ಪ್ಯಾರಿಸ್-ಮುಂಬೈ ವಿಸ್ತಾರಾ ವಿಮಾನಕ್ಕೆ ಬಾಂಬ್ ಬೆದರಿಕೆ
ಪ್ಯಾರಿಸ್ನಿಂದ ಮುಂಬೈಗೆ 306 ಮಂದಿಯನ್ನು ಹೊತ್ತೊಯ್ಯುತ್ತಿದ್ದ ವಿಸ್ತಾರ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿತ್ತು. ಈ ಬೆದರಿಕೆಯ ನಂತರ, ವಿಮಾನ ಬರುವ ಮೊದಲು ಮುಂಬೈ ವಿಮಾನ ನಿಲ್ದಾಣದಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಯಿತು. ಭಾನುವಾರ ಬೆಳಗ್ಗೆ 10.19ಕ್ಕೆ ಮುಂಬೈ ವಿಮಾನ ನಿಲ್ದಾಣದಲ್ಲಿ ವಿಮಾನ ಲ್ಯಾಂಡ್ ಆಗಿದೆ.
ಫ್ರಾನ್ಸ್ ರಾಜಧಾನಿ ಪ್ಯಾರಿಸ್(Paris)ನಿಂದ ಮುಂಬೈಗೆ 306 ಮಂದಿಯನ್ನು ಹೊತ್ತೊಯ್ಯುತ್ತಿದ್ದ ವಿಸ್ತಾರಾ ವಿಮಾನ(Vistara Flightಕ್ಕೆ ಬಾಂಬ್ ಬೆದರಿಕೆ ಬಂದಿತ್ತು. ಈ ಬೆದರಿಕೆಯ ನಂತರ, ವಿಮಾನ ಬರುವ ಮೊದಲು ಮುಂಬೈ ವಿಮಾನ ನಿಲ್ದಾಣದಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಯಿತು. ಭಾನುವಾರ ಬೆಳಗ್ಗೆ 10.19ಕ್ಕೆ ಮುಂಬೈ ವಿಮಾನ ನಿಲ್ದಾಣದಲ್ಲಿ ವಿಮಾನ ಲ್ಯಾಂಡ್ ಆಗಿದೆ.
ಪ್ಯಾರಿಸ್‌ನ ಚಾರ್ಲ್ಸ್ ಡಿ ಗೌಲ್ ವಿಮಾನ ನಿಲ್ದಾಣದಿಂದ ಮುಂಬೈಗೆ ಹೊರಟಿದ್ದ ಯುಕೆ 024 ವಿಮಾನವು ಏರ್ ಸಿಕ್‌ನೆಸ್ ಬ್ಯಾಗ್‌ನಲ್ಲಿ ಬಾಂಬ್ ಬೆದರಿಕೆ ಪತ್ರವೊಂದು ಪತ್ತೆಯಾಗಿತ್ತು.
ಬೆದರಿಕೆ ಬಂದ ನಂತರ ಮುಂಬೈ ವಿಮಾನ ನಿಲ್ದಾಣದಲ್ಲಿ ರಾತ್ರಿ 10.08 ಕ್ಕೆ ತುರ್ತು ಪರಿಸ್ಥಿತಿ ಘೋಷಿಸಲಾಯಿತು. ವಿಮಾನವು ಮುಂಬೈ ವಿಮಾನ ನಿಲ್ದಾಣದಲ್ಲಿ ಬೆಳಗ್ಗೆ 10.19 ಕ್ಕೆ ಇಳಿಯಿತು ಎಂದು ಮೂಲಗಳು ತಿಳಿಸಿವೆ.
ಪ್ಯಾರಿಸ್-ಮುಂಬೈ ವಿಮಾನದಲ್ಲಿ 12 ಸಿಬ್ಬಂದಿ ಹಾಗೂ 294 ಪ್ರಯಾಣಿಕರಿದ್ದರು ಎಂದು ಮೂಲಗಳು ತಿಳಿಸಿವೆ. ಪ್ರೋಟೋಕಾಲ್ ಅನ್ನು ಅನುಸರಿಸಿ, ವಿಮಾನಯಾನ ಸಂಸ್ಥೆಯು ತಕ್ಷಣವೇ ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿ ನೀಡಿದೆ.
ಮತ್ತಷ್ಟು ಓದಿ: ಬೆಂಗಳೂರು ವಿಮಾನ ನಿಲ್ದಾಣದ ಸಿಬ್ಬಂದಿ ಕಚೇರಿಗೆ ಹುಸಿ ಬಾಂಬ್ ಬೆದರಿಕೆ
ಚೆನ್ನೈ-ಮುಂಬೈ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್ ಶನಿವಾರ ಚೆನ್ನೈನಿಂದ (Chennai) ಮುಂಬೈಗೆ ಹೊರಟಿದ್ದ ಇಂಡಿಗೋ 6ಇ 5314 ವಿಮಾನಕ್ಕೆ (IndiGo flight) ಬಾಂಬ್ ಬೆದರಿಕೆ ಬಂದ ಹಿನ್ನಲೆಯಲ್ಲಿ ಮುಂಬೈ ವಿಮಾನ ನಿಲ್ದಾಣದಲ್ಲಿ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ.
ಚೆನ್ನೈನಿಂದ ಮುಂಬೈಗೆ ತೆರಳುತ್ತಿದ್ದ ಇಂಡಿಗೋ 6ಇ 5314 ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿತ್ತು. ಮುಂಬೈನಲ್ಲಿ ವಿಮಾನ ತುರ್ತು ಭೂಸ್ಪರ್ಶ ಮಾಡಿದ್ದು, ಸಿಬ್ಬಂದಿ ಪ್ರೋಟೋಕಾಲ್ ಅನ್ನು ಅನುಸರಿಸಿದರು. ಭದ್ರತಾ ಏಜೆನ್ಸಿ ಮಾರ್ಗಸೂಚಿಗಳ ಪ್ರಕಾರ ವಿಮಾನವನ್ನು ಪ್ರತ್ಯೇಕ ಜಾಗಕ್ಕೆ ಕೊಂಡೊಯ್ಯಲಾಗಿದೆ ಎಂದು ವಿಮಾನ ಸಂಸ್ಥೆ ಹೇಳಿಕೆಯಲ್ಲಿ ತಿಳಿಸಿದೆ.
ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಸದ್ಯ ವಿಮಾನವು ತಪಾಸಣೆಗೆ ಒಳಪಟ್ಟಿದೆ. ಎಲ್ಲಾ ಭದ್ರತಾ ತಪಾಸಣೆಗಳನ್ನು ಪೂರ್ಣಗೊಳಿಸಿದ ನಂತರ, ವಿಮಾನವನ್ನು ಟರ್ಮಿನಲ್ಗೆ ತರಲಾಗುವುದು ಎಂದು ಇಂಡಿಗೋ ಹೇಳಿತ್ತು. ಶುಕ್ರವಾರ 177 ಪ್ರಯಾಣಿಕರಿದ್ದ ದೆಹಲಿ-ಶ್ರೀನಗರ ವಿಸ್ತಾರಾ ವಿಮಾನ ಹಾರಾಟದ ವೇಳೆ ಬಾಂಬ್ ಬೆದರಿಕೆ ಬಂದಿತ್ತು. ವಿಮಾನವು ಶ್ರೀನಗರದಲ್ಲಿ ಸುರಕ್ಷಿತವಾಗಿ ಇಳಿದಿದ್ದು, ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಸ್ಥಳಾಂತರಿಸಲಾಯಿತು.
ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ