ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ (Bilawal Bhutto) ಮೇ4ರಂದು ಭಾರತಕ್ಕೆ ಭೇಟಿ ನೀಡಲಿದ್ದಾರೆ. 2014 ರಲ್ಲಿ ನವಾಜ್ ಷರೀಫ್ (Nawaz Sharif )ನಂತರ ಯಾವುದೇ ಪಾಕ್ ನಾಯಕರು ಭಾರತಕ್ಕೆ ಭೇಟಿ ನೀಡಿಲ್ಲ. ಇದಾದ ನಂತರ ಭಾರತಕ್ಕೆ ಮೊದಲ ಬಾರಿ ಭೇಟಿ ನೀಡುತ್ತಿರುವ ಪಾಕ್ ಸಚಿವರಾಗಿದ್ದಾರೆ ಭುಟ್ಟೋ. ಮೇ 4 ಮತ್ತು 5 ರಂದು ಗೋವಾದಲ್ಲಿ ನಡೆಯಲಿರುವ ಶಾಂಘೈ ಸಹಕಾರ ಸಂಸ್ಥೆಯ (Shanghai Cooperation Organization) ವಿದೇಶಾಂಗ ಮಂತ್ರಿಗಳ ಸಭೆಗೆ ಪಾಕಿಸ್ತಾನದ ನಿಯೋಗವನ್ನು ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಜರ್ದಾರಿ ಮುನ್ನಡೆಸಲಿದ್ದಾರೆ ಎಂದು ಪಾಕಿಸ್ತಾನ ವಿದೇಶಾಂಗ ಸಚಿವಾಲಯ ಹೇಳಿದೆ.
Pakistan Foreign minister Bilawal Bhutto Zardari will be leading the Pakistan delegation to the Shanghai cooperation council of foreign ministers being held on 4th and 5th May in Goa: Ministry of Foreign Affairs, Pakistan
(File pic) pic.twitter.com/8VhBEaReSA
— ANI (@ANI) April 20, 2023
ಶಾಂಘೈ ಸಹಕಾರ ಸಂಸ್ಥೆ(SCO) ಒಂದು ಪ್ರಾದೇಶಿಕ ರಾಜಕೀಯ ಮತ್ತು ಭದ್ರತಾ ಬ್ಲಾಕ್ ಆಗಿದ್ದು, ಅದರಲ್ಲಿ ರಷ್ಯಾ, ಚೀನಾ, ಭಾರತ ಮತ್ತು ಪಾಕಿಸ್ತಾನ ಸದಸ್ಯ ರಾಷ್ಟ್ರಗಳಾಗಿವೆ. ಗೋವಾದಲ್ಲಿ ವಿದೇಶಾಂಗ ಸಚಿವರ ಸಭೆ ನಡೆಯಲಿದೆ.
ಇದನ್ನೂ ಓದಿ: Annapurna Mountain: ನೇಪಾಳದ ಅನ್ನಪೂರ್ಣ ಪರ್ವತದಲ್ಲಿ ನಾಪತ್ತೆಯಾಗಿದ್ದ ಭಾರತದ ಪರ್ವತಾರೋಹಿ ಅನುರಾಗ್ ರಕ್ಷಣೆ, ಸ್ಥಿತಿ ಗಂಭೀರ
ಉಜ್ಬೇಕಿಸ್ತಾನ್‌ನ ಸಮರ್‌ಕಂಡ್‌ನಲ್ಲಿ ನಡೆದ 2022 ರ ಎಸ್‌ಸಿಒ ಶೃಂಗಸಭೆಯಲ್ಲಿ ಭಾರತವು ಎಸ್‌ಸಿಒದ ಅಧ್ಯಕ್ಷತೆಯನ್ನು ವಹಿಸಿಕೊಂಡಿದೆ. ಈ ವರ್ಷ ಇದು ಕೌನ್ಸಿಲ್ ಆಫ್ ಸ್ಟೇಟ್‌ನ ಮುಖಂಡರ ಮುಂದಿನ ಶೃಂಗಸಭೆಯನ್ನು ಆಯೋಜಿಸಲಿದೆ.
ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 1:31 pm, Thu, 20 April 23