AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿಗೆ ಸ್ಲೋವಾಕಿಯಾದ ಅತ್ಯುನ್ನತ ‘ಆರ್ಡರ್ ಆಫ್ ದಿ ವೈಟ್ ಡಬಲ್ ಕ್ರಾಸ್’ ಗೌರವ

The Order of the White Double Cross: ಪ್ರಧಾನಿ ನರೇಂದ್ರ ಮೋದಿಯವರಿಗೆ ಸ್ಲೋವಾಕಿಯಾದ ಅತ್ಯುನ್ನತ 'ಆರ್ಡರ್ ಆಫ್ ದಿ ವೈಟ್ ಡಬಲ್ ಕ್ರಾಸ್' ಗೌರವ ಸಂದಿದೆ. ಭಾರತ-ಸ್ಲೋವಾಕಿಯಾ ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸುವಲ್ಲಿ ಮೋದಿ ಅವರ ಕೊಡುಗೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗಿದೆ. ಇದು 140 ಕೋಟಿ ಭಾರತೀಯರಿಗೆ ಸಂದ ಗೌರವ ಎಂದಿರುವ ಮೋದಿ, ಈ ಪ್ರಶಸ್ತಿಯನ್ನು ಉಭಯ ದೇಶಗಳ ಸ್ನೇಹಕ್ಕೆ ಸಮರ್ಪಿಸಿದ್ದಾರೆ. ಈ ಐತಿಹಾಸಿಕ ಭೇಟಿಯ ವೇಳೆ 11 ಪ್ರಮುಖ ಒಪ್ಪಂದಗಳಿಗೆ ಸಹಿ ಹಾಕಲಾಗಿದ್ದು, ಸಂಬಂಧಗಳು ಮತ್ತಷ್ಟು ಗಟ್ಟಿಗೊಂಡಿವೆ.

ಪ್ರಧಾನಿ ಮೋದಿಗೆ ಸ್ಲೋವಾಕಿಯಾದ ಅತ್ಯುನ್ನತ ‘ಆರ್ಡರ್ ಆಫ್ ದಿ ವೈಟ್ ಡಬಲ್ ಕ್ರಾಸ್’ ಗೌರವ
ನರೇಂದ್ರ ಮೋದಿ Image Credit source: PM Modi X Account
ನಯನಾ ರಾಜೀವ್
|

Updated on: Jun 16, 2026 | 7:27 AM

Share

ಬ್ರಾಟಿಸ್ಲಾವಾ, ಜೂನ್ 16: ಯುರೋಪ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ(Narendra Modi)ಯವರಿಗೆ ಮತ್ತೊಂದು ಅಂತಾರಾಷ್ಟ್ರೀಯ ಗೌರವ ಲಭಿಸಿದೆ, ನಾರ್ವೆ ಮತ್ತು ಸ್ವೀಡನ್ ದೇಶಗಳ ಬಳಿಕ ಈಗ ಸ್ಲೋವಾಕಿಯಾ ಸರ್ಕಾರವು ಪ್ರಧಾನಿ ಮೋದಿಯವರಿಗೆ ತನ್ನ ದೇಶದ ಅತ್ಯುನ್ನತ ರಾಷ್ಟ್ರೀಯ ನಾಗರಿಕ ಗೌರವವಾದ ‘ಆರ್ಡರ್ ಆಫ್ ದಿ ವೈಟ್ ಡಬಲ್ ಕ್ರಾಸ್ ‘ ಪ್ರಶಸ್ತಿ ನೀಡಿ ಗೌರವಿಸಿದೆ.

ಸ್ಲೋವಾಕಿಯಾದ ಅಧ್ಯಕ್ಷ ಪೀಟರ್ ಪೆಲ್ಲೆಗ್ರಿನ್ ಅವರು ಪ್ರಧಾನಿಯವರಿಗೆ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಜಾಗತಿಕ ಮಟ್ಟದಲ್ಲಿ ವಿವಿಧ ದೇಶಗಳು ಪ್ರಧಾನಿ ಮೋದಿಯವರಿಗೆ ನೀಡಿದ 33ನೇ ಅತ್ಯುನ್ನತ ಗೌರವ ಇದಾಗಿದೆ.

ಪ್ರಧಾನಿ ಮೋದಿ ಪೋಸ್ಟ್

ಏನಿದು ಪ್ರತಿಷ್ಠಿತ ಪ್ರಶಸ್ತಿ, ಪ್ರಧಾನಿಗೆ ಏಕೆ ಸಿಕ್ಕಿದೆ? ‘ಆರ್ಡರ್ ಆಫ್ ದಿ ವೈಟ್ ಡಬಲ್ ಕ್ರಾಸ್’ ಎಂಬುದು ಸ್ಲೋವಾಕಿಯಾ ಗಣರಾಜ್ಯದ ಅತ್ಯುನ್ನತ ಪ್ರಶಸ್ತಿಯಾಗಿದೆ. ಭಾರತ ಮತ್ತು ಸ್ಲೋವಾಕಿಯಾ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸುವಲ್ಲಿ, ಜಾಗತಿಕ ಮಟ್ಟದಲ್ಲಿ ಸಹಕಾರ ಮತ್ತು ಅಂತಾರಾಷ್ಟ್ರೀಯ ರಾಜತಾಂತ್ರಿಕತೆಯನ್ನು ಹೆಚ್ಚಿಸುವಲ್ಲಿ ಪ್ರಧಾನಿ ಮೋದಿ ಅವರು ನೀಡಿದ ಅತ್ಯುತ್ತಮ ಕೊಡುಗೆಯನ್ನು ಗುರುತಿಸಿ ಈ ಗೌರವವನ್ನು ನೀಡಲಾಗಿದೆ.

ಇದು 140 ಕೋಟಿ ಭಾರತೀಯರಿಗೆ ಸಂದ ಗೌರವ: ಪ್ರಧಾನಿ ಮೋದಿ ಪ್ರಶಸ್ತಿ ಸ್ವೀಕರಿಸಿದ ನಂತರ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಹಂಚಿಕೊಂಡ ಪ್ರಧಾನಿ ಮೋದಿ, ಸ್ಲೋವಾಕಿಯಾದ ಸರ್ಕಾರ ಮತ್ತು ಜನರಿಗೆ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸಿದರು. ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಪಡೆದಿರುವುದು ನನಗೆ ಸಂದ ದೊಡ್ಡ ಗೌರವ. ಇದು ಭಾರತದ 1.4 ಶತಕೋಟಿ (140 ಕೋಟಿ) ಜನರಿಗೆ ಸಂದ ಗೌರವವಾಗಿದೆ. ಈ ಪ್ರಶಸ್ತಿಯನ್ನು ಭಾರತ ಮತ್ತು ಸ್ಲೋವಾಕಿಯಾ ನಡುವಿನ ಸ್ನೇಹಕ್ಕೆ ಅರ್ಪಿಸುತ್ತೇನೆ ಎಂದು ಅವರು ಬರೆದಿದ್ದಾರೆ.

ಮತ್ತಷ್ಟು ಓದಿ: ಅಮೆರಿಕ-ಇರಾನ್ ಶಾಂತಿ ಒಪ್ಪಂದಕ್ಕೆ ಭಾರತದ ಸ್ವಾಗತ; ಪಶ್ಚಿಮ ಏಷ್ಯಾದಲ್ಲಿ ಶಾಂತಿಗೆ ಕರೆ ನೀಡಿದ ಮೋದಿ

ಇತಿಹಾಸ ಸೃಷ್ಟಿಸಿದ ಭೇಟಿ: 11 ಪ್ರಮುಖ ಒಪ್ಪಂದಗಳಿಗೆ ಸಹಿ ಸ್ಲೋವಾಕಿಯಾ ದೇಶಕ್ಕೆ ಭೇಟಿ ನೀಡಿದ ಭಾರತದ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ನರೇಂದ್ರ ಮೋದಿ ಪಾತ್ರರಾಗಿದ್ದಾರೆ. ಭೇಟಿಯ ವೇಳೆ ಪ್ರಧಾನಿ ಮೋದಿ ಮತ್ತು ಸ್ಲೋವಾಕಿಯಾದ ಪ್ರಧಾನಿ ರಾಬರ್ಟ್ ಫಿಕೊ ಅವರು ನಡೆಸಿದ ದೀರ್ಘ ಮಾತುಕತೆ ಅತ್ಯಂತ ಯಶಸ್ವಿಯಾಗಿದೆ. ಉಭಯ ದೇಶಗಳು ತಮ್ಮ ಸಂಬಂಧವನ್ನು ಸಮಗ್ರ ಪಾಲುದಾರಿಕೆಯ ಮಟ್ಟಕ್ಕೆ ಏರಿಸಲು ನಿರ್ಧರಿಸಲಾಗಿದೆ.

ವಲಸೆ, ಡಿಜಿಟಲ್ ತಂತ್ರಜ್ಞಾನ ಮತ್ತು ರಕ್ಷಣೆಯಂತಹ ಪ್ರಮುಖ ಕ್ಷೇತ್ರಗಳಲ್ಲಿ ಪರಸ್ಪರ ಸಹಕಾರವನ್ನು ಹೆಚ್ಚಿಸಲು ಎರಡೂ ದೇಶಗಳು 11 ಒಪ್ಪಂದಗಳಿಗೆ ಸಹಿ ಹಾಕಿವೆ. ಭಾರತ ಮತ್ತು ಐರೋಪ್ಯ ಒಕ್ಕೂಟ (EU) ನಡುವಿನ ಮುಕ್ತ ವ್ಯಾಪಾರ ಒಪ್ಪಂದವನ್ನು ತ್ವರಿತವಾಗಿ ಜಾರಿಗೆ ತರಲು ಉಭಯ ನಾಯಕರು ಒಪ್ಪಿಕೊಂಡಿದ್ದಾರೆ. ಇದು ಮುಂದಿನ ದಿನಗಳಲ್ಲಿ ಭಾರತ ಮತ್ತು ಯುರೋಪ್ ನಡುವಿನ ಆರ್ಥಿಕ ಹಾಗೂ ರಕ್ಷಣಾ ಸಂಬಂಧಗಳನ್ನು ಮತ್ತಷ್ಟು ಗಟ್ಟಿಗೊಳಿಸಲಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಗರುಡ ಪುರಾಣದ ಪ್ರಕಾರ ಊಟ ಎಲ್ಲಿ ಮಾಡಬೇಕು, ಎಲ್ಲಿ ಮಾಡಬಾರದು? ಫಲಗಳೇನು?
ಗರುಡ ಪುರಾಣದ ಪ್ರಕಾರ ಊಟ ಎಲ್ಲಿ ಮಾಡಬೇಕು, ಎಲ್ಲಿ ಮಾಡಬಾರದು? ಫಲಗಳೇನು?
2028ರ ಎಲೆಕ್ಷನ್ ಗೆಲ್ಲಲು ಜೋಶಿಗೆ ಸಾರಥ್ಯ?ಇದಕ್ಕೆ ಅವರು ಹೇಳಿದ್ದೇನು?
2028ರ ಎಲೆಕ್ಷನ್ ಗೆಲ್ಲಲು ಜೋಶಿಗೆ ಸಾರಥ್ಯ?ಇದಕ್ಕೆ ಅವರು ಹೇಳಿದ್ದೇನು?
ದೀದಿ ಕೋಟೆಯನ್ನು ಬಿಜೆಪಿ ಛಿದ್ರಗೊಳಿಸಿದ್ದು ಹೇಗೆ? ಪ್ರಲ್ಹಾದ್ ಜೋಶಿ ಮಾಹಿತಿ
ದೀದಿ ಕೋಟೆಯನ್ನು ಬಿಜೆಪಿ ಛಿದ್ರಗೊಳಿಸಿದ್ದು ಹೇಗೆ? ಪ್ರಲ್ಹಾದ್ ಜೋಶಿ ಮಾಹಿತಿ
ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ
ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ
ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್​:FSL ವರದಿಯನ್ನೇ ತಿರುಚಿದ ಗ್ಯಾಂಗ್!
ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್​:FSL ವರದಿಯನ್ನೇ ತಿರುಚಿದ ಗ್ಯಾಂಗ್!
ಮೋದಿ ಅಧಿಕಾರ ಸಾಕು ಅಂದಿದ್ರು; ಅಚ್ಚರಿಯ ಸಂಗತಿ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ
ಮೋದಿ ಅಧಿಕಾರ ಸಾಕು ಅಂದಿದ್ರು; ಅಚ್ಚರಿಯ ಸಂಗತಿ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ
ಕಾಕ್ರೋಜ್‌ ಪಾರ್ಟಿ ಸಂಸ್ಥಾಪಕನಿಗೆ ಕಪಾಳಮೋಕ್ಷ: ವಿಡಿಯೋ ವೈರಲ್‌
ಕಾಕ್ರೋಜ್‌ ಪಾರ್ಟಿ ಸಂಸ್ಥಾಪಕನಿಗೆ ಕಪಾಳಮೋಕ್ಷ: ವಿಡಿಯೋ ವೈರಲ್‌
RSS ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ಖಡಕ್ ಉತ್ತರ
RSS ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ಖಡಕ್ ಉತ್ತರ
ಜಮೀರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು: ಪಾದರಾಯನಪುರದಲ್ಲಿ ಹೈಡ್ರಾಮಾ
ಜಮೀರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು: ಪಾದರಾಯನಪುರದಲ್ಲಿ ಹೈಡ್ರಾಮಾ
ತಾಯಿಯಿಂದ ಬೇರ್ಪಟ್ಟು ಗ್ರಾಮಕ್ಕೆ ಬಂದ ಮರಿಯಾನೆ: ಆಹಾರ ನೀಡಿದ ಗ್ರಾಮಸ್ಥರು!
ತಾಯಿಯಿಂದ ಬೇರ್ಪಟ್ಟು ಗ್ರಾಮಕ್ಕೆ ಬಂದ ಮರಿಯಾನೆ: ಆಹಾರ ನೀಡಿದ ಗ್ರಾಮಸ್ಥರು!