Sign In

By signing in or creating an account, you agree with Associated Broadcasting Company's Terms & Conditions and Privacy Policy.

Imran Khan: ಪಾಕಿಸ್ತಾನದ ಮಾಜಿ ಪಿಎಂ ಇಮ್ರಾನ್ ಖಾನ್ ಬಂಧನ; ಯಾವುದಿದು ಅಲ್ ಖಾದೀರ್ ಟ್ರಸ್ಟ್ ಪ್ರಕರಣ?

Al-Qadir Trust case:ಅಲ್ ಖಾದಿರ್ ವಿಶ್ವವಿದ್ಯಾನಿಲಯವನ್ನು ಸ್ಥಾಪಿಸಲು ಸೊಹಾವಾದ ಮೌಜಾ ಬಕ್ರಾಲಾದಲ್ಲಿ 458 ಎಕರೆಗೂ ಹೆಚ್ಚು ಭೂಮಿ ರೂಪದಲ್ಲಿ ಅನಗತ್ಯ ಲಾಭವನ್ನು ಪಡೆದ ಆರೋಪವೂ ಇಮ್ರಾನ್ ಖಾನ್ ಮೇಲಿದೆ.

Imran Khan: ಪಾಕಿಸ್ತಾನದ ಮಾಜಿ ಪಿಎಂ ಇಮ್ರಾನ್ ಖಾನ್ ಬಂಧನ; ಯಾವುದಿದು ಅಲ್ ಖಾದೀರ್ ಟ್ರಸ್ಟ್ ಪ್ರಕರಣ?
ಇಮ್ರಾನ್ ಖಾನ್
Follow us
ರಶ್ಮಿ ಕಲ್ಲಕಟ್ಟ
|

Updated on:May 09, 2023 | 5:53 PM

ಪಾಕಿಸ್ತಾನದ (Pakistan) ಮಾಜಿ ಪ್ರಧಾನಿ ಇಮ್ರಾನ್ ಖಾನ್ (Imran Khan) ಅವರನ್ನು ಇಂದು(ಮಂಗಳವಾರ) ಇಸ್ಲಾಮಾಬಾದ್  ನ್ಯಾಯಾಂಗ ಸಂಕೀರ್ಣದಲ್ಲಿ ರೇಂಜರ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಸ್ಥಳೀಯ ಮಾಧ್ಯಮ ವರದಿಗಳ ಪ್ರಕಾರ ಅಲ್ ಖಾದಿರ್ ಟ್ರಸ್ಟ್ ಪ್ರಕರಣದಲ್ಲಿ (Al-Qadir Trust case )ಖಾನ್ ಅವರನ್ನು ಬಂಧಿಸಲಾಗಿದೆ. ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ (PTI) ಈ ಬಂಧನವನ್ನು ಅಪಹರಣ ಎಂದು ಕರೆದಿದೆ. ಆದಾಗ್ಯೂ, ಅವರು ಇಸ್ಲಾಮಾಬಾದ್ ಹೈಕೋರ್ಟ್‌ಗೆ ಹಾಜರಾಗಬೇಕಿದ್ದಾಗ ಬಲವಂತವಾಗಿ ಖಾನ್ ಅವರನ್ನು ಬಂಧಿಸಿದ್ದೇಕೆ ಎಂಬುದು ಸ್ಫಷ್ಟವಾಗಿ ತಿಳಿದಿಲ್ಲ. ಆದಾಗ್ಯೂ, ಖಾನ್ ಬಂಧನದ ಉದ್ದೇಶದ ಬಗ್ಗೆ ನ್ಯಾಯಾಲಯಕ್ಕೂ ತಿಳಿದಿರಲಿಲ್ಲ.

ಐಎಚ್​​ಸಿ ಮುಖ್ಯ ನ್ಯಾಯಮೂರ್ತಿ ಅಮೀರ್ ಫಾರೂಕ್, ಇಸ್ಲಾಮಾಬಾದ್ ಐಜಿ, ಆಂತರಿಕ ಕಾರ್ಯದರ್ಶಿ ಮತ್ತು ಹೆಚ್ಚುವರಿ ಅಟಾರ್ನಿ ಜನರಲ್ ಅವರನ್ನು ಕರೆಸಿದ್ದು ಖಾನ್ ಬಂಧನದ ಹಿಂದಿನ ಕಾರಣದ ಬಗ್ಗೆ ತನಗೂ ತಿಳಿದಿಲ್ಲ ಎಂದು ಹೇಳಿದ್ದಾರೆ. ಬಂಧನದ ಹಿಂದೆ ಯಾರಿದ್ದಾರೆ ಮತ್ತು ಯಾವ ಪ್ರಕರಣದಲ್ಲಿ ಇಮ್ರಾನ್ ಅವರನ್ನು ಬಂಧಿಸಲಾಗಿದೆ ಎಂದು ತಕ್ಷಣವೇ ತಿಳಿಸುವಂತೆ ನ್ಯಾಯಮೂರ್ತಿ ಫಾರೂಕ್ ಉನ್ನತ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಎಕ್ಸ್‌ಪ್ರೆಸ್ ಟ್ರಿಬ್ಯೂನ್ ವರದಿ ಮಾಡಿದೆ.

ಏನಿದು ಅಲ್-ಖಾದಿರ್ ಟ್ರಸ್ಟ್ ಕೇಸ್?

ಸ್ಥಳೀಯ ಮಾಧ್ಯಮ ವರದಿಗಳ ಪ್ರಕಾರ ಇಮ್ರಾನ್ ಖಾನ್​​ನ್ನು ಅಲ್-ಖಾದಿರ್ ಟ್ರಸ್ಟ್ ಪ್ರಕರಣದಲ್ಲಿ ಬಂಧಿಸಲಾಗಿದೆ. ಖಾನ್ ಅವರು ತಮ್ಮ ಅಧಿಕಾರಾವಧಿಯಲ್ಲಿ ಪಂಜಾಬ್‌ನ ಝೀಲಂನಲ್ಲಿ ಗುಣಮಟ್ಟದ ಶಿಕ್ಷಣವನ್ನು ಒದಗಿಸಲು  ಯುನಿವರ್ಸಿಟಿಯೊಂದನ್ನು  ಸ್ಥಾಪಿಸುವ ಭರವಸೆ ನೀಡಿದ್ದರು.ವರದಿಗಳ ಪ್ರಕಾರ ಖಾನ್, ಅವರ ಪತ್ನಿ ಬುಶ್ರಾ ಬೀಬಿ ಮತ್ತು ಆಪ್ತ ಸಹಾಯಕರಾದ ಜುಲ್ಫಿಕರ್ ಬುಖಾರಿ ಮತ್ತು ಬಾಬರ್ ಈ  ಯೋಜನೆಯಲ್ಲಿ ಭಾಗಿಯಾಗಿದ್ದರು. ತನ್ನ ಭರವಸೆಯನ್ನು ಪೂರೈಸುವ ಸಲುವಾಗಿ, ಖಾನ್ ಅಲ್-ಖಾದಿರ್ ಯೂನಿವರ್ಸಿಟಿ ಪ್ರಾಜೆಕ್ಟ್ ಟ್ರಸ್ಟ್ ಅನ್ನು ಸ್ಥಾಪಿಸಿದರು. ಅದರಲ್ಲಿ ಬೀಬಿ, ಬುಖಾರಿ ಮತ್ತು ಅವನ್ ಅವರನ್ನು ಪದಾಧಿಕಾರಿಗಳಾಗಿ ಮಾಡಿದ್ದಾರೆ.

ಆದಾಗ್ಯೂ, ಆಗಿನ ಪಿಟಿಐ ಸರ್ಕಾರ ಮತ್ತು ಆಸ್ತಿ ಉದ್ಯಮಿ ನಡುವೆ ಒಪ್ಪಂದ ಮಾಡಿದ್ದು, ಇದು ದೇಶದ ಖಜಾನೆಗೆ 190 ಮಿಲಿಯನ್ ಪೌಂಡ್‌ಗಳ ನಷ್ಟವನ್ನು ಉಂಟುಮಾಡಿದೆ ಎಂದು ವರದಿಯಾಗಿದೆ.

ಆರೋಪಗಳ ಪ್ರಕಾರ, ಖಾನ್ ಮತ್ತು ಇತರ ಆರೋಪಿಗಳು ಆ ಸಮಯದಲ್ಲಿ ರೂ50 ಬಿಲಿಯನ್ (ಆ ಕಾಲದಲ್ಲಿ 190 ಮಿಲಿಯನ್ ಪೌಂಡ್‌) ಅವ್ಯವಹಾರ ನಡೆಸಿದ್ದಾರೆ ಎಂದು ಬ್ರಿಟನ್‌ನ ರಾಷ್ಟ್ರೀಯ ಅಪರಾಧ ಸಂಸ್ಥೆ (ಎನ್‌ಸಿಎ) ಸರ್ಕಾರಕ್ಕೆ ಹೇಳಿದೆ ಎಂದು ದಿ ನ್ಯೂಸ್ ಇಂಟರ್‌ನ್ಯಾಶನಲ್ ವರದಿ ಮಾಡಿದೆ.

ಅಲ್ ಖಾದಿರ್ ವಿಶ್ವವಿದ್ಯಾನಿಲಯವನ್ನು ಸ್ಥಾಪಿಸಲು ಸೊಹಾವಾದ ಮೌಜಾ ಬಕ್ರಾಲಾದಲ್ಲಿ 458 ಎಕರೆಗೂ ಹೆಚ್ಚು ಭೂಮಿ ರೂಪದಲ್ಲಿ ಅನಗತ್ಯ ಲಾಭವನ್ನು ಪಡೆದ ಆರೋಪವೂ ಅವರ ಮೇಲಿದೆ.

ಇದನ್ನೂ ಓದಿ: Imran Khan arrested: ಮಾಜಿ ಪ್ರಧಾನಿ ಇಮ್ರಾನ್ ಖಾನ್ ರನ್ನು ಪಾಕಿಸ್ತಾನದ ರೇಂಜರ್ಸ್ ಕೊರಳಪಟ್ಟಿ ಹಿಡಿದು ದರದರ ಎಳೆದೊಯ್ದರು!

ಪ್ರತಿಭಟನೆಗೆ ಕರೆ ನೀಡಿದ ಪಿಟಿಐ

ಖಾನ್ ಅವರನ್ನು ರೇಂಜರ್‌ಗಳು ನ್ಯಾಯಾಲಯದ ಒಳಗಿನಿಂದ ಅಪಹರಣ ಮಾಡಿದ್ದಾರೆ ಎಂದು ಮತ್ತೊಬ್ಬ ಪಿಟಿಐ ನಾಯಕ ಅಜರ್ ಮಶ್ವಾನಿ ಆರೋಪಿಸಿದ್ದು ದೇಶದಲ್ಲಿ ಪ್ರತಿಭಟನೆಗಳನ್ನು ನಡೆಸಲು ತಮ್ಮ ಬೆಂಬಲಿಗರಿಗೆ ಅವರು ಕರೆ ನೀಡಿದ್ದಾರೆ. ಅವರು ಇದೀಗ ಇಮ್ರಾನ್ ಖಾನ್‌ಗೆ ಚಿತ್ರಹಿಂಸೆ ನೀಡುತ್ತಿದ್ದಾರೆ. ಅವರು ಖಾನ್ ಸಾಹಿಬ್ ಅವರಿಗೆ ಹೊಡೆಯುತ್ತಿದ್ದಾರೆ. ಅವರು ಖಾನ್ ಸಾಹಿಬ್‌ಗೆ ಏನೋ ಮಾಡಿದ್ದಾರೆಎಂದು ಮತ್ತೊಬ್ಬ ನಾಯಕ ಮುಸರತ್ ಚೀಮಾ ಪಕ್ಷದ ಟ್ವಿಟರ್ ಹ್ಯಾಂಡಲ್‌ನಲ್ಲಿ ವಿಡಿಯೊ ಪೊಸ್ಟ್ ಮಾಡಿದ್ದಾರೆ.

ಕಳೆದ ವರ್ಷ ಏಪ್ರಿಲ್‌ನಲ್ಲಿ ಅವಿಶ್ವಾಸ ಮತದ ಮೂಲಕ ಅವರನ್ನು ಪದಚ್ಯುತಗೊಳಿಸಿದ ನಂತರ ಖಾನ್ ಅವರು ಹಲವಾರು ಪ್ರಕರಣಗಳನ್ನು ಎದುರಿಸುತ್ತಿದ್ದಾರೆ.. ಈ ಎಲ್ಲಾ ಪ್ರಕರಣಗಳನ್ನು ಆಡಳಿತಾರೂಢ ಮೈತ್ರಿಕೂಟದ ರಾಜಕೀಯ ಸೇಡು ಎಂದು ಅವರು ತಿರಸ್ಕರಿಸಿದ್ದಾರೆ. ಪ್ರಸ್ತುತ, ಖಾನ್ ಭಯೋತ್ಪಾದನೆ, ಧರ್ಮನಿಂದನೆ, ಕೊಲೆ, ಹಿಂಸೆ ಮತ್ತು ಹಿಂಸಾಚಾರಕ್ಕೆ ಪ್ರಚೋದನೆಗೆ ಸಂಬಂಧಿಸಿದಂತೆ 140 ಕ್ಕೂ ಹೆಚ್ಚು ಪ್ರಕರಣಗಳನ್ನು ಎದುರಿಸುತ್ತಿದ್ದಾರೆ.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:49 pm, Tue, 9 May 23

ಸಕಾಲದಲ್ಲಿ 13 ನೇ ಕ್ರಾಸ್​ನಿಂದ 18ನೇ ಕ್ರಾಸ್ ತಲುಪಿದ ವಿದ್ಯಾರ್ಥಿನಿ
ಸಕಾಲದಲ್ಲಿ 13 ನೇ ಕ್ರಾಸ್​ನಿಂದ 18ನೇ ಕ್ರಾಸ್ ತಲುಪಿದ ವಿದ್ಯಾರ್ಥಿನಿ
VIDEO: ರಾಕೆಟ್ ರಾಕೆಟ್ ರಾಕೆಟ್: ಒಂದೇ ಕೈಯಲ್ಲಿ ಧೋನಿಯ ರಾಕೆಟ್ ಸಿಕ್ಸ್
VIDEO: ರಾಕೆಟ್ ರಾಕೆಟ್ ರಾಕೆಟ್: ಒಂದೇ ಕೈಯಲ್ಲಿ ಧೋನಿಯ ರಾಕೆಟ್ ಸಿಕ್ಸ್
ವೇದಿಕೆಯಲ್ಲೇ ಸಚಿವ ಖಂಡ್ರೆ, ಶಾಸಕ ಶೈಲೇಂದ್ರ ಬೆಲ್ದಾಳೆ ಮಾತಿನ ಚಕಮಕಿ
ವೇದಿಕೆಯಲ್ಲೇ ಸಚಿವ ಖಂಡ್ರೆ, ಶಾಸಕ ಶೈಲೇಂದ್ರ ಬೆಲ್ದಾಳೆ ಮಾತಿನ ಚಕಮಕಿ
ಭಾವಿ ಪತ್ನಿ ವೈಷ್ಣವಿಗಾಗಿ ಕನ್ನಡ ಕಲಿತು ಮಾತನಾಡಿದ ಅನುಕೂಲ್
ಭಾವಿ ಪತ್ನಿ ವೈಷ್ಣವಿಗಾಗಿ ಕನ್ನಡ ಕಲಿತು ಮಾತನಾಡಿದ ಅನುಕೂಲ್
ಬುರ್ಖಾ ತೆಗೆ, ಹೆಸರೇನು ಹೇಳು: ಬೆಂಗಳೂರಲ್ಲಿ ಮತ್ತೊಂದು ನೈತಿಕ ಪೊಲೀಸ್​ಗಿರಿ
ಬುರ್ಖಾ ತೆಗೆ, ಹೆಸರೇನು ಹೇಳು: ಬೆಂಗಳೂರಲ್ಲಿ ಮತ್ತೊಂದು ನೈತಿಕ ಪೊಲೀಸ್​ಗಿರಿ
ರಾಯಚೂರಿನ ಆರ್​ಟಿಪಿಎಸ್ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಅಗ್ನಿ ಅವಘಡ
ರಾಯಚೂರಿನ ಆರ್​ಟಿಪಿಎಸ್ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಅಗ್ನಿ ಅವಘಡ
VIDEO: ಧೋನಿ ಚಮತ್ಕಾರ... ಹೀಗೂ ರನೌಟ್ ಮಾಡಬಹುದು!
VIDEO: ಧೋನಿ ಚಮತ್ಕಾರ... ಹೀಗೂ ರನೌಟ್ ಮಾಡಬಹುದು!
ಆಸ್ಪತ್ರೆಯಲ್ಲಿ ಅಗ್ನಿ ಅವಘಡ, ಓರ್ವ ರೋಗಿ ಸಾವು, ಹಲವರಿಗೆ ಗಾಯ
ಆಸ್ಪತ್ರೆಯಲ್ಲಿ ಅಗ್ನಿ ಅವಘಡ, ಓರ್ವ ರೋಗಿ ಸಾವು, ಹಲವರಿಗೆ ಗಾಯ
ಹೊಸ ದಾಖಲೆ... ಕೇವಲ 26 ರನ್ ಬಾರಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಧೋನಿ
ಹೊಸ ದಾಖಲೆ... ಕೇವಲ 26 ರನ್ ಬಾರಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಧೋನಿ
ಉತ್ಸವಗಳ ಸಂದರ್ಭ ಪಾನಕ ಹಾಗೂ ಮಜ್ಜಿಗೆ ನೀಡುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಉತ್ಸವಗಳ ಸಂದರ್ಭ ಪಾನಕ ಹಾಗೂ ಮಜ್ಜಿಗೆ ನೀಡುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ