ಫಿಲಿಪೈನ್ಸ್​​ ಸೇನಾ ವಿಮಾನ ಅಪಘಾತ; 17 ಯೋಧರ ಮರಣ, 40 ಮಂದಿಯ ರಕ್ಷಣೆ-ಸಾವಿನ ಸಂಖ್ಯೆ ಏರುವ ಸಾಧ್ಯತೆ

ಪ್ರಾಂತ್ಯದಲ್ಲಿ ಫಿಲಿಪೈನ್ಸ್​ ಸೈನಿಕರು ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ತನ್ನಿಮಿತ್ತ ದಕ್ಷಿಣದಲ್ಲಿರುವ ಕಾಗಾಯನ್ ಡಿ ಓರೋ ನಗರದಿಂದ ಯೋಧರು ಸುಲು ಪ್ರಾಂತ್ಯಕ್ಕೆ ಈ ವಿಮಾನದಲ್ಲಿ ಪ್ರಯಾಣ ಬೆಳೆಸಿದ್ದರು.

ಫಿಲಿಪೈನ್ಸ್​​ ಸೇನಾ ವಿಮಾನ ಅಪಘಾತ; 17 ಯೋಧರ ಮರಣ, 40 ಮಂದಿಯ ರಕ್ಷಣೆ-ಸಾವಿನ ಸಂಖ್ಯೆ ಏರುವ ಸಾಧ್ಯತೆ
ಮಿಲಿಟರಿ ವಿಮಾನ ಅಪಘಾತಕ್ಕೀಡಾಗಿರುವುದು
Follow us
| Updated By: Lakshmi Hegde

Updated on:Jul 04, 2021 | 12:40 PM

ಫಿಲಿಪೈನ್ಸ್​​ ದೇಶದ ಸೇನಾ ವಿಮಾನ (ಏರ್​ಫೋರ್ಸ್​) C-130 ಅಪಘಾತಕ್ಕೀಡಾಗಿದೆ. ಇದರಲ್ಲಿ ಸುಮಾರು 92 ಮಂದಿ ಇದ್ದರು. ಅವರಲ್ಲೀಗ 17 ಸೇನಾ ಸಿಬ್ಬಂದಿ ಸಾವಿಗೀಡಾಗಿದ್ದು, 40 ಮಂದಿಯನ್ನು ರಕ್ಷಿಸಲಾಗಿದೆ. ಸದ್ಯ ರಕ್ಷಣಾ ಕಾರ್ಯಾಚರಣೆ ಮುಂದುವರಿಯುತ್ತಿದ್ದು, ಮೃತರ ಸಂಖ್ಯೆ ಏರುವ ಸಾಧ್ಯತೆ ಹೆಚ್ಚಾಗಿದೆ ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ. 92 ಮಂದಿಯಲ್ಲಿ ಮೂವರು ಪೈಲಟ್​ಗಳು, ಐವರು ವಿಮಾನ ಸಿಬ್ಬಂದಿಯಾಗಿದ್ದರೆ, ಉಳಿದವರೆಲ್ಲ ಸೈನಿಕರೇ ಆಗಿದ್ದರು. ಮೃತಪಟ್ಟ 17 ಮಂದಿ ಕೂಡ ಸೇನಾ ಸಿಬ್ಬಂದಿಯೇ ಆಗಿದ್ದಾರೆ ಎಂದು ಫಿಲಿಪೈನ್ಸ್ ರಕ್ಷಣಾ ಕಾರ್ಯದರ್ಶಿ ಡೆಲ್ಫಿನ್ ಲೊರೆಂಜಾನಾ ತಿಳಿಸಿದ್ದಾರೆ. ಈ ಸೇನಾವಿಮಾನ ಇನ್ನೇನು ಕೆಲವೇ ಕ್ಷಣ ಕಳೆದರೆ ಲ್ಯಾಂಡ್​ ಆಗುತ್ತಿತ್ತು. ಆದರೆ ದಕ್ಷಿಣದಲ್ಲಿರುವ ಸುಲು ಪ್ರಾಂತ್ಯದಲ್ಲಿರುವ ಪರ್ವತಪ್ರದೇಶದಲ್ಲಿರುವ ಪಟಿಕುಲ್​​ನ ಬಾಂಗ್​ಕಲ್​ ಗ್ರಾಮದ ಬಳಿ ಅಪಘಾತಕ್ಕೀಡಾಗಿದೆ. ನೆಲಕ್ಕೆ ಅಪ್ಪಳಿಸಿದ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡು ದೊಡ್ಡ ಅನಾಹುತವೇ ಆಗಿದೆ.

ಮುಸ್ಲಿಂ ಪ್ರಾಬಲ್ಯದ ಸುಲು ಪ್ರಾಂತ್ಯದಲ್ಲಿ ಫಿಲಿಪೈನ್ಸ್​ ಸೈನಿಕರು ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ತನ್ನಿಮಿತ್ತ ದಕ್ಷಿಣದಲ್ಲಿರುವ ಕಾಗಾಯನ್ ಡಿ ಓರೋ ನಗರದಿಂದ ಯೋಧರು ಸುಲು ಪ್ರಾಂತ್ಯಕ್ಕೆ ಈ ವಿಮಾನದಲ್ಲಿ ಪ್ರಯಾಣ ಬೆಳೆಸಿದ್ದರು. ಈ ವಿಮಾನ ರನ್​ವೇಯಿಂದ ತಪ್ಪಿತು. ಅದನ್ನು ಸರಿಪಡಿಸಿಕೊಳ್ಳಲು ಪ್ರಯತ್ನಿಸಿದರೂ ಸಾಧ್ಯವಾಗದೆ ವಿಫಲವಾಯಿತು ಎಂದು ಮಿಲಿಟರಿ ಮೂಲಗಳು ತಿಳಿಸಿವೆ ಇನ್ನು ವಿಮಾನ ಅಪಘಾತಕ್ಕೀಡಾಗಲು ಸ್ಪಷ್ಟವಾದ ಕಾರಣ ತಿಳಿದುಬಂದಿಲ್ಲ. ಮಧ್ಯ ಫಿಲಿಪೈನ್ಸ್​​ನಲ್ಲಿ ಸಿಕ್ಕಾಪಟೆ ಮಳೆಯಾಗುತ್ತಿದೆ. ಆದರೆ ಸುಲು ಪ್ರಾಂತ್ಯದಲ್ಲೂ ಅದೇ ವಾತಾವರಣ ಇತ್ತಾ? ಕೆಟ್ಟ ಹವಾಮಾನವೇ ವಿಮಾನ ಅಪಘಾತಕ್ಕೆ ಕಾರಣವಾ? ಎಂಬುದಿನ್ನೂ ಸ್ಪಷ್ಟವಾಗಿಲ್ಲ.

ಇದನ್ನೂ ಓದಿ: ಲಾಕ್​ಡೌನ್​ ಮುಂದುವರಿಯುತ್ತಿದ್ದರೆ ಮಾನವರು ಹೇಗೆ ಕಾಣಿಸಬಹುದು? ವೈರಲ್​ ಆಯ್ತು ಯುವತಿಯ ಫೋಟೋ

Philippine military plane crashes 17 Personnal Died 40 people rescued

Published On - 12:39 pm, Sun, 4 July 21

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್