Paris Explosion: ಪ್ಯಾರಿಸ್​ನ ಕಟ್ಟಡವೊಂದರಲ್ಲಿ ಸ್ಫೋಟ, 30ಕ್ಕೂ ಹೆಚ್ಚು ಮಂದಿಗೆ ಗಾಯ, 7 ಜನರ ಸ್ಥಿತಿ ಗಂಭೀರ

ಪ್ಯಾರಿಸ್​ನ ಕಟ್ಟಡವೊಂದರಲ್ಲಿ ಭಾರಿ ಸ್ಫೋಟ ಸಂಭವಿಸಿದ್ದು, 30ಕ್ಕೂ ಅಧಿಕ ಮಂದಿಗೆ ಗಾಯಗಳಾಗಿವೆ, 7 ಜನರ ಸ್ಥಿತಿ ಗಂಭೀರವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

Paris Explosion: ಪ್ಯಾರಿಸ್​ನ ಕಟ್ಟಡವೊಂದರಲ್ಲಿ ಸ್ಫೋಟ, 30ಕ್ಕೂ ಹೆಚ್ಚು ಮಂದಿಗೆ ಗಾಯ, 7 ಜನರ ಸ್ಥಿತಿ ಗಂಭೀರ
ಪ್ಯಾರಿಸ್

Updated on: Jun 22, 2023 | 8:07 AM

ಪ್ಯಾರಿಸ್​ನ ಕಟ್ಟಡವೊಂದರಲ್ಲಿ ಭಾರಿ ಸ್ಫೋಟ ಸಂಭವಿಸಿದ್ದು, 30ಕ್ಕೂ ಅಧಿಕ ಮಂದಿಗೆ ಗಾಯಗಳಾಗಿವೆ, 7 ಜನರ ಸ್ಥಿತಿ ಗಂಭೀರವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಸ್ಫೋಟದಿಂದಾಗಿ ನಗರದ ಇತರೆ ಕಟ್ಟಡಗಳಿಗೆ ಹೊಗೆ ಹರಡಿ ಬೆಂಕಿ ಕಾಣಿಸಿಕೊಂಡಿದ್ದು, ಸಮೀಪದ ಕಟ್ಟಡಗಳಿಂದ ಜನರನ್ನು ಹೊರಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿದಿದ್ದು, ಸ್ಫೋಟಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ.

ಸ್ಫೋಟದಿಂದಾಗಿ 5ನೇ ಅರೋಂಡಿಸ್‌ಮೆಂಟ್‌ನಲ್ಲಿರುವ ಕಟ್ಟಡದ ಮುಂಭಾಗ ಕುಸಿದಿದೆ ಎಂದು ಪ್ಯಾರಿಸ್ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಐತಿಹಾಸಿಕ ವಾಲ್ ಡಿ ಗ್ರೇಸ್ ಮಿಲಿಟರಿ ಆಸ್ಪತ್ರೆ ಬಳಿ ಸ್ಫೋಟ ಸಂಭವಿಸಿದೆ. 2019 ರಲ್ಲಿ, ಇಲ್ಲಿ ಅನಿಲ ಸೋರಿಕೆಯಿಂದ ಉಂಟಾದ ಸ್ಫೋಟದಲ್ಲಿ ನಾಲ್ಕು ಜನರು ಸಾವನ್ನಪ್ಪಿದರು ಮತ್ತು 66 ಜನರು ಗಾಯಗೊಂಡರು.

ಮತ್ತಷ್ಟು ಓದಿ: Golden Temple: ಅಮೃತಸರದ ಸ್ವರ್ಣ ಮಂದಿರದ ಬಳಿ ಮತ್ತೊಂದು ಸ್ಫೋಟ

ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಗಾಯಗೊಂಡವರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಗಾಯಾಳುಗಳ ರಕ್ಷಣೆಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ.

ಸಂಜೆ 5 ಗಂಟೆ ಸುಮಾರಿಗೆ ದೊಡ್ಡ ಸ್ಫೋಟ ಸಂಭವಿಸಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಘಟನೆಗೂ ಮುನ್ನ ಆ ಪ್ರದೇಶದಲ್ಲಿ ಅನಿಲ ವಾಸನೆ ಬರುತ್ತಿತ್ತು ಎನ್ನಲಾಗಿದೆ. ಘಟನೆಯ ಬಗ್ಗೆ ಮಾಹಿತಿ ಪಡೆದ ಕೂಡಲೇ ಪೊಲೀಸರು, ಅಗ್ನಿಶಾಮಕ ದಳದ ಆಂಬುಲೆನ್ಸ್ ಸ್ಥಳಕ್ಕೆ ಆಗಮಿಸಿದರು.

 

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us