Paris Explosion: ಪ್ಯಾರಿಸ್ನ ಕಟ್ಟಡವೊಂದರಲ್ಲಿ ಸ್ಫೋಟ, 30ಕ್ಕೂ ಹೆಚ್ಚು ಮಂದಿಗೆ ಗಾಯ, 7 ಜನರ ಸ್ಥಿತಿ ಗಂಭೀರ
ಪ್ಯಾರಿಸ್ನ ಕಟ್ಟಡವೊಂದರಲ್ಲಿ ಭಾರಿ ಸ್ಫೋಟ ಸಂಭವಿಸಿದ್ದು, 30ಕ್ಕೂ ಅಧಿಕ ಮಂದಿಗೆ ಗಾಯಗಳಾಗಿವೆ, 7 ಜನರ ಸ್ಥಿತಿ ಗಂಭೀರವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಪ್ಯಾರಿಸ್ನ ಕಟ್ಟಡವೊಂದರಲ್ಲಿ ಭಾರಿ ಸ್ಫೋಟ ಸಂಭವಿಸಿದ್ದು, 30ಕ್ಕೂ ಅಧಿಕ ಮಂದಿಗೆ ಗಾಯಗಳಾಗಿವೆ, 7 ಜನರ ಸ್ಥಿತಿ ಗಂಭೀರವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಸ್ಫೋಟದಿಂದಾಗಿ ನಗರದ ಇತರೆ ಕಟ್ಟಡಗಳಿಗೆ ಹೊಗೆ ಹರಡಿ ಬೆಂಕಿ ಕಾಣಿಸಿಕೊಂಡಿದ್ದು, ಸಮೀಪದ ಕಟ್ಟಡಗಳಿಂದ ಜನರನ್ನು ಹೊರಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿದಿದ್ದು, ಸ್ಫೋಟಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ.
ಸ್ಫೋಟದಿಂದಾಗಿ 5ನೇ ಅರೋಂಡಿಸ್‌ಮೆಂಟ್‌ನಲ್ಲಿರುವ ಕಟ್ಟಡದ ಮುಂಭಾಗ ಕುಸಿದಿದೆ ಎಂದು ಪ್ಯಾರಿಸ್ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಐತಿಹಾಸಿಕ ವಾಲ್ ಡಿ ಗ್ರೇಸ್ ಮಿಲಿಟರಿ ಆಸ್ಪತ್ರೆ ಬಳಿ ಸ್ಫೋಟ ಸಂಭವಿಸಿದೆ. 2019 ರಲ್ಲಿ, ಇಲ್ಲಿ ಅನಿಲ ಸೋರಿಕೆಯಿಂದ ಉಂಟಾದ ಸ್ಫೋಟದಲ್ಲಿ ನಾಲ್ಕು ಜನರು ಸಾವನ್ನಪ್ಪಿದರು ಮತ್ತು 66 ಜನರು ಗಾಯಗೊಂಡರು.
ಮತ್ತಷ್ಟು ಓದಿ: Golden Temple: ಅಮೃತಸರದ ಸ್ವರ್ಣ ಮಂದಿರದ ಬಳಿ ಮತ್ತೊಂದು ಸ್ಫೋಟ
ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಗಾಯಗೊಂಡವರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಗಾಯಾಳುಗಳ ರಕ್ಷಣೆಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ.
ಸಂಜೆ 5 ಗಂಟೆ ಸುಮಾರಿಗೆ ದೊಡ್ಡ ಸ್ಫೋಟ ಸಂಭವಿಸಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಘಟನೆಗೂ ಮುನ್ನ ಆ ಪ್ರದೇಶದಲ್ಲಿ ಅನಿಲ ವಾಸನೆ ಬರುತ್ತಿತ್ತು ಎನ್ನಲಾಗಿದೆ. ಘಟನೆಯ ಬಗ್ಗೆ ಮಾಹಿತಿ ಪಡೆದ ಕೂಡಲೇ ಪೊಲೀಸರು, ಅಗ್ನಿಶಾಮಕ ದಳದ ಆಂಬುಲೆನ್ಸ್ ಸ್ಥಳಕ್ಕೆ ಆಗಮಿಸಿದರು.
ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ