Chemical Castration: ಪಾಕಿಸ್ತಾನದಲ್ಲಿ ಅತ್ಯಾಚಾರಿಗಳಿಗೆ ಕೆಮಿಕಲ್ ಕ್ಯಾಸ್ಟ್ರೇಷನ್‌ ಶಿಕ್ಷೆ ನೀಡಲು ಒಪ್ಪಿಗೆ

ಪಾಕಿಸ್ತಾನದಲ್ಲಿ ಹೆಚ್ಚಿನ ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಒಳಗಾದ ಅಪರಾಧಿಗಳನ್ನು ತ್ವರಿತವಾಗಿ ಶಿಕ್ಷಿಸಲು ರಾಸಾಯನಿಕ ಕ್ಯಾಸ್ಟ್ರೇಷನ್ ಶಿಕ್ಷೆ ನೀಡಲು ಪಾಕಿಸ್ತಾನದ ಪಾರ್ಲಿಮೆಂಟ್ ಒಪ್ಪಿಗೆ ನೀಡಿದೆ.

Chemical Castration: ಪಾಕಿಸ್ತಾನದಲ್ಲಿ ಅತ್ಯಾಚಾರಿಗಳಿಗೆ ಕೆಮಿಕಲ್ ಕ್ಯಾಸ್ಟ್ರೇಷನ್‌ ಶಿಕ್ಷೆ ನೀಡಲು ಒಪ್ಪಿಗೆ
ಪಾಕಿಸ್ತಾನ
Follow us
S Chandramohan
| Updated By: ಸುಷ್ಮಾ ಚಕ್ರೆ

Updated on: Nov 18, 2021 | 6:32 PM

ನವದೆಹಲಿ: ಪಾಕಿಸ್ತಾನದಲ್ಲಿ ಪದೇಪದೆ ರೇಪ್ ಪ್ರಕರಣಗಳಲ್ಲಿ ಶಿಕ್ಷೆಗೆ ಗುರಿಯಾಗುವವರಿಗೆ ಕೆಮಿಕಲ್ ಕ್ಯಾಸ್ಟ್ರೇಷನ್ ಶಿಕ್ಷೆ ವಿಧಿಸಲು ಪಾಕಿಸ್ತಾನದ ಪಾರ್ಲಿಮೆಂಟ್ ಒಪ್ಪಿಗೆ ನೀಡಿದೆ. ಕೆಮಿಕಲ್ ಕ್ಯಾಸ್ಟ್ರೇಷನ್ ಶಿಕ್ಷೆ ನೀಡಿದರೆ ವ್ಯಕ್ತಿಗಳು ಲೈಂಗಿಕ ಚಟುವಟಿಕೆ ನಡೆಸಲು ಸಂಪೂರ್ಣವಾಗಿ ಅಸಮರ್ಥರಾಗುತ್ತಾರೆ. ಇದರಿಂದ ಅತ್ಯಾಚಾರಗಳು ನಡೆಯುವುದಿಲ್ಲ. ಪಾಕಿಸ್ತಾನದ ಜನರ ಒತ್ತಾಯದ ಪರಿಣಾಮವಾಗಿ ಅತ್ಯಾಚಾರದ ಅಪರಾಧಿಗಳಿಗೆ ಕೆಮಿಕಲ್ ಕ್ಯಾಸ್ಟ್ರೇಷನ್ ಶಿಕ್ಷೆ ವಿಧಿಸುವ ಮಸೂದೆಗೆ ಪಾಕಿಸ್ತಾನದ ಪಾರ್ಲಿಮೆಂಟ್ ಒಪ್ಪಿಗೆ ನೀಡಿದೆ. ಪಾಕಿಸ್ತಾನದಲ್ಲಿ ಹೆಚ್ಚಿನ ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಒಳಗಾದ ಅಪರಾಧಿಗಳನ್ನು ತ್ವರಿತವಾಗಿ ಶಿಕ್ಷಿಸಲು ರಾಸಾಯನಿಕ ಕ್ಯಾಸ್ಟ್ರೇಷನ್ ಶಿಕ್ಷೆ ನೀಡಲು ಪಾಕಿಸ್ತಾನದ ಪಾರ್ಲಿಮೆಂಟ್ ಒಪ್ಪಿಗೆ ನೀಡಿದೆ. ಅತ್ಯಾಚಾರ ಪ್ರಕರಣದಲ್ಲಿ ಕಠಿಣ ಶಿಕ್ಷೆಯನ್ನು ವಿಧಿಸುವ ಗುರಿಯನ್ನು ಹೊಂದಿರುವ ಹೊಸ ಶಾಸನವನ್ನು ಸಂಸತ್ತು ಅಂಗೀಕರಿಸಿದ ನಂತರ ರಾಸಾಯನಿಕ ಕ್ಯಾಸ್ಟ್ರೇಶನ್ ಅನ್ನು ಎದುರಿಸಬೇಕಾಗುತ್ತದೆ.

ದೇಶದಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲಿನ ಅತ್ಯಾಚಾರದ ಘಟನೆಗಳು ಮತ್ತು ಅಪರಾಧವನ್ನು ಪರಿಣಾಮಕಾರಿಯಾಗಿ ನಿಗ್ರಹಿಸಲು ಸಾರ್ವಜನಿಕ ಆಕ್ರೋಶದ ಪರಿಣಾಮವಾಗಿ ಈ ಮಸೂದೆಯು ಸಂಸತ್‌ನಲ್ಲಿ ಮಂಡಿಸಿ ಒಪ್ಪಿಗೆ ಪಡೆಯಲಾಗಿದೆ. ದೇಶದ ಅಪರಾಧ ಪ್ರಕರಣಗಳನ್ನು ಪರಿಣಾಮಕಾರಿಯಾಗಿ ಮಟ್ಟ ಹಾಕಲು ಈ ಮಸೂದೆಯನ್ನು ಅಂಗೀಕರಿಸಲಾಗಿದೆ.

ಭಾರತದಲ್ಲಿ 2013ರಲ್ಲಿ ದೆಹಲಿ ಗ್ಯಾಂಗ್ ರೇಪ್ ನಡೆದ ಬಳಿಕ ಅತ್ಯಾಚಾರಿಗಳಿಗೆ ಕೆಮಿಕಲ್ ಕ್ಯಾಸ್ಟ್ರೇಷನ್ ಶಿಕ್ಷೆಯನ್ನು ವಿಧಿಸಬೇಕು ಎಂಬ ಬೇಡಿಕೆಯನ್ನು ದೇಶದ ಯುವ ಸಮೂಹ ಕೇಂದ್ರ ಸರ್ಕಾರದ ಮುಂದೆ ಇಟ್ಟಿತ್ತು. ಬಳಿಕ ಜಸ್ಟೀಸ್ ಜೆ.ಎಸ್. ವರ್ಮಾ ಸಮಿತಿಯ ಶಿಫಾರಸ್ಸುಗಳನ್ನು ಒಪ್ಪಿಕೊಂಡು ಭಾರತ ಸರ್ಕಾರ ಕಾಯ್ದೆಯನ್ನು ಬದಲಾವಣೆ ಮಾಡಿದೆ.

ಪಾಕಿಸ್ತಾನದಲ್ಲಿ ಅತ್ಯಾಚಾರ ವಿರೋಧಿ ಸುಗ್ರೀವಾಜ್ಞೆಯನ್ನು ಅಧ್ಯಕ್ಷ ಆರಿಫ್ ಅಲ್ವಿ ಅನುಮೋದಿಸಿದ ಸುಮಾರು ಒಂದು ವರ್ಷದ ನಂತರ ಈಗ ರೇಪ್ ಅಪರಾಧಿಗಳಿಗೆ ಕೆಮಿಕಲ್ ಕ್ಯಾಸ್ಟ್ರೇಷನ್ ಶಿಕ್ಷೆ ವಿಧಿಸುವ ಮಸೂದೆಯನ್ನು ಪಾಕಿಸ್ತಾನದ ಪಾರ್ಲಿಮೆಂಟ್ ಅಂಗೀಕರಿಸಿದೆ. ಆದರೇ, ಅಪರಾಧಿಯ ಒಪ್ಪಿಗೆಯೊಂದಿಗೆ ಕೆಮಿಕಲ್ ಕ್ಯಾಸ್ಟ್ರೇಷನ್ ಶಿಕ್ಷೆಯನ್ನು ಜಾರಿಗೊಳಿಸಲಾಗುತ್ತೆ. ತ್ವರಿತ ವಿಚಾರಣೆಗಾಗಿ ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಲಾಗುತ್ತದೆ.

ಕ್ರಿಮಿನಲ್ ಕಾನೂನು (ತಿದ್ದುಪಡಿ) ಮಸೂದೆ 2021 ಮಸೂದೆಯನ್ನು 33 ಇತರ ಮಸೂದೆಗಳೊಂದಿಗೆ ಬುಧವಾರ ಸಂಸತ್ತಿನ ಜಂಟಿ ಅಧಿವೇಶನದಲ್ಲಿ ಅಂಗೀಕರಿಸಲಾಯಿತು. ಇದು ಪಾಕಿಸ್ತಾನದ ದಂಡ ಸಂಹಿತೆ 1860 ಮತ್ತು ಕ್ರಿಮಿನಲ್ ಪ್ರೊಸೀಜರ್ ಕೋಡ್ 1898 ಅನ್ನು ತಿದ್ದುಪಡಿ ಮಾಡಲು ಪ್ರಯತ್ನಿಸುತ್ತದೆ ಎಂದು ಡಾನ್ ಪತ್ರಿಕೆ ವರದಿ ಮಾಡಿದೆ.

ಪ್ರಧಾನಮಂತ್ರಿ ರೂಪಿಸಿದ ನಿಯಮಗಳನ್ನು ಅಧಿಸೂಚನೆ ಹೊರಡಿಸಿದ ಪ್ರಕಾರವಾಗಿ ಕೆಮಿಕಲ್ ಕ್ಯಾಸ್ಟ್ರೇಷನ್ ಅನ್ನು ನಡೆಸಲಾಗುತ್ತದೆ. ಕೆಮಿಕಲ್ ಕ್ಯಾಸ್ಟ್ರೇಷನ್ ಅಂದರೆ ವ್ಯಕ್ತಿಯು ಲೈಂಗಿಕ ಕ್ರಿಯೆಯನ್ನು ನಡೆಸಲು ಅಸಮರ್ಥನಾಗುವಂತೆ ಮಾಡಲಾಗುತ್ತದೆ. ಆ ವ್ಯಕ್ತಿಗೆ ಮೆಡಿಕಲ್ ಬೋರ್ಡ್ ಸೂಚಿಸಿದಂತೆ ಔಷಧಿ ನೀಡುವ ಮೂಲಕ ಲೈಂಗಿಕ ಕ್ರಿಯೆ ನಡೆಸಲು ಅಸಮರ್ಥನಾಗುವಂತೆ ಮಾಡಲಾಗುತ್ತದೆ.

ಜಮಾತ್-ಇ-ಇಸ್ಲಾಮಿ ಸೆನೆಟರ್ ಮುಷ್ತಾಕ್ ಅಹ್ಮದ್ ಈ ಮಸೂದೆಯನ್ನು ಪ್ರತಿಭಟಿಸಿದರು. ಇದು ಇಸ್ಲಾಮಿಕ್ ಮತ್ತು ಷರಿಯಾ ವಿರುದ್ಧವಾಗಿದೆ ಎಂದು ಪ್ರತಿಭಟಿಸಿದರು. ರೇಪ್ ಅಪರಾಧಿಗಳನ್ನು ಸಾರ್ವಜನಿಕವಾಗಿ ನೇಣಿಗೆ ಹಾಕಿ. ಷರಿಯಾ ಕಾನೂನಿನಲ್ಲಿ ಕೆಮಿಕಲ್ ಕ್ಯಾಸ್ಟ್ರೇಷನ್ ಉಲ್ಲೇಖ ಇಲ್ಲ ಎಂದು ಮುಷ್ತಾಕ್ ಅಹಮದ್ ಹೇಳಿದರು.

ಕೆಮಿಕಲ್ ಕ್ಯಾಸ್ಟ್ರೇಶನ್ ಎನ್ನುವುದು ಲೈಂಗಿಕ ಚಟುವಟಿಕೆಯನ್ನು ಕಡಿಮೆ ಮಾಡುವ ಪ್ರಕ್ರಿಯೆ. ಜನರ ಮೇಲೆ ಔಷಧಿಗಳನ್ನು ಬಳಕೆ ಮಾಡಿ ಲೈಂಗಿಕ ಆಸಕ್ತಿಯೇ ಹುಟ್ಟದಂತೆ ಮಾಡಲಾಗುತ್ತದೆ. ಮಾಧ್ಯಮ ವರದಿಗಳ ಪ್ರಕಾರ, ದಕ್ಷಿಣ ಕೊರಿಯಾ, ಪೋಲೆಂಡ್, ಝೆಕ್ ರಿಪಬ್ಲಿಕ್ ಮತ್ತು ಅಮೆರಿಕದಲ್ಲಿನ ಕೆಲವು ರಾಜ್ಯಗಳಲ್ಲಿ ಕೆಮಿಕಲ್ ಕ್ಯಾಸ್ಟ್ರೇಷನ್ ಶಿಕ್ಷೆಯ ಕಾನೂನು ರೂಪಿಸಿ ಜಾರಿಗೆ ತರಲಾಗಿದೆ. ಪಾಕಿಸ್ತಾನದಲ್ಲಿ ಲೈಂಗಿಕ ದೌರ್ಜನ್ಯ ಅಥವಾ ಅತ್ಯಾಚಾರ ಪ್ರಕರಣಗಳಲ್ಲಿ ಶೇ.4ಕ್ಕಿಂತ ಕಡಿಮೆ ಪ್ರಕರಣಗಳಲ್ಲಿ ಮಾತ್ರ ಶಿಕ್ಷೆ ವಿಧಿಸಲಾಗಿದೆ.

ಇದನ್ನೂ ಓದಿ: Shocking News: ಮನೆ ಕೆಲಸದವನಿಂದಲೇ 10 ತಿಂಗಳ ಮಗು ಮೇಲೆ ಅತ್ಯಾಚಾರ!

ಅತ್ಯಾಚಾರಿಗಳ ಕಾಮಾಸಕ್ತಿ ಕುಗ್ಗಿಸಲು ರಾಸಾಯನಿಕ ಬಳಕೆಗೆ ಪಾಕ್ ಪ್ರಧಾನಿ ಅನುಮತಿ

ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಮೂರು ತಿಂಗಳು ದೂರ ಇದ್ದ ಅಕ್ಕನ ಮರೆತ ತಮ್ಮ; ಮೋಕ್ಷಿತಾ ಕಣ್ಣೀರು ನೋಡಿ
ಮೂರು ತಿಂಗಳು ದೂರ ಇದ್ದ ಅಕ್ಕನ ಮರೆತ ತಮ್ಮ; ಮೋಕ್ಷಿತಾ ಕಣ್ಣೀರು ನೋಡಿ
ಹೊಸ ಸಂಖ್ಯಾ ವರ್ಷದ ಆಚರಣೆ ವಿಧಾನ ಹೇಗಿರಬೇಕು ನೋಡಿ
ಹೊಸ ಸಂಖ್ಯಾ ವರ್ಷದ ಆಚರಣೆ ವಿಧಾನ ಹೇಗಿರಬೇಕು ನೋಡಿ
ಹೊಸ ವರ್ಷದ ಮೊದಲ ದಿನ ಹೇಗಿದೆ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ಹೊಸ ವರ್ಷದ ಮೊದಲ ದಿನ ಹೇಗಿದೆ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಅಸಭ್ಯ ವರ್ತನೆ: ಜನರಿಂದ ಧರ್ಮದೇಟು
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಅಸಭ್ಯ ವರ್ತನೆ: ಜನರಿಂದ ಧರ್ಮದೇಟು
ಗುಡ್​ಬೈ 2024: ವೆಲ್​ಕಮ್​ 2025, ಜನರ ಜೋಶ್ ನೋಡಿ
ಗುಡ್​ಬೈ 2024: ವೆಲ್​ಕಮ್​ 2025, ಜನರ ಜೋಶ್ ನೋಡಿ
ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ
ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ
ಕಾನೂನಿನ ಚೌಕಟ್ಟಿನಲ್ಲಿ ಹೊಸ ವರ್ಷಾಚರಣೆ ಮಾಡಿ; ಪೊಲೀಸ್ ಕಮಿಷನರ್ ಮನವಿ
ಕಾನೂನಿನ ಚೌಕಟ್ಟಿನಲ್ಲಿ ಹೊಸ ವರ್ಷಾಚರಣೆ ಮಾಡಿ; ಪೊಲೀಸ್ ಕಮಿಷನರ್ ಮನವಿ