ಟ್ರಂಪ್​ ಮೇಲಿನ ಮಾರಣಾಂತಿಕ ದಾಳಿ ಪ್ರಕರಣ, ಪಾಕಿಸ್ತಾನಿ ವ್ಯಕ್ತಿಯ ಬಂಧನ

ಅಮೆರಿಕದಲ್ಲಿ ಮಾಜಿ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಮೇಲೆ ನಡೆದ ದಾಳಿಗೆ ಸಂಬಂಧಿಸಿದಂತೆ ಪಾಕಿಸ್ತಾನಿ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಮಾಜಿ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಹಾಗೂ ಮಾಜಿ ಯುಎಸ್​ ಸರ್ಕಾರಿ ಅಧಿಕಾರಿಗಳನ್ನು ಗುರಿಯಾಗಿಸಿಕೊಂಡು ಕೊಲೆಗೆ ಸಂಚು ರೂಪಿಸಲಾಗಿತ್ತು.

ಟ್ರಂಪ್​ ಮೇಲಿನ ಮಾರಣಾಂತಿಕ ದಾಳಿ ಪ್ರಕರಣ, ಪಾಕಿಸ್ತಾನಿ ವ್ಯಕ್ತಿಯ ಬಂಧನ
ಡೊನಾಲ್ಡ್​ ಟ್ರಂಪ್ Image Credit source: Time.com
Follow us
|

Updated on: Aug 07, 2024 | 9:12 AM

ಇತ್ತೀಚೆಗೆ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಮೇಲೆ ನಡೆದ ಮಾರಣಾಂತಿಕ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದ ಆಸಿಫ್ ಎಂಬ  ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಇರಾನ್​ನೊಂದಿಗೆ ಸಂಬಂಧ ಹೊಂದಿರುವ ಪಾಕಿಸ್ತಾನಿ ವ್ಯಕ್ತಿಯೊಬ್ಬರು ಅಮೆರಿಕದಲ್ಲಿ ಟ್ರಂಪ್​ ಹತ್ಯೆಗೆ ಸಂಚು ರೂಪಿಸಿದ್ದರು ಎನ್ನಲಾಗಿದೆ.

ಮಾಜಿ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಹಾಗೂ ಮಾಜಿ ಯುಎಸ್​ ಸರ್ಕಾರಿ ಅಧಿಕಾರಿಗಳನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಲಾಗಿತ್ತು. ನ್ಯೂಯಾರ್ಕ್​ ಫೆಡರಲ್ ನ್ಯಾಯಾಲಯದಲ್ಲಿ ಆಸಿಫ್ ಮರ್ಚೆಂಟ್ ವಿರುದ್ಧ ಕೊಲೆ ಆರೋಪ ಹೊರಿಸಲಾಗಿತ್ತು. ಕಳೆದ ತಿಂಗಳು ಪೆನ್ಸಿಲ್​ವೇನಿಯಾದಲ್ಲಿ ಟ್ರಂಪ್​ ಅವರಿಗೆ ಹೆಚ್ಚಿನ ಭದ್ರತೆ ನೀಡಲಾಗಿತ್ತು. ಈ ರ್ಯಾಲಿಯಲ್ಲಿ ಟ್ರಂಪ್ ಮೇಲೆ ದಾಳಿ ನಡೆದು ಅವರು ಗಾಯಗೊಂಡಿದ್ದರು. ಗುಂಡಿನ ದಾಳಿಗೂ ಇರಾನ್ ಬೆದರಿಕೆಗೂ ಸಂಬಂಧವಿಲ್ಲ.

ಆಸಿಫ್ ರಜಾ ಮರ್ಚೆಂಟ್ ಎಂದೂ ಕರೆಯಲ್ಪಡುವ ಆಪಾದಿತ ಸಂಚುಕೋರ, ತನಗೆ ಇಬ್ಬರು ಹೆಂಡತಿಯರಿದ್ದು ತಲಾ ಒಬ್ಬರು ಪಾಕಿಸ್ತಾನ ಮತ್ತು ಇರಾನ್‌ನಲ್ಲಿ ಮತ್ತು ಎರಡೂ ದೇಶಗಳಲ್ಲಿ ಮಕ್ಕಳಿದ್ದಾರೆ ಎಂದು ಅಧಿಕಾರಿಗಳಿಗೆ ತಿಳಿಸಿದರು.

ಮತ್ತಷ್ಟು ಓದಿ: ಅಮೆರಿಕ: ರ್‍ಯಾಲಿಯಲ್ಲಿ ಗುಂಡಿನ ದಾಳಿ, ಮಾಜಿ ಅಧ್ಯಕ್ಷ ಟ್ರಂಪ್ ಬಲ ಕಿವಿಗೆ ಗಾಯ

ಜುಲೈ 13 ರಂದು ಪೆನ್ಸಿಲ್ವೇನಿಯಾದ ಬಟ್ಲರ್‌ನಲ್ಲಿ ಟ್ರಂಪ್ ಅವರ ಹತ್ಯೆಯ ಪ್ರಯತ್ನ ವಿಫಲವಾದ ಒಂದು ತಿಂಗಳ ನಂತರ ಈ ವಿಚಾರ ಬಹಿರಂಗಗೊಂಡಿದೆ. ಕಳೆದ ವಾರ, ವರ್ಜೀನಿಯಾದಲ್ಲಿ ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಕಮಲಾ ಹ್ಯಾರಿಸ್ ಅವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿತ್ತು.

ಎಕ್ಸ್​ಪೋಸ್ಟ್​ನಲ್ಲಿ ಕಮಲಾ ಹ್ಯಾರಿಸ್ ಅವರನ್ನು ಸಜೀವವಾಗಿ ದಹಿಸಬೇಕು, ಬೇರೆ ಯಾರೂ ಮಾಡದಿದ್ದಲ್ಲಿ ನಾನು ಅದನ್ನು ವೈಯಕ್ತಿಕವಾಗಿ ಮಾಡುತ್ತೇನೆ , ಅವರು ಯಾತನೆ ಅನುಭವಿಸಿ ಸಾಯಬೇಕು ಎಂದು ಬರೆದಿದ್ದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ