ಉಗ್ರ ಹಫೀಜ್ ಸಯೀದ್ ಗಡಿಪಾರಿಗೆ ಭಾರತ ಮನವಿ ಮಾಡಿದೆ ಆದರೆ… ಪಾಕಿಸ್ತಾನ ಹೇಳಿದ್ದೇನು?

ಮನಿ ಲಾಂಡರಿಂಗ್ ಪ್ರಕರಣದಲ್ಲಿ ಸಯೀದ್​ನನ್ನು ಹಸ್ತಾಂತರಿಸುವಂತೆ ಭಾರತೀಯ ಅಧಿಕಾರಿಗಳಿಂದ ಮನವಿ ಸ್ವೀಕರಿಸಲಾಗಿದೆ ಎಂದು ಪಾಕಿಸ್ತಾನದ ವಿದೇಶಾಂಗ ಸಚಿವಾಲಯದ ವಕ್ತಾರರಾದ ಮುಮ್ತಾಜ್ ಜಹ್ರಾ ಬಲೋಚ್ ಹೇಳಿದ್ದಾರೆ.

ಉಗ್ರ ಹಫೀಜ್ ಸಯೀದ್ ಗಡಿಪಾರಿಗೆ ಭಾರತ ಮನವಿ ಮಾಡಿದೆ ಆದರೆ... ಪಾಕಿಸ್ತಾನ ಹೇಳಿದ್ದೇನು?
ಉಗ್ರ ಹಫೀಜ್ ಸಯೀದ್ ಗಡಿಪಾರಿಗೆ ಭಾರತ ಮನವಿ ಮಾಡಿದೆ ಆದರೆ... ಪಾಕಿಸ್ತಾನ ಹೇಳಿದ್ದೇನು?
Follow us
TV9 Web
| Updated By: Ganapathi Sharma

Updated on: Dec 30, 2023 | 10:16 AM

ನವದೆಹಲಿ, ಡಿಸೆಂಬರ್ 30: ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಸಂಸ್ಥಾಪಕ ಮತ್ತು 2008 ರ ಮುಂಬೈ ಭಯೋತ್ಪಾದನಾ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್‌ನನ್ನು (Hafiz Saeed) ಹಸ್ತಾಂತರಿಸುವಂತೆ ಭಾರತ ಮನವಿ ಮಾಡಿದೆ ಎಂದು ಪಾಕಿಸ್ತಾನ ಶುಕ್ರವಾರ ದೃಢಪಡಿಸಿದೆ. ವಿಶ್ವಸಂಸ್ಥೆಯ ನಿಷೇಧಿತ ಭಯೋತ್ಪಾದಕರ ಪಟ್ಟಿಯಲ್ಲಿರುವ ಸಯೀದ್ ಹಲವಾರು ಭಯೋತ್ಪಾದನೆ ಕೃತ್ಯಗಳಲ್ಲಿ ಶಾಮೀಲಾಗಿದ್ದಕ್ಕಾಗಿ ಭಾರತೀಯ ತನಿಖಾ ಸಂಸ್ಥೆಗಳಿಗೆ ಬೇಕಾಗಿದ್ದಾನೆ.

ಪಾಕಿಸ್ತಾನ ಮೂಲದ ಸಯೀದ್‌ನನ್ನು ಹಸ್ತಾಂತರಿಸುವಂತೆ ಕೆಲವು ದಾಖಲೆಗಳೊಂದಿಗೆ ಇತ್ತೀಚೆಗೆ ಇಸ್ಲಾಮಾಬಾದ್‌ಗೆ ಮನವಿ ಮಾಡಲಾಗಿತ್ತು ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಶುಕ್ರವಾರ ತಿಳಿಸಿದ್ದಾರೆ.

ಮನಿ ಲಾಂಡರಿಂಗ್ ಪ್ರಕರಣದಲ್ಲಿ ಸಯೀದ್​ನನ್ನು ಹಸ್ತಾಂತರಿಸುವಂತೆ ಭಾರತೀಯ ಅಧಿಕಾರಿಗಳಿಂದ ಮನವಿ ಸ್ವೀಕರಿಸಲಾಗಿದೆ ಎಂದು ಪಾಕಿಸ್ತಾನದ ವಿದೇಶಾಂಗ ಸಚಿವಾಲಯದ ವಕ್ತಾರರಾದ ಮುಮ್ತಾಜ್ ಜಹ್ರಾ ಬಲೋಚ್ ಹೇಳಿದ್ದಾರೆ.

ಆದಾಗ್ಯೂ, ಎರಡೂ ದೇಶಗಳ ನಡುವೆ ಯಾವುದೇ ಹಸ್ತಾಂತರ ಒಪ್ಪಂದ ಏರ್ಪಟ್ಟಿಲ್ಲ ಎಂದೂ ಅವರು ತಿಳಿಸಿದ್ದಾರೆ. ಪಾಕಿಸ್ತಾನ ಮತ್ತು ಭಾರತದ ನಡುವೆ ಯಾವುದೇ ದ್ವಿಪಕ್ಷೀಯ ಹಸ್ತಾಂತರ ಒಪ್ಪಂದ ಅಸ್ತಿತ್ವದಲ್ಲಿಲ್ಲ ಎಂಬುದನ್ನು ಗಮನಿಸಬೇಕಿದೆ ಎಂದು ಅವರು ಹೇಳಿದ್ದಾರೆ.

ಭಾರತ ಮತ್ತು ಪಾಕಿಸ್ತಾನದ ನಡುವೆ ಯಾವುದೇ ಹಸ್ತಾಂತರ ಒಪ್ಪಂದವಿಲ್ಲದಿದ್ದರೂ ಹಸ್ತಾಂತರ ಸಾಧ್ಯ ಎಂದು ಕೆಲವು ಮಂದಿ ಕಾನೂನು ತಜ್ಞರ ಹೇಳಿಕೆಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ‘ಪಿಟಿಐ’ ವರದಿ ಮಾಡಿದೆ

ಹಫೀಜ್ ಸಯೀದ್ ಮತ್ತು ಆತನ ನಿಕಟವರ್ತಿಗಳ ವಿರುದ್ಧ 23 ಎಫ್‌ಐಆರ್‌ಗಳನ್ನು ದಾಖಲಿಸಿದ ನಂತರ ಪಾಕಿಸ್ತಾನಿ ಭಯೋತ್ಪಾದನಾ ನಿಗ್ರಹ ದಳ (CTD) 2019 ರ ಜುಲೈಯಲ್ಲಿ ಆತನನ್ನು ಬಂಧಿಸಿತ್ತು. ಭಯೋತ್ಪಾದನೆಗೆ ಹಣಕಾಸು ನೆರವು ನೀಡಿದ ಎರಡು ಪ್ರಕರಣಗಳಲ್ಲಿ ಪಾಕಿಸ್ತಾನದ ಭಯೋತ್ಪಾದನಾ-ವಿರೋಧಿ ನ್ಯಾಯಾಲಯವು ಆತನಿಗೆ 2022 ರ ಏಪ್ರಿಲ್​​​ನಲ್ಲಿ 33 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತ್ತು.

ಇದನ್ನೂ ಓದಿ: ಸುಟ್ಟ ಮುಖ, ಬೆತ್ತಲೆಯಾದ ದೇಹಗಳು ಪತ್ತೆ; ಹಮಾಸ್ ದಾಳಿ ವೇಳೆ ಲೈಂಗಿಕ ದೌರ್ಜನ್ಯದ ಭೀಕರತೆ ಬಿಚ್ಚಿಟ್ಟ ವರದಿ

2008 ರ ಮುಂಬೈ ಭಯೋತ್ಪಾದನಾ ದಾಳಿಯು ಆರು ಅಮೆರಿಕನ್ನರು ಸೇರಿದಂತೆ 166 ಜನರನ್ನು ಬಲಿ ತೆಗೆದುಕೊಂಡಿತ್ತು. ಘಟನೆಯಲ್ಲಿ ಹಲವಾರು ಮಂದಿ ಗಾಯಗೊಂಡಿದ್ದರು.

ವಿದೇಶದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?