International Beggar: ಪಾಕಿಸ್ತಾನದ ಪ್ರಧಾನಿ ಇಮ್ರಾನ್​ ಖಾನ್​ ’ಅಂತಾರಾಷ್ಟ್ರೀಯ ಭಿಕ್ಷುಕ’ ಎಂದು ಜರಿದ ಜಮಾಯತ್ ಮುಖ್ಯಸ್ಥ

ಲಾಹೋರ್​​ನಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಸಿದ್ಧತಾ ಕಾರ್ಯದಲ್ಲಿ ತೊಡಗಿರುವ ಜಮಾಯತ್ (Jamat-e-Islami)​ ಮುಖ್ಯಸ್ಥ ಸಿರಾಜುಲ್ ಹಕ್ (Sirajul-Haq) ಪಾಕಿಸ್ತಾನದ ಸಮಸ್ಯೆಗಳೆಲ್ಲ ಪರಿಹಾರವಾಗಬೇಕೆಂದರೆ ಇಮ್ರಾನ್​ ಖಾನ್ ನಿರ್ಗಮನವೊಂದೇ ದಾರಿ ಎಂದಿದ್ದಾರೆ.

International Beggar: ಪಾಕಿಸ್ತಾನದ ಪ್ರಧಾನಿ ಇಮ್ರಾನ್​ ಖಾನ್​ ’ಅಂತಾರಾಷ್ಟ್ರೀಯ ಭಿಕ್ಷುಕ’ ಎಂದು ಜರಿದ ಜಮಾಯತ್ ಮುಖ್ಯಸ್ಥ
International Beggar: ಪಾಕಿಸ್ತಾನದ ಪ್ರಧಾನಿ ಇಮ್ರಾನ್​ ಖಾನ್​ನನ್ನು ’ಅಂತಾರಾಷ್ಟ್ರೀಯ ಭಿಕ್ಷುಕ’ ಎಂದು ಜರಿದ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Jan 17, 2022 | 11:07 AM

ಲಾಹೋರ್​​: ಮೊನ್ನೆಯಷ್ಟೇ ಪಾಕಿಸ್ತಾನದ ಆರ್ಥಿಕತೆ ಭಾರತಕ್ಕಿಂತ ಚೆನ್ನಾಗಿದೆ ಎಂದು ಪಾಕಿಸ್ತಾನದ ಪ್ರಧಾನಿ (Pakistan Prime Minister) ಜನಾಬ್ ಇಮ್ರಾನ್​ ಖಾನ್ ಫರ್ಮಾನು ಹೊರಡಿಸಿ, ನಗೆಪಾಟಲಿಗೀಡಾದ್ದರು. ಇದೀಗ ಜಮಾತ್​ ಎ ಇಸ್ಲಾಮಿ ಪಾಕಿಸ್ತಾನದ ನೂತನ ‘ಅರ್ಥಶಾಸ್ತ್ರಜ್ಞ’ ಜನಾಬ್ ಇಮ್ರಾನ್​ ಖಾನ್​ರನ್ನು ತರಾಟೆಗೆ ತೆಗೆದುಕೊಂಡಿದೆ. ಪಾಕಿಸ್ತಾನದ ಹಣಕಾಸು ಸಂಕಷ್ಟಗಳು ಬೆಟ್ಟದಷ್ಟು ಮಿತಿಮೀರಿದ್ದು ಪ್ರಧಾನಿ ಇಮ್ರಾನ್​ ಖಾನ್ ’ಅಂತಾರಾಷ್ಟ್ರೀಯ ಭಿಕ್ಷುಕ’ ಎಂದು (international beggar) ಜರಿದಿದೆ. ಅಷ್ಟೇ ಆತ (Imran Khan) ಪ್ರಧಾನಿ ಹುದ್ದೆಯಿಂದ ತೊಲಗಿದರೆ ಮಾತ್ರ ಈ ಸಮಸ್ಯೆಗಳಿಗೆಲ್ಲಾ ಪರಿಹಾರ ದೊರಕುವುದು ಎಂದೂ ಜಮಾಯತ್​ ಮುಖ್ಯಸ್ಥ ವ್ಯಾಖ್ಯಾನಿಸಿದ್ದಾರೆ.

ಲಾಹೋರ್​​ನಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಸಿದ್ಧತಾ ಕಾರ್ಯದಲ್ಲಿ ತೊಡಗಿರುವ ಜಮಾಯತ್ (Jamat-e-Islami)​ ಮುಖ್ಯಸ್ಥ ಸಿರಾಜುಲ್ ಹಕ್ (Sirajul-Haq) ಪಾಕಿಸ್ತಾನದ ಸಮಸ್ಯೆಗಳೆಲ್ಲ ಪರಿಹಾರವಾಗಬೇಕೆಂದರೆ ಇಮ್ರಾನ್​ ಖಾನ್ ನಿರ್ಗಮನವೊಂದೇ ದಾರಿ ಎಂದಿದ್ದಾರೆ.

ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆಯಿಂದ (International Monetary Fund -IMF) ತುರ್ತಾಗಿ ಒಂದು ಶತಕೋಟಿ ಡಾಲರ್ ಸಾಲ ಪಡೆಯುತ್ತಿರುವುದನ್ನು ನೋಡಿದರೆ ಆತ (ಪಾಕಿಸ್ತಾನದ ಪ್ರಧಾನಿ ಇಮ್ರಾನ್​ ಖಾನ್) ನಿಜಕ್ಕೂ ಅಂತಾರಾಷ್ಟ್ರೀಯ ಭಿಕ್ಷುಕನೇ ಸರಿ ಎಂದು ಜಮಾಯತ್ ವ್ಯಾಖ್ಯಾನಿಸಿದೆ. ಪಾಕಿಸ್ತಾನದ ಆರ್ಥಿಕತೆ ಸುಸ್ಥಿಗೆ ತರಲು ಹಿಂದಿನ ಕಿಚಡಿ ಸರ್ಕಾರದಿಂದಲೂ ಏನೂ ಮಾಡಲು ಸಾಧ್ಯವಾಗಲಿಲ್ಲ. ಅದಾದ ಮೇಲೆ ತಾನು ಆರ್ಥಿಕತೆಯ ಚಾಂಪಿಯನ್​ ಎಂದು ಡಾಯಿ ಕೊಚ್ಚಿಕೊಮಡು ಅಧಿಕಾರಕ್ಕೆ ಬಂದ ಪಿಟಿಐ ನೇತೃತ್ವದಲ್ಲಿ ಇಮ್ರಾನ್​ ಖಾನ್​ಗೂ ಸಹ ಏನೂ ಮಾಡಲು ಆಗಲಿಲ್ಲ ಎಂದು ಜಮಾತೆ ನಾಯಕರು ಬಣ್ಣಿಸಿದ್ದಾರೆ.

ಪಾಕಿಸ್ತಾನದಲ್ಲಿ ಆರ್ಥಿಕ ದುಸ್ಥಿತಿ ಹೇರಳವಾಗಿದೆ. ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆಯ ತಾಳಕ್ಕೆ ತಕ್ಕಂತೆ ಕುಣಿಯುತ್ತಾ ಈಗಾಗಲೇ ಎರಡು ಮಿನಿ ಬಜೆಟ್​​ಗಳನ್ನು ಮಂಡಿಸಲಾಗಿದೆ. ದೇಶದ ವ್ಯಾಪಾರ ಕೊರತೆ ತಾಳತಪ್ಪಿದೆ. ಹಣದುಬ್ಬರ ಉಬ್ಬುತ್ತಲೇ ಇದೆ. ಇದನ್ನೆಲ್ಲಾ ಸರಿದೂಗಿಸಲು ಶತಕೋಟಿ ಡಾಲರ್​ ಸಾಲ ಎತ್ತುವಳಿ ಪ್ರೋಗ್ರಾಂ ಹಾಕಿಕೊಳ್ಳುವ ಮೂಲಕ ತಾನು​ ’ಅಂತಾರಾಷ್ಟ್ರೀಯ ಭಿಕ್ಷುಕ’ ಎಂದು ಪಾಕಿಸ್ತಾನದ ಪ್ರಧಾನಿ ಇಮ್ರಾನ್​ ಖಾನ್ ಪ್ರೂವ್​ ಮಾಡಿದಂತಾಗಿದೆ ಎಂದು ಜಮಾಯತ್ ಹೇಳಿದೆ.

Also Read: ಪಾಕಿಸ್ತಾನದ ಆರ್ಥಿಕತೆ ಭಾರತಕ್ಕಿಂತ ಚೆನ್ನಾಗಿದೆ ಎಂದ ಪಾಕ್​ ಪ್ರಧಾನಿ ಜನಾಬ್ ಇಮ್ರಾನ್​ ಖಾನ್!

Published On - 10:39 am, Mon, 17 January 22

ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ