AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಂಧೂ ನದಿ ನೀರಿನ ಹರಿವು ನಿಲ್ಲಿಸಿದರೆ ಪಾಕಿಸ್ತಾನ ಯುದ್ಧಕ್ಕೆ ಸಿದ್ಧ; ಭಾರತಕ್ಕೆ ಬಿಲಾವಲ್ ಭುಟ್ಟೋ ಬೆದರಿಕೆ

'ಭಾರತ ಸಿಂಧೂ ನದಿ ನೀರಿನ ಹರಿವನ್ನು ನಿಲ್ಲಿಸಿದರೆ ಪಾಕಿಸ್ತಾನ ಯುದ್ಧ ಘೋಷಿಸಬೇಕಾಗುತ್ತದೆ' ಎಂದು ಸಿಂಧೂ ಜಲ ಒಪ್ಪಂದದ ಕುರಿತು ಭಾರತಕ್ಕೆ ಬಿಲಾವಲ್ ಭುಟ್ಟೋ ಬೆದರಿಕೆ ಹಾಕಿದ್ದಾರೆ. ಈ ಮೊದಲು ಭಾರತ ಆಪರೇಷನ್ ಸಿಂಧೂರದ ಮೂಲಕ ಪಾಕಿಸ್ತಾನದ ಮೇಲೆ ದಾಳಿ ನಡೆಸಿದ ನಂತರ ಪಾಕಿಸ್ತಾನವೇ ಮುಂದೆ ಬಂದು ಕದನವಿರಾಮದ ಪ್ರಸ್ತಾಪವಿಟ್ಟಿತ್ತು. ಆದರೆ, ಇದೀಗ ಬಿಲಾವಲ್ ಭುಟ್ಟೋ ಮತ್ತೆ ಯುದ್ಧದ ಮಾತುಗಳನ್ನಾಡಿರುವುದು ತೀವ್ರ ಚರ್ಚೆಗೆ ಕಾರಣವಾಗಿದೆ.

ಸಿಂಧೂ ನದಿ ನೀರಿನ ಹರಿವು ನಿಲ್ಲಿಸಿದರೆ ಪಾಕಿಸ್ತಾನ ಯುದ್ಧಕ್ಕೆ ಸಿದ್ಧ; ಭಾರತಕ್ಕೆ ಬಿಲಾವಲ್ ಭುಟ್ಟೋ ಬೆದರಿಕೆ
Bilawal Bhutto
ಸುಷ್ಮಾ ಚಕ್ರೆ
|

Updated on: Jun 23, 2025 | 8:33 PM

Share

ಇಸ್ಲಮಾಬಾದ್, ಜೂನ್ 23: ಪಾಕಿಸ್ತಾನದ ಮಾಜಿ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ-ಜರ್ದಾರಿ ಇಂದು (ಸೋಮವಾರ) ಭಾರತಕ್ಕೆ ಮತ್ತೊಂದು ಬೆದರಿಕೆಯನ್ನು ಹಾಕಿದ್ದಾರೆ. ಭಾರತ ಸಿಂಧೂ ಜಲ ಒಪ್ಪಂದದ (IWT) ಅಡಿಯಲ್ಲಿ ಭಾರತವೇನಾದರೂ ಪಾಕಿಸ್ತಾನಕ್ಕೆ ತನ್ನ ನ್ಯಾಯಯುತವಾದ ನೀರಿನ ಪಾಲನ್ನು ನಿರಾಕರಿಸಿದರೆ ನಮ್ಮ ದೇಶ ಯುದ್ಧಕ್ಕೆ ಸಿದ್ಧವಾಗಬೇಕಾಗುತ್ತದೆ ಎಂದು ಹೇಳಿದ್ದಾರೆ. ಈ ಹಿಂದೆ ಭಾರತದ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಿಂಧೂ ಜಲ ಒಪ್ಪಂದವನ್ನು ಪುನಃಸ್ಥಾಪಿಸುವುದಿಲ್ಲ ಎಂದು ಘೋಷಿಸಿದ್ದರು.

ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ, ಭಾರತ 1960ರ ಒಪ್ಪಂದವನ್ನು ಸ್ಥಗಿತಗೊಳಿಸಿದೆ. ಕಳೆದ ವಾರ ಗೃಹ ಸಚಿವ ಅಮಿತ್ ಶಾ ಐತಿಹಾಸಿಕ ಒಪ್ಪಂದವನ್ನು ಎಂದಿಗೂ ಪುನಃಸ್ಥಾಪಿಸುವುದಿಲ್ಲ ಎಂದು ಘೋಷಿಸಿದ್ದರು. ಪಾಕಿಸ್ತಾನದ ವಿದೇಶಾಂಗ ಸಚಿವಾಲಯವು ಅಮಿತ್ ಶಾ ಅವರ ಅಂತಾರಾಷ್ಟ್ರೀಯ ಒಪ್ಪಂದಗಳ ನಿರ್ಲಕ್ಷ್ಯವನ್ನು ಟೀಕಿಸಿದ ಎರಡು ದಿನಗಳ ನಂತರ ಪಾಕಿಸ್ತಾನ ಪೀಪಲ್ಸ್ ಪಾರ್ಟಿ (ಪಿಪಿಪಿ) ಮುಖ್ಯಸ್ಥ ಬಿಲಾವಲ್ ಭುಟ್ಟೋ ಅವರ ಹೇಳಿಕೆಗಳು ಬಂದಿವೆ.

ಇದನ್ನೂ ಓದಿ: ಮೊನ್ನೆ ಮೊನ್ನೆ ಟ್ರಂಪ್​ಗೆ ಶಾಂತಿ ಪುರಸ್ಕಾರ ಘೋಷಿಸಿ, ಈಗ ಶಾಂತಿ ಕದಡಿದಾಕ್ಷಣ ವರಸೆ ಬದಲಿಸಿದ ಪಾಕಿಸ್ತಾನ

ಇದನ್ನೂ ಓದಿ
Image
ಭಾರತದೊಂದಿಗೆ ಒಪ್ಪಂದ ಮಾಡಿಕೊಳ್ಳಲು ಪಾಕ್ ಸಿದ್ಧ ಎಂದ ಡೊನಾಲ್ಡ್ ಟ್ರಂಪ್
Image
ರಾಹುಲ್ ಗಾಂಧಿ, ರೇವಂತ್ ರೆಡ್ಡಿಯಿಂದ ಸಶಸ್ತ್ರ ಪಡೆಗೆ ಅವಮಾನ; ಕಿಶನ್ ರೆಡ್ಡಿ
Image
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
Image
ಆಪರೇಷನ್ ಸಿಂಧೂರ್ ಇನ್ನೂ ಮುಗಿದಿಲ್ಲ; ಪಾಕಿಸ್ತಾನಕ್ಕೆ ಮೋದಿ ಎಚ್ಚರಿಕೆ

ಇಂದು ಪಾಕಿಸ್ತಾನದ ಸಂಸತ್ತಿನಲ್ಲಿ ಮಾಡಿದ ಭಾಷಣದಲ್ಲಿ ಬಿಲಾವಲ್ ಭುಟ್ಟೋ, ಸಿಂಧೂ ಜಲ ಒಪ್ಪಂದವನ್ನು ಸ್ಥಗಿತಗೊಳಿಸುವ ಭಾರತದ ನಿರ್ಧಾರವನ್ನು ತಿರಸ್ಕರಿಸಿದ್ದು, ಪಾಕಿಸ್ತಾನದ ನೀರಿನ ಪಾಲನ್ನು ಪಡೆಯುವುದಾಗಿ ಬೆದರಿಕೆ ಹಾಕಿದ್ದಾರೆ. “ಭಾರತಕ್ಕೆ ಎರಡು ಆಯ್ಕೆಗಳಿವೆ: ನೀರನ್ನು ನ್ಯಾಯಯುತವಾಗಿ ಹಂಚಿಕೊಳ್ಳಿ ಅಥವಾ ನಾವು 6 ನದಿಗಳಿಂದ ನಮಗೆ ಬೇಕಾದ ನೀರನ್ನು ಪಡೆಯುತ್ತೇವೆ” ಎಂದು ಅವರು ಸಿಂಧೂ ಜಲಾನಯನ ಪ್ರದೇಶದ 6 ನದಿಗಳನ್ನು ಉಲ್ಲೇಖಿಸಿ ಹೇಳಿದ್ದಾರೆ.

ಇದನ್ನೂ ಓದಿ: ಪಾಕಿಸ್ತಾನ ಅತ್ಯಂತ ಬಡತನದಲ್ಲಿದೆ; ವಿಶ್ವ ಬ್ಯಾಂಕ್ ಬಹಿರಂಗಪಡಿಸಿದ ಆಘಾತಕಾರಿ ಮಾಹಿತಿ ಇಲ್ಲಿದೆ

ಹಾಗೇ, ಪಾಕಿಸ್ತಾನ ಪೀಪಲ್ಸ್ ಪಾರ್ಟಿ (ಪಿಪಿಪಿ) ಮುಖ್ಯಸ್ಥ ಬಿಲಾವಲ್ ಭುಟ್ಟೋ, ಭಾರತವೇನಾದರೂ ಸಿಂಧೂ ಜಲ ಒಪ್ಪಂದದ ರದ್ದತಿಯನ್ನು ತೆಗೆದುಹಾಕದಿದ್ದರೆ, “ನಾವು ಮತ್ತೆ ಯುದ್ಧ ಮಾಡಬೇಕಾಗುತ್ತದೆ” ಎಂದು ಬೆದರಿಕೆ ಹಾಕಿದ್ದಾರೆ. ಪಾಕಿಸ್ತಾನದ ಮಾಜಿ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ “ಭಾರತ ಮತ್ತು ಪಾಕಿಸ್ತಾನ ಮಾತನಾಡಲು ನಿರಾಕರಿಸಿದರೆ ಮತ್ತು ಭಯೋತ್ಪಾದನೆಯ ಬಗ್ಗೆ ಯಾವುದೇ ಸಮನ್ವಯವಿಲ್ಲದಿದ್ದರೆ ಎರಡೂ ದೇಶಗಳಲ್ಲಿ ಹಿಂಸಾಚಾರ ತೀವ್ರಗೊಳ್ಳುತ್ತದೆ. ಭಾರತ ರಾಜಕೀಯ ಉದ್ದೇಶಗಳಿಗಾಗಿ ಭಯೋತ್ಪಾದನೆಯನ್ನು ಅಸ್ತ್ರವಾಗಿ ಬಳಸುತ್ತಿದೆ. ಪಾಕಿಸ್ತಾನವು ವಿಶ್ವ ವೇದಿಕೆಯಲ್ಲಿ ಕಾಶ್ಮೀರ ವಿಷಯವನ್ನು ಎತ್ತುವಲ್ಲಿ ಯಶಸ್ವಿಯಾಗಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕಾಶ್ಮೀರದ ಬಗ್ಗೆ ಮಧ್ಯಸ್ಥಿಕೆ ವಹಿಸುವ ಮಾತನಾಡಿದ್ದಾರೆ” ಎಂದು ಹೇಳಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್