ಪಾಕಿಸ್ತಾನದಲ್ಲಿ ಕೊವಿಡ್​ 2ನೇ ಅಲೆಗೆ ಒಂದೇ ದಿನ 111 ಸಾವು.. ಸದ್ಯ ಪಾಕ್​ ಪರಿಸ್ಥಿತಿ ಹೇಗಿದೆ?

ಪಾಕಿಸ್ತಾನದಲ್ಲಿ ಕೊವಿಡ್​ 2ನೇ ಅಲೆ ನವೆಂಬರ್​ನಲ್ಲಿ ಆರಂಭವಾಗಿದೆ. ಕಳೆದ 24 ಗಂಟೆಯಲ್ಲಿ 111 ಜನ ಕೊರೊನಾ ಸೋಂಕಿಗೆ ಬಲಿಯಾಗಿದ್ದು, 2ನೇ ಅಲೆ ಆರಂಭವಾದ ಮೇಲೆ ಒಂದೇ ದಿನದಲ್ಲಿ ದಾಖಲಾದ ಗರಿಷ್ಠ ಸಾವಿನ ಸಂಖ್ಯೆ ಇದಾಗಿದೆ ಎಂದು ಪಾಕ್​ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ನವೆಂಬರ್​ನಲ್ಲಿ ಕೊವಿಡ್​ 2ನೇ ಅಲೆ ಆರಂಭವಾದ ನಂತರ ಡಿಸೆಂಬರ್​ 15ರಂದು ಒಂದೇ ದಿನ 105 ಜನ ಸೋಂಕಿತರು ಮೃತಪಟ್ಟಿದ್ದು ಗರಿಷ್ಠ ಸಾವಿನ ಪ್ರಮಾಣವಾಗಿತ್ತು. ಆದರೆ, ಈಗ 111 ಜನ ಸಾವಿಗೀಡಾಗುವ ಮೂಲಕ ಕೊರೊನಾ […]

ಪಾಕಿಸ್ತಾನದಲ್ಲಿ ಕೊವಿಡ್​ 2ನೇ ಅಲೆಗೆ ಒಂದೇ ದಿನ 111 ಸಾವು.. ಸದ್ಯ ಪಾಕ್​ ಪರಿಸ್ಥಿತಿ ಹೇಗಿದೆ?
ಪ್ರಾತಿನಿಧಿಕ ಚಿತ್ರ
Follow us
Skanda
| Updated By: ಸಾಧು ಶ್ರೀನಾಥ್​

Updated on: Dec 24, 2020 | 3:23 PM

ಪಾಕಿಸ್ತಾನದಲ್ಲಿ ಕೊವಿಡ್​ 2ನೇ ಅಲೆ ನವೆಂಬರ್​ನಲ್ಲಿ ಆರಂಭವಾಗಿದೆ. ಕಳೆದ 24 ಗಂಟೆಯಲ್ಲಿ 111 ಜನ ಕೊರೊನಾ ಸೋಂಕಿಗೆ ಬಲಿಯಾಗಿದ್ದು, 2ನೇ ಅಲೆ ಆರಂಭವಾದ ಮೇಲೆ ಒಂದೇ ದಿನದಲ್ಲಿ ದಾಖಲಾದ ಗರಿಷ್ಠ ಸಾವಿನ ಸಂಖ್ಯೆ ಇದಾಗಿದೆ ಎಂದು ಪಾಕ್​ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ನವೆಂಬರ್​ನಲ್ಲಿ ಕೊವಿಡ್​ 2ನೇ ಅಲೆ ಆರಂಭವಾದ ನಂತರ ಡಿಸೆಂಬರ್​ 15ರಂದು ಒಂದೇ ದಿನ 105 ಜನ ಸೋಂಕಿತರು ಮೃತಪಟ್ಟಿದ್ದು ಗರಿಷ್ಠ ಸಾವಿನ ಪ್ರಮಾಣವಾಗಿತ್ತು. ಆದರೆ, ಈಗ 111 ಜನ ಸಾವಿಗೀಡಾಗುವ ಮೂಲಕ ಕೊರೊನಾ ಅಟ್ಟಹಾಸ ಮುಂದುವರೆಯುತ್ತಿದೆ ಎಂದು ತಿಳಿಸಿದ್ದಾರೆ.

ಕೊರೊನಾ ಮೊದಲ ಅಲೆಗೆ ಜೂನ್​ 20ರಂದು 24 ಗಂಟೆ ಅವಧಿಯಲ್ಲಿ 153 ಜನ ಮೃತಪಟ್ಟಿದ್ದರು. ಇದು ಪಾಕಿಸ್ತಾನದಲ್ಲಿ ಇದುವರೆಗೆ ಕೊರೊನಾ ಸೋಂಕಿಗೆ ಒಂದು ದಿನದಲ್ಲಿ ಮೃತಪಟ್ಟವರ ಗರಿಷ್ಠ ಸಂಖ್ಯೆಯಾಗಿದೆ. ಸದ್ಯ ಪಾಕಿಸ್ತಾನದ ಕೊರೊನಾ ಸೋಂಕಿತರ ಸಂಖ್ಯೆ 4,65,070 ಕ್ಕೆ ತಲುಪಿದ್ದು ಆ ಪೈಕಿ 4,17,134 ಜನ ಗುಣಮುಖರಾಗಿದ್ದಾರೆ.

ಪಾಕಿಸ್ತಾನದಲ್ಲಿ ಪ್ರಸ್ತುತ 38,268 ಸಕ್ರಿಯ ಪ್ರಕರಣಗಳಿದ್ದು, 2,361 ಜನ ಗಂಭೀರ ಪರಿಸ್ಥಿತಿಯಲ್ಲಿದ್ದಾರೆ. ಆರಂಭದಿಂದ ಇಲ್ಲಿಯವರೆಗೆ ಒಟ್ಟು 9,668 ಜನ ಕೊರೊನಾ ಸೋಂಕಿತರು ಸಾವಿಗೀಡಾಗಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಪಾಕಿಸ್ತಾನದ ಡ್ರೋನ್​ ರವಾನಿಸಿದ್ದ 11 ಗ್ರೆನೇಡ್​ ಪಂಜಾಬ್​ನಲ್ಲಿ ಪತ್ತೆ

‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ