Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ವೈಮಾನಿಕ ದಾಳಿಗೆ 46 ಬಲಿ; ಪ್ರತೀಕಾರಕ್ಕೆ ತಾಲಿಬಾನ್ ಪ್ರತಿಜ್ಞೆ

ಇಂದು (ಬುಧವಾರ) ಪಾಕಿಸ್ತಾನದ ಮೇಲೆ ಅಫ್ಘಾನಿಸ್ತಾನ ನಡೆಸಿದ ವೈಮಾನಿಕ ದಾಳಿಯಲ್ಲಿ 46 ಜನರು ಮೃತಪಟ್ಟಿದ್ದಾರೆ. ಈ ಬಗ್ಗೆ ತಾಲಿಬಾನ್ ಖಚಿತಪಡಿಸಿದ್ದು, ಪಾಕಿಸ್ತಾನದ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಪ್ರತಿಜ್ಞೆ ಮಾಡಿದೆ. ಪಾಕಿಸ್ತಾನದ ವೈಮಾನಿಕ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 46ಕ್ಕೆ ಏರಿಕೆಯಾಗಿದೆ. ಇದರಲ್ಲಿ ಹೆಚ್ಚಾಗಿ ಮಹಿಳೆಯರು ಮತ್ತು ಮಕ್ಕಳು ಸೇರಿದ್ದಾರೆ. ಏಜೆನ್ಸಿ ವರದಿಯ ಪ್ರಕಾರ ಪಾಕಿಸ್ತಾನದ ಗಡಿಯಲ್ಲಿರುವ ಪಕ್ಟಿಕಾ ಪ್ರಾಂತ್ಯದಲ್ಲಿ ಹೆಚ್ಚು ಸಾವುಗಳಾಗಿವೆ.

ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ವೈಮಾನಿಕ ದಾಳಿಗೆ 46 ಬಲಿ; ಪ್ರತೀಕಾರಕ್ಕೆ ತಾಲಿಬಾನ್ ಪ್ರತಿಜ್ಞೆ
Pakistan Airstrike
Follow us
ಸುಷ್ಮಾ ಚಕ್ರೆ
|

Updated on: Dec 25, 2024 | 7:24 PM

ಇಸ್ಲಮಾಬಾದ್: ಪಾಕಿಸ್ತಾನ ನಡೆಸಿದ ಅಪರೂಪದ ವೈಮಾನಿಕ ದಾಳಿಯಲ್ಲಿ ಅಫ್ಘಾನಿಸ್ತಾನದ 46 ಜನರು ಸಾವನ್ನಪ್ಪಿದ್ದಾರೆ. ಪಾಕಿಸ್ತಾನ ತನ್ನ ನೆರೆಯ ರಾಷ್ಟ್ರವಾದ ಅಫ್ಘಾನಿಸ್ತಾನದೊಳಗೆ ಪಾಕಿಸ್ತಾನಿ ತಾಲಿಬಾನ್‌ನ ಅನೇಕ ಶಂಕಿತ ಅಡಗುತಾಣಗಳನ್ನು ಗುರಿಯಾಗಿಸಿಕೊಂಡಿದೆ. ಈ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ತಾಲಿಬಾನ್ ಪ್ರತೀಕಾರ ಮಾಡಿದೆ. ಅಫ್ಘಾನಿಸ್ತಾನ ಮೂಲದ ಖಾಮಾ ಪ್ರೆಸ್, ಪಕ್ಟಿಕಾ ಪ್ರಾಂತ್ಯದ ಬರ್ಮಾಲ್ ಜಿಲ್ಲೆಯ ಮೇಲೆ ಪಾಕಿಸ್ತಾನದ ವೈಮಾನಿಕ ದಾಳಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 15 ಜನರ ಸಾವಿಗೆ ಕಾರಣವಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ.

ಡಿಸೆಂಬರ್ 24ರ ರಾತ್ರಿ ನಡೆದ ದಾಳಿ ಲಾಮನ್ ಸೇರಿದಂತೆ 7 ಗ್ರಾಮಗಳನ್ನು ಗುರಿಯಾಗಿಸಿಕೊಂಡಿವೆ. ಅಲ್ಲಿ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದಾರೆ ಎಂದು ಖಾಮಾ ಪ್ರೆಸ್ ವರದಿ ಮಾಡಿದೆ. ಕೆಲವು ಮಾಧ್ಯಮ ವರದಿಗಳು ಬರ್ಮಾಲ್‌ನ ಮುರ್ಗ್ ಬಜಾರ್ ಗ್ರಾಮವನ್ನು ನಾಶಪಡಿಸಲಾಗಿದೆ ಎಂದು ಹೇಳಿವೆ. ಸತ್ತವರಲ್ಲಿ ಹೆಚ್ಚಿನವರು ಮಹಿಳೆಯರು ಮತ್ತು ಮಕ್ಕಳು. ತಾಲಿಬಾನ್ ಈ ದಾಳಿಯನ್ನು ಖಂಡಿಸಿದೆ ಮತ್ತು ಈ ದಾಳಿಯನ್ನು “ಅನಾಗರಿಕ” ಎಂದು ಕರೆದಿದೆ.

ಇದನ್ನೂ ಓದಿ: ಪ್ಯಾಲೆಸ್ತೀನ್ ಬ್ಯಾಗ್ ಹಿಡಿದು ಸಂಸತ್ತಿಗೆ ಹೋದ ಪ್ರಿಯಾಂಕಾಳನ್ನು ಹೊಗಳಿದ ಪಾಕಿಸ್ತಾನ ರಾಜಕಾರಣಿ

ತಾಲಿಬಾನ್ ಪ್ರಕಾರ, ವೈಮಾನಿಕ ದಾಳಿಗಳು ಸ್ಪಷ್ಟ ಆಕ್ರಮಣಶೀಲತೆಯ ಕ್ರಿಯೆಯಾಗಿದೆ. ವೈಮಾನಿಕ ದಾಳಿಯಲ್ಲಿ ಹಲವಾರು ಮನೆಗಳು ನಾಶವಾಗಿವೆ. ಕೆಲವೆಡೆ ಇಡೀ ಕುಟುಂಬವೇ ನಾಶವಾಗಿದೆ. ತಾಲಿಬಾನ್ ವಕ್ತಾರ ಜಬಿಹುಲ್ಲಾ ಮುಜಾಹಿದ್ ಸಾವಿನ ಸಂಖ್ಯೆಯನ್ನು ಖಚಿತಪಡಿಸಿದ್ದಾರೆ. ಆರಂಭದಲ್ಲಿ, 6 ಮಕ್ಕಳು ವೈಮಾನಿಕ ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡು ಸಾವನ್ನಪ್ಪಿದ್ದರು. ಬಳಿಕ ಬೇರೆಡೆಯೂ ದಾಳಿ ನಡೆದಿದ್ದು, ಸಾವಿನ ಸಂಖ್ಯೆ 46ಕ್ಕೆ ಏರಿಕೆಯಾಗಿದೆ.

ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ) ಅಡಗುತಾಣಗಳನ್ನು ಗುರಿಯಾಗಿಸಿಕೊಂಡು ದಾಳಿಗಳನ್ನು ಆರಂಭಿಸಲಾಗಿದೆ ಎಂದು ವರದಿಯಾಗಿದೆ. ವರದಿಗಳ ಪ್ರಕಾರ TTP ತರಬೇತಿ ಸೌಲಭ್ಯವನ್ನು ನಾಶಪಡಿಸಲಾಗಿದೆ. ಈ ದಾಳಿಯು ಅಫ್ಘಾನ್ ನಾಗರಿಕರನ್ನು ಕೆರಳಿಸಿದೆ. ತಾಲಿಬಾನ್ ರಕ್ಷಣಾ ಸಚಿವಾಲಯವು ವೈಮಾನಿಕ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳಲು ಪ್ರತಿಜ್ಞೆ ಮಾಡಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ