Pakistan in Crisis: ಬೆಲೆ ಏರಿಕೆಗೆ ತತ್ತರಿಸಿದ ಪಾಕಿಸ್ತಾನದ ಜನ: ಉಪ್ಪು, ಬೇಳೆಕಾಳು, ಹಾಲು ದುಬಾರಿ

ವಿದೇಶಿ ಮೀಸಲು ಕೊರತೆಯಿಂದ ಪಾಕಿಸ್ತಾನದ ಆರ್ಥಿಕತೆ ಕುಸಿತದತ್ತ ಸಾಗಿದೆ. ಇದರ ಜೊತೆಗೆ ಸತತ ಮಳೆ, ಪ್ರವಾಹಗಳು ಪಾಕಿಸ್ತಾನದ ಪರಿಸ್ಥಿತಿಯನ್ನು ಮತ್ತಷ್ಟು ಹದಗೆಡಿಸಿದೆ.

Pakistan in Crisis: ಬೆಲೆ ಏರಿಕೆಗೆ ತತ್ತರಿಸಿದ ಪಾಕಿಸ್ತಾನದ ಜನ: ಉಪ್ಪು, ಬೇಳೆಕಾಳು, ಹಾಲು ದುಬಾರಿ
ಪಾಕಿಸ್ತಾನದಲ್ಲಿ ಹಣದುಬ್ಬರ ನಿಯಂತ್ರಣ ಅಲ್ಲಿನ ಸರ್ಕಾರಕ್ಕೆ ದೊಡ್ಡ ಸಮಸ್ಯೆಯಾಗಿದೆ.
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Oct 23, 2022 | 11:01 AM

ಇಸ್ಲಾಮಾಬಾದ್: ಕಂಡುಕೇಳರಿಯದ ಪ್ರವಾಹ, ಕುಸಿಯುತ್ತಿರುವ ಆರ್ಥಿಕತೆಯ ನಡುವೆ ಮತ್ತೊಂದು ಸಂಕಷ್ಟಕ್ಕೆ ಪಾಕಿಸ್ತಾನವು (Pakistan Economy Crisis) ಸಿಲುಕಿದೆ. ಪಾಕಿಸ್ತಾನದ ವಾರ್ಷಿಕ ಹಣದುಬ್ಬರ (Inflation) ಪ್ರಮಾಣವು ಈ ವಾರ ಶೇ 27.13ಕ್ಕೆ ಏರಿಕೆಯಾಗಿದೆ. ಕೇವಲ ಒಂದೇ ವಾರದ ಅವಧಿಯಲ್ಲಿ ಹಣದುಬ್ಬರ ಪ್ರಮಾಣವು ಶೇ 0.35ರಷ್ಟು ಹೆಚ್ಚಾಗಿದೆ ಎಂದು ‘ಎಕ್ಸ್​ಪ್ರೆಸ್​ ಟ್ರಿಬ್ಯೂನ್’ ವರದಿ ಮಾಡಿದೆ. ಪಾಕಿಸ್ತಾನದ ಕೇಂದ್ರೀಯ ಅಂಕಿಅಂಶ ಸಂಸ್ಥೆಯ ಪ್ರಕಾರ ವಾರದ ಹಣದುಬ್ಬರ ಪ್ರಮಾಣವು ಗಣನೀಯ ಪ್ರಮಾಣದಲ್ಲಿ ಹೆಚ್ಚಾಗಿದೆ. ಕನಿಷ್ಠ 23 ಅತ್ಯಗತ್ಯ ವಸ್ತುಗಳ ಬೆಲೆ ಹೆಚ್ಚಾಗಿದ್ದು, 14 ವಸ್ತುಗಳ ಬೆಲೆ ಕಡಿಮೆಯಾಗಿದೆ. 14 ವಸ್ತುಗಳ ಬೆಲೆ ಏರಿಳಿತ ಕಾಣದೆ ಯಥಾಸ್ಥಿತಿಯಲ್ಲಿ ಮುಂದುವರಿದಿದೆ.

ಇತ್ತೀಚಿನ ವಾರಗಳಲ್ಲಿ ಪಾಕಿಸ್ತಾನದಲ್ಲಿ ಉಪ್ಪು (ಶೇ 4.84), ಟೊಮೆಟೊ (ಶೇ 2.63), ಹಾಲಿನಪುಡಿ (ಶೇ 2.22), ಟೀ (ಶೇ 1.24), ತಾಜಾ ಹಾಲು (ಶೇ 1.23), ಸೌದೆ (ಶೇ 1.57), ಬೇಳೆಕಾಳುಗಳು ಶೇ 3.63) ಬೆಲೆಗಳು ಗಣನೀಯ ಪ್ರಮಾಣದಲ್ಲಿ ಹೆಚ್ಚಾಗಿವೆ. ಆಲೂಗಡ್ಡೆ, ಎಲ್​ಪಿಜಿ ಬೆಲೆಯು ಅಲ್ಪ ಪ್ರಮಾಣದಲ್ಲಿ ಕುಸಿದಿವೆ.

ವಿದೇಶಿ ಮೀಸಲು ಕೊರತೆಯಿಂದ ಪಾಕಿಸ್ತಾನದ ಆರ್ಥಿಕತೆ ಕುಸಿತದತ್ತ ಸಾಗಿದೆ. ಇದರ ಜೊತೆಗೆ ಸತತ ಮಳೆ, ಪ್ರವಾಹಗಳು ಪಾಕಿಸ್ತಾನದ ಪರಿಸ್ಥಿತಿಯನ್ನು ಮತ್ತಷ್ಟು ಹದಗೆಡಿಸಿದ್ದು, ವಿಶ್ವದ ಪ್ರಬಲ ದೇಶಗಳ ನೆರವನ್ನು ಪಾಕಿಸ್ತಾನವು ಯಾಚಿಸಿದೆ. ವಿಶ್ವ ಹಣಕಾಸು ಸಂಸ್ಥೆಯು ಹಳೆಯ ಸಾಲ ಮನ್ನಾ ಮಾಡಬೇಕು, ಹೊಸದಾಗಿ ಸಾಲ ನೀಡಬೇಕು ಎಂದು ಪಾಕಿಸ್ತಾನವು ಕೋರಿತ್ತು. ಇತ್ತೀಚೆಗಷ್ಟೇ ವಿಶ್ವ ಹಣಕಾಸು ಸಂಸ್ಥೆಯು ಪಾಕಿಸ್ತಾನವಕ್ಕೆ 1.9 ಶತಕೋಟಿ ಡಾಲರ್ ಮೊತ್ತದಷ್ಟು ಸಾಲವನ್ನು ಮನ್ನಾ ಮಾಡಿತ್ತು.

ಇಮ್ರಾನ್ ಖಾನ್ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲು

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ವಿರುದ್ಧ ಕೊಲೆಯತ್ನ ಪ್ರಕರಣ ದಾಖಲಾಗಿದೆ. ಪಾಕಿಸ್ತಾನ್ ಮುಸ್ಲಿಂ ಲೀಗ್ ನವಾಜ್ (ಪಿಎಂಎಲ್​ಎನ್) ನಾಯಕ ಮೊಹ್​ಸಿನ್ ಶಹ್​ನವಾಜ್ ರಂಝಾ ಶನಿವಾರ ಇಮ್ರಾನ್ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಕಳೆದ ಶುಕ್ರವಾರ್ ಮೊಹ್​ಸಿನ್ ಅವರ ಮೇಲೆ ಪಾಕಿಸ್ತಾನದ ಚುನಾವಣಾ ಆಯೋಗ ಕಚೇರಿಯಲ್ಲಿ ದಾಖಲಿ ನಡೆದಿತ್ತು.

ಇದಕ್ಕೋ ಮೊದಲು ಇಮ್ರಾನ್ ಖಾನ್, ಪಕ್ಷದ ಪ್ರಧಾನ ಕಾರ್ಯದರ್ಶಿ ಅಸದ್ ಉಮರ್ ಮತ್ತು ಇತರ 100 ಕಾರ್ಯಕರ್ತರ ವಿರುದ್ಧ ಭಯೋತ್ಪಾದಕ ನಿಗ್ರಹ ಕಾನೂನಿನ ಅಡಿಯಲ್ಲಿ ಎರಡು ಪ್ರಕರಣಗಳು ದಾಖಲಾಗಿದ್ದವು.

ವಿದೇಶಿ ಗಣ್ಯರು ಮತ್ತು ರಾಜತಾಂತ್ರಿಕ ಮುಖ್ಯಸ್ಥರಿಂದ ಪ್ರಧಾನಿಯಾಗಿದ್ದಾಗ ಸ್ವೀಕರಿಸಿದ್ದ ಉಡುಗೊರೆಗಳನ್ನು ಅಕ್ರಮವಾಗಿ ಮಾರಾಟ ಮಾಡಿದ ಪ್ರಕರಣ ದೃಢಪಟ್ಟ ಹಿನ್ನೆಲೆಯಲ್ಲಿ ಇಮ್ರಾನ್ ಖಾನ್ ವಿರುದ್ಧ ಪಾಕ್ ಚುನಾವಣಾ ಆಯೋಗವು ಶಿಸ್ತುಕ್ರಮ ಜರುಗಿಸಿತ್ತು. ಸಾರ್ವಜನಿಕ ಸಭೆಗಳನ್ನು ನಡೆಸುವಂತಿಲ್ಲ ಎಂದು ಹೇಳಿತ್ತು.

2018ರಿಂದ 2022ರ ಅವಧಿಯಲ್ಲಿ ಪಾಕಿಸ್ತಾನದ ಪ್ರಧಾನಿಯಾಗಿದ್ದ ಇಮ್ರಾನ್ ಖಾನ್ ಸರ್ಕಾರದ ಅಧೀನದಲ್ಲಿದ್ದ ಉಡುಗೊರೆಗಳನ್ನು ಅಕ್ರಮವಾಗಿ ಮಾರಾಟ ಮಾಡುವ ಮೂಲಕ 14 ಕೋಟಿ ಪಾಕಿಸ್ತಾನಿ ರೂಪಾಯಿ (6,35,000 ಅಮೆರಿಕನ್ ಡಾಲರ್) ಮೊತ್ತದಷ್ಟು ಸಂಪತ್ತು ಸಂಗ್ರಹಿಸಿದ್ದರು ಎಂದು ದೂರಲಾಗಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದ್ದ ಪಾಕಿಸ್ತಾನ ಚುನಾವಣಾ ಆಯೋಗವು ಇಮ್ರಾನ್ ಸಾರ್ವಜನಿಕ ಸಮಾರಂಭ ನಡೆಸುವಂತಿಲ್ಲ ಎಂದು ಆದೇಶ ಮಾಡಿತ್ತು.

ಈ ನಡುವೆ ಇಮ್ರಾನ್ ಖಾನ್ ಸಹ ಈ ನಿರ್ಧಾರ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದಾರೆ. ಈ ಪ್ರಕರಣದ ವಿಚಾರಣೆಯನ್ನು ಇಸ್ಲಾಮಾಬಾದ್ ಹೈಕೋರ್ಟ್​ ಇನ್ನಷ್ಟೇ ಆರಂಭಿಸಬೇಕಿದೆ.

Published On - 11:01 am, Sun, 23 October 22

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ