AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಗಡಿಯಲ್ಲಿ ಪಾಕಿಸ್ತಾನದಿಂದ ಚೀನಾದ 250 ಫಿರಂಗಿಗಳ ನಿಯೋಜನೆ

ಗಡಿ ಭಾಗದಲ್ಲಿ ಪಾಕಿಸ್ತಾನ ತನ್ನ ಆರ್ಟಿಲರಿ (ಫಿರಂಗಿ) ಪಡೆಯ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಭಾರತೀಯ ಗಡಿಯುದ್ದಕ್ಕೂ ಚೀನಾ ನಿರ್ಮಿತ 250 SH-15 ಫಿರಂಗಿಗಳನ್ನು ನಿಯೋಜಿಸಿದೆ ಎಂದು ಉನ್ನತ ಗೂಢಚಾರ ಮೂಲಗಳು ತಿಳಿಸಿವೆ. ಇತ್ತೀಚಿನ ವರ್ಷಗಳಲ್ಲಿ ಇಸ್ಲಾಮಾಬಾದ್ ಕೈಗೊಂಡ ಅತ್ಯಂತ ದೊಡ್ಡ ಮಿಲಿಟರಿ ಬಲವರ್ಧನೆಗಳಲ್ಲಿ ಇದೂ ಒಂದಾಗಿದೆ. ಚೀನಾದ ಸರ್ಕಾರಿ ಸ್ವಾಮ್ಯದ ರಕ್ಷಣಾ ಸಂಸ್ಥೆ ನೋರಿಂಕೋ ತಯಾರಿಸಿರುವ SH-15, ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿ (PLA) ಬಳಸುವ 'PCL-181' ವೀಲ್ಡ್ ಹೌವಿಟ್ಜರ್‌ನ ಆವೃತ್ತಿಯಾಗಿದೆ.

ಭಾರತದ ಗಡಿಯಲ್ಲಿ ಪಾಕಿಸ್ತಾನದಿಂದ ಚೀನಾದ 250 ಫಿರಂಗಿಗಳ ನಿಯೋಜನೆ
Sh 15Image Credit source: x
ಸುಷ್ಮಾ ಚಕ್ರೆ
|

Updated on: Aug 03, 2026 | 8:30 PM

Share

ಇಸ್ಲಾಮಾಬಾದ್, ಆಗಸ್ಟ್ 3: ಭಾರತದ ಗಡಿ ಭಾಗದಲ್ಲಿ ಶತ್ರು ರಾಷ್ಟ್ರವಾದ ಪಾಕಿಸ್ತಾನ (Pakistan) ತನ್ನ ಮಿಲಿಟರಿ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಮುಂದಾಗಿದೆ. ಅದಕ್ಕಾಗಿ ಚೀನಾದಿಂದ ಖರೀದಿಸಿದ ಅತ್ಯಾಧುನಿಕ SH-15 ವೀಲ್ಡ್ ಸೆಲ್ಫ್-ಪ್ರೊಪೆಲ್ಡ್ ಫಿರಂಗಿಗಳನ್ನು ಭಾರತೀಯ ಗಡಿಯುದ್ದಕ್ಕೂ ಬೃಹತ್ ಪ್ರಮಾಣದಲ್ಲಿ ನಿಯೋಜಿಸಿದೆ. ಗಡಿ ನಿಯಂತ್ರಣ ರೇಖೆ (LoC) ಮತ್ತು ಅಂತಾರಾಷ್ಟ್ರೀಯ ಗಡಿಯಲ್ಲಿ ತನ್ನ ಕೆನಾನ್ ಮತ್ತು ಫಿರಂಗಿ ಪಡೆಯನ್ನು ಬಲಪಡಿಸುವ ಉದ್ದೇಶದಿಂದ ಪಾಕಿಸ್ತಾನ ಈ ಕ್ರಮ ಕೈಗೊಂಡಿದೆ ಎನ್ನಲಾಗಿದೆ. ಈ ಬಗ್ಗೆ ಉನ್ನತ ಮೂಲಗಳನ್ನು ಉಲ್ಲೇಖಿಸಿ ಇಂಡಿಯಾ ಟುಡೇ ವರದಿ ಮಾಡಿದೆ.

ಏನಿದು SH-15 ಫಿರಂಗಿ ಪಡೆ?:

SH-15 ಎಂಬುದು ಚೀನಾದ ನೋರಿಂಕೋ (NORINCO) ಸಂಸ್ಥೆಯು ಅಭಿವೃದ್ಧಿಪಡಿಸಿದ 155mm ವೀಲ್ಡ್ ಹೌವಿಟ್ಜರ್ ಫಿರಂಗಿಯಾಗಿದೆ. ಇದು 6×6 ಟ್ರಕ್ ಆಧಾರಿತ ವ್ಯವಸ್ಥೆಯಾಗಿದ್ದು, ಯಾವುದೇ ರೀತಿಯ ಕಠಿಣ ಹಾಗೂ ಪರ್ವತದ ಭೂಪ್ರದೇಶಗಳಲ್ಲಿ ಕೂಡ ಅತ್ಯಂತ ವೇಗವಾಗಿ ಸಂಚರಿಸುವ ಸಾಮರ್ಥ್ಯ ಹೊಂದಿದೆ. ಈ ಫಿರಂಗಿಗಳು ಸಾಮಾನ್ಯ ಗುಂಡುಗಳ ಮೂಲಕ ಸುಮಾರು 30ರಿಂದ 39 ಕಿ.ಮೀ. ಹಾಗೂ ರಾಕೆಟ್ ಅಸಿಸ್ಟೆಡ್ ಗನ್‌ಗಳ ಮೂಲಕ 53 ಕಿ.ಮೀ.ವರೆಗಿನ ದೂರದಲ್ಲಿರುವ ಶತ್ರುಗಳ ನೆಲೆಗಳನ್ನು ಧ್ವಂಸ ಮಾಡಬಲ್ಲ ಸಾಮರ್ಥ್ಯ ಹೊಂದಿದೆ. ಇದು ಡಿಜಿಟಲ್ ಫೈರ್-ಕಂಟ್ರೋಲ್ ಸಿಸ್ಟಮ್, ರಾಡಾರ್ ಹಾಗೂ ಲೇಸರ್ ರೇಂಜ್ ಫೈಂಡರ್‌ಗಳನ್ನು ಒಳಗೊಂಡಿದೆ.

ಇದನ್ನೂ ಓದಿ: ಪಾಕಿಸ್ತಾನದಲ್ಲಿ ಆತ್ಮಾಹುತಿ ಬಾಂಬ್ ದಾಳಿ: ಐವರು ಪೊಲೀಸರು ಸೇರಿ 14 ಮಂದಿ ದಾರುಣ ಸಾವು

ಪಾಕಿಸ್ತಾನವು ಚೀನಾದಿಂದ ಒಟ್ಟು 236ಕ್ಕೂ ಹೆಚ್ಚು SH-15 ಫಿರಂಗಿಗಳನ್ನು ಖರೀದಿಸುವ ಒಪ್ಪಂದ ಮಾಡಿಕೊಂಡಿತ್ತು. ಇದೀಗ ಅವುಗಳಲ್ಲಿ ಭಾರಿ ಪ್ರಮಾಣದ ಫಿರಂಗಿಗಳನ್ನು ಭಾರತೀಯ ಗಡಿಗೆ ಹತ್ತಿರವಿರುವ ಪ್ರಮುಖ ಸೇನಾ ವಿಭಾಗಗಳಿಗೆ ಹಸ್ತಾಂತರಿಸಲಾಗಿದೆ. ಅದರಲ್ಲೂ ವಿಶೇಷವಾಗಿ ಪಂಜಾಬ್ ಗಡಿ ಮತ್ತು ಕಾಶ್ಮೀರದ ನಿಯಂತ್ರಣ ರೇಖೆಯ ಸಮೀಪ ಇವುಗಳನ್ನು ನಿಯೋಜಿಸಲಾಗಿದೆ.

ಮೇ 2025ರಲ್ಲಿ ಭಾರತವು ಗಡಿ ನಿಯಂತ್ರಣ ರೇಖೆ (LoC) ಮತ್ತು ಪಾಕಿಸ್ತಾನದ ಒಳಗಿನ ಉಗ್ರರ ನೆಲೆಗಳ ಮೇಲೆ ನಡೆಸಿದ್ದ ‘ಆಪರೇಷನ್ ಸಿಂಧೂರ್’ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯ ನಂತರ, ಪಾಕಿಸ್ತಾನ ತನ್ನ ಸಶಸ್ತ್ರ ಪಡೆಗಳ ಆಧುನೀಕರಣಕ್ಕೆ ಮುಂದಾಗಿದೆ.

ಇದನ್ನೂ ಓದಿ: ಚೀನಾ, ಪಾಕಿಸ್ತಾನ, ಬಾಂಗ್ಲಾದೇಶ ಗಡಿಗಳಲ್ಲಿ ಪ್ರಬಲ ರೈಲು ಜಾಲ ಅಳವಡಿಕೆಗೆ ಭಾರತ ಯೋಜನೆ; 45,000 ಕೋಟಿ ರೂ ಹೂಡಿಕೆ ಸಾಧ್ಯತೆ

ಭಾರತೀಯ ಸೇನೆಯ ಸಿದ್ಧತೆ:

ಪಾಕಿಸ್ತಾನದ ಈ ನಡೆಯನ್ನು ಭಾರತೀಯ ರಕ್ಷಣಾ ಪಡೆಗಳು ಬಹಳ ಸೂಕ್ಷ್ಮವಾಗಿ ಗಮನಿಸುತ್ತಿವೆ. ಭಾರತೀಯ ಸೇನೆಯು ಈಗಾಗಲೇ ಗಡಿ ಪ್ರದೇಶಗಳಲ್ಲಿ ತನ್ನದೇ ಆದ ಕೌಂಟರ್-ಆರ್ಟಿಲರಿ ವ್ಯವಸ್ಥೆಯನ್ನು ಸಜ್ಜುಗೊಳಿಸಿದೆ. ಭಾರತವು ತನ್ನ ಗಡಿಯಲ್ಲಿ 155mm ಸ್ವಯಂಚಾಲಿತ ಕೆ-9 ವಜ್ರ ಫಿರಂಗಿಗಳನ್ನು ನಿಯೋಜಿಸಿದೆ. ಅಮೆರಿಕ ನಿರ್ಮಿತ M777 ಫಿರಂಗಿಗಳನ್ನು ಎತ್ತರದ ಪರ್ವತ ಪ್ರದೇಶಗಳಲ್ಲಿ ಹೆಲಿಕಾಪ್ಟರ್ ಮೂಲಕ ತಕ್ಷಣವೇ ರವಾನಿಸುವ ಸಾಮರ್ಥ್ಯ ಭಾರತಕ್ಕಿದೆ. ಸ್ವದೇಶಿ ನಿರ್ಮಿತ ಧನುಷ್ ಫಿರಂಗಿ ಪಡೆ ಮತ್ತು ‘ಪಿನಾಕಾ’ ರಾಕೆಟ್ ಲಾಂಚರ್ ಸಿಸ್ಟಮ್‌ಗಳು ಭಾರತದ ಗಡಿಯಲ್ಲಿ ಎಲ್ಲ ರೀತಿಯ ಸವಾಲನ್ನು ಎದುರಿಸಲು ಸಂಪೂರ್ಣ ಸಜ್ಜಾಗಿವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
ಕಣ್ಣು ಆಪರೇಷನ್​​ಗೆ ಕರೆದು ಕೇವಲ ಅನಸ್ತೇಷಿಯಾ ಕೊಟ್ಟು ಕಳುಹಿಸಿದ್ರು!
ಕಣ್ಣು ಆಪರೇಷನ್​​ಗೆ ಕರೆದು ಕೇವಲ ಅನಸ್ತೇಷಿಯಾ ಕೊಟ್ಟು ಕಳುಹಿಸಿದ್ರು!
ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ
ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!