AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಕ್ರೇನ್ ಸಂಘರ್ಷ ಬೇಗ ಕೊನೆಗೊಳ್ಳಲಿ; ರಷ್ಯಾ ಅಧ್ಯಕ್ಷ ಪುಟಿನ್ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ

25ನೇ ಶಾಂಘೈ ಸಹಕಾರ ಸಂಸ್ಥೆ (SCO) ಶೃಂಗಸಭೆಯ ನಡುವೆ ಪ್ರಧಾನಿ ನರೇಂದ್ರ ಮೋದಿ ಮತ್ತು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ದ್ವಿಪಕ್ಷೀಯ ಮಾತುಕತೆಗಳನ್ನು ಪ್ರಾರಂಭಿಸಿದರು. ಈ ವೇಳೆ ಅವರಿಬ್ಬರೂ ರಕ್ಷಣೆ, ಇಂಧನ, ವ್ಯಾಪಾರ ಮತ್ತು ತಂತ್ರಜ್ಞಾನದಂತಹ ನಿರ್ಣಾಯಕ ಕ್ಷೇತ್ರಗಳಲ್ಲಿ ಸಹಕಾರದ ಬಗ್ಗೆ ಪುನರುಚ್ಛರಿಸಿದ್ದಾರೆ.

ಉಕ್ರೇನ್ ಸಂಘರ್ಷ ಬೇಗ ಕೊನೆಗೊಳ್ಳಲಿ; ರಷ್ಯಾ ಅಧ್ಯಕ್ಷ ಪುಟಿನ್ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
Modi In Sco Summit
ಸುಷ್ಮಾ ಚಕ್ರೆ
|

Updated on:Sep 01, 2025 | 1:24 PM

Share

ಟಿಯಾಂಜಿನ್, ಸೆಪ್ಟೆಂಬರ್ 1: ಚೀನಾದ ಟಿಯಾಂಜಿನ್‌ನಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಸ್ಥೆ ಶೃಂಗಸಭೆಯ (SCO Summit)  ವೇಳೆ ಪ್ರಧಾನಿ ನರೇಂದ್ರ ಮೋದಿ (PM Modi) ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Putin) ಇಂದು ದ್ವಿಪಕ್ಷೀಯ ಸಭೆ ನಡೆಸಿದರು. ಈ ವೇಳೆ ಇಬ್ಬರೂ ನಾಯಕರು ಉಕ್ರೇನ್ ಹಾಗೂ ರಷ್ಯಾದ ನಡುವಿನ ಸಂಘರ್ಷ ಸೇರಿದಂತೆ ಪ್ರಮುಖ ಜಾಗತಿಕ ವಿಷಯಗಳ ಕುರಿತು ಚರ್ಚಿಸಿದರು. ಹಾಗೇ, ಪ್ರಧಾನಿ ಮೋದಿ ಮತ್ತು ಪುಟಿನ್ ತಮ್ಮ ದ್ವಿಪಕ್ಷೀಯ ಮಾತುಕತೆಯ ಸಮಯದಲ್ಲಿ ಭಾರತ-ರಷ್ಯಾ ಪಾಲುದಾರಿಕೆಯನ್ನು ಪುನರುಚ್ಚರಿಸಿದರು.

ಉಕ್ರೇನ್ ಬಿಕ್ಕಟ್ಟಿನ ಕುರಿತು ಮಾತನಾಡಿದ ಪ್ರಧಾನಿ ಮೋದಿ, “ನಾವು ಉಕ್ರೇನ್ ಬಗ್ಗೆ ಚರ್ಚಿಸುತ್ತಿದ್ದೇವೆ. ರಷ್ಯಾ ಮತ್ತು ಉಕ್ರೇನ್ ಎರಡೂ ದೇಶಗಳು ಶಾಂತಿಯನ್ನು ಸಾಧಿಸಲು ಮುಂದುವರಿಯಬೇಕೆಂದು ಆಶಿಸುತ್ತೇವೆ. ಈ ಸಂಘರ್ಷ ಆದಷ್ಟು ಬೇಗ ಕೊನೆಗೊಳ್ಳಬೇಕೆಂದು ಭಾರತ ಬಯಸುತ್ತದೆ. ಉಕ್ರೇನ್‌ ಮತ್ತು ರಷ್ಯಾದ ನಡುವೆ ಶಾಶ್ವತ ಶಾಂತಿಯನ್ನು ಕಂಡುಕೊಳ್ಳುವ ಮಾರ್ಗವು ಇಡೀ ಜಗತ್ತಿನ ಮಾನವೀಯತೆಯ ಕರೆಯಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ನಿವೃತ್ತಿ ಘೋಷಿಸಿದ ಚೇತೇಶ್ವರ ಪೂಜಾರಗೆ ಹೃದಯಸ್ಪರ್ಶಿ ಸಂದೇಶ ಕಳುಹಿಸಿದ ಪ್ರಧಾನಿ ಮೋದಿ

“ಉಕ್ರೇನ್‌ನಲ್ಲಿ ನಡೆಯುತ್ತಿರುವ ಸಂಘರ್ಷದ ಬಗ್ಗೆ ನಾವು ನಿರಂತರವಾಗಿ ಚರ್ಚಿಸುತ್ತಿದ್ದೇವೆ. ಈ ಸಂಘರ್ಷವನ್ನು ಸಾಧ್ಯವಾದಷ್ಟು ಬೇಗ ಕೊನೆಗೊಳಿಸಬೇಕು ಮತ್ತು ಶಾಶ್ವತ ಶಾಂತಿಗೆ ಮಾರ್ಗವನ್ನು ತ್ವರಿತವಾಗಿ ಕಂಡುಕೊಳ್ಳಬೇಕು. ಶಾಂತಿಯ ದಿಕ್ಕಿನಲ್ಲಿ ಇತ್ತೀಚೆಗೆ ರಷ್ಯಾ ಹಾಗೂ ಉಕ್ರೇನ್ ಮಾಡಿದ ಪ್ರಯತ್ನಗಳನ್ನು ನಾವು ಸ್ವಾಗತಿಸುತ್ತೇವೆ” ಎಂದು ಪ್ರಧಾನಿ ಮೋದಿ ಪುಟಿನ್​ಗೆ ಸಲಹೆ ನೀಡಿದ್ದಾರೆ.

“ಪುಟಿನ್ ಅವರೊಂದಿಗಿನ ಭೇಟಿ ಯಾವಾಗಲೂ ಸ್ಮರಣೀಯ. ಡಿಸೆಂಬರ್‌ನಲ್ಲಿ ಪುಟಿನ್ ಅವರು ಭಾರತಕ್ಕೆ ಭೇಟಿ ನೀಡುವುದನ್ನು ನಾವು ಕಾಯುತ್ತಿದ್ದೇವೆ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಈ ವರ್ಷ ಡಿಸೆಂಬರ್‌ನಲ್ಲಿ ನಡೆಯಲಿರುವ ಮುಂಬರುವ 23ನೇ ಭಾರತ-ರಷ್ಯಾ ಶೃಂಗಸಭೆಗೆ ಪ್ರಧಾನಿ ಅಧ್ಯಕ್ಷ ಪುಟಿನ್ ಅವರಿಗೆ ಆತ್ಮೀಯ ಆಹ್ವಾನವನ್ನು ನೀಡಿದರು. “140 ಕೋಟಿ ಭಾರತೀಯರು ನಿಮಗಾಗಿ ಕಾತರದಿಂದ ಕಾಯುತ್ತಿದ್ದಾರೆ” ಎಂದು ಮೋದಿ ಹೇಳಿದರು.

ಇದನ್ನೂ ಓದಿ: ಟ್ರಂಪ್ ಸುಂಕ ಬೆದರಿಕೆಗೆ ಜಗ್ಗದ ಮೋದಿ, ಚೀನಾದಲ್ಲಿ ಷಿ ಜಿನ್​​ಪಿಂಗ್, ಪುಟಿನ್ ಜತೆ ಮಾತುಕತೆ

“ಕಷ್ಟದ ಸಮಯದಲ್ಲಿ ಕೂಡ ಭಾರತ ಮತ್ತು ರಷ್ಯಾ ಒಟ್ಟಾಗಿ ನಿಂತಿರುವುದು ನಮ್ಮ ವಿಶೇಷ. ಕಠಿಣ ಸಂದರ್ಭದಲ್ಲೂ ಎರಡೂ ದೇಶಗಳು ಹೆಗಲಿಗೆ ಹೆಗಲು ಕೊಟ್ಟು ನಿಂತಿದೆ” ಎಂದು ಮೋದಿ ಹೇಳಿದ್ದಾರೆ.

ಪುಟಿನ್ ಹೇಳಿದ್ದೇನು?:

“ನಮ್ಮ ಸಂಬಂಧವು ತತ್ವಗಳನ್ನು ಆಧರಿಸಿದೆ ಎಂದು ನಾವು ಹೇಳಬಹುದು. ನಮ್ಮ ನಡುವೆ ಬಹುಮುಖಿ ಸಹಕಾರವಿದೆ. ಇಂದಿನ ಸಭೆಯು ನಮ್ಮ ಸಂಬಂಧಗಳನ್ನು ಮತ್ತಷ್ಟು ಬಲಪಡಿಸಲು ಮತ್ತೊಂದು ಉತ್ತಮ ಅವಕಾಶವಾಗಿದೆ. ರಷ್ಯಾ ಮತ್ತು ಭಾರತದ ನಡುವೆ ಅತ್ಯಂತ ವಿಶ್ವಾಸಾರ್ಹ ಸಂಬಂಧವಿದೆ, ಅದು ರಾಜಕೀಯವನ್ನು ಆಧರಿಸಿಲ್ಲ” ಎಂದು ಪುಟಿನ್ ಹೇಳಿದ್ದಾರೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರಷ್ಯಾದ ತೈಲವನ್ನು ಖರೀದಿಸಿದ ಕಾರಣಕ್ಕೆ ಭಾರತದ ಮೇಲೆ ಹೆಚ್ಚಿನ ಸುಂಕ ಹೇಳಿದ ಬೆನ್ನಲ್ಲೇ ಭಾರತ ಮತ್ತು ರಷ್ಯಾ ತಮ್ಮ ದ್ವಿಪಕ್ಷೀಯ ಸಂಬಂಧವನ್ನು ಬಲಪಡಿಸುವ ಮಾತುಗಳನ್ನಾಡಿವೆ. ಅಮೆರಿಕವು ಭಾರತೀಯ ಸರಕುಗಳ ಮೇಲೆ ಶೇ. 50ರಷ್ಟು ಸುಂಕವನ್ನು ವಿಧಿಸಿದೆ. ಇದರಲ್ಲಿ ಮಾಸ್ಕೋದಿಂದ ರಿಯಾಯಿತಿ ದರದಲ್ಲಿ ಕಚ್ಚಾ ತೈಲವನ್ನು ಖರೀದಿಸುವುದಕ್ಕೆ ಶೇ. 25ರಷ್ಟು ದಂಡವೂ ಸೇರಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 1:17 pm, Mon, 1 September 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ