AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಥೈಲ್ಯಾಂಡ್, ರಷ್ಯಾ, ವಿಯೆಟ್ನಾಂ, ಆಸ್ಟ್ರೇಲಿಯಾ ಸೇರಿದಂತೆ ಕೆಲವು ದೇಶಗಳು ಭಾರತವನ್ನು ಹೆಚ್ಚು ಆಕರ್ಷಿಸುತ್ತಿರುವುದಕ್ಕೆ ಕಾರಣಗಳು ಇಲ್ಲಿವೆ

ಇನ್ನುಮುಂದೆ ಥೈಲ್ಯಾಂಡ್​, ಸೌದಿ ಅರೇಬಿಯಾ, ಆಸ್ಟ್ರೇಲಿಯಾ, ರಷ್ಯಾ, ವಿಯೆಟ್ನಾಂ ಸೇರಿದಂತೆ ಇತರೆ ಕೆಲವು ದೇಶಗಳಿಗೆ ಪ್ರವಾಸಕ್ಕೆ ತೆರಳಲು ಭಾರತೀಯರು ಕಷ್ಟ ಪಡಬೇಕಿಲ್ಲ. ಇನ್ನೇನು ಕ್ರಿಸ್​ಮಸ್ ರಜೆ ಬರುತ್ತಿದೆ, ಈ ಸಮಯದಲ್ಲಿ ವಿದೇಶಗಳಿಗೆ ಪ್ರವಾಸಕ್ಕೆ ಹೋಗುವ ಆಲೋಚನೆ ಇದ್ದರೆ, ಈ ದೇಶಗಳಿಂದ ಭಾರತೀಯರು ವೀಸಾ ಪಡೆಯುವ ಅಗತ್ಯವಿಲ್ಲ. ವೀಸಾವಿಲ್ಲದೆಯೇ ಪ್ರವಾಸ ಮಾಡಬಹುದು. ಥೈಲ್ಯಾಂಡ್, ಸೌದಿ ಅರೇಬಿಯಾ, ಆಸ್ಟ್ರೇಲಿಯಾ, ಟರ್ಕಿ, ವಿಯೆಟ್ನಾಂ ಹಾಗೂ ಶ್ರೀಲಂಕಾದಂತಹ ದೇಶಗಳಿಗೆ ನೀವು ಪ್ರಯಾಣಿಸುವುದು ಸುಲಭ.

ಥೈಲ್ಯಾಂಡ್, ರಷ್ಯಾ, ವಿಯೆಟ್ನಾಂ, ಆಸ್ಟ್ರೇಲಿಯಾ ಸೇರಿದಂತೆ ಕೆಲವು ದೇಶಗಳು ಭಾರತವನ್ನು ಹೆಚ್ಚು ಆಕರ್ಷಿಸುತ್ತಿರುವುದಕ್ಕೆ ಕಾರಣಗಳು ಇಲ್ಲಿವೆ
Image Credit source: Reuters
ನಯನಾ ರಾಜೀವ್
|

Updated on: Nov 05, 2023 | 8:40 AM

Share

ಇನ್ನುಮುಂದೆ ಥೈಲ್ಯಾಂಡ್​, ಸೌದಿ ಅರೇಬಿಯಾ, ಆಸ್ಟ್ರೇಲಿಯಾ, ರಷ್ಯಾ, ವಿಯೆಟ್ನಾಂ ಸೇರಿದಂತೆ ಇತರೆ ಕೆಲವು ದೇಶಗಳಿಗೆ ಪ್ರವಾಸಕ್ಕೆ ತೆರಳಲು ಭಾರತೀಯರು ಕಷ್ಟ ಪಡಬೇಕಿಲ್ಲ. ಇನ್ನೇನು ಕ್ರಿಸ್​ಮಸ್ ರಜೆ ಬರುತ್ತಿದೆ, ಈ ಸಮಯದಲ್ಲಿ ವಿದೇಶಗಳಿಗೆ ಪ್ರವಾಸಕ್ಕೆ ಹೋಗುವ ಆಲೋಚನೆ ಇದ್ದರೆ, ಈ ದೇಶಗಳಿಂದ ಭಾರತೀಯರು ವೀಸಾ ಪಡೆಯುವ ಅಗತ್ಯವಿಲ್ಲ. ವೀಸಾವಿಲ್ಲದೆಯೇ ಪ್ರವಾಸ ಮಾಡಬಹುದು. ಥೈಲ್ಯಾಂಡ್, ಸೌದಿ ಅರೇಬಿಯಾ, ಆಸ್ಟ್ರೇಲಿಯಾ, ಟರ್ಕಿ, ವಿಯೆಟ್ನಾಂ ಹಾಗೂ ಶ್ರೀಲಂಕಾದಂತಹ ದೇಶಗಳಿಗೆ ನೀವು ಪ್ರಯಾಣಿಸುವುದು ಸುಲಭ.

ಥೈಲ್ಯಾಂಡ್ ಥೈಲ್ಯಾಂಡ್ ನವೆಂಬರ್ 10 ರಿಂದ 2024ರ ಮೇ 10ರವರೆಗೆ ಭಾರತೀಯರಿಗೆ ವೀಸಾ ರಿಯಾಯಿತಿಯನ್ನು ನೀಡಿದೆ. ಥೈಲ್ಯಾಂಡ್ ಹೆಚ್ಚೆಚ್ಚು ಪ್ರವಾಸಿಗರನ್ನು ಆಕರ್ಷಿಸುವ ಗುರಿಯನ್ನು ಹೊಂದಿದೆ. ಥೈಲೆಂಡ್ 2022ರಲ್ಲಿ 965,994 ಭಾರತೀಯ ಪ್ರವಾಸಿಗರನ್ನು ಸ್ವಾಗತಿಸಿದೆ ಹಾಗೂ ಈ ವರ್ಷ ಜನವರಿ 1 ರಿಂದ ಅಕ್ಟೋಬರ್ 31ರವರೆಗೆ 1,302, 483 ಭಾರತೀಯ ಪ್ರವಾಸಿಗರು ಪ್ರಯಾಣ ಬೆಳೆಸಿದ್ದಾರೆ.

ಶ್ರೀಲಂಕಾ ಶ್ರೀಲಂಕಾದ ಕ್ಯಾಬಿನೆಟ್ ಭಾರತ, ಚೀನಾ, ರಷ್ಯಾ, ಮಲೇಷ್ಯಾ, ಜಪಾನ್, ಇಂಡೋನೇಷ್ಯಾ ಮತ್ತು ಥೈಲೆಂಡ್​ನವರಿಗೆ ಮಾರ್ಚ್​ 31ರವರೆಗೆ ಉಚಿತ ವೀಸಾ ನೀಡುವ ಪ್ರಾಯೋಗಿಕ ಯೋಜನೆಯನ್ನು ಅನುಮೋದಿಸಿದೆ.

ಪೈಲಟ್ ಯೋಜನೆಯಲ್ಲಿ ಭಾರತ, ಚೀನಾ ಮತ್ತು ರಷ್ಯಾ ಸೇರಿದಂತೆ ಏಳು ದೇಶಗಳ ಪ್ರವಾಸಿಗರಿಗೆ ವೀಸಾ ಮುಕ್ತ ಪ್ರವೇಶವನ್ನು ಶ್ರೀಲಂಕಾ ಅನುಮತಿಸಲಿದೆ ಎಂದು ಅಲ್ಲಿನ ವಿದೇಶಾಂಗ ವ್ಯವಹಾರಗಳ ಸಚಿವರು ಮಂಗಳವಾರ ತಿಳಿಸಿದ್ದಾರೆ.

ಈ ನಿರ್ಧಾರವನ್ನು ಶ್ರೀಲಂಕಾ ಸರ್ಕಾರದ ಸಚಿವ ಸಂಪುಟ ಅನುಮೋದಿಸಿದೆ ಎಂದು ವಿದೇಶಾಂಗ ಇಲಾಖೆ ಸಚಿವ ಅಲಿ ಸಬ್ರಿ ಹೇಳಿದ್ದಾರೆ. ಪೈಲಟ್ ಯೋಜನೆಯು ತಕ್ಷಣದಿಂದ ಜಾರಿಗೆ ಬರಲಿದ್ದು, ಈ ಪ್ರಾಯೋಗಿಕ ಯೋಜನೆಯು ಮಾರ್ಚ್ 31, 2024 ರವರೆಗೆ ಮುಂದುವರಿಯಲಿದೆ ಎಂದು ಸಚಿವ ಸಬ್ರಿ ಮಾಹಿತಿ ನೀಡಿದ್ದಾರೆ.

ಮತ್ತಷ್ಟು ಓದಿ:ಭಾರತ ಸೇರಿ 7 ದೇಶಗಳ ಪ್ರಯಾಣಿಕರಿಗೆ ವೀಸಾ ಮುಕ್ತ ಪ್ರವೇಶಕ್ಕೆ ಶ್ರೀಲಂಕಾ ಕ್ಯಾಬಿನೆಟ್ ಅನುಮೋದನೆ

ಸೌದಿ ಅರೇಬಿಯಾ ಸೌದಿ ಅರೇಬಿಯಾಗೆ ಸೆಪ್ಟೆಂಬರ್ 1ರಿಂದ 1 ಮಿಲಿಯನ್ ಭಾರತೀಯ ಪ್ರವಾಸಿಗರನ್ನು ಸ್ವಾಗತಿಸಿದೆ. 2024ಕ್ಕೆ 2.4 ಮಿಲಿಯನ್ ಪ್ರವಾಸಿಗರ ಗುರಿಯನ್ನು ಹೊಂದಿದೆ.

ಆಸ್ಟ್ರೇಲಿಯಾ ಭಾರತೀಯ ಪ್ರಯಾಣಿಕರಿಗೆ ವೀಸಾ ಅರ್ಜಿ ಪ್ರಕ್ರಿಯೆಯನ್ನು ಸರಳೀಕರಿಸಲು, ತ್ವರಿತಗೊಳಿಸಲು ಸಾಕಷ್ಟು ಪ್ರಯತ್ನಗಳನ್ನು ಮಾಡಲಾಗಿದೆ.

ಟರ್ಕಿ ಟರ್ಕಿಯು ಭಾರತೀಯ ಪ್ರಯಾಣಿಕರಿಗೆ ಮದುವೆ ಹಾಗೂ ರಜಾದಿನಗಳಲ್ಲಿ ಸಮಯ ಕಳೆಯುವ ಸುಂದರ ತಾಣವಾಗಿದೆ. ಈ ವರ್ಷದ ಮೊದಲ 9 ತಿಂಗಳಲ್ಲಿ 199,966 ಭಾರತೀಯ ಪ್ರವಾಸಿಗರನ್ನು ಸ್ವಾಗತಿಸಿದ್ದಾರೆ.

ರಷ್ಯಾ ಆಗಸ್ಟ್​ 1 ರಿಂದ ಭಾರತೀಯ ಪಾಸ್​ಪೋರ್ಟ್​ ಹೊಂದಿರುವವರಿಗೆ ಎಲೆಕ್ಟ್ರಾನಿಕ್ ವೀಸಾಗಳನ್ನು ನೀಡುವ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಇದು ಪ್ರವಾಸೋದ್ಯಮ, ವ್ಯಾಪಾರ ಸೇರಿದಂತೆ ವಿವಿಧ ಉದ್ದೇಶಗಳಿಗಾಗಿ ರಷ್ಯಾಗೆ ಭೇಟಿ ನೀಡುವ ಭಾರತೀಯರಿಗೆ ಅನುಕೂಲವಾಗಲಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ
ಗ್ರಾಹಕರಿಗೆ ಶಾಕ್​​ ಕೊಟ್ಟ ಡೆಲವರಿ ಬಾಯ್ಸ್​​​
ಗ್ರಾಹಕರಿಗೆ ಶಾಕ್​​ ಕೊಟ್ಟ ಡೆಲವರಿ ಬಾಯ್ಸ್​​​