ಪಾಕಿಸ್ತಾನ: ವಿವಾಹ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಮಗಳ ಕಾಲು ಕತ್ತರಿಸಿದ ಅಪ್ಪ

ಸೋಬಿಯಾ ಬಟೂಲ್ ಶಾ ಎಂಬ ಮಹಿಳೆ ಗಂಡನಿಂದ ವಿಚ್ಛೇದನ ಕೋರಿದ್ದಳು. ಆತ ಯಾವತ್ತೂ ಕುಟುಂಬದ ಜವಾಬ್ದಾರಿ ತೆಗೆದುಕೊಂಡಿಲ್ಲ, ಆತ ನನ್ನ ಮೇಲೆ ಹಲ್ಲೆ ನಡೆಸುತ್ತಿದ್ದ, ನಿಂದಿಸುತ್ತಿದ್ದ. ಈ ದೌರ್ಜನ್ಯದಿಂದ ಬೇಸತ್ತು ವಿಚ್ಛೇದನ ಕೋರಿದ್ದಕ್ಕಾಗಿ ನನ್ನ ಕಾಲುಗಳನ್ನು ಕತ್ತರಿಸಲಾಗಿದೆ ಎಂದು ಮಹಿಳೆ ಪೊಲೀಸರಿಗೆ ತಿಳಿಸಿದ್ದಾರೆ.

ಪಾಕಿಸ್ತಾನ: ವಿವಾಹ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಮಗಳ ಕಾಲು ಕತ್ತರಿಸಿದ ಅಪ್ಪ
ಪಾಕಿಸ್ತಾನದ ಪೊಲೀಸ್
Follow us
|

Updated on: Jul 27, 2024 | 8:34 AM

ಲಾಹೋರ್ ಜುಲೈ 27: ಗಂಡ ದೌರ್ಜನ್ಯವೆಸಗುತ್ತಿದ್ದಾನೆ ಹಾಗಾಗಿ ವಿಚ್ಛೇದನ (divorce)ಬೇಕು ಎಂದು ಅರ್ಜಿ ಸಲ್ಲಿಸಿದ ಮಹಿಳೆಯ ಕಾಲುಗಳನ್ನು ಆಕೆಯ ಅಪ್ಪ ಮತ್ತು ಸಂಬಂಧಿಕರು ಸೇರಿ ಕತ್ತರಿಸಿದ ಘಟನೆಯೊಂದು ಪಾಕಿಸ್ತಾನದಲ್ಲಿ (Pakistan) ನಡೆದಿದೆ ಎಂದು ಜಿಯೋ ನ್ಯೂಸ್ ವರದಿ ಮಾಡಿದೆ. ಪಾಕಿಸ್ತಾನದ ಪಿತೃಪ್ರಧಾನ ಸಮಾಜಗಳಲ್ಲಿ, ಮಹಿಳೆಯರ ಅಧೀನತೆಯನ್ನು ಶಾಶ್ವತಗೊಳಿಸಲು ಹಿಂಸೆಯನ್ನು ಸಾಮಾಜಿಕ ಕಾರ್ಯವಿಧಾನವಾಗಿ ಬಳಸಲಾಗಿದೆ ಎಂದು ಹೇಳಲಾಗಿದೆ.

ಸೋಬಿಯಾ ಬಟೂಲ್ ಶಾ ಎಂಬ ಮಹಿಳೆ ಗಂಡನಿಂದ ವಿಚ್ಛೇದನ ಕೋರಿದ್ದಳು. ಆತ ಯಾವತ್ತೂ ಕುಟುಂಬದ ಜವಾಬ್ದಾರಿ ತೆಗೆದುಕೊಂಡಿಲ್ಲ, ಆತ ನನ್ನ ಮೇಲೆ ಹಲ್ಲೆ ನಡೆಸುತ್ತಿದ್ದ, ನಿಂದಿಸುತ್ತಿದ್ದ. ಈ ದೌರ್ಜನ್ಯದಿಂದ ಬೇಸತ್ತು ವಿಚ್ಛೇದನ ಕೋರಿದ್ದಕ್ಕಾಗಿ ನನ್ನ ಕಾಲುಗಳನ್ನು ಕತ್ತರಿಸಲಾಗಿದೆ ಎಂದು ಮಹಿಳೆ ಪೊಲೀಸರಿಗೆ ತಿಳಿಸಿದ್ದಾರೆ.  ಗುಲ್ ಟೌನ್‌ನಲ್ಲಿ ಆ ಕೃತ್ಯ ನಡೆದಿದೆ. ಮಹಿಳೆಗೆ ಇದು ತೀವ್ರವಾದ ದೈಹಿಕ ಮತ್ತು ಮಾನಸಿಕ ಆಘಾತವನ್ನು ಉಂಟು ಮಾಡಿದ್ದು, ಆಕೆ ಮತ್ತೆಂದೂ ನಡೆಯಲು ಸಾಧ್ಯವಾಗದ ಹಾಗೆ ಅಂಗ ವೈಕಲ್ಯವುಂಟಾಗಿದೆ ಎಂದು ವರದಿ ತಿಳಿಸಿದೆ.

ಸೋಬಿಯಾಳ ತಂದೆ ಸೈಯದ್ ಮುಸ್ತಫಾ ಷಾ ಮತ್ತು ಆಕೆಯ ಚಿಕ್ಕಪ್ಪಂದಿರಾದ ಸೈಯದ್ ಕುರ್ಬಾನ್ ಷಾ, ಎಹ್ಸಾನ್ ಶಾ, ಶಾ ನವಾಜ್ ಮತ್ತು ಮುಷ್ತಾಕ್ ಷಾ ಎಂಬವರು ಕೊಡಲಿಯಿಂದ ಕಾಲು ಕತ್ತರಿಸಿ ಓಡಿ ಹೋಗಿದ್ದಾರೆ. ರಕ್ತದ ಮಡುವಿನಲ್ಲಿ ಒದ್ದಾಡುತ್ತಾ ಆಕೆ ಸಹಾಯಕ್ಕಾಗಿ ಬೇಡುತ್ತಿದ್ದರು ಎಂದು ಜಿಯೋ ನ್ಯೂಸ್ ವರದಿ ಹೇಳಿದೆ.  ಪೊಲೀಸರು ಅಪರಾಧ ಸ್ಥಳಕ್ಕೆ ತಲುಪಿದ ತಕ್ಷಣ ಸೋಬಿಯಾ ಅವರನ್ನು ನವಾಬ್ ಶಾ ಆಸ್ಪತ್ರೆಗೆ ಸಾಗಿಸಲಾಯಿತು.

ತನ್ನ ಪತಿ ತನ್ನನ್ನು ನಿಂದಿಸುತ್ತಾನೆ. ಇಬ್ಬರು ಮಕ್ಕಳನ್ನು ಕೂಡಾ ನೋಡುವ ಜವಾಬ್ದಾರಿ ಆತನಿಗಿಲ್ಲ. ಕರಾಚಿಯಲ್ಲಿ ನಾನು ಒಬ್ಬಳೇ ಎಲ್ಲವನ್ನೂ ನಿಭಾಯಿಸಿಕೊಂಡು ಹೋಗುತ್ತಿದ್ದೇನೆ ಎಂದು ಮಹಿಳೆ ಪೊಲೀಸರಿಗೆ ಹೇಳಿದ್ದಾರೆ. ನಾನು ಪಡುತ್ತಿರುವ ಕಷ್ಟ, ಅನುಭವಿಸುತ್ತಿರುವ ದೌರ್ಜನ್ಯ ಬಗ್ಗೆ ಪೋಷಕರಲ್ಲಿ ಹೇಳುತ್ತಲೇ ಇದ್ದೆ. ಅವರು ಇದಕ್ಕೆ ಕಿವಿಗೊಡಲೇ ಇಲ್ಲ. ಹೀಗೆಲ್ಲ ಗಂಡನ ಬಗ್ಗೆ ದೂರುವುದು ಅವಮಾನ ಎಂದು ಕುಟುಂಬ ಆಕೆಯ ಮಾತನ್ನು ತಳ್ಳಿತ್ತು ಎಂದು ಮಹಿಳೆ ಹೇಳಿರುವುದಾಗಿ ಎಂದು ಜಿಯೋ ನ್ಯೂಸ್ ವರದಿ ಮಾಡಿದೆ.

ದೌರ್ಜನ್ಯದಿಂದ ಕೂಡಿದ ವೈವಾಹಿಕ ಸಂಬಂಧದಿಂದ ಹೊರಬರಲು ನಿರ್ಧರಿಸಿದ ನಂತರ, ಸೋಬಿಯಾ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. ಇದು  ಆಕೆಯ ತಂದೆ ಮತ್ತು ಚಿಕ್ಕಪ್ಪನನ್ನು ಕೆರಳಿಸಿತ್ತು.

ಸೋಬಿಯಾ ಬಗ್ಗೆ ಕೋಪಗೊಂಡ ಪೋಷಕರು ಆಕೆ ಪತಿ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುವ ಮೂಲಕ ಕುಟುಂಬಕ್ಕೆ ಅವಮಾನ ಮಾಡಿದ್ದಾಳೆ ಎಂದು ಸಿಟ್ಟುಗೊಂಡಿದ್ದರು ಎಂದಿದ್ದಾರೆ ಪೊಲೀಸರು. ಆಕೆ ತನ್ನ ಪ್ರಕರಣವನ್ನು ಹಿಂಪಡೆಯಲು ನಿರಾಕರಿಸಿದಾಗ, ಅವರು ಆಕೆಯ ಮೇಲೆ ಕೊಡಲಿಯಿಂದ ಹಲ್ಲೆ ನಡೆಸಿದ್ದಾರೆ ಎಂದು ಜಿಯೋ ನ್ಯೂಸ್ ವರದಿ ಮಾಡಿದೆ.

ಇದನ್ನೂ ಓದಿ: ಅಮೆರಿಕದಲ್ಲಿ ನಕಲಿ ಕ್ಯಾನ್ಸರ್ ಔಷಧಿ ಮಾರಾಟ; ಭಾರತೀಯ ಮೂಲದ ವ್ಯಕ್ತಿಯ ಬಂಧನ

ನೌಶರೋಫೆರೋಜ್‌ನ ಹಿರಿಯ ಪೊಲೀಸ್ ಅಧೀಕ್ಷಕರು (ಎಸ್‌ಎಸ್‌ಪಿ) ಎಲ್ಲಾ ಆರೋಪಿಗಳ ವಿರುದ್ಧ ಕ್ರಮ ಮತ್ತು ಸಂತ್ರಸ್ತೆಯ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಸ್ಥಳೀಯ ಠಾಣಾಧಿಕಾರಿ (ಎಸ್‌ಎಚ್‌ಒ) ಅವರಿಗೆ ಆದೇಶಿಸಿದರು. ನಿರ್ದೇಶನಗಳಿಗೆ ಪ್ರತಿಕ್ರಿಯಿಸಿದ ಪೊಲೀಸರು ಇಲ್ಲಿಯವರೆಗೆ ಒಬ್ಬ ಶಂಕಿತ ಮುಷ್ತಾಕ್ ಷಾನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಉಳಿದ ಅಪರಾಧಿಗಳ ಹುಡುಕಾಟ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್