Pakistan Election: ಇಂದು ಪಾಕಿಸ್ತಾನದಲ್ಲಿ ಸಾರ್ವತ್ರಿಕ ಚುನಾವಣೆ, 6.50 ಲಕ್ಷ ಭದ್ರತಾ ಸಿಬ್ಬಂದಿ ನಿಯೋಜನೆ
ಪಾಕಿಸ್ತಾನದಲ್ಲಿ ರಾಜಕೀಯ ಪ್ರಕ್ಷುಬ್ಧತೆಯ ನಡುವೆ ಇಂದು ಸಾರ್ವತ್ರಿಕ ಚುನಾವಣೆಗಳು ನಡೆಯಲಿವೆ. ಇಂದು ಜನರು ತಮ್ಮ ಮತಗಳ ಮೂಲಕ ಹೊಸ ಸರ್ಕಾರವನ್ನು ಆಯ್ಕೆ ಮಾಡುತ್ತಾರೆ. ಪಾಕಿಸ್ತಾನದಲ್ಲಿ ಸುಮಾರು 13 ಕೋಟಿ ಮತದಾರರು ಬೆಳಗ್ಗೆ 8 ರಿಂದ ಸಂಜೆ 5 ಗಂಟೆಯವರೆಗೆ ಮತದಾನ ಮಾಡಲಿದ್ದಾರೆ. ಒಟ್ಟು 5 ಸಾವಿರದ 121 ಅಭ್ಯರ್ಥಿಗಳು ಕಣದಲ್ಲಿದ್ದು, 4 ಸಾವಿರದ 807 ಪುರುಷರು, 312 ಮಹಿಳೆಯರು ಮತ್ತು ಇಬ್ಬರು ತೃತೀಯಲಿಂಗಿಗಳಿದ್ದಾರೆ. ಸುಮಾರು 6.5 ಲಕ್ಷ ಭದ್ರತಾ ಸಿಬ್ಬಂದಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. ಮತದಾನದ ದಿನದಂದು ಪಾಕಿಸ್ತಾನವು ಇರಾನ್ ಮತ್ತು ಅಫ್ಘಾನಿಸ್ತಾನದೊಂದಿಗಿನ ತನ್ನ ಗಡಿಯನ್ನು ಮುಚ್ಚಿರುತ್ತದೆ.
ಪಾಕಿಸ್ತಾನ(Pakistan) ದಲ್ಲಿ ಇಂದು ಸಾರ್ವತ್ರಿಕ ಚುನಾವಣೆ ನಡೆಯುತ್ತಿದ್ದು, ಮತದಾನಕ್ಕೆ ಎಲ್ಲಾ ಸಿದ್ಧತೆ ನಡೆದಿದೆ. ಮತದಾನಕ್ಕೆ ವಾರವಿರುವಾಗಿನಿಂದ ಅಲ್ಲಲ್ಲಿ ಹಿಂಸಾಚಾರ ಹಾಗೂ ಅಹಿತಕರ ಘಟನೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ 6.50 ಲಕ್ಷ ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. 100 ವಿದೇಶಿ ವೀಕ್ಷಕರು ಪಾಕಿಸ್ತಾನದ ಚುನಾವಣಾ ಪ್ರಕ್ರಿಯೆಯ ಮೇಲೆ ಕಣ್ಣಿಟ್ಟಿದ್ದಾರೆ. ಪಾಕಿಸ್ತಾನದ ಸಾರ್ವತ್ರಿಕ ಚುನಾವಣೆಯಲ್ಲಿ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರ ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ (ಪಿಎಂಎಲ್-ಎನ್) ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮುವ ನಿರೀಕ್ಷೆಯಿದೆ.
ಇಮ್ರಾನ್ ಖಾನ್ ಜೈಲು ಪಾಲಾಗಿರುವುದರಿಂದ ಹಾಗೂ ಚುನಾವಣಾ ಚಿಹ್ನೆ ವಿವಾದದಿಂದಾಗಿ ಷರೀಫ್ ಗೆ ಸಂಪೂರ್ಣ ಲಾಭವಾಗಿದೆ. ಪಿಪಿಪಿಯ ಬಿಲಾವಲ್ ಭುಟ್ಟೋ ಪಂಜಾಬ್‌ನಲ್ಲಿ ಹೆಚ್ಚು ಪ್ರಭಾವ ಬೀರಿಲ್ಲ. ಷರೀಫ್ ಗೆದ್ದರೆ ನಾಲ್ಕನೇ ಬಾರಿಗೆ ಪ್ರಧಾನಿಯಾಗಲಿದ್ದಾರೆ. ಪಾಕಿಸ್ತಾನದಲ್ಲಿ ಒಟ್ಟು 90,675 ಮತಗಟ್ಟೆಗಳಿರುತ್ತವೆ. ಈ ಕೇಂದ್ರಗಳಲ್ಲಿ 2,76,402 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.
ಪಾಕಿಸ್ತಾನದ ಚುನಾವಣಾ ಆಯೋಗ (ECP) ಪ್ರಕಾರ, 12.85 ಕೋಟಿಗೂ ಹೆಚ್ಚು ನೋಂದಾಯಿತ ಮತದಾರರು ಸಾರ್ವತ್ರಿಕ ಚುನಾವಣೆಯಲ್ಲಿ ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಪ್ರಕ್ಷುಬ್ಧ ಬಲೂಚಿಸ್ತಾನದಲ್ಲಿ ಹೆಚ್ಚಿನ ನಿಗಾ ಇರಿಸಲಾಗಿದೆ. ರಾಷ್ಟ್ರೀಯ ಅಸೆಂಬ್ಲಿ ಸ್ಥಾನಗಳಿಗೆ 5121 ಅಭ್ಯರ್ಥಿಗಳಲ್ಲಿ ಒಟ್ಟು 12,85,85,760 ನೋಂದಾಯಿತ ಮತದಾರರು ಮತ ಚಲಾಯಿಸಲು ಅರ್ಹರಾಗಿದ್ದಾರೆ. ಇವರಲ್ಲಿ 4,807 ಪುರುಷರು, 312 ಮಹಿಳೆಯರು ಮತ್ತು ಇಬ್ಬರು ಟ್ರಾನ್ಸ್-ಜೆಂಡರ್ ಅಭ್ಯರ್ಥಿಗಳು ಸೇರಿದ್ದಾರೆ. ನಾಲ್ಕು ಪ್ರಾಂತೀಯ ವಿಧಾನಸಭೆಗಳಿಗೆ 12,123 ಪುರುಷರು, 570 ಮಹಿಳೆಯರು ಮತ್ತು ಇಬ್ಬರು ತೃತೀಯಲಿಂಗಿಗಳು ಸೇರಿದಂತೆ 12,695 ಅಭ್ಯರ್ಥಿಗಳು ಕಣದಲ್ಲಿದ್ದಾರೆ. 100ಕ್ಕೂ ಹೆಚ್ಚು ವಿದೇಶಿ ವೀಕ್ಷಕರು ಮತ್ತು ವಿದೇಶಿ ಪತ್ರಕರ್ತರು ಚುನಾವಣೆ ವರದಿ ಮಾಡಲು ದೇಶಕ್ಕೆ ಬಂದಿದ್ದಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ಸಿಕಂದನ್ ಸುಲ್ತಾನ್ ರಜಾ ತಿಳಿಸಿದ್ದಾರೆ.
ಮತ್ತಷ್ಟು ಓದಿ: ಪಾಕಿಸ್ತಾನ ಚುನಾವಣೆ: ಅಭ್ಯರ್ಥಿ ಕಚೇರಿಯ ಹೊರಗೆ ಬಾಂಬ್ ಸ್ಫೋಟ, 12 ಮಂದಿ ಸಾವು
ಭದ್ರತೆಯ ಜವಾಬ್ದಾರಿ 6.50 ಲಕ್ಷ ಸೈನಿಕರ ಮೇಲಿದೆ ರಾಷ್ಟ್ರೀಯ ಅಸೆಂಬ್ಲಿ ಮತ್ತು ಪ್ರಾಂತೀಯ ಚುನಾವಣೆಗೆ ಪಾಕಿಸ್ತಾನದಲ್ಲಿ 6.50 ಲಕ್ಷ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಬಲೂಚಿಸ್ತಾನ ಪಂಜ್‌ಗುರ್ ಹಿರಿಯ ಪೊಲೀಸ್ ಅಧಿಕಾರಿ (ಎಸ್‌ಎಸ್‌ಪಿ) ಅಬ್ದುಲ್ಲಾ ಜಹಾರಿ ಮಾತನಾಡಿ, ಜನರು ಮತದಾನ ಕೇಂದ್ರಗಳಿಗೆ ತಲುಪದಂತೆ ಭಯೋತ್ಪಾದಕರು ಚುನಾವಣಾ ಅಭ್ಯರ್ಥಿಗಳನ್ನು ಗುರಿಯಾಗಿಸಿಕೊಂಡಿದ್ದಾರೆ. ಈ ನಿಟ್ಟಿನಲ್ಲಿ ದೇಶದಾದ್ಯಂತ ಭದ್ರತಾ ವ್ಯವಸ್ಥೆಗಳನ್ನು ಇನ್ನಷ್ಟು ಬಿಗಿಗೊಳಿಸಲಾಗಿದೆ. ಯಾವುದೇ ಅಹಿತಕರ ಪರಿಸ್ಥಿತಿಯನ್ನು ಎದುರಿಸಲು ಪಾಕಿಸ್ತಾನದ ಆಸ್ಪತ್ರೆಗಳನ್ನು ಫೆಬ್ರವರಿ 7 ರಿಂದ 9 ರವರೆಗೆ ಹೈ ಅಲರ್ಟ್ ಮಾಡಲಾಗಿದೆ. ರಾಷ್ಟ್ರೀಯ ಆರೋಗ್ಯ ಸೇವಾ ನಿಯಂತ್ರಣ ಮತ್ತು ಸಮನ್ವಯ ಸಚಿವಾಲಯ ಹೊರಡಿಸಿದ ಅಧಿಸೂಚನೆಯ ಪ್ರಕಾರ, ವೈದ್ಯರು, ದಾದಿಯರು ಮತ್ತು ಇತರ ಸಿಬ್ಬಂದಿಯ ರಜೆಗಳನ್ನು ರದ್ದುಗೊಳಿಸಲಾಗಿದೆ.
ಹಿಂಸಾತ್ಮಕ ಘಟನೆಗಳ ಭೀತಿಯಿಂದ ಕಡಿಮೆ ಮತದಾನವಾಗುವ ಸಾಧ್ಯತೆ ಚುನಾವಣೆಗಳು ಬ್ಯಾಲೆಟ್ ಪೇಪರ್‌ನಲ್ಲಿ ನಡೆಯುತ್ತಿವೆ. ಪಾಕಿಸ್ತಾನದಲ್ಲಿ ಅನೇಕ ಸಶಸ್ತ್ರ ಗುಂಪುಗಳು ಸಕ್ರಿಯವಾಗಿವೆ, ಈ ಕಾರಣದಿಂದಾಗಿ ಹಿಂಸಾತ್ಮಕ ಘಟನೆಗಳ ಭಯದಿಂದ ಕಡಿಮೆ ಮತದಾನದ ಸಾಧ್ಯತೆಯಿದೆ, ವಿಶೇಷವಾಗಿ ಖೈಬರ್ ಪಖ್ತುನ್ಖ್ವಾ ಮತ್ತು ಬಲೂಚಿಸ್ತಾನದಂತಹ ಪ್ರದೇಶಗಳಲ್ಲಿ ಭಯದ ವಾತಾವರಣವಿದೆ ಎನ್ನಲಾಗಿದೆ.
ಪಾಕಿಸ್ತಾನದಲ್ಲಿ ಸಾರ್ವತ್ರಿಕ ಚುನಾವಣಾ ಮಾಹಿತಿಗಾಗಿ ಪೋರ್ಟಲ್ ಪ್ರಾರಂಭ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ನೌಕರರಿಗೆ ಮತದಾನ ಪ್ರಕ್ರಿಯೆ ಪೂರ್ಣಗೊಳಿಸಲು ಆದೇಶ ನೀಡಲಾಗಿದೆ. ಕರ್ತವ್ಯಕ್ಕೆ ಹಾಜರಾಗದಿದ್ದಲ್ಲಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸರ್ಕಾರ ಎಚ್ಚರಿಕೆ ನೀಡಿದೆ. ಚುನಾವಣಾ ಮಾಹಿತಿಗಾಗಿ ಪೋರ್ಟಲ್ ಆರಂಭಿಸಲಾಗಿದೆ. ಇದರಿಂದ ಎಲ್ಲೆಡೆ ಚುನಾವಣೆ ಸ್ಥಿತಿಗತಿ ಕುರಿತು ನಿಖರ ಮಾಹಿತಿ ದೊರೆಯಲಿದೆ.
ಮತದಾನದ ದಿನದಂದು ಪಾಕಿಸ್ತಾನವು ಇರಾನ್ ಮತ್ತು ಅಫ್ಘಾನಿಸ್ತಾನದೊಂದಿಗಿನ ತನ್ನ ಗಡಿಯನ್ನು ಮುಚ್ಚಿರುತ್ತದೆ. ದೇಶದಲ್ಲಿ ಸಾರ್ವತ್ರಿಕ ಚುನಾವಣೆಯ ಸಮಯದಲ್ಲಿ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಫೆಬ್ರವರಿ 8 ರಂದು ಎಲ್ಲಾ ಉದ್ದೇಶಗಳಿಗಾಗಿ ಅಫ್ಘಾನಿಸ್ತಾನ ಮತ್ತು ಇರಾನ್‌ನೊಂದಿಗಿನ ಗಡಿಯನ್ನು ಮುಚ್ಚಲು ಪಾಕಿಸ್ತಾನ ನಿರ್ಧರಿಸಿದೆ.
ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ