂದಿರುವ ಪಾಕಿಸ್ತಾನ ತಂಡ ಅ. 6 ರಂದು ನೆದರ್ಲೆಂಡ್ಸ್ ವಿರುದ್ಧ ಆಡುವ ಮೂಲಕ ಅಭಿಯಾನ ಆರಂಭಿಸಲಿದೆ. ಇದಕ್ಕಾಗಿ ಭರ್ಜರಿ ಅಭ್ಯಾಸದಲ್ಲಿ ನಿರತವಾಗಿದೆ. ಬಾಬರ್ ಆಝಂ (Babar Azam) ನಾಯಕತ್ವದ ಪಾಕಿಸ್ತಾನ ತಂಡ ತನ್ನ ಮೊದಲ ಅಭ್ಯಾಸ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ 5 ವಿಕೆಟ್‌ಗಳ ಹೀನಾಯ ಸೋಲು ಅನುಭವಿಸಿತ್ತು. ಪಾಕಿಸ್ತಾನದ ಈ ಸೋಲಿಗೆ ಪ್ರಮುಖ ಕಾರಣ ತಂಡದ ಪ್ರಮುಖ ವೇಗಿಗಳಾದ ಶಾಹೀನ್ ಮತ್ತು ಶಾದಾಬ್ ಖಾನ್ ಬೌಲಿಂಗ್ ಮಾಡದೆ ಇರವುದು. ಇದಲ್ಲದೆ ಕೆಲವು ಕ್ಯಾಚ್‌ಗಳನ್ನು ಪಾಕಿಸ್ತಾನದ ಫೀಲ್ಡರ್‌ಗಳು ಕೈಬಿಟ್ಟರು. ಈ ತಪ್ಪುಗಳನ್ನು ಸರಿ ಪಡಿಸಲು ಕಠಿಣ ಅಭ್ಯಾಸ ನಡೆಸುತ್ತಿದ್ದಾರೆ.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos