Shehbaz Sharif: ಪಾಕಿಸ್ತಾನದ ನೂತನ ಪ್ರಧಾನಿಯಾಗಲಿದ್ದಾರೆ ನವಾಜ್ ಷರೀಫ್ ಸಹೋದರ ಶಹಬಾಜ್ ಷರೀಫ್

ಇತ್ತೀಚಿನ ಬೆಳವಣಿಗೆಯಲ್ಲಿ, ಪಕ್ಷದ ಮುಖ್ಯಸ್ಥ ನವಾಜ್ ಷರೀಫ್ ಬದಲಿಗೆ ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ (ಪಿಎಂಎಲ್-ಎನ್) ನಿಂದ ಶೆಹಬಾಜ್ ಷರೀಫ್ ಅವರನ್ನು ಪಾಕಿಸ್ತಾನದ ಪ್ರಧಾನಿ ಅಭ್ಯರ್ಥಿಯಾಗಿ ನಾಮನಿರ್ದೇಶನ ಮಾಡಲಾಗಿದೆ. ನಾಮನಿರ್ದೇಶನವನ್ನು PML-N ವಕ್ತಾರ ಮರಿಯುಮ್ ಔರಂಗಜೇಬ್ ಘೋಷಿಸಿದರು. ಪಂಜಾಬ್ ಪ್ರಾಂತ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ನವಾಜ್ ಷರೀಫ್ ಅವರ ಪುತ್ರಿ ಮರ್ಯಮ್ ನವಾಜ್ ಅವರ ಹೆಸರನ್ನು ಸೂಚಿಸಿದ್ದಾರೆ.

Shehbaz Sharif: ಪಾಕಿಸ್ತಾನದ ನೂತನ ಪ್ರಧಾನಿಯಾಗಲಿದ್ದಾರೆ ನವಾಜ್ ಷರೀಫ್ ಸಹೋದರ ಶಹಬಾಜ್ ಷರೀಫ್
ಶಹಬಾಜ್ ಷರೀಫ್Image Credit source: Business Today
Follow us
ನಯನಾ ರಾಜೀವ್
|

Updated on: Feb 14, 2024 | 8:35 AM

ಪಾಕಿಸ್ತಾನ ಮುಸ್ಲಿಂ ಲೀಗ್ ನವಾಜ್ (ಪಿಎಂಎಲ್-ಎನ್) ಅಧ್ಯಕ್ಷ ಶೆಹಬಾಜ್ ಷರೀಫ್(Shehbaz Sharif) ಅವರನ್ನು ಮಂಗಳವಾರ ರಾತ್ರಿ ಪಾಕಿಸ್ತಾನದ ಪ್ರಧಾನಿ ಹುದ್ದೆಗೆ ಅವರ ಪಕ್ಷವು ನಾಮನಿರ್ದೇಶನ ಮಾಡಿದೆ. ಪಕ್ಷದ ವರಿಷ್ಠ ನವಾಜ್ ಷರೀಫ್ (74) ಅವರು ತಮ್ಮ ಕಿರಿಯ ಸಹೋದರ ಶೆಹಬಾಜ್ ಷರೀಫ್ (72) ಅವರನ್ನು ಪ್ರಧಾನಿ ಹುದ್ದೆಗೆ ಮತ್ತು ಪುತ್ರಿ ಮರ್ಯಮ್ ನವಾಜ್ (50) ಅವರನ್ನು ಪಂಜಾಬ್ ಮುಖ್ಯಮಂತ್ರಿ ಹುದ್ದೆಗೆ ನಾಮನಿರ್ದೇಶನ ಮಾಡಿದ್ದಾರೆ ಎಂದು ಪಿಎಂಎಲ್-ಎನ್ ವಕ್ತಾರ ಮರ್ಯಮ್ ಔರಂಗಜೇಬ್ ಎಕ್ಸ್ ನಲ್ಲಿ ತಿಳಿಸಿದ್ದಾರೆ.

ನವಾಜ್ ಷರೀಫ್ ಅವರು ಪಿಎಂಎಲ್-ಎನ್ (ಮುಂದಿನ ಸರ್ಕಾರ ರಚಿಸಲು) ಬೆಂಬಲಿಸುವ ರಾಜಕೀಯ ಪಕ್ಷಗಳಿಗೆ ಧನ್ಯವಾದ ಅರ್ಪಿಸಿದ್ದಾರೆ ಮತ್ತು ಅಂತಹ ನಿರ್ಧಾರಗಳು ಪಾಕಿಸ್ತಾನವನ್ನು ಬಿಕ್ಕಟ್ಟಿನಿಂದ ಹೊರತರಲಿದೆ ಎನ್ನುವ ಭರವಸೆಯನ್ನು ವ್ಯಕ್ತಪಡಿಸಿದ್ದಾರೆ ಎಂದು ಅವರು ಹೇಳಿದರು. ಪಕ್ಷ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಪಿಎಂಎಲ್-ಎನ್ ನೇತೃತ್ವದಲ್ಲಿ ಸಮ್ಮಿಶ್ರ ಸರ್ಕಾರ ರಚಿಸಲು ಪ್ರಯತ್ನಿಸುವುದಾಗಿ ಘೋಷಿಸಿದೆ.

ಪಾಕಿಸ್ತಾನ ಪೀಪಲ್ಸ್ ಪಾರ್ಟಿ (ಪಿಪಿಪಿ) ಅಧ್ಯಕ್ಷ ಬಿಲಾವಲ್ ಭುಟ್ಟೋ ಜರ್ದಾರಿ ಅವರು ಮಂಗಳವಾರ ತಮ್ಮ ತಂದೆ ಆಸಿಫ್ ಅಲಿ ಜರ್ದಾರಿ ಅವರನ್ನು ಮತ್ತೆ ಅಧ್ಯಕ್ಷರನ್ನಾಗಿ ಮಾಡಬೇಕೆಂದು ಬಯಸುವುದಾಗಿ ಹೇಳಿದ್ದಾರೆ. ಪಿಪಿಪಿ ಅಧ್ಯಕ್ಷ ಜರ್ದಾರಿ (68) ಅವರು 2008 ರಿಂದ 2013 ರವರೆಗೆ ಪಾಕಿಸ್ತಾನದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ಮತ್ತಷ್ಟು ಓದಿ: Shahbaz Sharif ಇಮ್ರಾನ್ ಖಾನ್ ರಾಜೀನಾಮೆ ನೀಡಿದ ನಂತರ ಪಾಕ್ ಪ್ರಧಾನಿಯಾಗಲಿರುವ ಶಹಬಾಜ್ ಷರೀಫ್ ಯಾರು? ಇಲ್ಲಿದೆ ಪರಿಚಯ

ಪ್ರಧಾನಿ ಹುದ್ದೆಯ ಸ್ಪರ್ಧೆಯಿಂದ ಹಿಂದೆ ಸರಿಯುವುದಾಗಿ ಘೋಷಿಸಿದ ಬಿಲಾವಲ್, ತಮ್ಮ ಪಕ್ಷವು ಸರ್ಕಾರದ ಭಾಗವಾಗದೆ ಪ್ರಧಾನಿ ಹುದ್ದೆಗೆ ಪಾಕಿಸ್ತಾನ ಮುಸ್ಲಿಂ ಲೀಗ್-ನವಾಜ್ (ಪಿಎಂಎಲ್-ಎನ್) ಅಭ್ಯರ್ಥಿಯನ್ನು ಬೆಂಬಲಿಸುತ್ತದೆ ಎಂದು ಹೇಳಿದರು. ಪಾಕಿಸ್ತಾನದ ಪ್ರಸ್ತುತ ಅಧ್ಯಕ್ಷ , ಡಾ. ಆರಿಫ್ ಅಲ್ವಿ ಮುಂದಿನ ತಿಂಗಳು ತಮ್ಮ ಹುದ್ದೆಯನ್ನು ತೊರೆಯಲಿದ್ದಾರೆ.

ಶಹಬಾಜ್ ಷರೀಫ್ ಪರಿಚಯ ಶಹಬಾಜ್ ಷರೀಫ್ ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರ ಸಹೋದರ. ಅವರು ಆಗಸ್ಟ್ 2018 ರಿಂದ ಪಾಕಿಸ್ತಾನದ ರಾಷ್ಟ್ರೀಯ ಅಸೆಂಬ್ಲಿಯಲ್ಲಿ ವಿರೋಧ ಪಕ್ಷದ ನಾಯಕರಾಗಿದ್ದಾರೆ. ಪಾಕಿಸ್ತಾನ್ ಮುಸ್ಲಿಂ ಲೀಗ್-ಎನ್ (ಪಿಎಂಎಲ್-ಎನ್) ಅಧ್ಯಕ್ಷರು. ಈ ಹಿಂದೆ ಪಂಜಾಬ್‌ನ ಮುಖ್ಯಮಂತ್ರಿಯಾಗಿ ಮೂರು ಬಾರಿ ಸೇವೆ ಸಲ್ಲಿಸಿದ್ದಾರೆ.

ಅವರು ಪ್ರಾಂತ್ಯದ ಸುದೀರ್ಘ ಅವಧಿಯ ಮುಖ್ಯಮಂತ್ರಿಯಾಗಿದ್ದಾರೆ. ಅವರು 1988 ರಲ್ಲಿ ಪಂಜಾಬ್ ಪ್ರಾಂತೀಯ ಅಸೆಂಬ್ಲಿಗೆ ಮತ್ತು 1990 ರಲ್ಲಿ ರಾಷ್ಟ್ರೀಯ ಅಸೆಂಬ್ಲಿಗೆ ಚುನಾಯಿತರಾದರು. ಅವರು ಮತ್ತೆ 1993 ರಲ್ಲಿ ಪಂಜಾಬ್ ಅಸೆಂಬ್ಲಿಗೆ ಆಯ್ಕೆಯಾದರು ಮತ್ತು ವಿರೋಧ ಪಕ್ಷದ ನಾಯಕರಾಗಿ ನೇಮಕಗೊಂಡರು.

1997ರಲ್ಲಿ ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿ ಆಯ್ಕೆಯಾದರು. 1999 ರಲ್ಲಿ ಮಿಲಿಟರಿ ದಂಗೆಯ ನಂತರ ಸರ್ಕಾರವನ್ನು ಪದಚ್ಯುತಗೊಳಿಸಿದ ನಂತರ, ಶೆಹಬಾಜ್ ತನ್ನ ಕುಟುಂಬದೊಂದಿಗೆ ಸೌದಿ ಅರೇಬಿಯಾದಲ್ಲಿ ಸ್ವಯಂ ಗಡಿಪಾರು ಆಗಿದ್ದು 2007 ರಲ್ಲಿ ಪಾಕಿಸ್ತಾನಕ್ಕೆ ಮರಳಿದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ