AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pakistan General Election: ಪಾಕಿಸ್ತಾನದಲ್ಲಿ ಮೊದಲ ಬಾರಿಗೆ ಚುನಾವಣೆಗೆ ಸ್ಪರ್ಧಿಸಿದ ದಿಟ್ಟ ಹಿಂದೂ ಮಹಿಳೆ

ಪಾಕಿಸ್ತಾನದಲ್ಲಿ ಮುಂದಿನ ವರ್ಷ 2024 ರಲ್ಲಿ ಫೆಬ್ರವರಿ 8 ರಂದು ಸಾರ್ವತ್ರಿಕ ಚುನಾವಣೆಗಳು ನಡೆಯಲಿವೆ. ಈ ಚುನಾವಣೆಯಲ್ಲಿ ಮೊದಲ ಬಾರಿಗೆ ಖೈಬರ್ ಪಖ್ತುಂಖ್ವಾದ ಬುನೇರ್ ಜಿಲ್ಲೆಯ ಸಾಮಾನ್ಯ ಸ್ಥಾನಕ್ಕೆ ಹಿಂದೂ ಮಹಿಳೆಯೊಬ್ಬರು ನಾಮಪತ್ರ ಸಲ್ಲಿಸಿದ್ದಾರೆ. ಡಾನ್ ವರದಿಯ ಪ್ರಕಾರ, ಸವೇರಾ ಪ್ರಕಾಶ್ ಎಂಬ ಹಿಂದೂ ಮಹಿಳೆ ಬುನರ್ ಜಿಲ್ಲೆಯ PK-25 ರ ಸಾಮಾನ್ಯ ಸ್ಥಾನಕ್ಕೆ ಅಧಿಕೃತವಾಗಿ ನಾಮಪತ್ರ ಸಲ್ಲಿಸಿದ್ದಾರೆ.

Pakistan General Election: ಪಾಕಿಸ್ತಾನದಲ್ಲಿ ಮೊದಲ ಬಾರಿಗೆ ಚುನಾವಣೆಗೆ ಸ್ಪರ್ಧಿಸಿದ ದಿಟ್ಟ ಹಿಂದೂ ಮಹಿಳೆ
ಸವೀರಾImage Credit source: NDTV
ನಯನಾ ರಾಜೀವ್
|

Updated on: Dec 26, 2023 | 8:33 AM

Share

ಪಾಕಿಸ್ತಾನದಲ್ಲಿ ಮುಂದಿನ ವರ್ಷ 2024 ರಲ್ಲಿ ಫೆಬ್ರವರಿ 8 ರಂದು ಸಾರ್ವತ್ರಿಕ ಚುನಾವಣೆಗಳು ನಡೆಯಲಿವೆ. ಈ ಚುನಾವಣೆಯಲ್ಲಿ ಮೊದಲ ಬಾರಿಗೆ ಖೈಬರ್ ಪಖ್ತುಂಖ್ವಾದ ಬುನೇರ್ ಜಿಲ್ಲೆಯ ಸಾಮಾನ್ಯ ಸ್ಥಾನಕ್ಕೆ ಹಿಂದೂ ಮಹಿಳೆಯೊಬ್ಬರು ನಾಮಪತ್ರ ಸಲ್ಲಿಸಿದ್ದಾರೆ. ಡಾನ್ ವರದಿಯ ಪ್ರಕಾರ, ಸವೀರಾ ಪ್ರಕಾಶ್(Saveera Prakash) ಎಂಬ ಹಿಂದೂ ಮಹಿಳೆ ಬುನರ್ ಜಿಲ್ಲೆಯ PK-25 ರ ಸಾಮಾನ್ಯ ಸ್ಥಾನಕ್ಕೆ ಅಧಿಕೃತವಾಗಿ ನಾಮಪತ್ರ ಸಲ್ಲಿಸಿದ್ದಾರೆ.

ಹಿಂದೂ ಸಮುದಾಯದ ಸದಸ್ಯರಾದ ಸವೇರಾ ಪ್ರಕಾಶ್ ಅವರು ತಮ್ಮ ತಂದೆಯ ಹಾದಿಯನ್ನು ಅನುಸರಿಸಿ ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ (ಪಿಪಿಪಿ) ಟಿಕೆಟ್‌ನಲ್ಲಿ ಚುನಾವಣೆಗೆ ಸ್ಪರ್ಧಿಸಲು ತಯಾರಿ ನಡೆಸಿದ್ದಾರೆ. ಸವೀರಾ ಪ್ರಕಾಶ್ ತಂದೆಯ ಹೆಸರು ಓಂಪ್ರಕಾಶ್, ಇವರು ನಿವೃತ್ತ ವೈದ್ಯರಾಗಿದ್ದಾರೆ. ಅವರು ಈ ಹಿಂದೆ ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ (ಪಿಪಿಪಿ) ಸದಸ್ಯರಾಗಿದ್ದರು.

ಸೋಮವಾರ (ಡಿಸೆಂಬರ್ 25) ಕ್ವಾಮಿ ವತನ್ ಪಾರ್ಟಿಯೊಂದಿಗೆ ಸಂಬಂಧ ಹೊಂದಿರುವ ಖೈಬರ್ ಪಖ್ತುಂಕ್ವಾದ ಸ್ಥಳೀಯ ನಾಯಕ ಸಲೀಂ ಖಾನ್. ಮುಂಬರುವ ಚುನಾವಣೆಗೆ ಬಣೇರ್‌ನಿಂದ ಸಾಮಾನ್ಯ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ಮೊದಲ ಮಹಿಳೆ ಸವೀರಾ ಪ್ರಕಾಶ್‌ ಎಂದು ಹೇಳಿದರು. ಸವೇರಾ ಪ್ರಕಾಶ್ ಅವರು 2022 ರಲ್ಲಿ ಅಬೋಟಾಬಾದ್ ಇಂಟರ್ನ್ಯಾಷನಲ್ ಮೆಡಿಕಲ್ ಕಾಲೇಜಿನಲ್ಲಿ ಪದವಿ ಪಡೆದಿದ್ದಾರೆ. ಅವರು ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ (ಪಿಪಿಪಿ) ಮಹಿಳಾ ವಿಭಾಗದ ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ಮಾಡುತ್ತಿದ್ದಾರೆ.

ಮತ್ತಷ್ಟು ಓದಿ: 2024 ಜನವರಿ ಕೊನೆಯ ವಾರದಲ್ಲಿ ಪಾಕಿಸ್ತಾನದ ಸಾರ್ವತ್ರಿಕ ಚುನಾವಣೆ

ಸವೀರಾ ಪ್ರಕಾಶ್ ಅವರು ಮಹಿಳಾ ವಿಭಾಗದ ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ಮಾಡುವಾಗ ಸಮುದಾಯದ ಕಲ್ಯಾಣಕ್ಕಾಗಿ ತಮ್ಮ ಬದ್ಧತೆಯನ್ನು ತೋರಿಸಿದ್ದಾರೆ. ಮಹಿಳೆಯರ ಶ್ರೇಯೋಭಿವೃದ್ಧಿಗೆ ಶ್ರಮಿಸಿದ್ದಾರೆ. ಇದಲ್ಲದೇ ಪರಿಸರವನ್ನು ಸ್ವಚ್ಛವಾಗಿಡುವ ಕೆಲಸವೂ ನಡೆದಿದೆ. ಅಭಿವೃದ್ಧಿ ಕ್ಷೇತ್ರದಲ್ಲಿ ಮಹಿಳೆಯರ ಐತಿಹಾಸಿಕ ನಿರ್ಲಕ್ಷ್ಯ ಮತ್ತು ದಬ್ಬಾಳಿಕೆಯನ್ನು ಅವರು ಒತ್ತಿ ಹೇಳಿದರು ಮತ್ತು ಅವರು ಚುನಾಯಿತರಾದರೆ ಈ ಸಮಸ್ಯೆಗಳನ್ನು ಪರಿಹರಿಸುವ ಗುರಿಯನ್ನು ಹೊಂದಿದ್ದಾರೆ.

ತಾನು ತನ್ನ ತಂದೆಯ ಹಾದಿಯನ್ನು ಅನುಸರಿಸುತ್ತೇನೆ ಮತ್ತು ಪ್ರದೇಶದ ಹಿಂದುಳಿದವರಿಗಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದರು. ಅವರು ಡಿಸೆಂಬರ್ 23 ರಂದು ತಮ್ಮ ನಾಮಪತ್ರವನ್ನು ಸಲ್ಲಿಸಿದರು ಮತ್ತು ಪಿಪಿಪಿಯ ಹಿರಿಯ ನಾಯಕತ್ವವು ಅವರ ಉಮೇದುವಾರಿಕೆಯನ್ನು ಬೆಂಬಲಿಸುತ್ತದೆ ಎಂದು ಭರವಸೆ ವ್ಯಕ್ತಪಡಿಸಿದರು. ವೈದ್ಯ ಕುಟುಂಬಕ್ಕೆ ಸೇರಿದ ಸಾವೇರ ಪ್ರಕಾಶ್ ಮಾತನಾಡಿ, ಮಾನವೀಯತೆಯ ಸೇವೆ ಮಾಡುವುದು ನನ್ನ ರಕ್ತದಲ್ಲಿದೆ.

ವೈದ್ಯಕೀಯ ವ್ಯಾಸಂಗದ ಅವಧಿಯಲ್ಲಿ ಶಾಸಕನಾಗಬೇಕೆಂಬುದು ಅವರ ಕನಸಾಗಿತ್ತು. ಸರ್ಕಾರಿ ಆಸ್ಪತ್ರೆಗಳಲ್ಲಿನ ಕಳಪೆ ನಿರ್ವಹಣೆ ಮತ್ತು ಅಸಹಾಯಕತೆಯನ್ನು ತೊಡೆದುಹಾಕಲು ಅವಳು ಬಯಸುತ್ತಾಳೆ. ಪಾಕಿಸ್ತಾನದ ಚುನಾವಣಾ ಆಯೋಗದ (ECP) ಇತ್ತೀಚಿನ ತಿದ್ದುಪಡಿಗಳು ಸಾಮಾನ್ಯ ಸ್ಥಾನಗಳಲ್ಲಿ ಐದು ಪ್ರತಿಶತ ಮಹಿಳಾ ಅಭ್ಯರ್ಥಿಗಳನ್ನು ಸೇರಿಸುವುದು ಕಡ್ಡಾಯವಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ಕಣ್ಣು ಆಪರೇಷನ್​​ಗೆ ಕರೆದು ಕೇವಲ ಅನಸ್ತೇಷಿಯಾ ಕೊಟ್ಟು ಕಳುಹಿಸಿದ್ರು!
ಕಣ್ಣು ಆಪರೇಷನ್​​ಗೆ ಕರೆದು ಕೇವಲ ಅನಸ್ತೇಷಿಯಾ ಕೊಟ್ಟು ಕಳುಹಿಸಿದ್ರು!
ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ
ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!