ಪ್ಯಾಲೆಸ್ತೀನ್ ಬ್ಯಾಗ್ ಹಿಡಿದು ಸಂಸತ್ತಿಗೆ ಹೋದ ಪ್ರಿಯಾಂಕಾಳನ್ನು ಹೊಗಳಿದ ಪಾಕಿಸ್ತಾನ ರಾಜಕಾರಣಿ
ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಸಂಸತ್ತಿಗೆ ಪ್ಯಾಲೆಸ್ತೀನ್ ಎಂದು ಬರೆದಿರುವ ಬ್ಯಾಗ್ ಹಿಡಿದುಕೊಂಡು ಹೋಗಿರುವುದು ಕೇವಲ ಭಾರತದಲ್ಲಿ ಮಾತ್ರವಲ್ಲ ಪಾಕಿಸ್ತಾನದಲ್ಲೂ ಚರ್ಚೆಯನ್ನು ಹುಟ್ಟುಹಾಕಿದೆ. ಪ್ರಿಯಾಂಕಾ ಗಾಂಧಿ ಪ್ಯಾಲೆಸ್ತೀನ್ಗೆ ಬೆಂಬಲ ಸೂಚಿಸಲು ಈ ರೀತಿ ಮಾಡಿದ್ದಾರೆ ಎಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ. ಈ ಕುರಿತು ಪಾಕಿಸ್ತಾನ ಮಾಜಿ ಸಚಿವ ಫವಾದ್ ಹಸನ್ ಚೌಧರಿ ಮಾತನಾಡಿದ್ದಾರೆ.

ಜವಾಹರಲಾಲ್ ನೆಹರೂ ಅವರಂತಹ ಮಹಾನ್ ಸ್ವಾತಂತ್ರ್ಯ ಹೋರಾಟಗಾರರ ಮೊಮ್ಮಗಳಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ ಎಂದು ಅವರು ಬರೆದಿದ್ದಾರೆ. ಹೇಡಿಗಳ ನಡುವೆ ಪ್ರಿಯಾಂಕಾ ತಲೆ ಎತ್ತಿ ನಿಂತಿದ್ದಾರೆ. ಇಲ್ಲಿಯವರೆಗೂ ಪಾಕಿಸ್ತಾನದ ಯಾವೊಬ್ಬ ಸಂಸತ್ ಸದಸ್ಯನೂ ಅಂತಹ ಧೈರ್ಯ ತೋರಿಲ್ಲ ಎಂಬುದು ನಾಚಿಕೆಗೇಡಿನ ಸಂಗತಿ ಎಂದಿದ್ದಾರೆ.
ಪ್ರಿಯಾಂಕಾ ಗಾಂಧಿ ಬ್ಯಾಗ್ನಲ್ಲಿ ಪ್ಯಾಲೆಸ್ತೀನ್ ಎಂಬ ಬರಹವಿತ್ತು ಜತೆಗೆ ಕಲ್ಲಂಗಡಿ ಹಣ್ಣಿನ ಚಿತ್ರ ಕೂಡ ಇತ್ತು ಇದನ್ನು ಪ್ಯಾಲೆಸ್ತೀನ್ ಒಗ್ಗಟ್ಟಿನ ಸಂಕೇತ ಎಂದು ಪರಿಗಣಿಸಲಾಗುತ್ತದೆ. ಕಲ್ಲಂಗಡಿ ಚಿತ್ರಗಳು ಮತ್ತು ಎಮೋಜಿಗಳನ್ನು ಪ್ಯಾಲೆಸ್ಟೈನ್ ಅನ್ನು ಬೆಂಬಲಿಸಲು ಹೆಚ್ಚಾಗಿ ಬಳಸಲಾಗುತ್ತದೆ.
ಮತ್ತಷ್ಟು ಓದಿ: Video: ಸಂಸತ್ತಿಗೆ ಪ್ಯಾಲೆಸ್ತೀನ್ ಬ್ಯಾಗ್ ಹಿಡಿದು ಬಂದ ಪ್ರಿಯಾಂಕಾ ಗಾಂಧಿ
ಗಾಜಾ ಸಂಘರ್ಷದ ಬಗ್ಗೆ ಪ್ರಿಯಾಂಕಾ ಗಾಂಧಿ ನಿಲುವು ಗಾಜಾದಲ್ಲಿ ಇಸ್ರೇಲ್ ಕ್ರಮದ ವಿರುದ್ಧ ಪ್ರಿಯಾಂಕಾ ಗಾಂಧಿ ಬಹಳ ಸಮಯದಿಂದ ಧ್ವನಿ ಎತ್ತುತ್ತಿದ್ದಾರೆ. ಅಕ್ಟೋಬರ್‌ನಲ್ಲಿ, ಹಮಾಸ್ ಮತ್ತು ಇಸ್ರೇಲ್ ನಡುವಿನ ಯುದ್ಧವು ಒಂದು ವರ್ಷವನ್ನು ಪೂರ್ಣಗೊಳಿಸಿದಾಗ, ಪ್ರಿಯಾಂಕಾ ಇಸ್ರೇಲ್ ಅಂತರರಾಷ್ಟ್ರೀಯ ಕಾನೂನುಗಳನ್ನು ಉಲ್ಲಂಘಿಸುತ್ತಿದೆ ಎಂದು ಆರೋಪಿಸಿದ್ದರು.
What else could we expect from a granddaughter of a towering freedom fighter like Jawaharlal Nehru? Priyanka Gandhi has stood tall amidst pigmies, such shame that to date, no Pakistani member of Parliament has demonstrated such courage.#ThankYou pic.twitter.com/vV3jfOXLQq
— Ch Fawad Hussain (@fawadchaudhry) December 16, 2024
ವಯನಾಡಿನಲ್ಲಿ ಚುನಾವಣಾ ಪ್ರಚಾರದ ವೇಳೆ ಪ್ರಿಯಾಂಕಾ ಗಾಂಧಿ ಪ್ಯಾಲೆಸ್ತೀನ್ ವಿಷಯವನ್ನು ಪ್ರಮುಖವಾಗಿ ಪ್ರಸ್ತಾಪಿಸಿದ್ದರು. ಜೂನ್‌ನಲ್ಲಿ, ಪ್ರಿಯಾಂಕಾ ಇಸ್ರೇಲಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಟೀಕಿಸಿದ್ದರು.
ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ