AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕ: ವಿಚ್ಛೇದನ ಕೊಡ್ತೀನಿ ಎಂದಿದ್ದಕ್ಕೆ ಹೆಂಡತಿ ಮಕ್ಕಳು ಮನೆಯಲ್ಲಿರುವಾಗಲೇ ಬುಲ್ಡೋಜರ್​ನಿಂದ ಮನೆ ಕೆಡವಲು ಯತ್ನಿಸಿದ ವ್ಯಕ್ತಿ

ಅಮೆರಿಕದ ಪೆನ್ಸಿಲ್ವೇನಿಯಾದಲ್ಲಿ ಪತ್ನಿ ವಿಚ್ಛೇದನ ಕೇಳಿದ್ದಕ್ಕೆ ಕೋಪಗೊಂಡ ಪತಿಯೊಬ್ಬ ಮನೆಯಲ್ಲಿದ್ದ ಪತ್ನಿ, ಮಕ್ಕಳೊಂದಿಗೆ ಬುಲ್ಡೋಜರ್‌ನಿಂದ ಮನೆ ಕೆಡವಲು ಯತ್ನಿಸಿದ್ದಾನೆ. ಪತ್ನಿಯ ಸಮಯಪ್ರಜ್ಞೆಯಿಂದ ಕುಟುಂಬ ಪ್ರಾಣಾಪಾಯದಿಂದ ಪಾರಾಗಿದ್ದು, ಆಸ್ತಿ ಹಾನಿಯಾಗಿದೆ. ಆರೋಪಿ ಎರಿಕ್ ಪಿಯರ್ವ್ಸ್ಜಾನನ್ನು ಪೊಲೀಸರು ಬಂಧಿಸಿದ್ದು, ಆತನ ಮೇಲೆ ಕೊಲೆ ಯತ್ನದ ಆರೋಪ ದಾಖಲಾಗಿದೆ.

ಅಮೆರಿಕ: ವಿಚ್ಛೇದನ ಕೊಡ್ತೀನಿ ಎಂದಿದ್ದಕ್ಕೆ ಹೆಂಡತಿ ಮಕ್ಕಳು ಮನೆಯಲ್ಲಿರುವಾಗಲೇ ಬುಲ್ಡೋಜರ್​ನಿಂದ ಮನೆ ಕೆಡವಲು ಯತ್ನಿಸಿದ ವ್ಯಕ್ತಿ
ಮನೆImage Credit source: cbsnews
ನಯನಾ ರಾಜೀವ್
|

Updated on: Jun 03, 2026 | 10:12 AM

Share

ಪೆನ್ಸಿಲ್ವೇನಿಯಾ, ಜೂನ್ 03: ಪತ್ನಿ ವಿಚ್ಛೇದನ(Divorce) ಕೊಡ್ತೀನಿ ಎಂದಿದ್ದಕ್ಕೆ ಕೋಪಗೊಂಡ ಪತಿ ಹೆಂಡತಿ ಮತ್ತು ಮಕ್ಕಳು ಮನೆಯಲ್ಲಿದ್ದಾಗಲೇ ಬುಲ್ಡೋಜರ್ ತಂದು ಕೆಡವಲು ಯತ್ನಿಸಿರುವ ಘಟನೆ ಅಮೆರಿಕದ ಪೆನ್ಸಿಲ್ವೇನಿಯಾದ ಬಟ್ಲರ್ ಕೌಂಟಿಯಲ್ಲಿ ನಡೆದಿದೆ. ಪತಿಯೊಬ್ಬ ಕೋಪ ಹಾಗೂ ಮದ್ಯದ ಅಮಲಿನಲ್ಲಿ ಅತಿರೇಕದ ವರ್ತನೆ ತೋರಿದ್ದು ಮಹಿಳೆಯ ಸಮಯಪ್ರಜ್ಞೆಯಿಂದಾಗಿ ದೊಡ್ಡದೊಂದು ಗಂಡಾಂತರ ತಪ್ಪಿದೆ. 48 ವರ್ಷದ ಎರಿಕ್ ಪಿಯರ್ವ್ಸ್ಜಾ ಎಂಬಾತ ಬುಲ್ಡೋಜರ್ ಬಳಸಿ ತನ್ನದೇ ಮನೆಯನ್ನು ಕೆಡವಲು ಯತ್ನಿಸಿದಾಗ, ಮನೆಯೊಳಗಿದ್ದ ಪತ್ನಿ ಮತ್ತು ಇಬ್ಬರು ಹೆಣ್ಣುಮಕ್ಕಳು ಯಾವುದೇ ಗಾಯಗಳಿಲ್ಲದೆ ಪವಾಡಸದೃಶವಾಗಿ ಪಾರಾಗಿದ್ದಾರೆ.

ಪೊಲೀಸ್ ವರದಿಗಳ ಪ್ರಕಾರ, ಪತ್ನಿಯು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ವಿಷಯ ತಿಳಿದ ಎರಿಕ್, ಮದ್ಯದ ಅಮಲಿನಲ್ಲಿ ಮನೆಯ ಹೊರಗೆ ನಿಂತಿದ್ದ ಬೃಹತ್ ನಿರ್ಮಾಣ ಯಂತ್ರದ ಕ್ಯಾಬಿನ್ ಒಳಗೆ ಕುಳಿತುಕೊಂಡಿದ್ದಾನೆ ನಮ್ಮಿಬ್ಬರ ನಡುವೆ ಎಲ್ಲವೂ ಮುಗಿದರೆ, ಈ ಮನೆಯೂ ಇರಬಾರದು ಎಂದು ಕೂಗುತ್ತಾ ಯಂತ್ರದ ಮೂಲಕ ಮನೆಯ ಹಿಂಭಾಗದ ಗೋಡೆಯನ್ನು ಕೆಡವಲು ಆರಂಭಿಸಿದ್ದಾನೆ.

ಆತಂಕದ ನಡುವೆಯೂ ಧೈರ್ಯ ಕಳೆದುಕೊಳ್ಳದ ಪತ್ನಿ, ತಕ್ಷಣವೇ ಸುರಕ್ಷಿತ ಜಾಗದಲ್ಲಿ ನಿಂತು ಪೊಲೀಸರಿಗೆ ತುರ್ತು ಕರೆ ಮಾಡಿದರು. ತಾಯಿ ಮತ್ತು ಇಬ್ಬರು ಹೆಣ್ಣುಮಕ್ಕಳು ಅತ್ಯಂತ ಚಾಣಾಕ್ಷತನದಿಂದ ಯಂತ್ರದ ಹೊಡೆತಕ್ಕೆ ಸಿಲುಕದಂತೆ ಸುರಕ್ಷಿತ ಮಾರ್ಗದ ಮೂಲಕ ಮನೆಯಿಂದ ಹೊರಬರುವಲ್ಲಿ ಯಶಸ್ವಿಯಾದರು. ಮನೆಯ ಹಿಂಭಾಗಕ್ಕೆ ಹಾನಿ ಮಾಡಿದ ನಂತರ ಎರಿಕ್ ಅಲ್ಲಿಂದ ಜಿಮ್ ಬ್ಯಾಗ್ ಎತ್ತಿಕೊಂಡು ನಗರದ ಕಡೆಗೆ ಪರಾರಿಯಾಗಿದ್ದಾನೆ. ಆದರೆ, ವಿಷಯ ತಿಳಿಯುತ್ತಿದ್ದಂತೆ ಅಲರ್ಟ್ ಆದ ಪೆನ್ಸಿಲ್ವೇನಿಯಾ ಪೊಲೀಸರು ತಕ್ಷಣವೇ ಕಾರ್ಯಾಚರಣೆ ನಡೆಸಿ, ಆರೋಪಿ ಪತಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮತ್ತಷ್ಟು ಓದಿ: ವಿಚ್ಛೇದನ ಕೇಳಿದ್ದಕ್ಕೆ ಪತ್ನಿಯ ಖಾಸಗಿ ಫೋಟೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಅಪ್ಲೋಡ್ ಮಾಡಿದ ಪತಿ! ಅಮೇಲೇನಾಯ್ತು?

ಪ್ರಸ್ತುತ ಆರೋಪಿಯ ಮೇಲೆ ಕೊಲೆ ಯತ್ನ, ಸಾರ್ವಜನಿಕ ಆಸ್ತಿಗೆ ಧಕ್ಕೆ ಹಾಗೂ ಇತರರ ಜೀವಕ್ಕೆ ಅಜಾಗರೂಕತೆಯಿಂದ ಅಪಾಯವನ್ನುಂಟುಮಾಡಿದ ಗಂಭೀರ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಬುಲ್ಡೋಜರ್​ನಿಂದಾಗಿ ಮನೆಯ ಮುಖ್ಯ ರಚನೆ ಸಂಪೂರ್ಣ ದುರ್ಬಲಗೊಂಡಿರುವುದರಿಂದ, ಅದು ಯಾವುದೇ ಸಮಯದಲ್ಲಿ ಕುಸಿಯಬಹುದು ಎಂದು ತನಿಖಾ ಅಧಿಕಾರಿಗಳು ಹೇಳಿದ್ದಾರೆ. ಇದರಿಂದಾಗಿ ಮುನ್ನೆಚ್ಚರಿಕೆ ಮತ್ತು ಸುರಕ್ಷತಾ ಕ್ರಮವಾಗಿ ಇಡೀ ಮನೆಯನ್ನು ಅಧಿಕೃತವಾಗಿ ತೆರವುಗೊಳಿಸಲು ನಿರ್ಧರಿಸಲಾಗಿದೆ.

ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಮಕ್ಕಳ ಜೀವಕ್ಕೆ ಅಪಾಯ ತಂದ ಪತಿಯ ಬೇಜವಾಬ್ದಾರಿತನವನ್ನು ನೆಟ್ಟಿಗರು ಕಟುವಾಗಿ ಖಂಡಿಸಿದ್ದಾರೆ. ಆದಾಗ್ಯೂ, ಯಾವುದೇ ಪ್ರಾಣಹಾನಿಯಾಗದಂತೆ ತಾಯಿ ಮತ್ತು ಮಕ್ಕಳನ್ನು ಸುರಕ್ಷಿತವಾಗಿ ರಕ್ಷಿಸಿ, ಕಾನೂನು ಕೈಗೆತ್ತಿಕೊಂಡ ಆರೋಪಿಗೆ ತಕ್ಕ ಶಿಕ್ಷೆ ಕೊಡಿಸಲು ಪೊಲೀಸರು ಸನ್ನದ್ಧರಾಗಿರುವುದು ಸಮಾಧಾನದ ಸಂಗತಿಯಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ