AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್​ಸಿಒ ಶೃಂಗಸಭೆಯ ಗ್ರೂಪ್ ಫೋಟೋದಿಂದ ಪ್ರಧಾನಿ ಮೋದಿಯ ಫೋಟೋ ಕಟ್ ಮಾಡಿದ ಪಾಕಿಸ್ತಾನ!

ಕಿರ್ಗಿಸ್ತಾನದಲ್ಲಿ ನಡೆದ ವಾರ್ಷಿಕ ಶೃಂಗಸಭೆಯ ನಂತರ ಪ್ರಧಾನಿ ನರೇಂದ್ರ ಮೋದಿ ಮತ್ತು ಪಾಕಿಸ್ತಾನಿ ಪ್ರಧಾನಿ ಶಹಬಾಜ್ ಷರೀಫ್ ಸೇರಿದಂತೆ ಎಲ್ಲಾ ರಾಷ್ಟ್ರಗಳ ಮುಖ್ಯಸ್ಥರೊಂದಿಗೆ ಛಾಯಾಚಿತ್ರ ಸೆಷನ್ ನಡೆಸಲಾಯಿತು. ಆದರೆ, ಪಾಕಿಸ್ತಾನಿ ಪ್ರಧಾನಿ ಕಚೇರಿ ಆ ಫೋಟೋವನ್ನು ಎಡಿಟ್ ಮಾಡಿ, ಪ್ರಧಾನಿ ಮೋದಿಯವರ ಫೋಟೋವನ್ನು ಕಟ್ ಮಾಡಿದೆ. ಪಾಕಿಸ್ತಾನದ ಪ್ರಧಾನ ಮಂತ್ರಿಗಳ ಕಚೇರಿ (PMO) ಶೃಂಗಸಭೆಯ ಸಮಯದಲ್ಲಿ ತೆಗೆದ ಗ್ರೂಪ್ ಫೋಟೋದ ಎಡಿಟೆಟ್ ಫೋಟೋವನ್ನು ಪೋಸ್ಟ್ ಮಾಡಿದೆ. ಪಾಕಿಸ್ತಾನವು ಪ್ರಧಾನಿ ಮೋದಿಯವರ ಫೋಟೋವನ್ನು ಆ ಫೋಟೋದಿಂದ ತೆಗೆದುಹಾಕಿದೆ.

ಎಸ್​ಸಿಒ ಶೃಂಗಸಭೆಯ ಗ್ರೂಪ್ ಫೋಟೋದಿಂದ ಪ್ರಧಾನಿ ಮೋದಿಯ ಫೋಟೋ ಕಟ್ ಮಾಡಿದ ಪಾಕಿಸ್ತಾನ!
Photo Posted By Pakistan PmImage Credit source: x
ಸುಷ್ಮಾ ಚಕ್ರೆ
|

Updated on: Sep 01, 2026 | 7:17 PM

Share

ನವದೆಹಲಿ, ಸೆಪ್ಟೆಂಬರ್ 1: ಪಾಕಿಸ್ತಾನ ತನ್ನ ಮರ್ಯಾದೆಯನ್ನು ತಾನೇ ಕಳೆದುಕೊಳ್ಳುವ ಕೆಲಸಗಳನ್ನು ಮಾಡುತ್ತಿದೆ. ಕಿರ್ಗಿಸ್ತಾನ್‌ನ ರಾಜಧಾನಿ ಬಿಷ್ಕೆಕ್‌ನಲ್ಲಿ ನಡೆದ 26ನೇ ಶಾಂಘೈ ಸಹಕಾರ ಸಂಸ್ಥೆ (SCO) ಶೃಂಗಸಭೆಯಲ್ಲಿ ಪ್ರಧಾನಿ ಮೋದಿ (PM Narendra Modi) ಮತ್ತು ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಇಬ್ಬರೂ ಪಾಲ್ಗೊಂಡಿದ್ದರು. ಈ ವೇಳೆ ಪಾಕ್ ಪ್ರದಾನಿಯ ಎದುರಲ್ಲೇ ಭಯೋತ್ಪಾದನೆಯ ವಿರುದ್ಧ ಮೋದಿ ಧ್ವನಿಯೆತ್ತುವ ಮೂಲಕ ಶೆಹಬಾಜ್ ಷರೀಫ್​ ತಲೆತಗ್ಗಿಸುವಂತೆ ಮಾಡಿದ್ದರು. ಆ ಶೃಂಗಸಭೆಯಲ್ಲಿ ಎಲ್ಲ ದೇಶಗಳ ಪ್ರಧಾನಿಗಳು ಮತ್ತು ಅಧ್ಯಕ್ಷರು ಗ್ರೂಪ್ ಫೋಟೋಗೆ ಪೋಸ್ ನೀಡಿದ್ದರು. ಆದರೆ, ಭಾರತದ ಪ್ರಧಾನಿ ನರೇಂದ್ರ ಮೋದಿಯವರ ಫೋಟೋವನ್ನು ಕ್ರಾಪ್ ಮಾಡಿ ಪೋಸ್ಟ್ ಮಾಡುವ ಮೂಲಕ ಪಾಕಿಸ್ತಾನ ಮತ್ತೊಮ್ಮೆ ತನ್ನ ಸಣ್ಣತನ ಪ್ರದರ್ಶಿಸಿದೆ.

ಪಾಕಿಸ್ತಾನದ ಪ್ರಧಾನಿ ಸಚಿವಾಲಯ ನರೇಂದ್ರ ಮೋದಿಯವರ ಫೋಟೋವನ್ನು ಕಟ್ ಮಾಡಿ ಗ್ರೂಪ್ ಫೋಟೋವನ್ನು ಪೋಸ್ಟ್ ಮಾಡಿದೆ. ಆದರೆ, ಭಾರತದ ಪ್ರಧಾನಿ ಸಚಿವಾಲಯ ಹಾಗೂ ನರೇಂದ್ರ ಮೋದಿ ಪಾಕಿಸ್ತಾನದ ಪ್ರಧಾನಿಯೂ ಇರುವ ಪೂರ್ತಿ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ.

ತಪ್ಪು ತಿದ್ದಿಕೊಂಡು ಪಾಕ್ ಪ್ರಧಾನಿ:

ಈ ಸೋಷಿಯಲ್ ಮೀಡಿಯಾ ಗಿಮಿಕ್‌ಗೆ ತೀವ್ರ ಟೀಕೆ ವ್ಯಕ್ತವಾದ ಬೆನ್ನಲ್ಲೇ, ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ತಮ್ಮ ವೈಯಕ್ತಿಕ ‘ಎಕ್ಸ್’ ಖಾತೆಯಲ್ಲಿ ಪ್ರಧಾನಿ ಮೋದಿ ಅವರನ್ನೊಳಗೊಂಡ ಪೂರ್ಣ ಪ್ರಮಾಣದ ಗ್ರೂಪ್ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ. ಪಾಕಿಸ್ತಾನ ಪಿಎಂಒ ಅಧಿಕೃತ ಖಾತೆಯು ಮೋದಿ ಇಲ್ಲದ ಫೋಟೋವನ್ನು ಹಾಕಿದರೆ, ಶೆಹಬಾಜ್ ಷರೀಫ್ ಅವರ ವೈಯಕ್ತಿಕ ಖಾತೆಯು ಭಾರತದ ಪ್ರಧಾನಿಯನ್ನು ಫೋಟೋದಲ್ಲಿ ಮರುಸ್ಥಾಪಿಸುವ ಮೂಲಕ ವಿಚಿತ್ರ ಹಾಗೂ ಮುಜುಗರದ ಸನ್ನಿವೇಶವನ್ನು ಸೃಷ್ಟಿಸಿದೆ.

ಇದನ್ನೂ ಓದಿ: ‘ನಾವು ಯುದ್ಧಗಳಿಂದ ಯುದ್ಧದ ಅಂತ್ಯದತ್ತ ಸಾಗಬೇಕಿದೆ’; ರಷ್ಯಾ ಅಧ್ಯಕ್ಷ ಪುಟಿನ್‌ಗೆ ಪ್ರಧಾನಿ ಮೋದಿ ಸಂದೇಶ

ಕಿರ್ಗಿಸ್ತಾನ್‌ನ ರಾಜಧಾನಿ ಬಿಷ್ಕೆಕ್‌ನಲ್ಲಿ, ಪ್ರಧಾನಿ ಮೋದಿ ಅವರು SCO ಶೃಂಗಸಭೆಯ ಸಂದರ್ಭದಲ್ಲಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತು ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರನ್ನು ಭೇಟಿಯಾದರು. ಆದರೆ, ಎಲ್ಲ ರಾಷ್ಟ್ರಗಳ ಮುಖ್ಯಸ್ಥರು ಫೋಟೋಗೆ ಪೋಸ್ ನೀಡಿದಾಗ, ಭಾರತ ಮತ್ತು ಪಾಕಿಸ್ತಾನದ ಪ್ರಧಾನ ಮಂತ್ರಿಗಳು ತಮ್ಮ ನಡುವೆ ಅಂತರವನ್ನು ಕಾಯ್ದುಕೊಂಡರು. ಈ ಸಮಯದಲ್ಲಿ ಪ್ರಧಾನಿ ಮೋದಿ ಶೆಹಬಾಜ್ ಷರೀಫ್ ಅವರನ್ನು ನೋಡಲೂ ಇಲ್ಲ, ಅವರೊಂದಿಗೆ ಯಾವುದೇ ಔಪಚಾರಿಕ ಭೇಟಿಯನ್ನು ನಡೆಸಲೂ ಇಲ್ಲ. ಫೋಟೋ ಸೆಷನ್ ಸಮಯದಲ್ಲಿಯೂ ಇಬ್ಬರು ನಾಯಕರು ಬೇರೆ ಬೇರೆ ಬದಿಗಳಲ್ಲಿ ನಿಂತಿರುವುದು ಕಂಡುಬಂದಿತು.

ಇದನ್ನೂ ಓದಿ: ಪಾಕ್ ಪ್ರಧಾನಿ ಎದುರಲ್ಲೇ ಭಯೋತ್ಪಾದನೆ ವಿರುದ್ಧ ಗುಡುಗಿದ ಮೋದಿ:ಟೆರರಿಸಂ ಯಾರಿಗೂ ಆಸ್ತಿಯಾಗಲ್ಲ, ಎರಡು ನಿಲುವು ಬಿಡಿ ಎಂದು ಖಡಕ್ ಎಚ್ಚರಿಕೆ

ಎಸ್‌ಸಿಒ ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಯಾವುದೇ “ದ್ವಿಮುಖ ನೀತಿ” (Double Standards) ಇರಬಾರದು ಎಂದು ಖಡಕ್ ಸಂದೇಶ ನೀಡಿದರು. ಶೆಹಬಾಜ್ ಷರೀಫ್ ಸಮ್ಮುಖದಲ್ಲೇ ಮೋದಿ ಅವರು, ಭಯೋತ್ಪಾದಕರಿಗೆ ಆಶ್ರಯ ನೀಡುವುದು, ಹಣಕಾಸು ನೆರವು ಮತ್ತು ತರಬೇತಿ ನೀಡುವ ವ್ಯವಸ್ಥೆಯನ್ನು ಸಂಪೂರ್ಣವಾಗಿ ಧ್ವಂಸಗೊಳಿಸಬೇಕು ಎಂದು ಆಗ್ರಹಿಸಿದರು. ಇದೇ ವೇಳೆ ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಅವರು ಸಿಂಧೂ ನದಿ ನೀರು ಒಪ್ಪಂದವನ್ನು ಪ್ರಸ್ತಾಪಿಸಿ, ನೀರನ್ನು ಅಸ್ತ್ರವನ್ನಾಗಿ ಬಳಸಬಾರದು ಎಂದು ಮನವಿ ಮಾಡಿದರು.

ಕಳೆದ ವರ್ಷ ಪಹಲ್ಗಾಮ್ ದಾಳಿ ಮತ್ತು ತದನಂತರದ ಉದ್ವಿಗ್ನತೆಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವಿನ ರಾಜತಾಂತ್ರಿಕ ಸಂಬಂಧಗಳು ತೀರಾ ಕೆಳಮಟ್ಟಕ್ಕೆ ಕುಸಿದಿವೆ. ಗಡಿಯಾಚೆಗಿನ ಭಯೋತ್ಪಾದನೆಯನ್ನು ಪಾಕಿಸ್ತಾನ ತಡೆಯದ ಹೊರತು ಸಿಂಧೂ ನದಿ ನೀರು ಒಪ್ಪಂದವನ್ನು ರದ್ದುಗೊಳಿಸುವುದಾಗಿ ಭಾರತ ಈಗಾಗಲೇ ಸ್ಪಷ್ಟಪಡಿಸಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
Live: ಬಿಜೆಪಿ ಪಾದಯಾತ್ರೆಗೆ ಚಾಲನೆ ನೇರಪ್ರಸಾರ
Live: ಬಿಜೆಪಿ ಪಾದಯಾತ್ರೆಗೆ ಚಾಲನೆ ನೇರಪ್ರಸಾರ
ನಾಗೇಂದ್ರ ಆಯ್ತು, ಇನ್ನೊಂದು ವಿಕೆಟ್ ಪತನವಾಗುತ್ತೆ: ಆರ್ ಅಶೋಕ್
ನಾಗೇಂದ್ರ ಆಯ್ತು, ಇನ್ನೊಂದು ವಿಕೆಟ್ ಪತನವಾಗುತ್ತೆ: ಆರ್ ಅಶೋಕ್