AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Iran vs Pak: ನಮ್ಮ ಪಾರ್ಟ್ನರ್ ತಂಟೆಗೆ ಬಂದರೆ ಸುಮ್ಮನಿರಲ್ಲ: ಇರಾನ್​ಗೆ ಪಾಕಿಸ್ತಾನ ಎಚ್ಚರಿಕೆ

Pakistan openly reminds Iran of its defence pact with Saudi Arabia: ಸೌದಿ ಅರೇಬಿಯಾ ಜೊತೆ ಪಾಕಿಸ್ತಾನ ದ್ವಿಪಕ್ಷೀಯ ರಕ್ಷಣಾ ಒಪ್ಪಂದ ಹೊಂದಿದೆ. ಇದು ಇಡೀ ಜಗತ್ತಿಗೇ ಗೊತ್ತು. ಇರಾನ್​ನ ಗಮನಕ್ಕೆ ಇದು ಇರಬೇಕು. ಅದರ ಮೇಲೆ ದಾಳಿ ಮಾಡಿದರೆ ನಾವು ಬರಬೇಕಾಗುತ್ತದೆ ಎಂದು ಇರಾನ್ ದೇಶಕ್ಕೆ ಪಾಕಿಸ್ತಾನ ಎಚ್ಚರಿಕೆ ಕೊಟ್ಟಿದೆ. ಹಾಗೆಯೇ, ಇರಾನ್​ನಲ್ಲಿ ಆಡಳಿತ ಬದಲಾವಣೆ ಮಾಡಿರುವುದು ಪಾಕಿಸ್ತಾನದ ಪತನಕ್ಕೆ ಇಸ್ರೇಲಿಗಳು ಮಾಡಿರುವ ಕುತಂತ್ರ ಎಂದು ಪಾಕಿಸ್ತಾನದ ಸಚಿವರೊಬ್ಬರು ಆಪಾದಿಸಿದ್ದಾರೆ.

Iran vs Pak: ನಮ್ಮ ಪಾರ್ಟ್ನರ್ ತಂಟೆಗೆ ಬಂದರೆ ಸುಮ್ಮನಿರಲ್ಲ: ಇರಾನ್​ಗೆ ಪಾಕಿಸ್ತಾನ ಎಚ್ಚರಿಕೆ
ಇಶಾಕ್ ದರ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Mar 04, 2026 | 8:07 PM

Share

ಇಸ್ಲಾಮಾಬಾದ್, ಮಾರ್ಚ್ 4: ಸೌದಿ ಅರೇಬಿಯಾ ಮೇಲೆ ದಾಳಿ ಮಾಡಿದರೆ ನಾವು ಸುಮ್ಮನಿರಲ್ಲ ಎಂದು ಇರಾನ್​ಗೆ ಪಾಕಿಸ್ತಾನ ಎಚ್ಚರಿಕೆಯ ಸಂದೇಶ ರವಾನಿಸಿದೆ. ಸೌದಿ ಅರೇಬಿಯಾ ಜೊತೆ ಪಾಕಿಸ್ತಾನ ಮಿಲಿಟರಿ ಒಪ್ಪಂದ (Pakistan Saudi Arabia bilateral defence pact) ಹೊಂದಿದೆ. ಈ ಒಪ್ಪಂದದ ಪ್ರಕಾರ ಈ ಇಬ್ಬರಲ್ಲಿ ಯಾರ ಮೇಲೆ ಆಕ್ರಮಣವಾದರೂ ಮತ್ತೊಬ್ಬರು ನೆರವಿಗೆ ಧಾವಿಸಬೇಕು. ಈಗ ಸೌದಿ ಅರೇಬಿಯಾದ ಪ್ರಮುಖ ನಗರಗಳ ಮೇಲೆ ಇರಾನ್ ದಾಳಿ ಎಸಗುತ್ತಿರುವುದರಿಂದ ಪಾಕಿಸ್ತಾನವು ಒಪ್ಪಂದದ ಕಟ್ಟುಪಾಡುಗಳಿಗೆ ಒಳಗಾಗಬೇಕಾಗಬಹುದು. ಹೀಗಾಗಿ, ಇರಾನ್​ಗೆ ಪಾಕಿಸ್ತಾನ ಎಚ್ಚರಿಕೆ ಕೊಟ್ಟಿದೆ.

ಸೌದಿ ಅರೇಬಿಯಾ ಜೊತೆ ಪಾಕಿಸ್ತಾನ ದ್ವಿಪಕ್ಷೀಯ ರಕ್ಷಣಾ ಒಪ್ಪಂದ ಹೊಂದಿದೆ. ಇದು ಇಡೀ ವಿಶ್ವಕ್ಕೆ ಗೊತ್ತಿದೆ. ಒಪ್ಪಂದಕ್ಕೆ ಪಾಕಿಸ್ತಾನ ಕಟ್ಟುಬಿದ್ದಿದೆ. ಈ ಒಪ್ಪಂದವು ಇರಾನ್ ಗಮನಕ್ಕಿರಬೇಕು. ಇರಾನ್​ನ ನಾಯಕತ್ವ ಸ್ಥಾನದಲ್ಲಿರುವ ನಮ್ಮ ಸಹೋದರರಿಗೆ ಇದನ್ನು ನೆನಪಿಸಲು ಇಚ್ಛಿಸುತ್ತೇನೆ ಎಂದು ಪಾಕಿಸ್ತಾನದ ಉಪಪ್ರಧಾನಿ ಮತ್ತು ವಿದೇಶಾಂಗ ಸಚಿವ ಇಶಾಕ್ ದರ್ ಹೇಳಿದ್ದಾರೆ.

ಇದನ್ನೂ ಓದಿ: ಪಾಕಿಸ್ತಾನದ ಮೇಲಿನ ದ್ವೇಷದಿಂದ ಭಾರತ, ಇರಾನ್, ಅಫ್ಘಾನ್ ಒಂದಾಗಿ ಸಂಚು; ಖವಾಜಾ ಆಸಿಫ್ ಆರೋಪ

ಸೌದಿ ಅರೇಬಿಯಾದಲ್ಲಿ ಇಸ್ಲಾಮ್ ಧರ್ಮದ ಆತ್ಮ ಇದೆ. ಮೆಕ್ಕಾ ಮಸೀದಿ ಮತ್ತು ಮದೀನಾದಲ್ಲಿ ಪ್ರವಾದಿಗಳ ಮಸೀದಿ ಇರುವುದು ಸೌದಿಯಲ್ಲೇ. ಇಸ್ಲಾಮ್ ಧರ್ಮ ಹುಟ್ಟಿದ್ದೂ ಇಲ್ಲೇ. ತನಗೆ ಈ ಧಾರ್ಮಿಕ ಸ್ಥಳದ ರಕ್ಷಣೆಯೇ ಮೊದಲ ಆದ್ಯತೆ ಎಂದು ಪಾಕಿಸ್ತಾನ ಹೇಳಿಕೊಂಡಿದೆ. ಪ್ರತಿಯೊಂದು ವೇದಿಕೆಯಲ್ಲೂ, ಪ್ರತಿಯೊಂದು ಕ್ಷೇತ್ರದಲ್ಲೂ ಸೌದಿ ಅರೇಬಿಯಾಗೆ ಬೆಂಬಲವಾಗಿ ನಿಂತಿದ್ದೇವೆ ಎಂದೂ ಪಾಕಿಸ್ತಾನ ಹೇಳುತ್ತಿದೆ.

ಪಾಕಿಸ್ತಾನದ ವಿರುದ್ಧ ಭಾರತ, ಅಫ್ಗಾನ್ ಮತ್ತು ಇರಾನ್ ಅನ್ನು ಛೂಬಿಡುವ ಪಿತೂರಿ: ಖವಾಜ ಆಸಿಫ್

ಪಾಕಿಸ್ತಾನದ ರಕ್ಷಣಾ ಸಚಿವ ಖವಾಜ ಆಸಿಫ್ ಸ್ಫೋಟಕ ಆರೋಪವೊಂದನ್ನು ಮಾಡಿದ್ದಾರೆ. ಇರಾನ್​ನಲ್ಲಿ ಆಡಳಿತ ಬದಲಾವಣೆ ಮಾಡುತ್ತಿರುವುದು ಪಾಕಿಸ್ತಾನವನ್ನು ಸಾಮಂತ ನಾಡನ್ನಾಗಿ ಮಾಡಲು ಝಯೋನಿಸ್ಟರು (ಇಸ್ರೇಲಿಗರು) ಮಾಡಿರುವ ಪಿತೂರಿ ಎಂದು ಸಚಿವರು ಆಪಾದಿಸಿದ್ದಾರೆ.

ಇದನ್ನೂ ಓದಿ: ಹಾರ್ಮುಜ್ ಮಾರ್ಗದಲ್ಲಿ ಚೀನಾಗೆ ಮಾತ್ರ ಅವಕಾಶ ಎಂದ ಇರಾನ್; ಭಾರತಕ್ಕೆ ನಾವು ತೈಲ ಕೊಡುತ್ತೇವೆ ಎಂದ ರಷ್ಯಾ

ಇರಾನ್​ನಲ್ಲಿ ಆಡಳಿತ ಬದಲಾದರೆ ಇರಾನ್, ಅಫ್ಗಾನಿಸ್ತಾನ್ ಮತ್ತು ಭಾರತದ ಮೂಲಕ ಪಾಕಿಸ್ತಾನಕ್ಕೆ ತೊಂದರೆ ಕೊಡುವ ಸಂಚು ನಡೆದಿದೆ. ಪಾಕಿಸ್ತಾನದ 25 ಕೋಟಿ ಜನರು ಈ ವಿಚಾರವನ್ನು ಅರ್ಥ ಮಾಡಿಕೊಳ್ಳಬೇಕು. ಶತ್ರುಗಳ ಉದ್ದೇಶವನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಆಸಿಫ್ ಖವಾಜ ಕರೆ ನೀಡಿದ್ದಾರೆ.

ಇನ್ನಷ್ಟು ಅಂತರರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು