AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನದ ಚಾನೆಲ್​ನಲ್ಲಿ ಆಶಾ ಭೋಸ್ಲೆ ಸಾವಿನ ಸುದ್ದಿ ಹಾಕುವಂತಿಲ್ಲ!

ತಮ್ಮ ದೇಶದ ಟಿವಿಯಲ್ಲಿ ಭಾರತದ ಖ್ಯಾತ ಗಾಯಕಿ ಆಶಾ ಭೋಸ್ಲೆ ಅವರಿಗೆ ಗೌರವ ಸಲ್ಲಿಸಿದ್ದಕ್ಕೆ ಪಾಕಿಸ್ತಾನ ಕಠಿಣ ಕ್ರಮ ತೆಗೆದುಕೊಂಡಿದೆ. ಖ್ಯಾತ ಗಾಯಕಿ ಆಶಾ ಭೋಸ್ಲೆ ಅವರ ಸಾವಿಗೆ ಸಂಬಂಧಿಸಿದ ವಿಷಯವನ್ನು ಪ್ರಸಾರ ಮಾಡಿದ್ದಕ್ಕಾಗಿ ಪಾಕಿಸ್ತಾನದ ಪ್ರಸಾರಕ ಜಿಯೋ ನ್ಯೂಸ್‌ಗೆ ಪಾಕಿಸ್ತಾನ ಎಲೆಕ್ಟ್ರಾನಿಕ್ ಮಾಧ್ಯಮ ನಿಯಂತ್ರಣ ಪ್ರಾಧಿಕಾರ (PEMRA) ಶೋ-ಕಾಸ್ ನೋಟಿಸ್ ನೀಡಿದೆ. ಭಾರತದ ಗಾಯಕಿ ಆಶಾ ಭೋಸ್ಲೆ ಏಪ್ರಿಲ್ 12 ರಂದು ಮುಂಬೈನಲ್ಲಿ ತಮ್ಮ 92ನೇ ವಯಸ್ಸಿನಲ್ಲಿ ನಿಧನರಾದರು. ಗಡಿಯಾಚೆಯಿಂದ ಸೇರಿದಂತೆ ಅನೇಕ ಕಲಾವಿದರು ಈ ಹಿರಿಯ ಗಾಯಕಿಯ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಪಾಕಿಸ್ತಾನದ ಚಾನೆಲ್​ನಲ್ಲಿ ಆಶಾ ಭೋಸ್ಲೆ ಸಾವಿನ ಸುದ್ದಿ ಹಾಕುವಂತಿಲ್ಲ!
Asha BhosleImage Credit source: PTI
ಸುಷ್ಮಾ ಚಕ್ರೆ
|

Updated on:Apr 13, 2026 | 8:56 PM

Share

ಇಸ್ಲಾಮಾಬಾದ್, ಏಪ್ರಿಲ್ 13: ಪಾಕಿಸ್ತಾನದ ಮಾಧ್ಯಮ ನಿಯಂತ್ರಣ ಪ್ರಾಧಿಕಾರವು ನೋಟಿಸ್ ಜಾರಿ ಮಾಡಿ, ಪಾಕಿಸ್ತಾನದ ಸುದ್ದಿ ವಾಹಿನಿಗಳು ಭಾರತದ ಗಾಯಕಿ ಆಶಾ ಭೋಸ್ಲೆ ಅವರ ನಿಧನದ ವರದಿ ಮಾಡುವಂತಿಲ್ಲ ಎಂದು ನಿರ್ಬಂಧ ವಿಧಿಸಿದೆ. ಭಾರತದ ಹಿರಿಯ ಗಾಯಕಿ ಆಶಾ ಭೋಸ್ಲೆ (Asha Bhosle) ಭಾನುವಾರ ತಮ್ಮ 92ನೇ ವಯಸ್ಸಿನಲ್ಲಿ ನಿಧನರಾದರು. ಇದು ಭಾರತದಲ್ಲಿ ಮಾತ್ರವಲ್ಲದೆ ಪ್ರಪಂಚದಾದ್ಯಂತದ ಅವರ ಅಭಿಮಾನಿಗಳನ್ನು ಶೋಕದಲ್ಲಿ ಮುಳುಗಿಸಿದೆ.

ಆದರೆ, ಪಾಕಿಸ್ತಾನದ ಎಲೆಕ್ಟ್ರಾನಿಕ್ ಮಾಧ್ಯಮ ನಿಯಂತ್ರಣ ಪ್ರಾಧಿಕಾರ (PEMRA) ಆಶಾ ಭೋಸ್ಲೆ ಅವರ ಸಾವಿನ ವರದಿಗಾಗಿ ಪಾಕಿಸ್ತಾನದ ಸುದ್ದಿ ಚಾನೆಲ್‌ಗಳಿಗೆ ನೋಟಿಸ್ ಜಾರಿ ಮಾಡಿದೆ. ಆಶಾ ಭೋಸ್ಲೆ ಏಪ್ರಿಲ್ 12ರಂದು ಮುಂಬೈನಲ್ಲಿ ತಮ್ಮ 92ನೇ ವಯಸ್ಸಿನಲ್ಲಿ ನಿಧನರಾದರು. ಡಾನ್ ಎಂಬ ಪಾಕಿಸ್ತಾನದ ಮಾಧ್ಯಮ ಇಂದು ಗಾಯಕಿ ಆಶಾ ಭೋಸ್ಲೆ ಅವರ ಕುರಿತಾದ ಲೇಖನದಲ್ಲಿ ‘ಅವರ ಸಂಗೀತವು ಗಡಿಗಳನ್ನು ಮೀರಿ, ಅನೇಕ ಪಾಕಿಸ್ತಾನಿಗಳ ಹೃದಯಗಳನ್ನು ಮುಟ್ಟಿತು’ ಎಂದು ಹೇಳಿದೆ.

ಇದನ್ನೂ ಓದಿ: ಆಶಾ ಭೋಸ್ಲೆ ಬಗ್ಗೆ ಹಲವರಿಗೆ ತಿಳಿಯದ ವಿಷಯಗಳು ಇಲ್ಲಿವೆ…

ಪಾಕಿಸ್ತಾನದೊಂದಿಗಿನ ಅವರ ಸಂಪರ್ಕ ಮತ್ತು ಪಾಕಿಸ್ತಾನದಲ್ಲಿ ಅವರ ಹೆಸರಿನ ಬಗ್ಗೆ ಇರುವ ಗೊಂದಲದ ಬಗ್ಗೆಯೂ ಆ ಸುದ್ದಿಯಲ್ಲಿ ವಿವರಿಸಲಾಗಿತ್ತು. ಜಿಯೋ ನ್ಯೂಸ್ ಕೂಡ ಅವರಿಗೆ ಸಂಬಂಧಿಸಿದ ವಿಷಯವನ್ನು ಪ್ರಸಾರ ಮಾಡಿತ್ತು. ಈಗ ಆ ಮಾಧ್ಯಮಗಳಿಗೆ ನೋಟಿಸ್ ನೀಡಲಾಗಿದೆ. ಪಾಕಿಸ್ತಾನದ ಹೆಚ್ಚಿನ ಪತ್ರಕರ್ತರು ಮತ್ತು ಈ ನೋಟಿಸ್ ಅನ್ನು ಖಂಡಿಸಿದ್ದಾರೆ.

“ಆಶಾ ಭೋಸ್ಲೆ ದೇಶದ ಗಡಿಯನ್ನು ಮೀರಿದ ಗಾಯಕಿ. ಆಶಾ ಭೋಸ್ಲೆ ಸ್ವತಃ ಪಾಕಿಸ್ತಾನದ ಪ್ರಸಿದ್ಧ ಗಾಯಕಿ ನೂರ್ ಜಹಾನ್ ಅವರನ್ನು ಮೆಚ್ಚಿಕೊಂಡಿದ್ದರು. ಅವರನ್ನು ಪ್ರೀತಿಯಿಂದ ‘ಅಕ್ಕ’ ಎಂದು ಕರೆಯುತ್ತಿರು. ಅವರು ನುಸ್ರತ್ ಫತೇಹ್ ಅಲಿ ಖಾನ್ ಅವರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು. ನಾಸಿರ್ ಕಾಜ್ಮಿಯಂತಹ ಶ್ರೇಷ್ಠ ಉರ್ದು ಕವಿಗಳ ಕಾವ್ಯಕ್ಕೆ ಅವರು ಜೀವ ತುಂಬಿದ್ದರು” ಎಂದು ಪತ್ರಕರ್ತ ಅಬ್ಬಾಸ್ ಹೇಳಿದ್ದಾರೆ.

ಇದನ್ನೂ ಓದಿ: Asha Bhosle Funeral: ಸರ್ಕಾರಿ ಗೌರವದೊಂದಿಗೆ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ

ಜಿಯೋ ನ್ಯೂಸ್‌ನ ಹಿರಿಯ ಪತ್ರಕರ್ತ ಅಜಾಜ್ ಸೈಯದ್ ಕೂಡ ಪಾಕಿಸ್ತಾನ ಸರ್ಕಾರವನ್ನು ಟೀಕಿಸಿದ್ದು, “ಪಾಕಿಸ್ತಾನದ ಮುಖ್ಯವಾಹಿನಿಯ ಮಾಧ್ಯಮಗಳ ಮೇಲೆ ಇಂತಹ ನಿಯಂತ್ರಣವನ್ನು ಬಹುಶಃ ಹಿಂದೆಂದೂ ಕಂಡಿಲ್ಲ. ಆಶಾ ಭೋಸ್ಲೆ ಅವರ ಸಾವಿನ ಕುರಿತು ತಮ್ಮ ಕೆಲಸವನ್ನು ಪ್ರಸಾರ ಮಾಡಿದ್ದಕ್ಕೂ ಶೋ-ಕಾಸ್ ನೋಟಿಸ್‌ಗಳನ್ನು ನೀಡಲಾಯಿತು. ಮಾಧ್ಯಮಗಳು ಯಾವಾಗಲೂ ಜವಾಬ್ದಾರಿಯುತವಾಗಿ ಕೆಲಸ ಮಾಡಿವೆ. ಆದರೆ ಮಾಧ್ಯಮವನ್ನು ನಿಯಂತ್ರಿಸುವವರು ತಮ್ಮನ್ನು ದೇಶಭಕ್ತರೆಂದು ಬಿಂಬಿಸಿಕೊಳ್ಳುತ್ತಾ ಮಾಧ್ಯಮವನ್ನು ರಾಜ್ಯ ವಿರೋಧಿ ಎಂದು ಬ್ರಾಂಡ್ ಮಾಡಿದ್ದಾರೆ” ಎಂದು ಅವರು ಎಕ್ಸ್​ನಲ್ಲಿ ಬರೆದಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 8:32 pm, Mon, 13 April 26

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ರಾಜೀನಾಮೆ ಬೆನ್ನಲ್ಲೇ ಡಾ.ರಾಜ್​ಕುಮಾರ್ ಮಾತು ನೆನೆದ ಸಿದ್ರಾಮಯ್ಯ
ರಾಜೀನಾಮೆ ಬೆನ್ನಲ್ಲೇ ಡಾ.ರಾಜ್​ಕುಮಾರ್ ಮಾತು ನೆನೆದ ಸಿದ್ರಾಮಯ್ಯ
ಸಿದ್ದರಾಮಯ್ಯ ರಾಜೀನಾಮೆಗೆ ವಿಶೇಷ ಸೂಚನೆ ನೀಡಿದ ರಾಜ್ಯಪಾಲರ ಕಾರ್ಯದರ್ಶಿ!
ಸಿದ್ದರಾಮಯ್ಯ ರಾಜೀನಾಮೆಗೆ ವಿಶೇಷ ಸೂಚನೆ ನೀಡಿದ ರಾಜ್ಯಪಾಲರ ಕಾರ್ಯದರ್ಶಿ!
ಸಿಎಂ ಸ್ಥಾನಕ್ಕೆ ರಾಜೀನಾಮೆ ಬಳಿಕ ಸಿದ್ದರಾಮಯ್ಯ ಫಸ್ಟ್​​ ರಿಯಾಕ್ಷನ್
ಸಿಎಂ ಸ್ಥಾನಕ್ಕೆ ರಾಜೀನಾಮೆ ಬಳಿಕ ಸಿದ್ದರಾಮಯ್ಯ ಫಸ್ಟ್​​ ರಿಯಾಕ್ಷನ್
ಸಿಎಂ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ
ಸಿಎಂ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ
ಎನ್​​ಟಿಆರ್ ಸಮಾಧಿಗೆ ಜೂ ಎನ್​​ಟಿಆರ್ ಭೇಟಿ, ಕಾಲಿಗೆ ಬಿದ್ದ ಅಭಿಮಾನಿ
ಎನ್​​ಟಿಆರ್ ಸಮಾಧಿಗೆ ಜೂ ಎನ್​​ಟಿಆರ್ ಭೇಟಿ, ಕಾಲಿಗೆ ಬಿದ್ದ ಅಭಿಮಾನಿ
ಸಚಿವರೊಂದಿಗೆ ಉಪಹಾರ ಸಭೆಯಲ್ಲಿ ಕಣ್ಣೀರು ಹಾಕಿದ ಸಿದ್ದರಾಮಯ್ಯ
ಸಚಿವರೊಂದಿಗೆ ಉಪಹಾರ ಸಭೆಯಲ್ಲಿ ಕಣ್ಣೀರು ಹಾಕಿದ ಸಿದ್ದರಾಮಯ್ಯ
ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ!: ಕಾಂಗ್ರೆಸ್
ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ!: ಕಾಂಗ್ರೆಸ್
ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ, ಒಂದೇ ಕುಟುಂಬದ ನಾಲ್ವರು ಸಜೀವದಹನ
ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ, ಒಂದೇ ಕುಟುಂಬದ ನಾಲ್ವರು ಸಜೀವದಹನ
ಗುರು ಸಂಚಾರ ಕುಂಭ ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?
ಗುರು ಸಂಚಾರ ಕುಂಭ ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?
ಡಿಕೆ ಶಿವಕುಮಾರ್​ಗೆ ಅಭಿನಂದನೆ ತಿಳಿಸಿದ ಸಿಎಂ ಸಿದ್ದರಾಮಯ್ಯ
ಡಿಕೆ ಶಿವಕುಮಾರ್​ಗೆ ಅಭಿನಂದನೆ ತಿಳಿಸಿದ ಸಿಎಂ ಸಿದ್ದರಾಮಯ್ಯ