ವಿಶ್ವಕಪ್​ಗೆ ಭಾರತದಲ್ಲಿ ಪಾಕಿಸ್ತಾನ ಆಟಗಾರರ ಅಭ್ಯಾಸ ಹೇಗಿದೆ ನೋಡಿ

Updated on: Oct 03, 2023 | 12:59 PM

Pakistan Cricket Team Practice: 7 ವರ್ಷಗಳ ಬಳಿಕ ಭಾರತಕ್ಕೆ ಬಂದಿರುವ ಪಾಕಿಸ್ತಾನ ತಂಡ ಅ. 6 ರಂದು ನೆದರ್ಲೆಂಡ್ಸ್ ವಿರುದ್ಧ ಆಡುವ ಮೂಲಕ ಅಭಿಯಾನ ಆರಂಭಿಸಲಿದೆ. ಇದಕ್ಕಾಗಿ ಭರ್ಜರಿ ಅಭ್ಯಾಸದಲ್ಲಿ ನಿರತವಾಗಿದೆ. ಬಾಬರ್ ಆಝಂ ನಾಯಕತ್ವದ ಪಾಕಿಸ್ತಾನ ತಂಡ ತನ್ನ ಮೊದಲ ಅಭ್ಯಾಸ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ 5 ವಿಕೆಟ್‌ಗಳ ಹೀನಾಯ ಸೋಲು ಅನುಭವಿಸಿತ್ತು.

ಏಕದಿನ ವಿಶ್ವಕಪ್ ರಂಗೇರಲು ಇನ್ನು ಉಳಿದಿರುವುದು ಕೇವಲ ಎರಡು ದಿನಗಳು ಮಾತ್ರ. ಅಕ್ಟೋಬರ್ 5 ರಿಂದ ಶುರುವಾಗಲಿರುವ ಕ್ರಿಕೆಟ್ ಮಹಾಸಮರದ ಉದ್ಘಾಟನಾ ಪಂದ್ಯದಲ್ಲಿ ಕಳೆದ ಬಾರಿಯ ಫೈನಲಿಸ್ಟ್​ ತಂಡಗಳಾದ ಇಂಗ್ಲೆಂಡ್ ಹಾಗೂ ನ್ಯೂಝಿಲೆಂಡ್ ಕಣಕ್ಕಿಳಿಯಲಿದೆ. 7 ವರ್ಷಗಳ ಬಳಿಕ ಭಾರತಕ್ಕೆ ಬಂದಿರುವ ಪಾಕಿಸ್ತಾನ ತಂಡ ಅ. 6 ರಂದು ನೆದರ್ಲೆಂಡ್ಸ್ ವಿರುದ್ಧ ಆಡುವ ಮೂಲಕ ಅಭಿಯಾನ ಆರಂಭಿಸಲಿದೆ. ಇದಕ್ಕಾಗಿ ಭರ್ಜರಿ ಅಭ್ಯಾಸದಲ್ಲಿ ನಿರತವಾಗಿದೆ. ಬಾಬರ್ ಆಝಂ (Babar Azam) ನಾಯಕತ್ವದ ಪಾಕಿಸ್ತಾನ ತಂಡ ತನ್ನ ಮೊದಲ ಅಭ್ಯಾಸ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ 5 ವಿಕೆಟ್‌ಗಳ ಹೀನಾಯ ಸೋಲು ಅನುಭವಿಸಿತ್ತು. ಪಾಕಿಸ್ತಾನದ ಈ ಸೋಲಿಗೆ ಪ್ರಮುಖ ಕಾರಣ ತಂಡದ ಪ್ರಮುಖ ವೇಗಿಗಳಾದ ಶಾಹೀನ್ ಮತ್ತು ಶಾದಾಬ್ ಖಾನ್ ಬೌಲಿಂಗ್ ಮಾಡದೆ ಇರವುದು. ಇದಲ್ಲದೆ ಕೆಲವು ಕ್ಯಾಚ್‌ಗಳನ್ನು ಪಾಕಿಸ್ತಾನದ ಫೀಲ್ಡರ್‌ಗಳು ಕೈಬಿಟ್ಟರು. ಈ ತಪ್ಪುಗಳನ್ನು ಸರಿ ಪಡಿಸಲು ಕಠಿಣ ಅಭ್ಯಾಸ ನಡೆಸುತ್ತಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
Vinay Bhat

Tv9 ಕನ್ನಡ ಡಿಜಿಟಲ್‌ನಲ್ಲಿ 2021ರ ಜುಲೈನಿಂದ ಕ್ರೀಡಾ ಹಾಗೂ ತಂತ್ರಜ್ಞಾನ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಡಿಜಿಟಲ್ ವಿಭಾಗದಲ್ಲಿ 6 ವರ್ಷ ಅನುಭವ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ, ಟೆಕ್ನಾಲಜಿ, ಸಿನಿಮಾ ಸುದ್ದಿ ಬರೆಯುವುದು ನನ್ನ ಆಸಕ್ತದಾಯಕ ವಿಷಯಗಳು.

Read More