Pakistan Flood: ಪಾಕಿಸ್ತಾನದ ಇತಿಹಾಸದಲ್ಲೇ ಭೀಕರ ಪ್ರವಾಹ; 1000 ಜನ ಸಾವು, 10 ಲಕ್ಷ ಮನೆಗಳು ಧ್ವಂಸ
ಪಾಕಿಸ್ತಾನದಲ್ಲಿ ಪ್ರವಾಹದಿಂದ ಸತ್ತವರ ಸಂಖ್ಯೆ 1,000 ದಾಟಿದೆ. ಜೂನ್‌ನಿಂದ ಸಾವಿರಾರು ಜನರು ಗಾಯಗೊಂಡಿದ್ದಾರೆ.
ಇಸ್ಲಮಾಬಾದ್: ಪಾಕಿಸ್ತಾನದಲ್ಲಿ (Pakistan Flood) ಉಂಟಾಗಿರುವ ಭೀಕರ ಪ್ರವಾಹದಿಂದ 57 ಲಕ್ಷಕ್ಕೂ ಹೆಚ್ಚು ಜನರು ತೊಂದರೆಗೀಡಾಗಿದ್ದಾರೆ. ಪಾಕಿಸ್ತಾನವು ತನ್ನ ಇತಿಹಾಸದಲ್ಲಿಯೇ ಅತ್ಯಂತ ಕೆಟ್ಟ ಪ್ರವಾಹವನ್ನು ಎದುರಿಸುತ್ತಿದೆ ಎಂದು ದಿ ನ್ಯೂಸ್ ಇಂಟರ್ನ್ಯಾಷನಲ್ ವರದಿ ಮಾಡಿದೆ. ಈ ಪ್ರವಾಹದಲ್ಲಿ ಸುಮಾರು 7,19,558 ಪ್ರಾಣಿಗಳು ಸಾವನ್ನಪ್ಪಿದ್ದು, 1000 ಜನರು ಮೃತಪಟ್ಟಿದ್ದಾರೆ. 10 ಲಕ್ಷಕ್ಕೂ ಹೆಚ್ಚು ಮನೆಗಳು ಹಾನಿಗೀಡಾಗಿವೆ. ಈ ಪ್ರವಾಹವು ಪಾಕಿಸ್ತಾನದಲ್ಲಿ ಕೃಷಿ ಭೂಮಿ ಮತ್ತು ಮೂಲಸೌಕರ್ಯಗಳ ಮೇಲೂ ಪರಿಣಾಮ ಬೀರಿದೆ.
ಪಾಕಿಸ್ತಾನದಲ್ಲಿ ಪ್ರವಾಹದಿಂದ ಸತ್ತವರ ಸಂಖ್ಯೆ 1,000 ದಾಟಿದೆ. ಜೂನ್‌ನಿಂದ ಸಾವಿರಾರು ಜನರು ಗಾಯಗೊಂಡಿದ್ದಾರೆ. ಜೂನ್ 14 ರಿಂದ ಮಳೆ ಮತ್ತು ಪ್ರವಾಹದಿಂದ ಕನಿಷ್ಠ 1,033 ಜನರು ಸಾವನ್ನಪ್ಪಿದ್ದಾರೆ ಮತ್ತು 1,527 ಜನರು ಗಾಯಗೊಂಡಿದ್ದಾರೆ. ಬಲೂಚಿಸ್ತಾನದಲ್ಲಿ 4, ಗಿಲ್ಗಿಟ್ ಬಾಲ್ಟಿಸ್ತಾನ್‌ನಲ್ಲಿ 6, ಖೈಬರ್ ಪಖ್ತುಂಖ್ವಾದಲ್ಲಿ 31 ಮತ್ತು ಸಿಂಧ್‌ನಲ್ಲಿ 76 ಮಂದಿ ಸಾವನ್ನಪ್ಪಿದ್ದಾರೆ. ಪಾಕಿಸ್ತಾನದಲ್ಲಿ ಜೂನ್ 14ರಿಂದ 3,451.5 ಕಿಮೀ ರಸ್ತೆ ಹಾನಿಗೊಳಗಾಗಿದೆ ಮತ್ತು 149 ಸೇತುವೆಗಳು ಕುಸಿದಿವೆ. ಒಟ್ಟು 9,49,858 ಮನೆಗಳು ಭಾಗಶಃ ನಾಶವಾಗಿವೆ. ಒಟ್ಟು 6,62,446 ಮನೆಗಳು ಸಂಪೂರ್ಣವಾಗಿ ನಾಶವಾಗಿವೆ.
Currently flood situation in Dir area of Pakistan pic.twitter.com/DYgrfobfn0
— Beautiful Pakistan?? (@LandofPakistan) August 29, 2022
ಇದನ್ನೂ ಓದಿ: ರಾತ್ರಿ ಸುರಿದ ಮಳೆಯಿಂದ ಬೆಂಗಳೂರಿನ ಬಿಳೇಕಹಳ್ಳಿ ವಾರ್ಡ್ ಪ್ರವಾಹಪೀಡಿತ ಪ್ರದೇಶದಂತೆ ಕಾಣುತ್ತಿದೆ! ಭಾನುವಾರ ಬಿಡುಗಡೆಯಾದ ಅಧಿಕೃತ ಅಂಕಿಅಂಶಗಳ ಪ್ರಕಾರ, ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ ಪ್ರವಾಹ ಸಂಬಂಧಿತ ಘಟನೆಗಳಲ್ಲಿ 119 ಜನರು ಸಾವನ್ನಪ್ಪಿದ್ದಾರೆ. ಜೂನ್ 14 ರಿಂದ ಪಾಕಿಸ್ತಾನದಲ್ಲಿ ಭಾರೀ ಮಳೆಯಿಂದ ಉಂಟಾದ ಪ್ರವಾಹ ಪರಿಸ್ಥಿತಿಯನ್ನು ಹದಗೆಟ್ಟಿದೆ. ಈ ಪ್ರವಾಹ 30 ಮಿಲಿಯನ್‌ಗಿಂತಲೂ ಹೆಚ್ಚು ಜನರ ಮೇಲೆ ಪರಿಣಾಮ ಬೀರಿದೆ. ಈ ಘಟನೆಯಲ್ಲಿ 1,000ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.
ಪಾಕಿಸ್ತಾನದಲ್ಲಿ ಪ್ರವಾಹದಿಂದಾಗಿ 119 ಮಂದಿ ಸಾವನ್ನಪ್ಪಿದ್ದಾರೆ. ಪಾಕಿಸ್ತಾನದಲ್ಲಿ ಇದುವರೆಗೆ 1,033 ಮಂದಿ ಸಾವನ್ನಪ್ಪಿದ್ದು, 1,527 ಮಂದಿ ಗಾಯಗೊಂಡಿದ್ದಾರೆ. ಪಾಕಿಸ್ತಾನದ ಕನಿಷ್ಠ 110 ಜಿಲ್ಲೆಗಳು ಪ್ರವಾಹಕ್ಕೆ ತುತ್ತಾಗಿವೆ.
ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 3:24 pm, Mon, 29 August 22