ಪಾಕಿಸ್ತಾನ: ಕರಾಚಿ ಏರ್​ಪೋರ್ಟ್​ ಹೊರಗೆ ಸ್ಫೋಟ, ಇಬ್ಬರು ಚೀನಾ ನಾಗರಿಕರು ಸಾವು

ಪಾಕಿಸ್ತಾನದ ಕರಾಚಿ ವಿಮಾನ ನಿಲ್ದಾಣದ ಹೊರಗೆ ದೊಡ್ಡ ಸ್ಫೋಟ ಸಂಭವಿಸಿದೆ. ಇದರಲ್ಲಿ ಇಬ್ಬರು ಚೀನಾ ಪ್ರಜೆಗಳು ಸಾವನ್ನಪ್ಪಿದ್ದಾರೆ. 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಸಾವಿನ ಸಂಖ್ಯೆ ಮತ್ತು ಗಾಯಗೊಂಡವರ ಸಂಖ್ಯೆ ಇನ್ನೂ ಹೆಚ್ಚಾಗಬಹುದು.

ಪಾಕಿಸ್ತಾನ: ಕರಾಚಿ ಏರ್​ಪೋರ್ಟ್​ ಹೊರಗೆ ಸ್ಫೋಟ, ಇಬ್ಬರು ಚೀನಾ ನಾಗರಿಕರು ಸಾವು
ಸ್ಫೋಟImage Credit source: Moneycontrol.com
Follow us
ನಯನಾ ರಾಜೀವ್
|

Updated on: Oct 07, 2024 | 8:36 AM

ಪಾಕಿಸ್ತಾನದ ಕರಾಚಿಯ ಜಿನ್ನಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ತಡರಾತ್ರಿ ಭಾರೀ ಸ್ಫೋಟ ಸಂಭವಿಸಿದೆ. ಬಿಬಿಸಿ ವರದಿಯ ಪ್ರಕಾರ, ಸ್ಫೋಟದಲ್ಲಿ ಇಬ್ಬರು ಚೀನಾದ ನಾಗರಿಕರು ಸಾವನ್ನಪ್ಪಿದ್ದಾರೆ. ಸಿಂಧ್ ಪ್ರಾಂತ್ಯದಲ್ಲಿ ಪವರ್ ಪ್ರಾಜೆಕ್ಟ್‌ನಲ್ಲಿ ಕೆಲಸ ಮಾಡುತ್ತಿದ್ದ ಚೀನಾದ ಇಂಜಿನಿಯರ್‌ಗಳ ಬೆಂಗಾವಲು ವಾಹನವನ್ನು ಗುರಿಯಾಗಿಸಿಕೊಂಡು ಸ್ಫೋಟ ನಡೆಸಲಾಗಿದೆ ಎಂದು ರಾಯಭಾರ ಕಚೇರಿ ತಿಳಿಸಿದೆ. ಪ್ರತ್ಯೇಕತಾವಾದಿ ಬಲೂಚಿಸ್ತಾನ್ ರಾಷ್ಟ್ರೀಯ ಸೇನೆ ದಾಳಿಯ ಹೊಣೆ ಹೊತ್ತುಕೊಂಡಿದೆ.

ಸಿಂಧ್ ಪ್ರಾಂತೀಯ ಗೃಹ ಸಚಿವ ಜಿಯಾ ಉಲ್ ಹಸನ್ ಲಾಂಜಾರ್ ಅವರು ಸ್ಫೋಟಕ್ಕೆ ಸುಧಾರಿತ ಸ್ಫೋಟಕ ಸಾಧನವನ್ನು (ಐಇಡಿ) ಬಳಸಿರುವ ಶಂಕೆ ವ್ಯಕ್ತಪಡಿಸಿದ್ದಾರೆ. ನಗರದ ಹಲವು ಪ್ರದೇಶಗಳಲ್ಲಿ ಸ್ಫೋಟದ ಸದ್ದು ಕೇಳಿಬಂದಿದೆ ಎಂದು ಜಿಯೋ ನ್ಯೂಸ್ ವರದಿ ಮಾಡಿದೆ. ಎಲ್ಲಾ ಗಾಯಾಳುಗಳನ್ನು ಚಿಕಿತ್ಸೆಗಾಗಿ ಜಿನ್ನಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾತ್ರಿ 11 ಗಂಟೆಗೆ ಸ್ಫೋಟ ಸಂಭವಿಸಿದೆ ಭಾನುವಾರ ರಾತ್ರಿ ಸುಮಾರು 11 ಗಂಟೆಗೆ ಸ್ಫೋಟ ಸಂಭವಿಸಿದೆ ಎಂದು ಪಾಕಿಸ್ತಾನದ ಮಾಧ್ಯಮ ಸಂಸ್ಥೆ ಆಜ್ ನ್ಯೂಸ್ ವರದಿ ಮಾಡಿದೆ. ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ದಟ್ಟ ಹೊಗೆ ಆವರಿಸಿತ್ತು. ಅಪಘಾತದ ಸ್ಥಳದಲ್ಲಿ ಭಾರೀ ಸೇನಾಪಡೆ ನಿಯೋಜಿಸಲಾಗಿದೆ.

ಮತ್ತಷ್ಟು ಓದಿ: ಆಂಧ್ರಪ್ರದೇಶ: ಮಲಗಿದ್ದಾಗ ಮಂಚದಡಿ ಬಾಂಬ್ ಸ್ಟೋಟ, ಸರ್ಕಾರಿ ಅಧಿಕಾರಿ ಸಾವು

ವಿದೇಶಿಯರನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆಸಲಾಗಿದೆ ಎಂದು ಆಂತರಿಕ ಸಚಿವಾಲಯದ ಅಧಿಕಾರಿಗಳು ಮಾಧ್ಯಮಗಳಿಗೆ ತಿಳಿಸಿದ್ದಾರೆ. ನಾಗರಿಕ ವಿಮಾನಯಾನ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ರಾಹತ್ ಹುಸೇನ್ ಮಾತನಾಡಿ, ಸ್ಫೋಟದ ಶಬ್ದವು ವಿಮಾನ ನಿಲ್ದಾಣದ ಕಟ್ಟಡವನ್ನು ಅಲುಗಾಡಿಸುವಷ್ಟು ಜೋರಾಗಿತ್ತು ಎಂದು ತಿಳಿಸಿದ್ದಾರೆ.

ತಡರಾತ್ರಿ ವಿಮಾನ ನಿಲ್ದಾಣದ ಬಳಿ ಇದ್ದಕ್ಕಿದ್ದಂತೆ ದೊಡ್ಡ ಸ್ಫೋಟದ ಸದ್ದು ಕೇಳಿಸಿತು. ವಿಮಾನ ನಿಲ್ದಾಣದ ಸಮೀಪದಲ್ಲಿ ಹೊಗೆ ಕಾಣಿಸಿಕೊಂಡಿತ್ತು. ವಿಮಾನ ನಿಲ್ದಾಣದ ಹೊರಗೆ ಟ್ಯಾಂಕರ್ ಸ್ಫೋಟಗೊಂಡಿದೆ. ಹಲವಾರು ಪಾಕಿಸ್ತಾನಿ ಉದ್ಯೋಗಿಗಳು ಸಾವನ್ನಪ್ಪಿದ್ದಾರೆ ಎಂದು ಚೀನಾ ರಾಯಭಾರ ಕಚೇರಿ ತಿಳಿಸಿದೆ. ಒಟ್ಟು ಸಾವಿನ ಸಂಖ್ಯೆ ಸ್ಪಷ್ಟವಾಗಿಲ್ಲ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ