ಭಾರತದೊಂದಿಗೆ 3 ಯುದ್ಧಗಳ ನಂತರ ಪಾಕಿಸ್ತಾನ ಪಾಠ ಕಲಿತಿದೆ: ಪಾಕ್ ಪ್ರಧಾನಿ ಶೆಹಬಾಜ್ ಷರೀಫ್

ಭಾರತದೊಂದಿಗೆ ಮೂರು ಯುದ್ಧಗಳ ನಂತರ ಪಾಕಿಸ್ತಾನ ಪಾಠ ಕಲಿತಿದೆ ಎಂದು ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಹೇಳಿದ್ದಾರೆ. ಮತ್ತು ಪಾಕಿಸ್ತಾನ ಶಾಂತಿಯನ್ನು ಬಯಸುತ್ತದೆ ಎಂದು ಹೇಳಿದರು.

ಭಾರತದೊಂದಿಗೆ 3 ಯುದ್ಧಗಳ ನಂತರ ಪಾಕಿಸ್ತಾನ ಪಾಠ ಕಲಿತಿದೆ: ಪಾಕ್ ಪ್ರಧಾನಿ ಶೆಹಬಾಜ್ ಷರೀಫ್
Pakistan PM Shehbaz Sharif Image Credit source: india today
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on: Jan 17, 2023 | 10:39 AM

ಭಾರತದೊಂದಿಗೆ ಮೂರು ಯುದ್ಧಗಳ ನಂತರ ಪಾಕಿಸ್ತಾನ ಪಾಠ ಕಲಿತಿದೆ ಎಂದು ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಹೇಳಿದ್ದಾರೆ. ಮತ್ತು ಪಾಕಿಸ್ತಾನ ಶಾಂತಿಯನ್ನು ಬಯಸುತ್ತದೆ ಎಂದು ಹೇಳಿದರು. ಪಾಕಿಸ್ತಾನಕ್ಕೆ ಈಗ ಕೆಟ್ಟ ಮೇಲೆ ಬುದ್ಧಿ ಬಂದಿದೆ ಎಂಬ ಮಾತಿನಂತೆ. ಭಾರತದೊಂದಿಗಿನ ಸಂಬಂಧವನ್ನು ಗಟ್ಟಿ ಮಾಡಿಕೊಳ್ಳಲು ಮತ್ತು ಪಾಕಿಸ್ತಾನದಲ್ಲಿ ಈಗಾಗಲೇ ಆರ್ಥಿಕ ಸಂಕಷ್ಟ ಉಂಟಾಗಿದ್ದು, ಭಾರತದ ಜೊತೆಗಿನ ವ್ಯಾಪರ ಸಂಬಂಧಕ್ಕೆ ಹೆಚ್ಚು ಒತ್ತು ನೀಡಲು ಪಾಕಿಸ್ತಾನ ಬಯಸುತ್ತಿದೆ.

ಅಲ್ ಅರೇಬಿಯಾ ಟಿವಿಗೆ ನೀಡಿದ ಸಂದರ್ಶನದಲ್ಲಿ ಶೆಹಬಾಜ್ ಷರೀಫ್ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಮಾಡುತ್ತೇನೆ, ಪಾಕಿಸ್ತಾನವು ಶಾಂತಿಯನ್ನು ಬಯಸುತ್ತದೆ ಆದರೆ ಕಾಶ್ಮೀರದಲ್ಲಿ ಈಗ ನಡೆಯುತ್ತಿರುವ ಸೈನಿಕ ಅಥವಾ ಸರ್ಕಾರ ಕಾರ್ಯಚರಣೆಯನ್ನು ನಿಲ್ಲಿಸಬೇಕು ಎಂದು ಹೇಳಿದ್ದಾರೆ. ಮಾನವ ಹಕ್ಕುಗಳ ಉಲ್ಲಂಘನೆಯ ಆರೋಪಕ್ಕೆ ಷರೀಫ್ ತರಾಟೆಗೆ ತೆಗೆದುಕೊಂಡರು ಮತ್ತು ಈ ಬಗ್ಗೆ ಯಾವುದೇ ನಿರ್ಲಕ್ಷಿ ಇಲ್ಲ ಎಂದು ಹೇಳಿದರು.

ಇದನ್ನು ಓದಿ:Pakistan Inflation: ಪಾಕಿಸ್ತಾನದಲ್ಲಿ ಈರುಳ್ಳಿ ಬೆಲೆ ಶೇ.500ರಷ್ಟು ದುಬಾರಿ, ಚಿಕನ್ ಬೆಲೆ ಗಗನಕ್ಕೆ, ಇತರೆ ಅಗತ್ಯ ವಸ್ತುಗಳ ಬೆಲೆ ಕುರಿತು ಮಾಹಿತಿ ಇಲ್ಲಿದೆ

ನಮ್ಮಲ್ಲಿ ಇಂಜಿನಿಯರ್‌ಗಳು, ವೈದ್ಯರು ಮತ್ತು ನುರಿತ ಕಾರ್ಮಿಕರಿದ್ದಾರೆ. ಈ ಆಸ್ತಿಗಳನ್ನು ಸಮೃದ್ಧಿಗಾಗಿ ಬಳಸಿಕೊಳ್ಳಲು ಮತ್ತು ಎರಡೂ ರಾಷ್ಟ್ರಗಳು ಬೆಳೆಯಲು ಈ ಪ್ರದೇಶದಲ್ಲಿ ಶಾಂತಿಯನ್ನು ತರಲು ನಾವು ಬಯಸುತ್ತೇವೆ ಎಂದು ಷರೀಫ್ ಸಂದರ್ಶನದಲ್ಲಿ ಹೇಳಿದರು.

ಶಾಂತಿಯುತವಾಗಿ ಬದುಕುವುದು ಮತ್ತು ಪ್ರಗತಿ ಸಾಧಿಸುವುದು, ಅಥವಾ ಪರಸ್ಪರ ಜಗಳವಾಡುವುದು ಮತ್ತು ಸಮಯ ಮತ್ತು ಸಂಪನ್ಮೂಲಗಳನ್ನು ವ್ಯರ್ಥ ಮಾಡುವುದು ನಮಗೆ ಬಿಟ್ಟದ್ದು. ನಾವು ಭಾರತದೊಂದಿಗೆ ಮೂರು ಯುದ್ಧಗಳನ್ನು ಮಾಡಿದ್ದೇವೆ ಮತ್ತು ಅವರು ಜನರಿಗೆ ಹೆಚ್ಚು ದುಃಖ, ಬಡತನ ಮತ್ತು ನಿರುದ್ಯೋಗವನ್ನು ತಂದಿದ್ದಾರೆ. ನಾವು ಅದರಿಂದ ಪಾಠ ಕಲಿತಿದ್ದೇವೆ ಮತ್ತು ನಾವು ಶಾಂತಿಯಿಂದ ಬದುಕಲು ಬಯಸುತ್ತೇವೆ, ನಮ್ಮ ನಿಜವಾದ ಸಮಸ್ಯೆಗಳನ್ನು ಪರಿಹರಿಸಲು ನಾವು ಸಮರ್ಥರಾಗಿದ್ದರೆ, ”ಎಂದು ಅವರು ಹೇಳಿದರು.

ಷರೀಫ್ ಅವರು ಪ್ರಧಾನಿ ಮೋದಿಯವರಿಗೆ ನೀಡಿದ ಸಂದೇಶದಲ್ಲಿ, ಬಾಂಬ್ ಮತ್ತು ಮದ್ದುಗುಂಡುಗಳಿಗಾಗಿ ಸಂಪನ್ಮೂಲಗಳನ್ನು ವ್ಯರ್ಥ ಮಾಡಲು ಪಾಕಿಸ್ತಾನ ಬಯಸುವುದಿಲ್ಲ. ನಾವು ಪರಮಾಣು ಶಕ್ತಿಗಳು, ಸೈನ್ಯದಲ್ಲೂ ಶಸ್ತ್ರಸಜ್ಜಿತರಾಗಿದ್ದೇವೆ ಮತ್ತು ಯುದ್ಧದಿಂದ ನಾವು ದೂರು ನಿಲ್ಲುತ್ತೇವೆ ಎಂದು ಅವರು ಹೇಳಿದರು.

ವಿದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ