Pakistan SCO Meet: ಎಸ್​ಸಿಒ ಶೃಂಗಸಭೆಗೆ ಪ್ರಧಾನಿ ಮೋದಿಗೆ ಆಹ್ವಾನ ಕಳುಹಿಸಿದ ಪಾಕಿಸ್ತಾನ

ಪಾಕಿಸ್ತಾನದಲ್ಲಿ ಅಕ್ಟೋಬರ್​ನಲ್ಲಿ ನಡೆಯಲಿರುವ ಎಸ್​ಸಿಒ ಶೃಂಗಸಭೆಗೆ ಪ್ರಧಾನಿ ಮೋದಿಯನ್ನು ಆಹ್ವಾನಿಸಲಾಗಿದೆ. ಅಕ್ಟೋಬರ್ 15-16 ರಂದು ಯುರೇಷಿಯನ್ ಗುಂಪಿನ ರಾಷ್ಟ್ರಗಳ ಮುಖ್ಯಸ್ಥರ ಮಂಡಳಿಯ ನಂತರ ಎರಡನೇ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯಾದ SCO ಶೃಂಗಸಭೆಯನ್ನು ಪಾಕಿಸ್ತಾನ ಆಯೋಜಿಸುತ್ತದೆ.

Pakistan SCO Meet: ಎಸ್​ಸಿಒ ಶೃಂಗಸಭೆಗೆ ಪ್ರಧಾನಿ ಮೋದಿಗೆ ಆಹ್ವಾನ ಕಳುಹಿಸಿದ ಪಾಕಿಸ್ತಾನ
ನರೇಂದ್ರ ಮೋದಿ
Follow us
ನಯನಾ ರಾಜೀವ್
|

Updated on: Aug 25, 2024 | 9:31 AM

ಪಾಕಿಸ್ತಾನದಲ್ಲಿ ಈ ವರ್ಷದ ಆಕ್ಟೋಬರ್​ನಲ್ಲಿ ನಡೆಯಲಿರುವ ಎಸ್​ಸಿಒ, ಸಿಎಚ್​ಜಿ ಶೃಂಗಸಭೆಗೆ ಸಭೆಗೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರನ್ನು ಆಹ್ವಾನಿಸಲಾಗಿದೆ. ಪ್ರಧಾನಿ ಮೋದಿ ಅವರು ಇಸ್ಲಾಮಾಬಾದ್‌ಗೆ ಭೇಟಿ ನೀಡದಿದ್ದರೂ ಕೂಡ, ಪಾಕಿಸ್ತಾನದೊಂದಿಗಿನ ಸಂಬಂಧವನ್ನು ಹದಗೆಡಿಸಿದಂತೆ ಭಾರತವನ್ನು ಪ್ರತಿನಿಧಿಸಲು ಸಚಿವರನ್ನು ನೇಮಿಸುತ್ತಾರೆಯೇ ಎಂಬುದು ಕುತೂಹಲಕಾರಿ ಸಂಗತಿಯಾಗಿದೆ.

ಅಕ್ಟೋಬರ್ 15-16 ರಂದು ಯುರೇಷಿಯನ್ ಗುಂಪಿನ ರಾಷ್ಟ್ರಗಳ ಮುಖ್ಯಸ್ಥರ ಮಂಡಳಿಯ ನಂತರ ಎರಡನೇ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯಾದ SCO ಶೃಂಗಸಭೆಯನ್ನು ಪಾಕಿಸ್ತಾನ ಆಯೋಜಿಸುತ್ತದೆ.

ಅಕ್ಟೋಬರ್ 15-16ರಂದು ನಡೆಯಲಿರುವ ಸಭೆಯಲ್ಲಿ ಪಾಕಿಸ್ತಾನವು ಆತಿಥ್ಯವಹಿಸಲಿದೆ. ಈ ವರ್ಷ ಖಝಾಕಿಸ್ತಾನದಲ್ಲಿ ನಡೆದ ದೇಶಗಳ ಮುಖ್ಯಸ್ಥರ ಶೃಂಗಸಭೆಗೆ ಗೈರಾಗಿದ್ದನ್ನು ಹೊರತುಪಡಿಸಿದರೆ ಮೋದಿ ಎಲ್ಲಾ ಸಭೆಯಲ್ಲೂ ಪಾಲ್ಗೊಂಡಿದ್ದಾರೆ.

ಮತ್ತಷ್ಟು ಓದಿ: ಪಾಕಿಸ್ತಾನ ಸೇನೆಯಿಂದ ಐಎಸ್‌ಐ ಮಾಜಿ ಮುಖ್ಯಸ್ಥ ಫೈಜ್ ಹಮೀದ್‌ ಬಂಧನ

ಜುಲೈನಲ್ಲಿ ಸಂಸತ್ ಅಧಿವೇಶನ ನಡೆಯುವ ಸಂದರ್ಭದಲ್ಲಿ ಇದು ಆಯೋಜನಯಾಗಿದ್ದರಿಂದ ಮೋದಿ ಸಭೆಯಲ್ಲಿ ಪಾಲ್ಗೊಂಡಿರಲಿಲ್ಲ. ಕಳೆದ ಒಂದು ವರ್ಷದಿಂದ ಉಭಯ ದೇಶಗಳ ನಡುವಿನ ಸಂಬಂಧಗಳು ಸಾಮಾನ್ಯವಾಗಿಲ್ಲ, ಅಧಿಕಾರಕ್ಕೆ ಬಂದ ನಂತರ ಪ್ರಧಾನಿ ಮೋದಿ ಅವರು ಅಂದಿನ ಪ್ರಧಾನಿ ನವಾಜ್ ಷರೀಫ್ ಅವರೊಂದಿಗೆ ಉತ್ತಮ ಬಾಂಧವ್ಯ ಆರಂಭಿಸಿದ್ದರು.

ಕಳೆದ ವರ್ಷ ಬಿಷ್ಕೆಕ್‌ನಲ್ಲಿ ನಡೆದ ಸಿಎಚ್‌ಜಿ ಸಭೆಯಲ್ಲಿ ವಿದೇಶಾಂಗ ಸಚಿವ ಎಸ್ ಜೈಶಂಕರ್ ಭಾಗವಹಿಸಿದ್ದರು. ಆದರೆ, ಈ ಬಾರಿ ಯಾವುದೇ ಭಾರತೀಯ ಸಚಿವರಿಗೆ ಪಾಕಿಸ್ತಾನದ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಅವಕಾಶ ನೀಡುತ್ತಾರೋ ಅಥವಾ ಇಲ್ಲವೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ