ಆಕ್ಸ್​ಫರ್ಡ್​ ವಿಶ್ವವಿದ್ಯಾಲಯದ ಕುಲಪತಿ ಹುದ್ದೆಗೆ ಜೈಲಿನಿಂದಲೇ ಅರ್ಜಿ ಸಲ್ಲಿಸಿದ ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್

ಜೈಲಿನಲ್ಲಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಬ್ರಿಟನ್​ನಲ್ಲಿರುವ ಆಕ್ಸ್​ಫರ್ಡ್​ ವಿಶ್ವವಿದ್ಯಾಲಯದ ಕುಲಪತಿ ಹುದ್ದೆಗೆ ಅರ್ಜಿ ಸಲ್ಲಿಸಿದ್ದಾರೆ. ಈ ಕುರಿತು ಪಕ್ಷ ಮಾಹಿತಿ ನೀಡಿದೆ. ಆಕ್ಸ್​ಫರ್ಡ್​ನ ಹಳೆಯ ವಿದ್ಯಾರ್ಥಿ ಇಮ್ರಾನ್ ಪಕ್ಷದ ಲಂಡನ್ ಮೂಲದ ವಕ್ತಾರ ಸೈಯದ್ ಜುಲ್ಫಿಕರ್ ಬುಖಾರಿ ಮೂಲಕ ವಿನಂತಿ ಮಾಡಿದ್ದಾರೆ.

ಆಕ್ಸ್​ಫರ್ಡ್​ ವಿಶ್ವವಿದ್ಯಾಲಯದ ಕುಲಪತಿ ಹುದ್ದೆಗೆ ಜೈಲಿನಿಂದಲೇ ಅರ್ಜಿ ಸಲ್ಲಿಸಿದ ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್
ಇಮ್ರಾನ್ ಖಾನ್
Follow us
ನಯನಾ ರಾಜೀವ್
|

Updated on: Aug 20, 2024 | 1:59 PM

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್(Imran Khan) ಅವರು ಬ್ರಿಟನ್‌ನ ಪ್ರತಿಷ್ಠಿತ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದ ಕುಲಪತಿಯಾಗಲು ಅರ್ಜಿ ಸಲ್ಲಿಸಿದ್ದಾರೆ. ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಮುಖ್ಯಸ್ಥ ಇಮ್ರಾನ್ ಖಾನ್ ಕಳೆದ ಒಂದು ವರ್ಷದಿಂದ ಜೈಲಿನಲ್ಲಿದ್ದಾರೆ.

ಭ್ರಷ್ಟಾಚಾರದಿಂದ ಹಿಡಿದು ಹಿಂಸಾಚಾರಕ್ಕೆ ಪ್ರಚೋದನೆ ನೀಡುವವರೆಗೆ ಅವರ ಮೇಲೆ ಆರೋಪವಿದೆ. ಆದರೆ, ತನ್ನ ವಿರುದ್ಧದ ಆರೋಪಗಳು ರಾಜಕೀಯ ಪ್ರೇರಿತವಾಗಿದ್ದು, ತನ್ನನ್ನು ಅಧಿಕಾರದಿಂದ ದೂರವಿಡಲು ಈ ರೀತಿಯ ಟ್ರಿಕ್ ಬಳಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಹಾಂಗ್ ಕಾಂಗ್‌ನ ಕೊನೆಯ ಬ್ರಿಟಿಷ್ ಗವರ್ನರ್ ಕನ್ಸರ್ವೇಟಿವ್ ಪೀರ್ ಕ್ರಿಸ್ ಪ್ಯಾಟನ್ ಫೆಬ್ರವರಿಯಲ್ಲಿ ಆಕ್ಸ್‌ಫರ್ಡ್‌ನ ಚಾನ್ಸೆಲರ್ ಹುದ್ದೆಯಿಂದ ಕೆಳಗಿಳಿಯುವುದಾಗಿ ಘೋಷಿಸಿದರು.

ವಿಶ್ವವಿದ್ಯಾಲಯದ ವೆಬ್‌ಸೈಟ್ ಪ್ರಕಾರ, 10 ವರ್ಷಗಳ ಅವಧಿಯ ಅಭ್ಯರ್ಥಿಗಳ ಪಟ್ಟಿಯನ್ನು ಅಕ್ಟೋಬರ್‌ವರೆಗೆ ಸಾರ್ವಜನಿಕಗೊಳಿಸಲಾಗುವುದಿಲ್ಲ. ಅಕ್ಟೋಬರ್ ಅಂತ್ಯದಲ್ಲಿ ಈ ಹುದ್ದೆಗೆ ಮತದಾನ ನಡೆಯಲಿದೆ.ಇಮ್ರಾನ್ 1975 ರಲ್ಲಿ ಆಕ್ಸ್‌ಫರ್ಡ್‌ನಿಂದ ತತ್ವಶಾಸ್ತ್ರ, ರಾಜಕೀಯ ಮತ್ತು ಅರ್ಥಶಾಸ್ತ್ರದಲ್ಲಿ ಪದವಿ ಪಡೆದರು. ಅವರು ಪಾಕಿಸ್ತಾನದ ಶ್ರೇಷ್ಠ ಕ್ರಿಕೆಟ್ ಆಟಗಾರರಲ್ಲಿ ಒಬ್ಬರಾದರು.

ಮತ್ತಷ್ಟು ಓದಿ: ಅಕ್ರಮ ವಿವಾಹ ಪ್ರಕರಣದಲ್ಲಿ ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್, ಪತ್ನಿ ಬುಶ್ರಾ ಬೀಬಿ ಖುಲಾಸೆ

ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ ಅನ್ನು ಸ್ಥಾಪಿಸಿದರು. ಇದಾದ ನಂತರ ಸೇನೆಯ ನೆರವಿನಿಂದ ಪಾಕಿಸ್ತಾನದ ಪ್ರಧಾನಿಯೂ ಆದರು, ಆದರೆ ಅವರೊಂದಿಗಿನ ವಿವಾದಗಳಿಂದಾಗಿ ಅವರು ಹುದ್ದೆಯಿಂದ ಕೆಳಗಿಳಿಯಬೇಕಾಯಿತು.2005 ರಿಂದ 2014ರವರೆಗೆ ಬ್ರಾಡ್​ಫೋರ್ಡ್​ ವಿಶ್ವವಿದ್ಯಾಲಯದ ಕುಲಪತಿಯಾಗಿ ಸೇವೆ ಸಲ್ಲಿಸಿದ್ದರು.

ನಂತರ, ಇಮ್ರಾನ್ ಖಾನ್ ರಾಜಕೀಯದ ಕಡೆ ಮುಖ ಮಾಡಿದರು. 2018ರಿಂದ 2022ರವರೆಗೆ ಪಾಕಿಸ್ತಾನದ ಪ್ರಧಾನಿಯಾಗಿ ಸೇವೆ ಸಲ್ಲಿಸಿದರು. ಇಮ್ರಾನ್ ಖಾನ್ 2022ರಲ್ಲಿ ವಿಶ್ವಾಸಮತವನ್ನು ಕಳೆದುಕೊಂಡಾಗ ಪ್ರಧಾನಿ ಹುದ್ದೆಯಿಂದ ತೆಗೆದುಹಾಕಲಾಯಿತು. ಪಾಕಿಸ್ತಾನದ ಬೀದಿಗಳಲ್ಲಿ ಪ್ರತಿಭಟನೆಗಳು ಕಂಡುಬಂದವು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ