AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನದಲ್ಲಿ ರೈಲು ದುರಂತ: ರೆಹಮಾನ್ ಬಾಬಾ ಎಕ್ಸ್‌ಪ್ರೆಸ್‌ನ ಎಲ್ಲಾ 14 ಬೋಗಿಗಳು ಹಳಿತಪ್ಪಿ ಐವರು ಸಾವು, ನೂರಾರು ಜನರಿಗೆ ಗಾಯ

ಪಾಕಿಸ್ತಾನದ ಮುಲ್ತಾನ್ ಸಮೀಪ ರೆಹಮಾನ್ ಬಾಬಾ ಎಕ್ಸ್‌ಪ್ರೆಸ್ ರೈಲು ಹಳಿತಪ್ಪಿದ ಭೀಕರ ದುರಂತದಲ್ಲಿ ಕನಿಷ್ಠ ಐವರು ಮೃತಪಟ್ಟು, ನೂರಾರು ಜನರು ಗಾಯಗೊಂಡಿದ್ದಾರೆ. 14 ಬೋಗಿಗಳು ಹಳಿತಪ್ಪಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಹಳೆಯ ಮೂಲಸೌಕರ್ಯ ಮತ್ತು ಕಳಪೆ ನಿರ್ವಹಣೆಯು ಇಂತಹ ಅಪಘಾತಗಳಿಗೆ ಕಾರಣವೆಂದು ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆಗೆ ಆದೇಶಿಸಲಾಗಿದೆ.

ಪಾಕಿಸ್ತಾನದಲ್ಲಿ  ರೈಲು ದುರಂತ: ರೆಹಮಾನ್ ಬಾಬಾ ಎಕ್ಸ್‌ಪ್ರೆಸ್‌ನ ಎಲ್ಲಾ 14 ಬೋಗಿಗಳು ಹಳಿತಪ್ಪಿ ಐವರು ಸಾವು, ನೂರಾರು ಜನರಿಗೆ ಗಾಯ
ಪಾಕಿಸ್ತಾನ
ನಯನಾ ರಾಜೀವ್
|

Updated on: Oct 13, 2026 | 1:45 PM

Share

ಕರಾಚಿ, ಅಕ್ಟೋಬರ್ 13: ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಮುಲ್ತಾನ್ ಸಮೀಪ ಮಂಗಳವಾರ ಮುಂಜಾನೆ ಭೀಕರ ರೈಲು ದುರಂತ ಸಂಭವಿಸಿದೆ. ಕರಾಚಿಯಿಂದ ಪೇಶಾವರಕ್ಕೆ ತೆರಳುತ್ತಿದ್ದ ‘ರೆಹಮಾನ್ ಬಾಬಾ ಎಕ್ಸ್‌ಪ್ರೆಸ್’ ಪ್ಯಾಸೆಂಜರ್ ರೈಲಿನ ಎಲ್ಲಾ 14 ಬೋಗಿಗಳು ಶೇರ್ ಶಾ ಸೇತುವೆಯ ಬಳಿ ಹಳಿತಪ್ಪಿ ಬಿದ್ದ ಪರಿಣಾಮ ಕನಿಷ್ಠ ನಾಲ್ವರು ಪ್ರಯಾಣಿಕರು ಮೃತಪಟ್ಟಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಳಗ್ಗೆ 5:15 ರ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ರಕ್ಷಣಾ ತಂಡಗಳು ಗಾಯಾಳುಗಳನ್ನು ಮುಲ್ತಾನ್‌ನ ನಿಶ್ತಾರ್ ಆಸ್ಪತ್ರೆಗೆ ದಾಖಲಿಸಿವೆ.

ಸ್ಥಳೀಯ ಪತ್ರಿಕೆ ‘ಡಾನ್’ ಜತೆ ಮಾತನಾಡಿದ ಲೋಕೋ ಪೈಲಟ್ ರಿಜ್ವಾನ್ ಅಬ್ಬಾಸ್ ದುರಂತದ ಕ್ಷಣವನ್ನು ವಿವರಿಸಿದ್ದಾರೆ. ಸಿಗ್ನಲ್ ಗ್ರೀನ್ ಇತ್ತು ಮತ್ತು ಸ್ಪಷ್ಟವಾಗಿತ್ತು. ರೈಲು ಗಂಟೆಗೆ 100 ಕಿಲೋಮೀಟರ್ ವೇಗದಲ್ಲಿ ಸಾಗುತ್ತಿತ್ತು. ಶೇರ್ ಶಾ ನಿಲ್ದಾಣದ ಪ್ರದೇಶವನ್ನು ದಾಟುತ್ತಿದ್ದಂತೆ ರೈಲಿನಲ್ಲಿ ಇದ್ದಕ್ಕಿದ್ದಂತೆ ದೊಡ್ಡ ಆಘಾತ ಮತ್ತು ತಳ್ಳುವಿಕೆಯ ಅನುಭವವಾಯಿತು. ನಾನು ತಕ್ಷಣ ತುರ್ತು ಬ್ರೇಕ್ ಹಾಕಿ ರೈಲನ್ನು ನಿಲ್ಲಿಸಿದೆ. ಎಂಜಿನ್‌ನಿಂದ ಕೆಳಗಿಳಿದು ನೋಡಿದಾಗ ಹಿಂದಿನ ಎಲ್ಲಾ ಬೋಗಿಗಳು ಹಳಿ ಬಿಟ್ಟು ಬದಿಗೆ ಉರುಳಿ ಬಿದ್ದಿದ್ದವು ಎಂದು ಚಾಲಕ ತಿಳಿಸಿದ್ದಾರೆ.

14 ಬೋಗಿಗಳಿಂದ ರಕ್ಷಣೆ: ಸ್ಥಳಕ್ಕೆ ದೌಡಾಯಿಸಿದ ರಕ್ಷಣಾ ಸಿಬ್ಬಂದಿ ಮತ್ತು ಅರೆವೈದ್ಯಕೀಯ ತಂಡಗಳು ಹಳಿತಪ್ಪಿದ ಬೋಗಿಗಳಿಂದ ಪ್ರಯಾಣಿಕರನ್ನು ಹೊರತೆಗೆದಿದ್ದಾರೆ. 13 ಬೋಗಿಗಳನ್ನು ಸಂಪೂರ್ಣ ತೆರವುಗೊಳಿಸಲಾಗಿದ್ದು, ಕೊನೆಯ ಬೋಗಿಯ ತೆರವು ಕಾರ್ಯ ಮುಂದುವರೆದಿದೆ.

ಪ್ರಧಾನಿ, ಅಧ್ಯಕ್ಷರ ಸಂತಾಪ: ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಮತ್ತು ಅಧ್ಯಕ್ಷ ಆಸಿಫ್ ಅಲಿ ಜರ್ದಾರಿ ಘಟನೆಗೆ ತೀವ್ರ ಸಂತಾಪ ಸೂಚಿಸಿದ್ದು, ಗಾಯಾಳುಗಳಿಗೆ ಅತ್ಯುತ್ತಮ ಚಿಕಿತ್ಸೆ ನೀಡುವಂತೆ ಮತ್ತು ರಕ್ಷಣಾ ಕಾರ್ಯವನ್ನು ಚುರುಕುಗೊಳಿಸುವಂತೆ ಆದೇಶಿಸಿದ್ದಾರೆ.

ಮತ್ತಷ್ಟು ಓದಿ: ಭಯೋತ್ಪಾದನೆಗೆ ಶೂನ್ಯ ಸಹಿಷ್ಣುತೆ: ಪಹಲ್ಗಾಮ್ ದಾಳಿ ಪ್ರಸ್ತಾಪಿಸಿ ಜಾಗತಿಕ ವೇದಿಕೆಯಲ್ಲಿ ಪಾಕ್ ವಿರುದ್ಧ ಭಾರತ ನೇರ ವಾಗ್ದಾಳಿ

ಪರ್ಯಾಯ ಸಾರಿಗೆ ವ್ಯವಸ್ಥೆ: ಸುಮಾರು 500ಕ್ಕೂ ಹೆಚ್ಚು ಪ್ರಯಾಣಿಕರಿಗೆ ಶೇರ್ ಶಾ ನಿಲ್ದಾಣದಿಂದ ಪರ್ಯಾಯ ವಿಶೇಷ ರೈಲಿನ ವ್ಯವಸ್ಥೆ ಮಾಡಲಾಗಿದೆ. ರಸ್ತೆ ಮೂಲಕ ತೆರಳುವವರಿಗೆ ವಿಶೇಷ ಬಸ್ಸುಗಳ ಸೌಲಭ್ಯ ಹಾಗೂ ಟಿಕೆಟ್ ಹಣ ಮರುಪಾವತಿ (Refund) ಕೌಂಟರ್‌ಗಳನ್ನು ತೆರೆಯಲಾಗಿದೆ.ಅಪಘಾತಕ್ಕೂ ಮುನ್ನ ರೋಹ್ರಿ ನಿಲ್ದಾಣದ ಬಳಿ 9ನೇ ನಂಬರ್ ಬೋಗಿಯ ನಟ್ ಮತ್ತು ಬೋಲ್ಟ್‌ಗಳನ್ನು ರೈಲ್ವೆ ಕಾರ್ಮಿಕರು ತುರ್ತಾಗಿ ರಿಪೇರಿ ಮಾಡಿದ್ದರು ಎಂದು ಪ್ರಯಾಣಿಕರೊಬ್ಬರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಆದರೆ ಈ ದುರಸ್ತಿಗೂ ಹಳಿತಪ್ಪಿದ್ದಕ್ಕೂ ಸಂಬಂಧವಿದೆಯೇ ಎಂಬುದು ಅಧಿಕೃತವಾಗಿ ದೃಢಪಟ್ಟಿಲ್ಲ.

ಉನ್ನತ ಮಟ್ಟದ ತನಿಖೆ: ರೈಲ್ವೆ ಸಚಿವ ಹನೀಫ್ ಅಬ್ಬಾಸಿ ಪ್ರತಿಕ್ರಿಯಿಸಿ, ಘಟನೆಯ ನಿಖರ ಕಾರಣ ಪತ್ತೆಹಚ್ಚಲು ಫೆಡರಲ್ ಸರ್ಕಾರಿ ರೈಲ್ವೆ ಇನ್ಸ್‌ಪೆಕ್ಟರ್ ನೇತೃತ್ವದಲ್ಲಿ ತನಿಖೆಗೆ ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ. ಪಾಕಿಸ್ತಾನದಲ್ಲಿ ಬ್ರಿಟಿಷರ ಕಾಲದ ಹಳೆಯ ಟ್ರ್ಯಾಕ್‌ಗಳು, ಸಿಗ್ನಲಿಂಗ್ ವ್ಯವಸ್ಥೆಯ ಕೊರತೆ ಮತ್ತು ಕಳಪೆ ನಿರ್ವಹಣೆಯಿಂದಾಗಿ ರೈಲು ಅಪಘಾತಗಳು ನಿರಂತರವಾಗಿ ಮರುಕಳಿಸುತ್ತಿವೆ.

ಅಪಘಾತ ನಡೆದ ಮುಖ್ಯ ಲೈನ್-1 (ML-1) ಮಾರ್ಗವು ಪಾಕಿಸ್ತಾನದ ಅತ್ಯಂತ ಜನನಿಬಿಡ ರೈಲು ಕಾರಿಡಾರ್ ಆಗಿದ್ದು, ಈ ಮಾರ್ಗದ ನವೀಕರಣಕ್ಕೆ ಸಿಪಿಇಸಿ ಅಡಿಯಲ್ಲಿ ಚೀನಾದ ಅನುದಾನ ನಿರೀಕ್ಷಿಸಲಾಗಿದ್ದರೂ ಕಾಮಗಾರಿ ವಿಳಂಬವಾಗುತ್ತಿರುವುದು ಸುರಕ್ಷತಾ ಲೋಪಗಳಿಗೆ ಕಾರಣವಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ಹಿರಿಯ IPS ಅಧಿಕಾರಿ ಎಸ್.ರವಿ ರಾಜೀನಾಮೆ: ಕಾರಣ ಇಲ್ಲಿದೆ
ಹಿರಿಯ IPS ಅಧಿಕಾರಿ ಎಸ್.ರವಿ ರಾಜೀನಾಮೆ: ಕಾರಣ ಇಲ್ಲಿದೆ
ಗಜೇಂದ್ರಗಡ: ಹೈಟೆಕ್ ಅಗ್ನಿಶಾಮಕ ಠಾಣೆ ಇದ್ದರೂ ಸಿಬ್ಬಂದಿ ಇಲ್ಲದೆ ವ್ಯರ್ಥ!
ಗಜೇಂದ್ರಗಡ: ಹೈಟೆಕ್ ಅಗ್ನಿಶಾಮಕ ಠಾಣೆ ಇದ್ದರೂ ಸಿಬ್ಬಂದಿ ಇಲ್ಲದೆ ವ್ಯರ್ಥ!
ಭಾರತ ಪ್ರಜಾತಂತ್ರದ ತಾಯಿ: ಬ್ಲೂಮ್​ಬರ್ಗ್ ಫೋರಂನಲ್ಲಿ ನರೇಂದ್ರ ಮೋದಿ
ಭಾರತ ಪ್ರಜಾತಂತ್ರದ ತಾಯಿ: ಬ್ಲೂಮ್​ಬರ್ಗ್ ಫೋರಂನಲ್ಲಿ ನರೇಂದ್ರ ಮೋದಿ
ಇಂಡಿಯಾ- ವೆಸ್ಟ್ ಇಂಡೀಸ್ ಪಂದ್ಯಕ್ಕೆ  ಡಿಸಿಎಂಗೆ ವೆಂಕಟೇಶ್ ಪ್ರಸಾದ್ ಆಹ್ವಾನ
ಇಂಡಿಯಾ- ವೆಸ್ಟ್ ಇಂಡೀಸ್ ಪಂದ್ಯಕ್ಕೆ  ಡಿಸಿಎಂಗೆ ವೆಂಕಟೇಶ್ ಪ್ರಸಾದ್ ಆಹ್ವಾನ
ಸರ್ಕಾರ ನಿಮ್ಮೊಂದಿಗಿದೆ ಪ್ರತಿಭಟನೆ ಕೈಬಿಡಿ ಎಂದು ರೈತರಿಗೆ ಜೋಶಿ ಮನವಿ!
ಸರ್ಕಾರ ನಿಮ್ಮೊಂದಿಗಿದೆ ಪ್ರತಿಭಟನೆ ಕೈಬಿಡಿ ಎಂದು ರೈತರಿಗೆ ಜೋಶಿ ಮನವಿ!
ಹೈಕಮಾಂಡ್ ತಲುಪಿದ ಸ್ಟಿಂಗ್ ವಿಚಾರ: ಕ್ಯಾಬಿನೆಟ್ ಪ್ರಸ್ತಾಪಕ್ಕೆ ಗರಂ
ಹೈಕಮಾಂಡ್ ತಲುಪಿದ ಸ್ಟಿಂಗ್ ವಿಚಾರ: ಕ್ಯಾಬಿನೆಟ್ ಪ್ರಸ್ತಾಪಕ್ಕೆ ಗರಂ
ಹುನಗುಂದದಲ್ಲಿ ರೈತರ ಪ್ರತಿಭಟನೆ: ರಾಯಚೂರು-ಸೊಲ್ಲಾಪುರ ಹೆದ್ದಾರಿ ಬಂದ್
ಹುನಗುಂದದಲ್ಲಿ ರೈತರ ಪ್ರತಿಭಟನೆ: ರಾಯಚೂರು-ಸೊಲ್ಲಾಪುರ ಹೆದ್ದಾರಿ ಬಂದ್
ರಾಹುಲ್ ಗಾಂಧಿ ನಿವಾಸದಲ್ಲಿ ವಿಪಕ್ಷ ನಾಯಕರ ಹೈ-ಟೀ
ರಾಹುಲ್ ಗಾಂಧಿ ನಿವಾಸದಲ್ಲಿ ವಿಪಕ್ಷ ನಾಯಕರ ಹೈ-ಟೀ
ಕ್ಯಾಪ್ಟನ್ ಟೀಕಿಸಿದ ತಂಡವನ್ನೇ ಆಯ್ಕೆ ಮಾಡಿಕೊಂಡ ಕುಮಾರಿ
ಕ್ಯಾಪ್ಟನ್ ಟೀಕಿಸಿದ ತಂಡವನ್ನೇ ಆಯ್ಕೆ ಮಾಡಿಕೊಂಡ ಕುಮಾರಿ
ಹೈದರಾಬಾದ್‌ನಲ್ಲಿ ಮೈ ಹೋಮ್ ವ್ಯೋಮ ಗ್ರ್ಯಾಂಡ್ ಲಾಂಚ್
ಹೈದರಾಬಾದ್‌ನಲ್ಲಿ ಮೈ ಹೋಮ್ ವ್ಯೋಮ ಗ್ರ್ಯಾಂಡ್ ಲಾಂಚ್