AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

12 ಪ್ರಯಾಣಿಕರಿದ್ದ ಭಾರತದ ವಿಮಾನ ಪಾಕಿಸ್ತಾನದ ಕರಾಚಿ ಏರ್​ಪೋರ್ಟ್​​ನಲ್ಲಿ ಲ್ಯಾಂಡಿಂಗ್

ಭಾರತದ ವಿಮಾನ ಕರಾಚಿಯಲ್ಲಿ ಇಳಿದ ಸ್ವಲ್ಪ ಸಮಯದ ನಂತರ 12 ಪ್ರಯಾಣಿಕರೊಂದಿಗೆ ಮತ್ತೆ ಹಾರಾಟ ನಡೆಸಿತು. ಕರಾಚಿ ವಿಮಾನ ನಿಲ್ದಾಣದಲ್ಲಿ ಆ ವಿಶೇಷ ವಿಮಾನ ಏಕೆ ಇಳಿದಿದೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

12 ಪ್ರಯಾಣಿಕರಿದ್ದ ಭಾರತದ ವಿಮಾನ ಪಾಕಿಸ್ತಾನದ ಕರಾಚಿ ಏರ್​ಪೋರ್ಟ್​​ನಲ್ಲಿ ಲ್ಯಾಂಡಿಂಗ್
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Aug 16, 2022 | 10:18 AM

Share

ಕರಾಚಿ: 12 ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಭಾರತದ ವಿಮಾನ ಸೋಮವಾರ ಪಾಕಿಸ್ತಾನದ ಕರಾಚಿಯಲ್ಲಿರುವ (Karachi Airport) ಜಿನ್ನಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಿದೆ. ಈ ವಿಶೇಷ ವಿಮಾನವು ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು ಮಧ್ಯಾಹ್ನ 12.10ಕ್ಕೆ (ಪಾಕಿಸ್ತಾನದ ಸಮಯ) ಕರಾಚಿ ವಿಮಾನ ನಿಲ್ದಾಣಕ್ಕೆ ಬಂದಿಳಿಯಿತು ಎಂದು ಮೂಲಗಳು ತಿಳಿಸಿವೆ.

ಭಾರತದ ನಾಗರಿಕ ವಿಮಾನಯಾನ ಪ್ರಾಧಿಕಾರದ (ಸಿಎಎ) ವಕ್ತಾರರು ಈ ಕುರಿತು ಖಚಿತಪಡಿಸಿದ್ದಾರೆ. ಅಂತಾರಾಷ್ಟ್ರೀಯ ಚಾರ್ಟರ್ ವಿಮಾನವು ಭಾರತದಿಂದ ಪಾಕಿಸ್ತಾನದಲ್ಲಿ ಲ್ಯಾಂಡ್ ಆಗಿದೆ. ಆದರೆ, ಅದನ್ನು ಹೊರತುಪಡಿಸಿ ಪಾಕಿಸ್ತಾನದಿಂದ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: NATO: ನ್ಯಾಟೊ ಜೊತೆಗೆ ಭಾರತದ ಗೌಪ್ಯ ಮಾತುಕತೆ; ಚೀನಾ, ಪಾಕಿಸ್ತಾನ ಉಪಟಳದ ಹಿನ್ನೆಲೆಯಲ್ಲಿ ಮಹತ್ವ ಪಡೆದ ವಿದ್ಯಮಾನ

ಭಾರತದ ವಿಮಾನ ಕರಾಚಿಯಲ್ಲಿ ಇಳಿದ ಸ್ವಲ್ಪ ಸಮಯದ ನಂತರ 12 ಪ್ರಯಾಣಿಕರೊಂದಿಗೆ ಮತ್ತೆ ಹಾರಾಟ ನಡೆಸಿತು. ಕರಾಚಿ ವಿಮಾನ ನಿಲ್ದಾಣದಲ್ಲಿ ಆ ವಿಶೇಷ ವಿಮಾನ ಏಕೆ ಇಳಿದಿದೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ತಾಂತ್ರಿಕ ಸಮಸ್ಯೆಗಳಿಂದಾಗಿ ಕಳೆದ ತಿಂಗಳು ಭಾರತದಿಂದ ಹೊರಟ 2 ವಿಮಾನಗಳು ಕರಾಚಿಯಲ್ಲಿ ಲ್ಯಾಂಡ್ ಆಗಿತ್ತು. ಅದರ ಬೆನ್ನಲ್ಲೇ ಈ ಘಟನೆ ನಡೆದಿದೆ. ಸ್ಪೈಸ್‌ಜೆಟ್‌ನ ದೆಹಲಿ-ದುಬೈ ವಿಮಾನದಲ್ಲಿ ಸಮಸ್ಯೆ ಎದುರಾಗಿದ್ದರಿಂದ ಜುಲೈ 5ರಂದು ಕರಾಚಿಯಲ್ಲಿ ಲ್ಯಾಂಡ್ ಮಾಡಲಾಗಿತ್ತು. ಪೈಲಟ್‌ಗಳು ಎಂಜಿನ್‌ನಲ್ಲಿ ದೋಷವನ್ನು ಗಮನಿಸಿದ ನಂತರ ಇಂಡಿಗೋದ ಶಾರ್ಜಾ-ಹೈದರಾಬಾದ್ ವಿಮಾನವನ್ನು ಜುಲೈ 17ರಂದು ಮುನ್ನೆಚ್ಚರಿಕಾ ಕ್ರಮವಾಗಿ ಕರಾಚಿ ಏರ್​​ಪೋರ್ಟ್​ಗೆ ತಿರುಗಿಸಲಾಗಿತ್ತು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ
ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ
ಲಷ್ಕರ್ ಟಾಪ್ ಕಮಾಂಡರ್ ಫೌಜಿ ಮೂಸಾ ಎನ್‌ಕೌಂಟರ್‌ನಲ್ಲಿ ಹತ
ಲಷ್ಕರ್ ಟಾಪ್ ಕಮಾಂಡರ್ ಫೌಜಿ ಮೂಸಾ ಎನ್‌ಕೌಂಟರ್‌ನಲ್ಲಿ ಹತ