AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನದ ಎರಡನೇ ಅತಿದೊಡ್ಡ ನೌಕಾ ವಾಯುನೆಲೆ ಮೇಲೆ ಉಗ್ರರ ದಾಳಿ

ಪಾಕಿಸ್ತಾನದ ಬಲೂಚಿಸ್ತಾನದಲ್ಲಿರುವ ದೇಶದ ಎರಡನೇ ಅತಿದೊಡ್ಡ ನೌಕಾಪಡೆಯ ವಾಯುನೆಲೆ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಪಾಕಿಸ್ತಾನದ ಭದ್ರತಾ ಪಡೆಗಳು ನಾಲ್ವರು ಉಗ್ರರನ್ನು ಹತ್ಯೆ ಮಾಡಿವೆ. ಸ್ವಯಂಚಾಲಿತ ಶಸ್ತ್ರಾಸ್ತ್ರಗಳು ಮತ್ತು ಗ್ರೆನೇಡ್‌ಗಳೊಂದಿಗೆ ಶಸ್ತ್ರಸಜ್ಜಿತವಾದ ಭಯೋತ್ಪಾದಕರು ಟರ್ಬತ್‌ನಲ್ಲಿರುವ ಪಾಕಿಸ್ತಾನದ ನೌಕಾ ಕೇಂದ್ರ ಪಿಎನ್‌ಎಸ್ ಸಿದ್ದಿಕಿ ಮೇಲೆ ದಾಳಿ ನಡೆಸಿದ್ದಾರೆ.

ಪಾಕಿಸ್ತಾನದ ಎರಡನೇ ಅತಿದೊಡ್ಡ ನೌಕಾ ವಾಯುನೆಲೆ ಮೇಲೆ ಉಗ್ರರ ದಾಳಿ
ನೌಕಾ ವಾಯುನೆಲೆ ಪಾಕಿಸ್ತಾನImage Credit source: Hindustan Times
ನಯನಾ ರಾಜೀವ್
|

Updated on: Mar 26, 2024 | 7:45 AM

Share

ಪಾಕಿಸ್ತಾನದ ಬಲೂಚಿಸ್ತಾನದಲ್ಲಿರುವ ದೇಶದ ಎರಡನೇ ಅತಿದೊಡ್ಡ ನೌಕಾಪಡೆಯ ವಾಯುನೆಲೆ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಪಾಕಿಸ್ತಾನದ ಭದ್ರತಾ ಪಡೆಗಳು ನಾಲ್ವರು ಉಗ್ರರನ್ನು ಹತ್ಯೆ ಮಾಡಿವೆ. ಸ್ವಯಂಚಾಲಿತ ಶಸ್ತ್ರಾಸ್ತ್ರಗಳು ಮತ್ತು ಗ್ರೆನೇಡ್‌ಗಳೊಂದಿಗೆ ಶಸ್ತ್ರಸಜ್ಜಿತವಾದ ಭಯೋತ್ಪಾದಕರು ಟರ್ಬತ್‌ನಲ್ಲಿರುವ ಪಾಕಿಸ್ತಾನದ ನೌಕಾ ಕೇಂದ್ರ ಪಿಎನ್‌ಎಸ್ ಸಿದ್ದಿಕಿ ಮೇಲೆ ದಾಳಿ ನಡೆಸಿದ್ದಾರೆ.

ಭದ್ರತಾ ಸಿಬ್ಬಂದಿ ಪ್ರತಿದಾಳಿ ನಡೆಸಿ ಉಗ್ರರನ್ನು ಹತ್ಯೆ ಮಾಡಿದ್ದಾರೆ. ಈ ಘರ್ಷಣೆಯಲ್ಲಿ ಪಾಕಿಸ್ತಾನಿ ಭದ್ರತಾ ಪಡೆಗಳಿಗೆ ಯಾವುದೇ ನಷ್ಟವಾಗಿಲ್ಲ ಎಂದು ಹೇಳಲಾಗಿದೆ. ಭಯೋತ್ಪಾದಕರು ಹತರಾದ ನಂತರ, ಭದ್ರತಾ ಪಡೆಗಳು ಪ್ರದೇಶವನ್ನು ಸುತ್ತುವರೆದಿವೆ ಮತ್ತು ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದವು. ಪಾಕಿಸ್ತಾನದ ಈ ನೌಕಾ ನೆಲೆಯಲ್ಲಿ ಚೀನಾದ ಡ್ರೋನ್‌ಗಳನ್ನು ಸಹ ನಿಯೋಜಿಸಲಾಗಿದೆ.

ಈ ದಾಳಿಯಲ್ಲಿ ಆರು ಭಯೋತ್ಪಾದಕರು ಭಾಗಿಯಾಗಿದ್ದಾರೆ ಎಂದು ಕೆಲವು ಮೂಲಗಳು ಹೇಳುತ್ತಿವೆ, ಇದರಲ್ಲಿ ನಾಲ್ವರು ಕೊಲ್ಲಲ್ಪಟ್ಟರು ಮತ್ತು ಇಬ್ಬರು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಸೋಮವಾರ ರಾತ್ರಿ 10 ಗಂಟೆ ಸುಮಾರಿಗೆ ಘಟನೆ ನಡೆದಿದೆ.

ಮತ್ತಷ್ಟು ಓದಿ: ವಿಡಿಯೋ ವೈರಲ್: ಪಾಕ್​​ ವಾಯುನೆಲೆಯ ಮೇಲೆ ಉಗ್ರರ ದಾಳಿ, ಒಟ್ಟು ಆರು ಸಾವು

ಟರ್ಬತ್‌ನಲ್ಲಿ ನಡೆದ ಈ ದಾಳಿಯ ಹೊಣೆಯನ್ನು ಬಲೂಚಿಸ್ತಾನ್ ಲಿಬರೇಶನ್ ಆರ್ಮಿ (ಬಿಎಲ್‌ಎ)ದ ಮಜೀದ್ ಬ್ರಿಗೇಡ್ ವಹಿಸಿಕೊಂಡಿದೆ. ಪಾಕಿಸ್ತಾನ ಸರ್ಕಾರವು BLO ಅನ್ನು ನಿಷೇಧಿಸಿದೆ. ದಾಳಿಯ ಹಿನ್ನೆಲೆಯಲ್ಲಿ ಟರ್ಬತ್‌ನ ಬೋಧನಾ ಆಸ್ಪತ್ರೆಯಲ್ಲಿ ತುರ್ತು ಪರಿಸ್ಥಿತಿ ಹೇರಲಾಗಿದೆ. ಕೂಡಲೇ ಕರ್ತವ್ಯಕ್ಕೆ ಹಾಜರಾಗುವಂತೆ ಎಲ್ಲ ವೈದ್ಯರಿಗೆ ಸೂಚನೆ ನೀಡಲಾಗಿದೆ.

ಚೀನಾ-ಪಾಕಿಸ್ತಾನ ಆರ್ಥಿಕ ಕಾರಿಡಾರ್ (ಸಿಪಿಇಸಿ) ಯೋಜನೆಗೆ ಪ್ರಮುಖವಾದ ಗ್ವಾದರ್ ಬಂದರಿನಲ್ಲಿ ಪಿ ಸಿದ್ದಿಕಿ ನೌಕಾ ವಿಮಾನ ನಿಲ್ದಾಣವಿದೆ. ಇದರ ಅಡಿಯಲ್ಲಿ ಕೋಟ್ಯಂತರ ವೆಚ್ಚದಲ್ಲಿ ರಸ್ತೆಗಳು ಮತ್ತು ಇಂಧನ ಯೋಜನೆಗಳು ನಿರ್ಮಾಣವಾಗಲಿವೆ. ಇದು ಚೀನಾದ ಯೋಜನೆಯಾದ ಬೆಲ್ಟ್ ಮತ್ತು ರೋಡ್ ಇನಿಶಿಯೇಟಿವ್ (BRE) ನ ಭಾಗವಾಗಿದೆ.

ಬಲೂಚಿಸ್ತಾನದಲ್ಲಿ ಚೀನಾ ಮಾಡುತ್ತಿರುವ ಹೂಡಿಕೆಯನ್ನು ಮಜೀದ್ ಬ್ರಿಗೇಡ್ ವಿರೋಧಿಸುತ್ತದೆ. ಚೀನಾ ಮತ್ತು ಪಾಕಿಸ್ತಾನಗಳು ಈ ಪ್ರದೇಶದ ಸಂಪನ್ಮೂಲಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿವೆ ಎನ್ನುವುದು ಅವರ ವಾದವಾಗಿದೆ. ಮಜೀದ್ ಬ್ರಿಗೇಡ್ ನಿಂದ ಈ ವಾರ ನಡೆದ ಎರಡನೇ ದಾಳಿ ಇದಾಗಿದ್ದು, ಈ ವರ್ಷ ಮೂರನೇ ದಾಳಿಯಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ