ವಿಮಾನ ಟೇಕ್​ ಆಫ್​ ಆಗುವ ಸಮಯದಲ್ಲಿ ಇಂಜಿನ್​ನಲ್ಲಿ ಸಿಲುಕಿ ವ್ಯಕ್ತಿ ಸಾವು

ನೆದರ್ಲೆಂಡ್​ನ ಆಮ್​ಸ್ಟರ್​ಡಾಂನ ಶಿಪೋಲ್ ವಿಮಾನ ನಿಲ್ದಾಣದಲ್ಲಿ ಟೇಕ್​ ಆಫ್​ಗೆ ಸಿದ್ಧವಾಗಿದ್ದ ವಿಮಾನದ ಇಂಜಿನ್​ನೊಳಗೆ ಕಾಲುಜಾರಿ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ವಿಮಾನ ಟೇಕ್​ ಆಫ್​ ಆಗುವ ಸಮಯದಲ್ಲಿ ಇಂಜಿನ್​ನಲ್ಲಿ ಸಿಲುಕಿ ವ್ಯಕ್ತಿ ಸಾವು
Follow us
ನಯನಾ ರಾಜೀವ್
|

Updated on: May 31, 2024 | 9:06 AM

ನೆದರ್ಲೆಂಡ್​ನ ಆಮ್​ಸ್ಟರ್​ಡಾಂನ ಶಿಪೋಲ್ ವಿಮಾನ ನಿಲ್ದಾಣ(Airport)ದಲ್ಲಿ ವಿಮಾನದ ಇಂಜಿನ್​ಗೆ ಸಿಲುಕಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ವರದಿಯಾಗಿದೆ. KL1341 ವಿಮಾನವು ಡೆನ್ಮಾರ್ಕ್‌ನ ಬಿಲ್ಲುಂಡ್‌ಗೆ ಟೇಕ್ ಆಫ್ ಮಾಡಲು ಸಿದ್ಧವಾಗಿತ್ತು. ಆಗ ಅಪಘಾತ ಸಂಭವಿಸಿದೆ.

ಟೇಕ್ ಆಫ್ ಆಗುವ ಮೊದಲು ಜೆಟ್‌ನ ತಿರುಗುವ ಟರ್ಬೈನ್‌ಗೆ ವ್ಯಕ್ತಿ ಬಿದ್ದಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ, ಇದು ಅಪಘಾತವೋ ಅಥವಾ ಆತ್ಮಹತ್ಯೆಯೋ ಎಂದು ಹೇಳಲು ಸಾಧ್ಯವಾಗುತ್ತಿಲ್ಲ. ವರದಿಯ ಪ್ರಕಾರ , ಮೇ 29 ರ ಮಧ್ಯಾಹ್ನ, ಕೆಎಲ್ 1341 ವಿಮಾನವು ಡೆನ್ಮಾರ್ಕ್‌ನ ಬಿಲ್ಲುಂಡ್‌ಗೆ ಟೇಕ್ ಆಫ್ ಮಾಡಲು ಸಿದ್ಧವಾಗಿತ್ತು. ಆಗ ಅಪಘಾತ ಸಂಭವಿಸಿದೆ.

ಈ ವಿಮಾನವು ಕಡಿಮೆ-ಶ್ರೇಣಿಯ ಎಂಬ್ರೇರ್ ಜೆಟ್ ಆಗಿದ್ದು, ಇದನ್ನು KLM ನ ಸಿಟಿಹಾಪರ್ ಸೇವೆಯ ಅಡಿಯಲ್ಲಿ ಬಳಸಲಾಗುತ್ತದೆ.

ಮತ್ತಷ್ಟು ಓದಿ: ಆಗಸದಲ್ಲಿ ವಿಮಾನದ ಬಾಗಿಲು ತೆರೆಯಲು ಯತ್ನಿಸಿದ ಪ್ರಯಾಣಿಕ

ಯುರೋಪಿನೊಳಗೆ ಹತ್ತಿರದ ಸ್ಥಳಗಳ ನಡುವೆ ವಿಮಾನಗಳು ಕಾರ್ಯನಿರ್ವಹಿಸುತ್ತಿಲ್ಲ. ಕೆಎಲ್‌ಎಂ ಏರ್‌ಲೈನ್ಸ್ ಹೇಳಿಕೆಯಲ್ಲಿ ತಿಳಿಸಿದೆ. ಘಟನೆಯ ನಂತರ ಪ್ರಯಾಣಿಕರನ್ನು ವಿಮಾನದಿಂದ ಕೆಳಗಿಳಿಸಲಾಯಿತು.

ಕಳೆದ ವರ್ಷ, ಟೆಕ್ಸಾಸ್‌ನ ಸ್ಯಾನ್ ಆಂಟೋನಿಯೊದಲ್ಲಿ 27 ವರ್ಷದ ವಿಮಾನ ನಿಲ್ದಾಣದ ಸಿಬ್ಬಂದಿ, ಡೆಲ್ಟಾ ಪ್ರಯಾಣಿಕ ವಿಮಾನದ ಇಂಜಿನ್‌ನಲ್ಲಿ ಸಿಲುಕಿ ಸಾವನ್ನಪ್ಪಿದರು.

ಅದೇ ರೀತಿ ಮೃತೊಟ್ಟವರು ಟಗ್ ನಿರ್ವಾಹಕರು ಅಥವಾ ವಿಮಾನ ನಿಲ್ದಾಣದ ಸಿಬ್ಬಂದಿಯಾಗಿರಬಹುದು ಎಂದು ಹೇಳಲಾಗುತ್ತಿದೆ.

ವಿಮಾನವು ಡೆನ್ಮಾರ್ಕ್​ನಲ್ಲಿ ಪ್ರಯಾಣಕ್ಕೆ ಸಿದ್ಧಗೊಂಡಿದ್ದಾಗ ವಿಮಾನದ ರೆಕ್ಕೆಯ ಮೇಲೆ ಓಡಿ ಬಂದ ವ್ಯಕ್ತಿಯೊಬ್ಬ ಕಾಲುಜಾರಿ ಇಂಜಿನ್​ನ ಒಳಗಿರುವ ಕೂಲಿಂಗ್ ಫ್ಯಾನ್​ನ ರೆಕ್ಕೆಗಳಿಗೆ ಸಿಕ್ಕಿ ಸಾವನ್ನಪ್ಪಿದ್ದಾರೆ. ಮೃತ ವ್ಯಕ್ತಿಯ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?