AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆಗೆ ಶಸ್ತ್ರ ಚಿಕಿತ್ಸೆ ಮಾಡಿದ ಸೆಕ್ಯೂರಿಟಿ ಗಾರ್ಡ್ ಅರೆಸ್ಟ್; ಸಾವಿನ ಹಿಂದಿನ ಅಸಲಿಯತ್ತು ಏನು?

ಆಕೆ ಸಾವಿಗೀಡಾಗಿರುವುದು ಶಸ್ತ್ರ ಚಿಕಿತ್ಸೆಯಿಂದಲೆ ಎಂಬುದನ್ನು ಖಚಿತಪಡಿಸಿಕೊಳ್ಳಲು ಮಹಿಳೆಯ ಶವವನ್ನು ಶವಪರೀಕ್ಷೆಗಾಗಿ ಇರಿಸಿಕೊಳ್ಳಲಾಗಿದೆ. ಸೆಕ್ಯೂರಿಟಿ ಗಾರ್ಡ್​ ಮೇಲೆ ಆರೋಪ ಕೇಳಿ ಬಂದಿದೆ. ಹಾಗೂ ಈತ ಪೊಲೀಸ್​ ಕಸ್ಟಡಿಯಲ್ಲಿದ್ದಾನೆ ಎಂದು ಪೊಲೀಸ್​ ವಕ್ತಾರರೋರ್ವರು ಮಾಹಿತಿ ಹಂಚಿಕೊಂಡಿದ್ದಾರೆ.

ಮಹಿಳೆಗೆ ಶಸ್ತ್ರ ಚಿಕಿತ್ಸೆ ಮಾಡಿದ ಸೆಕ್ಯೂರಿಟಿ ಗಾರ್ಡ್ ಅರೆಸ್ಟ್; ಸಾವಿನ ಹಿಂದಿನ ಅಸಲಿಯತ್ತು ಏನು?
ಮಹಿಳೆಗೆ ಶಸ್ತ್ರ ಚಿಕಿತ್ಸೆ ಮಾಡಿದ ಸೆಕ್ಯೂರಿಟಿ ಗಾರ್ಡ್ ಅರೆಸ್ಟ್
TV9 Web
| Updated By: shruti hegde|

Updated on:Jun 08, 2021 | 12:06 PM

Share

ಲಾಹೋರ್​: ಆಸ್ಪತ್ರೆಯ ಮಾಜಿ ಭದ್ರತಾ ಸಿಬ್ಬಂದಿ (ಸೆಕ್ಯುರಿಟಿ ಗಾರ್ಡ್​)​ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಗೆ ಶಸ್ತ್ರ ಚಿಕಿತ್ಸೆ ಮಾಡಲು ಮುಂದಾಗಿದ್ದಾರೆ. ಇದರಿಂದ ಮಹಿಳೆ ಸಾವಿಗೀಡಾದ ಘಟನೆ ಪಾಕಿಸ್ತಾನದ ಆಸ್ಪತ್ರೆಯಲ್ಲಿ ನಡೆದಿದೆ. ವಿಚಾರಣೆ ಬಳಿಕ ಭದ್ರತಾ ಸಿಬ್ಬಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಆರೋಪಿ ಮಹಮ್ಮದ್​ ವಹೀದ್​ ಬಟ್​ ಎಂಬುದು ತಿಳಿದು ಬಂದಿದೆ.

ತನ್ನ ಬೆನ್ನಿಗಾದ ಗಾಯಕ್ಕೆ ಚಿಕಿತ್ಸೆ ಪಡೆಯಲು ಮಹಿಳೆ ಲಾಹೋರ್​ನ ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಸೆಕ್ಯುರಿಟಿ ಗಾರ್ಡ್​ ಶಸ್ತ್ರ ಚಿಕಿತ್ಸೆ ನಡೆಸಿದ ಎರಡು ವಾರಗಳ ಬಳಿಕ 80 ವರ್ಷದ ಶಮೀಮಾ ಬೇಗಮ್​ ನಿಧನರಾಗಿದ್ದಾರೆ.

‘ಇದು ದೊಡ್ಡ ಆಸ್ಪತ್ರೆಯಾಗಿರುವುದರಿಂದ ಪ್ರತಿಯೊಬ್ಬ ವೈದ್ಯರು ಮತ್ತು ಎಲ್ಲಾ ಸಿಬ್ಬಂದಿಗಳು ಪ್ರತೀ ಸಮಯದಲ್ಲೂ ಏನು ಮಾಡುತ್ತಿದ್ದಾರೆ ಎಂಬುದನ್ನು ಗಮನದಲ್ಲಿಟ್ಟುಕೊಳ್ಳಲು ಆಗುವುದಿಲ್ಲ’ ಎಂದು ಲಾಹೋರ್​ನ ಮಾಯೊ ಆಸ್ಪತ್ರೆಯ ಆಡಳಿತ ಅಧಿಕಾರಿಯೊಬ್ಬರು ವಿವರಿಸಿದ್ದಾರೆ.

ಆಪರೇಟಿಂಗ್​ ಥಿಯೇಟರ್​ನಲ್ಲಿ ವಂಚಕರು ಯಾವ ರೀತಿ ಶಸ್ತ್ರ ಚಿಕಿತ್ಸೆ ನಡೆಸಿದ್ದಾರೆ ಎಂಬುದು ತಿಳಿದು ಬಂದಿಲ್ಲ. ಆದರೆ ಓರ್ವ ಅರ್ಹ ವೈದ್ಯರೂ ಇದ್ದರು ಎಂಬುದು ಬೆಳಕಿಗೆ ಬಂದಿದೆ.

ಆಕೆ ಸಾವಿಗೀಡಾಗಿರುವುದು ಶಸ್ತ್ರ ಚಿಕಿತ್ಸೆಯಿಂದಲೆ ಎಂಬುದನ್ನು ಖಚಿತಪಡಿಸಿಕೊಳ್ಳಲು ಮಹಿಳೆಯ ಶವವನ್ನು ಶವಪರೀಕ್ಷೆಗಾಗಿ ಇರಿಸಿಕೊಳ್ಳಲಾಗಿದೆ. ಸೆಕ್ಯೂರಿಟಿ ಗಾರ್ಡ್​ ಮೇಲೆ ಆರೋಪ ಕೇಳಿ ಬಂದಿದೆ. ಹಾಗೂ ಈತ ಪೊಲೀಸ್​ ಕಸ್ಟಡಿಯಲ್ಲಿದ್ದಾನೆ ಎಂದು ಪೊಲೀಸ್​ ವಕ್ತಾರರೋರ್ವರು ಮಾಹಿತಿ ಹಂಚಿಕೊಂಡಿದ್ದಾರೆ.

ಈ ಹಿಂದೆ ಸೆಕ್ಯುರಿಟಿ ಗಾರ್ಡ್​ ವೈದ್ಯರ ವೇಶ ಧರಿಸಿ ಪೋಸ್​ ನೀಡಿದ್ದರು. ಮತ್ತು ರೋಗಿಗಳ ಮನೆಗೆ ಭೇಟಿ ನೀಡಿದ್ದರು. ರೋಗಿಗಳಿಂದ ಹಣ ವಸೂಲಿ ಮಾಡಲು ಪ್ರತ್ನಿಸಿದ್ದಕ್ಕಾಗಿ ಎರಡು ವರ್ಷಗಳ ಹಿಂದೆ ಸೆಕ್ಯುರಿಟಿಯನ್ನು ಬಂಧಿಸಲಾಗುತ್ತು ಎಂದು ಮಾಯೊ ಆಸ್ಪತ್ರೆಯ ಸಿಬ್ಬಂದಿ ಹೇಳಿದ್ದಾರೆ.

ಇದನ್ನೂ ಓದಿ:

Coronavirus cases in India: ಎರಡು ತಿಂಗಳ ಅವಧಿಯಲ್ಲಿ ಮೊದಲ ಬಾರಿಗೆ 1 ಲಕ್ಷಕ್ಕಿಂತ ಕಡಿಮೆ ಹೊಸ ಕೊವಿಡ್ ಪ್ರಕರಣ, 2123 ಮಂದಿ ಸಾವು

ಪಶ್ಚಿಮಬಂಗಾಳದಲ್ಲಿ ಸಿಡಿಲು ದುರಂತಕ್ಕೆ 20 ಮಂದಿ ಸಾವು; ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ.ಪರಿಹಾರ

Published On - 12:02 pm, Tue, 8 June 21

‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!