Pervez Musharraf Death: ಪಾಕ್ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ನಿಧನ

Pakistan former president Passes away- ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ರಾವಲ್ಪಿಂಡಿಯ ಆಸ್ಪತ್ರೆಯೊಂದರಲ್ಲಿ ಇಂದು ನಿಧನರಾಗಿದ್ದಾರೆ. ಅವರು ದೀರ್ಘಕಾಲ ಅನಾರೋಗ್ಯದಿಂದ ಬಳಲುತ್ತಿದ್ದರು.

Pervez Musharraf Death: ಪಾಕ್ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ನಿಧನ
ಪರ್ವೇಜ್ ಮುಷರಫ್
Follow us
TV9 Web
| Updated By: ಸುಗ್ಗನಹಳ್ಳಿ ವಿಜಯಸಾರಥಿ

Updated on:Feb 05, 2023 | 12:03 PM

ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಇಂದು ಭಾನುವಾರ (Pervez Musharraf Death) ನಿಧನರಾಗಿದ್ದಾರೆ. ದೀರ್ಘಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ರಾವಲಪಿಂಡಿಯ ಸೇನಾ ಪಡೆ ಆಸ್ಪತ್ರೆಯೊಂದರಲ್ಲಿ ಕೊನೆ ಉಸಿರೆಳೆದಿದ್ದಾರೆ. 78 ವರ್ಷದ ಮುಷರಫ್ ಅವರು ಅಮಿಲೋಡೋಸಿಸ್ (Amyloidosis) ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದರೆನ್ನಲಾಗಿದ್ದು, 2016ರಿಂದ ದುಬೈನಲ್ಲಿದ್ದು ಚಿಕಿತ್ಸೆ ಪಡೆಯುತ್ತಿದ್ದರು. ಇತ್ತೀಚೆಗಷ್ಟೇ ಅವರನ್ನು ಪಾಕಿಸ್ತಾನದ ರಾವಲ್ಪಿಂಡಿ ನಗರದಲ್ಲಿರುವ ಆರ್ಮ್ಡ್ ಫೋರ್ಸಸ್ ಇನ್ಸ್​ಟಿಟ್ಯೂಟ್ ಆಫ್ ಕಾರ್ಡಿಯಾಲಜಿ ಆಸ್ಪತ್ರೆಗೆ ವರ್ಗವಾಗಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಅವರು ನಿಧನರಾಗಿದ್ದಾರೆ.

ಪರ್ವೇಜ್ ಮುಷರಫ್ ಬದುಕುಳಿಯುವುದು ಬಹುತೇಕ ಕಷ್ಟ ಎಂದು ಸಾಕಷ್ಟು ಮೊದಲೇ ಗೊತ್ತಾಗಿತ್ತು. ಮುಷರಫ್ ಅವರ ಆರೋಗ್ಯ ಚೇತರಿಕೆ ಕಾಣುವುದು ಸಾಧ್ಯವಾಗುತ್ತಿಲ್ಲ. ಅವರ ಅಂಗಾಗಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಅವರ ಕುಟುಂಬ ಸದಸ್ಯರು ಜೂನ್ 10ರಂದು ಹೇಳಿಕೆ ನೀಡಿದ್ದರು.

ಇದನ್ನೂ ಓದಿ: Pakistan Crisis: ಸರ್ಕಾರಿ ನೌಕರರ ಸಂಬಳ ಕಡಿತ, ಪೆಟ್ರೋಲ್ ಮೇಲೆ ಸುಂಕ ಹೆಚ್ಚಳ; ಪಾಕಿಸ್ತಾನಕ್ಕೆ ಕಠಿಣ ಷರತ್ತು ವಿಧಿಸಿದ ಐಎಂಎಫ್

ವೆಂಟಿಲೇಟರ್​ನಲ್ಲಿ ಅವರನ್ನು ಇಡಲಾಗಿಲ್ಲ. ಕಳೆದ 3 ವಾರಗಳಿಂದ ಈ ಕಾಯಿಲೆ ತೀವ್ರ ಸ್ವರೂಪ ಪಡೆದಿದ್ದರಿಂದ ಆಸ್ಪತ್ರೆಯಲ್ಲಿದ್ದಾರೆ. ಚೇತರಿಕೆ ಕಾಣದ ಹಂತದಲ್ಲಿ ಅವರಿದ್ದಾರೆ. ಅಂಗಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ. ಅವರ ನಿತ್ಯ ಜೀವನ ಸುಗಮವಾಗಿರುವಂತೆ ಪ್ರಾರ್ಥಿಸಿಎಂದು ಕುಟುಂಬದವರು ದೇಶವಾಸಿಗಳಿಗೆ ಮನವಿ ಮಾಡಿದ್ದರು.

ಪಾಕಿಸ್ತಾನದ ಮಾಜಿ ಸೇನಾ ಮುಖ್ಯಸ್ಥರಾಗಿದ್ದ ಪರ್ವೇಜ್ ಮುಷರಫ್ 2001ರಿಂದ 2008ರಿಂದ ತಮ್ಮ ದೇಶದ ಅಧ್ಯಕ್ಷರಾಗಿದ್ದರು. 1999ರಲ್ಲಿ ಭಾರತದ ಕಾರ್ಗಿಲ್ ಮೇಲೆ ಪಾಕಿಸ್ತಾನದ ಸೇನಾ ಪಡೆ ಆಕ್ರಮಣ ಮಾಡಲು ಇವರೇ ರೂವಾರಿಯಾಗಿದ್ದರು. ಆ ಯುದ್ಧದಲ್ಲಿ ಪಾಕಿಸ್ತಾನ ಸೇನೆ ಸೋತು ಸುಣ್ಣವಾಯಿತು. ಬಳಿಕ ಅವರು ಆಗಿನ ಪ್ರಧಾನಿ ನವಾಜ್ ಷರೀಫ್ ಸರ್ಕಾರವನ್ನು ಪತನಗೊಳಿಸಿ ಪಾಕಿಸ್ತಾನದ ಆಡಳಿತ ಹಿಡಿದರು. 2001ರಿಂದ 2008ರವರೆಗೂ ಅವರು ಪಾಕಿಸ್ತಾನದ ಅಧ್ಯಕ್ಷರಾದರು.

ಇದನ್ನೂ ಓದಿ: US vs China: ಸ್ಪೈ ಬಲೂನು ಹೊಡೆದುರುಳಿಸಿದ ಅಮೆರಿಕ; ಗರಂ ಆದ ಚೀನಾ

ಅವರು ಅಧಿಕಾರದಿಂದ ಇಳಿದ ಬಳಿಕ ಹಲವು ಪ್ರಕರಣಗಳು ಅವರನ್ನು ಸುತ್ತಿದವು. 2007ರಲ್ಲಿ ಸಂವಿಧಾನಕ್ಕೆ ಧಕ್ಕೆ ತಂದ ಗಂಭೀರ ಆರೋಪ ಸಾಬೀತಾಗಿತ್ತು. ಬೇನಜೀರ್ ಭುಟ್ಟೋ ಹತ್ಯೆ ಪ್ರಕರಣ ಮತ್ತು ಕೆಂಪು ಮಸೀದಿಯ ಧರ್ಮಗುರು ಹತ್ಯೆ ಪ್ರಕರಣಗಳಲ್ಲೂ ಅವರು ಆರೋಪಿಯಾಗಿದ್ದರು. ಆ ಸಂದರ್ಭದಲ್ಲೇ ಅವರು ಅಪರೂಪದ ಕಾಯಿಲೆಗೆ ತುತ್ತಾಗಿ ಕೊನೆಗೆ ವಿಧಿವಶರಾಗಿದ್ದಾರೆ.

.

Published On - 11:45 am, Sun, 5 February 23

ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ
ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ
ಸಮುದ್ರಕ್ಕೆ ಹಾರಿದ ಯುವತಿ, ರೋಚಕ ರಕ್ಷಣಾ ಕಾರ್ಯಾಚರಣೆ ಹೀಗಿತ್ತು ನೋಡಿ
ಸಮುದ್ರಕ್ಕೆ ಹಾರಿದ ಯುವತಿ, ರೋಚಕ ರಕ್ಷಣಾ ಕಾರ್ಯಾಚರಣೆ ಹೀಗಿತ್ತು ನೋಡಿ
ನಾಥನ್ ಲಿಯಾನ್ ಹೆಣೆದ ಬಲೆಗೆ ಬಿದ್ದ ರಿಷಭ್ ಪಂತ್
ನಾಥನ್ ಲಿಯಾನ್ ಹೆಣೆದ ಬಲೆಗೆ ಬಿದ್ದ ರಿಷಭ್ ಪಂತ್
ಆಸ್ಟ್ರೇಲಿಯಾ ಪಾಲಿಗೆ ದುಬಾರಿಯಾದ ಖ್ವಾಜಾ ಕೈಬಿಟ್ಟ ಕ್ಯಾಚ್
ಆಸ್ಟ್ರೇಲಿಯಾ ಪಾಲಿಗೆ ದುಬಾರಿಯಾದ ಖ್ವಾಜಾ ಕೈಬಿಟ್ಟ ಕ್ಯಾಚ್
ಮಹಾರಾಷ್ಟ್ರ: ಸ್ವತಂತ್ರ ಅಭ್ಯರ್ಥಿಯ ವಿಜಯೋತ್ಸವದ ವೇಳೆ ಅಗ್ನಿ ಅವಘಡ
ಮಹಾರಾಷ್ಟ್ರ: ಸ್ವತಂತ್ರ ಅಭ್ಯರ್ಥಿಯ ವಿಜಯೋತ್ಸವದ ವೇಳೆ ಅಗ್ನಿ ಅವಘಡ
ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ
ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ