ಪೆಟ್ರೋಲ್, ಡೀಸೆಲ್ ಕಾರು ಸಂಪೂರ್ಣ ಬ್ಯಾನ್ ಮಾಡಲು ಬ್ರಿಟನ್ ಪ್ರಧಾನಿ ನಿರ್ಧಾರ

ಬ್ರಿಟನ್ ಸರ್ಕಾರವು 2030ರ ಹೊತ್ತಿಗೆ ಪೆಟ್ರೋಲ್ ಮತ್ತು ಡೀಸೆಲ್ ಕಾರುಗಳನ್ನು ನಿಷೇಧಿಸಿ, ಎಲೆಕ್ಟ್ರಿಕ್ ವಾಹನಗಳನ್ನು ಬಳಕೆಗೆ ತರಲು ಮುಂದಾಗಿದೆ. ವಾಯುಮಾಲಿನ್ಯ ನಿಯಂತ್ರಣಕ್ಕಾಗಿ ಬ್ರಿಟನ್ ಈ ಮಹತ್ವದ ಹೆಜ್ಜೆ ಮುಂದಿಡಲು ನಿರ್ಧಾರ ಮಾಡಿದೆ. ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರು ಮಂಗಳವಾರ ರಾತ್ರಿ ಹೀಗೊಂದು ಪ್ರಮುಖ ಘೋಷಣೆ ಮಾಡಿದ್ದಾರೆ. ಬ್ರಿಟನ್ ಸರ್ಕಾರದ ಮಹತ್ವದ ಯೋಜನೆಯಾದ 12 ಬಿಲಿಯನ್ ಪೌಂಡ್ಸ್ ವೆಚ್ಚದ ‘ಹಸಿರು ಅಜೆಂಡಾ’ದ ಭಾಗವಾಗಿ, 2030ರ ಹೊತ್ತಿಗೆ ಪೆಟ್ರೋಲ್, ಡೀಸೆಲ್ ಕಾರುಗಳ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸುವ ಬಗ್ಗೆ ಚಿಂತನೆ […]

ಪೆಟ್ರೋಲ್, ಡೀಸೆಲ್ ಕಾರು ಸಂಪೂರ್ಣ ಬ್ಯಾನ್ ಮಾಡಲು ಬ್ರಿಟನ್ ಪ್ರಧಾನಿ ನಿರ್ಧಾರ
Follow us
ಸಾಧು ಶ್ರೀನಾಥ್​
|

Updated on: Nov 19, 2020 | 5:45 PM

ಬ್ರಿಟನ್ ಸರ್ಕಾರವು 2030ರ ಹೊತ್ತಿಗೆ ಪೆಟ್ರೋಲ್ ಮತ್ತು ಡೀಸೆಲ್ ಕಾರುಗಳನ್ನು ನಿಷೇಧಿಸಿ, ಎಲೆಕ್ಟ್ರಿಕ್ ವಾಹನಗಳನ್ನು ಬಳಕೆಗೆ ತರಲು ಮುಂದಾಗಿದೆ. ವಾಯುಮಾಲಿನ್ಯ ನಿಯಂತ್ರಣಕ್ಕಾಗಿ ಬ್ರಿಟನ್ ಈ ಮಹತ್ವದ ಹೆಜ್ಜೆ ಮುಂದಿಡಲು ನಿರ್ಧಾರ ಮಾಡಿದೆ.

ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರು ಮಂಗಳವಾರ ರಾತ್ರಿ ಹೀಗೊಂದು ಪ್ರಮುಖ ಘೋಷಣೆ ಮಾಡಿದ್ದಾರೆ. ಬ್ರಿಟನ್ ಸರ್ಕಾರದ ಮಹತ್ವದ ಯೋಜನೆಯಾದ 12 ಬಿಲಿಯನ್ ಪೌಂಡ್ಸ್ ವೆಚ್ಚದ ‘ಹಸಿರು ಅಜೆಂಡಾ’ದ ಭಾಗವಾಗಿ, 2030ರ ಹೊತ್ತಿಗೆ ಪೆಟ್ರೋಲ್, ಡೀಸೆಲ್ ಕಾರುಗಳ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ. ಅದರಲ್ಲಿ 1.3 ಬಿಲಿಯನ್ ಪೌಂಡ್ಸ್ ವೆಚ್ಚದಲ್ಲಿ, ಬ್ರಿಟನ್​ನ ರಸ್ತೆ ಬದಿಗಳು, ವಾಹನ ಮಾರ್ಗಗಳು, ಮನೆಗಳ ಬಳಿ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ಪಾಯಿಂಟ್​ಗಳನ್ನು ನಿರ್ಮಿಸಲಾಗುವುದು ಎಂದು ಬೋರಿಸ್ ಜಾನ್ಸನ್ ತಿಳಿಸಿದ್ದಾರೆ.

ಕಾರು ತಯಾರಕರು ಮತ್ತು ಮಾರಾಟಗಾರರ ಒಪ್ಪಂದ ಸಹಿತ ಪೆಟ್ರೋಲ್ ಮತ್ತು ಡೀಸೆಲ್ ಕಾರುಗಳನ್ನು ಬ್ಯಾನ್ ಮಾಡಲು ಬ್ರಿಟನ್ ಸರ್ಕಾರ ಮುಂದಾಗಿದ್ದು, ಎಲೆಕ್ಟ್ರಿಕ್ ವಾಹನಗಳ ಬ್ಯಾಟರಿ ಅಭಿವೃದ್ಧಿಗಾಗಿ ಮತ್ತು ಉತ್ಪಾದನೆಗಾಗಿ ಮುಂದಿನ ನಾಲ್ಕು ವರ್ಷಗಳಲ್ಲಿ ಸುಮಾರು 500 ಮಿಲಿಯನ್ ಪೌಂಡ್ಸ್ (49,16,49,46,155.00 ರೂಪಾಯಿ) ಮೀಸಲಿಡಲು ಬ್ರಿಟನ್ ಸರ್ಕಾರ ನಿರ್ಧರಿಸಿದೆ.

‘ವಾಹನಗಳ ಹೊಗೆಯಿಂದ ಪ್ರಕೃತಿ ನಾಶವಾಗುತ್ತಿದೆ. ಪರಿಸರವನ್ನು ಕಾಪಾಡಲು ಅನಿವಾರ್ಯವಾಗಿ ಪೆಟ್ರೋಲ್ ಮತ್ತು ಡೀಸೆಲ್ ಕಾರುಗಳನ್ನು ಸಂಪೂರ್ಣವಾಗಿ ಬ್ಯಾನ್ ಮಾಡಬೇಕಾಗುತ್ತದೆ. ಈ ನಿಟ್ಟಿನಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಬಳಕೆಗೆ ತರಲಾಗುವುದು’ ಎಂದು ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ತಿಳಿಸಿದ್ದಾರೆ.

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್