Imran Khan ಇಮ್ರಾನ್ ಖಾನ್ ರಾಷ್ಟ್ರವನ್ನುದ್ದೇಶಿಸಿ ಮಾಡಲಿದ್ದ ಭಾಷಣ ರದ್ದು; ಶಹಬಾಜ್ ಷರೀಫ್ ಪಾಕಿಸ್ತಾನದ ಪ್ರಧಾನಿಯಾಗಲಿದ್ದಾರೆ ಎಂದ ಬಿಲಾವಲ್ ಭುಟ್ಟೋ
ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ (ಪಿಪಿಪಿ) ಅಧ್ಯಕ್ಷ ಬಿಲಾವಲ್ ಭುಟ್ಟೊ ಜರ್ದಾರಿ ಅವರು ಬುಧವಾರ ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಇಮ್ರಾನ್ ಖಾನ್ "ಈಗ ಬಹುಮತವನ್ನು ಕಳೆದುಕೊಂಡಿದ್ದಾರೆ" ಮತ್ತು ವಿರೋಧ ಪಕ್ಷದ ನಾಯಕ ಶಹಬಾಜ್ ಷರೀಫ್ ಶೀಘ್ರದಲ್ಲೇ ದೇಶದ ಪ್ರಧಾನಿಯಾಗಲಿದ್ದಾರೆ ಎಂದು ಹೇಳಿದ್ದಾರೆ.
ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್‌ನ ಮಿತ್ರಪಕ್ಷ ಮತ್ತು ಪ್ರಮುಖ ಸಮ್ಮಿಶ್ರ ಪಾಲುದಾರ ಮುತ್ತಹಿದಾ ಕ್ವಾಮಿ ಮೂವ್‌ಮೆಂಟ್ ಪಾಕಿಸ್ತಾನ್ (MQM) ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ (PPP) ಯೊಂದಿಗೆ ಮೈ ತ್ರಿ ಮಾಡಿಕೊಂಡ ನಂತರ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ (Imran Khan) ಅವರ ಭವಿಷ್ಯವು ಅನಿಶ್ಚಿತವಾಗಿದೆ. ಪಾಕ್ (Pakistan) ಪ್ರಧಾನಿ ಇಮ್ರಾನ್ ಖಾನ್ ಸಂಸತ್ತಿನಲ್ಲಿ ಬಹುಮತ ಕಳೆದುಕೊಂಡಿದ್ದು ಬುಧವಾರ ಸಂಜೆ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಈಗ ಪಾಕ್ ಪ್ರಧಾನಿ ಇಮ್ರಾನ್ ಖಾನ್ ದೇಶವನ್ನುದ್ದೇಶಿಸಿ ಮಾಡಲಿರುವ ಭಾಷಣವನ್ನು ರದ್ದುಗೊಳಿಸಿದ್ದಾರೆ. ಮೂಲಗಳ ಪ್ರಕಾರ ಅವರ ರಾಜೀನಾಮೆ ಈಗ ನೇರವಾಗಿ ಬರಬಹುದು. ಪಾಕಿಸ್ತಾನ ಸಂಸತ್ತಿನ ಕೆಳಮನೆಯಲ್ಲಿ ಇಮ್ರಾನ್ ಖಾನ್ ಸರ್ಕಾರ ಬಹುಮತ ಕಳೆದುಕೊಂಡಿದೆ. ಪಾಕಿಸ್ತಾನದ ವಿರೋಧ ಪಕ್ಷಗಳು ರಚಿಸಿಕೊಂಡಿರುವ ಮೈತ್ರಿಕೂಟಕ್ಕೆ 177 ಸದಸ್ಯ ಬಲ ಇದೆ. ಇಮ್ರಾನ್ ಖಾನ್ ನೇತೃತ್ವದ ಆಡಳಿತ ಪಕ್ಷದ ಬಲ 164ಕ್ಕೆ ಕುಸಿದಿದೆ. ಪ್ರಧಾನಿ ವಿರುದ್ಧ ಮಂಡಿಸುವ ವಿಶ್ವಾಸಮತ ಯಾಚನೆಯ ಪ್ರಸ್ತಾವಕ್ಕೆ ಬಲ ಸಿಗಬೇಕಿದ್ದರೆ ಪ್ರತಿಪಕ್ಷಗಳಿಗೆ 172 ಸದಸ್ಯ ಬಲ ಸಾಕು. ಪಾಕಿಸ್ತಾನ ಸಂಸತ್ತಿನ ಒಟ್ಟು ಸದಸ್ಯ ಬಲ 342. ಸರ್ಕಾರ ರಚನೆಗೆ ಬೇಕಿರುವ ಮ್ಯಾಜಿಕ್ ನಂಬರ್ 172. ಪಾಕಿಸ್ತಾನದ ಯಾವುದೇ ಪ್ರಧಾನಿ ಐದು ವರ್ಷಗಳ ಅಧಿಕಾರ ಅವಧಿಯನ್ನು ಪೂರ್ಣಗೊಳಿಸಿಲ್ಲ. ಪಾಕಿಸ್ತಾನದಲ್ಲಿ ಮುಂದಿನ ಮಹಾಚುನಾವಣೆಯು 2023ರಂದು ನಡೆಯಬೇಕಿತ್ತು. ಆದರೆ ಅವಧಿಗೆ ಮೊದಲೇ ಚುನಾವಣೆ ನಡೆಯಬಹುದು ಎಂದು ಗೃಹ ಸಚಿವ ಶೇಖ್ ರಶೀದ್ ಅಹ್ಮದ್ ಹೇಳಿದ್ದಾರೆ.
‘ವಿಶೇಷ ಕ್ಯಾಬಿನೆಟ್ ಸಭೆ’ ಕರೆದ ಇಮ್ರಾನ್ ಖಾನ್ ರಾಜೀನಾಮೆಗೆ ಒತ್ತಡ ಹೆಚ್ಚುತ್ತಿದ್ದಂತೆ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಬುಧವಾರ ತಮ್ಮ ಸಂಪುಟದ “ವಿಶೇಷ ಸಭೆ”ಯ ಅಧ್ಯಕ್ಷತೆ ವಹಿಸಿದ್ದರು.
Prime Minister @ImranKhanPTI chaired special cabinet meeting pic.twitter.com/ilBi4LshLl
— Prime Minister’s Office, Pakistan (@PakPMO) March 30, 2022
ಇಮ್ರಾನ್ ಖಾನ್ ರಾಜೀನಾಮೆ ನೀಡುವುದಿಲ್ಲ, ಕೊನೆಯ ಎಸೆತದವರೆಗೂ ಆಡುತ್ತಾರೆ: ಪಿಟಿಐ ವಕ್ತಾರ ನೀಲಂ ಇರ್ಷಾದ್ ಶೇಖ್ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ತಮ್ಮ ಕೊನೆಯ ಎಸೆತದವರೆಗೂ ಆಡುತ್ತಾರೆ ಮತ್ತು ರಾಜೀನಾಮೆ ನೀಡುವುದಿಲ್ಲ ಎಂದು ಸಿಎನ್‌ಎನ್-ನ್ಯೂಸ್ 18 ನೊಂದಿಗೆ ವಿಶೇಷ ಸಂವಾದದಲ್ಲಿ ಆಡಳಿತ ಪಕ್ಷ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ವಕ್ತಾರ ನೀಲಂ ಇರ್ಷಾದ್ ಶೇಖ್ ಹೇಳಿದ್ದಾರೆ. “ಪ್ರಧಾನಿ ಇಮ್ರಾನ್ ಖಾನ್ ಅಧಿಕಾರದಿಂದ ಕೆಳಗಿಳಿಯುತ್ತಿಲ್ಲ. ಅವರು ಚುನಾಯಿತ ಪ್ರಧಾನಿ. ಅವರು ತಮ್ಮ ಕೊನೆಯ ಎಸೆತದವರೆಗೂ ಆಡುತ್ತಾರೆ, ”ಎಂದು ಶೇಖ್ ಹೇಳಿದರು.
ಶಹಬಾಜ್ ಷರೀಫ್ ಶೀಘ್ರದಲ್ಲೇ ಪಾಕಿಸ್ತಾನದ ಪ್ರಧಾನಿಯಾಗಲಿದ್ದಾರೆ- ಬಿಲಾವಲ್ ಭುಟ್ಟೋ ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ (ಪಿಪಿಪಿ) ಅಧ್ಯಕ್ಷ ಬಿಲಾವಲ್ ಭುಟ್ಟೊ ಜರ್ದಾರಿ ಅವರು ಬುಧವಾರ ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಇಮ್ರಾನ್ ಖಾನ್ “ಈಗ ಬಹುಮತವನ್ನು ಕಳೆದುಕೊಂಡಿದ್ದಾರೆ” ಮತ್ತು ವಿರೋಧ ಪಕ್ಷದ ನಾಯಕ ಶಹಬಾಜ್ ಷರೀಫ್ ಶೀಘ್ರದಲ್ಲೇ ದೇಶದ ಪ್ರಧಾನಿಯಾಗಲಿದ್ದಾರೆ ಎಂದು ಹೇಳಿದ್ದಾರೆ. “ಇಮ್ರಾನ್ ಖಾನ್ ಈಗ ಬಹುಮತ ಕಳೆದುಕೊಂಡಿದ್ದಾರೆ, ಅವರು ಇನ್ನು ಮುಂದೆ ಪ್ರಧಾನಿ ಅಲ್ಲ, ನಾಳೆ ಸಂಸತ್ ಅಧಿವೇಶನ. ನಾಳೆ ಮತದಾನ ಮಾಡಿ ಈ ವಿಷಯವನ್ನು ಇತ್ಯರ್ಥಗೊಳಿಸೋಣ. ನಂತರ ನಾವು ಪಾರದರ್ಶಕ ಚುನಾವಣೆಗಳಲ್ಲಿ ಕೆಲಸ ಮಾಡಲು ಪ್ರಾರಂಭಿಸಬಹುದು. ಪ್ರಜಾಪ್ರಭುತ್ವದ ಮರುಸ್ಥಾಪನೆ ಮತ್ತು ಆರ್ಥಿಕ ಬಿಕ್ಕಟ್ಟಿನ ಅಂತ್ಯದ ಕಡೆಗೆ ಪ್ರಯಾಣವನ್ನು ಪ್ರಾರಂಭಿಸಬಹುದು” ಎಂದು ಪಿಪಿಪಿ ಅಧ್ಯಕ್ಷರು ಹೇಳಿದ್ದಾರೆ.
ಇದನ್ನೂ ಓದಿ: ಬಹುಮತ ಕಳೆದುಕೊಂಡ ಪಾಕ್ ಪ್ರಧಾನಿ ಇಮ್ರಾನ್ ಖಾನ್: ಇಂದು ರಾಜೀನಾಮೆ ಸಾಧ್ಯತೆ
Published On - 7:15 pm, Wed, 30 March 22